ಬೆಂಗಳೂರು: ತಲಘಟ್ಟಪುರದ ಪೂರ್ವ ಹೈಲ್ಯಾಂಡ್ ಅಪಾರ್ಟ್‌ಮೆಂಟ್‌ನ 19ನೇ ಮಹಡಿಯಿಂದ ಜಿಗಿದು ಮಹಿಳೆಯೊಬ್ಬರು ಆತ್ಮಹತ್ಯೆ(Suicide Case) ಮಾಡಿಕೊಂಡಿದ್ದಾರೆ. ಕರಿಷ್ಮಾ (40) ಮೃತ ಮಹಿಳೆ.
ಕರಿಷ್ಮಾ ಹಾಗೂ ಅವರ ಪತಿ ಕರಣ್ ಕಳೆದ 15 ವರ್ಷಗಳಿಂದ ಕೆನಡಾದಲ್ಲಿ ವಾಸವಾಗಿದ್ದರು. ಆದರೆ ಕರಿಷ್ಮಾ ಅನಾರೋಗ್ಯ ಸಮಸ್ಯೆಯಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ಡಿಪ್ರೆಶನ್‌ನಲ್ಲಿದ್ದವರಿಗೆ ಚಿಕಿತ್ಸೆ ಕೊಡಿಸಲೆಂದು ಭಾರತಕ್ಕೆ ಬಂದಿದ್ದರು. ಆದರೆ ತೀವ್ರ ಖಿನ್ನತೆಯಿಂದ ಬಳಲುತ್ತಿದ್ದ ಕರಿಷ್ಮಾ 19ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಒಂದು ತಿಂಗಳ ಹಿಂದೆಯೂ ಕರಿಷ್ಮಾ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಲಭಿಸಬೇಕಿದೆ. ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ | Suicide Case | ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿ ನೇಣಿಗೆ ಶರಣು