ಆನೇಕಲ್: ಇಲ್ಲಿನ ಜಿಗಣಿ ಪೊಲೀಸ್ ಠಾಣೆ ಮುಂಭಾಗವೇ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ (Suicide case) ಯತ್ನಿಸಿರುವ ಪ್ರಕರಣ ನಡೆದಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ಚಿಕ್ಕಮಗಳೂರು ಮೂಲದ ರತೀಶ್ ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿ.
ರತೀಶ್ ಎಂಬಾತ ಹತ್ತು ವರ್ಷದ ಹಿಂದೆ ಕೊಳ್ಳೇಗಾಲ ಮೂಲದ ಕವಿತಾ ಎಂಬ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದರು. ಮದುವೆ ಬಳಿಕ ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಮಡದಿಯೊಂದಿಗೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ರತೀಶ್, ಕವಿತಾ ದಂಪತಿಗೆ ಇಬ್ಬರು ಮಕ್ಕಳಿದ್ದು, ಇತ್ತೀಚೆಗೆ ಸಂಸಾರದಲ್ಲಿ ವಿರಸ ಮೂಡಿತ್ತು ಎನ್ನಲಾಗಿದೆ.
ಗಂಡನ ವಿರುದ್ಧ ದೂರು ನೀಡಲು ಪತ್ನಿ ಕವಿತಾ ಜಿಗಣಿ ಠಾಣೆ ಬಳಿ ಆಗಮಿಸಿದ್ದರು. ಈ ವೇಳೆ ಪೊಲೀಸ್ ಠಾಣೆ ಬಳಿ ಪತ್ನಿ ಜತೆ ವಾಗ್ವಾದಕ್ಕೆ ಇಳಿದಿದ್ದ ರತೀಶ್, ದೂರು ನೀಡದಂತೆ ಪತ್ನಿಗೆ ಒತ್ತಾಯಿಸಿದ್ದಾನೆ. ದೂರು ನೀಡಿದರೆ ನನ್ನಾಣೆ ಎಂದು ಹೇಳಿದ್ದಾನೆ. ಇದಕ್ಕೆ ಪತ್ನಿ ಕವಿತಾ ಒಪ್ಪದಿದ್ದಾಗ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಕೂಡಲೇ ಪೊಲೀಸ್ ಸಿಬ್ಬಂದಿ ಬೆಂಕಿ ನಂದಿಸಿ ಪ್ರಾಥಮಿಕ ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಬೆಂಕಿಗೆ ಭಾಗಶಃ ಸುಟ್ಟುಹೋಗಿರುವ ರತೀಶ್‌ರನ್ನು ಹೆಚ್ಚಿನ ಚಿಕಿತ್ಸೆಗಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ರವಾನಿಸಲಾಗಿದೆ.
ಇದನ್ನೂ ಓದಿ | ಬಿಜೆಪಿ ಮುಖಂಡ ಅನಂತರಾಜು ಸೂಸೈಡ್ ಕೇಸ್ ಗೆ ಮೇಜರ್ ಟ್ವಿಸ್ಟ್!