Site icon Vistara News

Suicide Case : ವಾಮಾಚಾರ ಭೀತಿ ; ಪತ್ನಿಯ ಸಂಬಂಧಿಕರ ಮನೆಗೆ ಹೋಗಿ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆ

suicide

#image_title

ಉಳ್ಳಾಲ: ವ್ಯಕ್ತಿಯೊಬ್ಬರು ತಮ್ಮ ಪತ್ನಿಯ ಸಂಬಂಧಿಕರ ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ವಿಟ್ಲ ಕನ್ಯಾನ ನಿವಾಸಿ ಬಾಬು ಶೆಟ್ಟಿಗಾರ್ ಎಂಬವರ ಪುತ್ರ ಹರೀಶ್ (33) ಆತ್ಮಹತ್ಯೆ (Suicide Case) ಮಾಡಿಕೊಂಡವರು.

ಇವರು 10 ವರ್ಷಗಳಿಂದ ಮುಡಿಪುವಿನ ಇನ್ಫೋಸಿಸ್ ಸಂಸ್ಥೆಯ ಗಾರ್ಡನ್‌ನಲ್ಲಿ ಕೆಲಸ ಮಾಡುತ್ತಿದ್ದರು. ವರ್ಷದ ಹಿಂದೆ ಅವರು ಸಿದ್ದಕಟ್ಟೆ ಸಂಗಬೆಟ್ಟು ನಿವಾಸಿ ಯುವತಿಯನ್ನು ವಿವಾಹವಾಗಿದ್ದರು. ಇದೀಗ ಆಕೆ 7 ತಿಂಗಳ ಗರ್ಭಿಣಿಯಾಗಿದ್ದಾರೆ.

ಮಾ. 12ರಂದು ಹರೀಶ್ ತನ್ನ ತಾಯಿಯ ಅಕ್ಕನ ಮಗನಾಗಿರುವ ಕೊಣಾಜೆ ಮುಚ್ಚಿಲಕೋಡಿ ನಿವಾಸಿ ರಮೇಶ್ ಶೆಟ್ಟಿಗಾರ್ ಎಂಬವರಿಗೆ ಕರೆ ಮಾಡಿ ತನ್ನ ಬ್ಯಾಗಿನಲ್ಲಿ ಭಸ್ಮ, ತಗಡು ದೊರೆತಿದ್ದು, ವಾಮಾಚಾರ (witch craft) ಮಾಡಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಹೋದರ ರಮೇಶ್ ಮಾ.19 ಭಾನುವಾರ ಮನೆಗೆ ಬಂದು ಮಾತನಾಡುವ ಎಂದು ತಿಳಿಸಿದ್ದರು. ಅದರಂತೆ ಹರೀಶ್ ಅವರು ಮಾತುಕತೆಗೆಂದು ಬಂದಿದ್ದರು.

ಆದರೆ ಬರುವಾಗಲೇ ಕೈಯಲ್ಲಿ ಪೆಟ್ರೋಲ್ ಅನ್ನು ಕ್ಯಾನಿನಲ್ಲಿ ಹಿಡಿದುಕೊಂಡು ಬಂದಿದ್ದಾರೆ. ಮಾತುಕತೆ ಆರಂಭವಾಗುವ ಮುನ್ನವೇ ಅಂಗಳದಲ್ಲಿ ಮೈಪೂರ್ತಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮನೆಮಂದಿ ಗಾಬರಿಗೊಂಡು ಕೊಣಾಜೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಣಾಜೆ ಪೊಲೀಸರು ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಹರೀಶ್ ಸಾವನ್ನಪ್ಪಿದ್ದಾರೆ. ಅರೆಬೆಂದ ಸ್ಥಿತಿಯಲ್ಲಿದ್ದ ಹರೀಶ್ ಖುದ್ದಾಗಿಯೇ ಆಂಬ್ಯುಲೆನ್ಸ್ ಹತ್ತಿದ್ದರು.

ರಮೇಶ್ ಶೆಟ್ಟಿಗಾರ್ ಹರೀಶ್ ಅವರ ಸಹೋದರನಾಗಿದ್ದರೆ, ರಮೇಶ್ ಅವರ ಪತ್ನಿಗೆ ಹರೀಶ್ ಅವರ ಪತ್ನಿ ಚಿಕ್ಕಮ್ಮನ ಮಗಳು. ಸಂಬಂಧದ ಒಳಗಡೆ ಇಬ್ಬರಿಗೂ ವಿವಾಹ ನಡೆದಿತ್ತು.

ಪತ್ನಿ ಸರಿಯಾಗಿ ಮಾತನಾಡುತ್ತಿಲ್ಲ , ಕಿವಿ ಕೇಳದಂತೆ ವರ್ತಿಸುತ್ತಾರೆ ಅನ್ನುವ ಆರೋಪವನ್ನು ಹರೀಶ್ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಆರ್ಥಿಕವಾಗಿ ಯಾವುದೇ ರೀತಿಯ ಸಂಕಷ್ಟ ಇಲ್ಲದ ಹರೀಶ್, ಇದೇ ತಿಂಗಳ ಒಳಗೆ ಪತ್ನಿಗೆ ಸೀಮಂತ ಮಾಡುವವರಿದ್ದರು.

ಇದನ್ನೂ ಓದಿ : Crime News: ಹಾಡಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿದ ಗುಂಪು, ಗಾಯಾಳು ಚಿಂತಾಜನಕ

Exit mobile version