ಚಿಕ್ಕೋಡಿ: ತನ್ನ ಸಹೋದ್ಯೋಗಿ ಹಾಗೂ ಹಿರಿಯ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಲೈನ್‌ಮನ್ ಒಬ್ಬರು ಡೆತ್‌ನೋಟ್ ಬರೆದಿಟ್ಟು ಹೆಸ್ಕಾಂ ಆವರಣದಲ್ಲಿಯೇ ಆತ್ಮಹತ್ಯೆ (Suicide Case) ಮಾಡಿಕೊಂಡಿದ್ದಾರೆ.
ಭಾನುವಾರ ತಡರಾತ್ರಿ ಹೆಸ್ಕಾಂ ಆವರಣದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಜುನಾಥ ಮುತ್ತಗಿ ಎಂಬುವವರೇ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇವರು ಕಳೆದ ೭ ವರ್ಷಗಳಿಂದ ಹೆಸ್ಕಾಂನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು.
ಸಹೋದ್ಯೋಗಿ ಬಸವರಾಜ್ ಹಾಗೂ ನಜೀರ್ ಡಾಲಾಯತ್ ಎಂಬುವವರು ನನ್ನ ಸಾವಿಗೆ ಕಾರಣ ಎಂದು ಡೆತ್‌ನೋಟ್‌ನಲ್ಲಿ ಮಂಜು ಆರೋಪ ಮಾಡಿದ್ದಾರೆ. ಕೆಲಸದ ಸಮಯಲ್ಲಿ ಕಿರುಕುಳ ನೀಡುತ್ತಿದ್ದುದಲ್ಲದೆ, ಭೇದಭಾವ ಮಾಡುತ್ತಾರೆ. ಈ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಶರಣಾಗುತ್ತಿರುವುದಾಗಿ ಬರೆದಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ, ಯಾರ ಮನಸ್ಸಿಗಾದರೂ ನನ್ನಿಂದ ಬೇಜಾರಾಗಿದ್ದರೆ ಕ್ಷಮೆ ಇರಲಿ ಎಂದೂ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ | ರಾಜ ಮಾರ್ಗ ಅಂಕಣ | ಆತ್ಮಹತ್ಯೆ ಮಾಡ್ಕೊಬೇಕು ಅನ್ನೋ ಯೋಚನೆ ಇದ್ದರೆ ಅದಕ್ಕಿಂತ ಮೊದಲು ಒಮ್ಮೆ ಇದನ್ನು ಓದಿ!