ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಂಚ ಗ್ರಾಮದಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ (Suicide Case) ಮಾಡಿಕೊಂಡಿದ್ದಾರೆ.
ತಿಮ್ಮಪ್ಪ ಜಿ. ಡಿ (54) ಆತ್ಮಹತ್ಯೆ ಮಾಡಿಕೊಂಡವರು. ಹಲವಾರು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತಿದ್ದ ಇವರು ಮಾನಸಿಕ ಖಿನ್ನತೆಗೊಳಗಾಗಿದ್ದರು. ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಶೌಚಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕೊಂಡೊಯ್ಯಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Janardhan Reddy | ಜನಾರ್ದನ ರೆಡ್ಡಿ ಮನವೊಲಿಸುವಷ್ಟು ದೊಡ್ಡವನು ನಾನಲ್ಲ: ಆನಂದ್ ಸಿಂಗ್