ಬಾಗಲಕೋಟೆ: ಕೌಟುಂಬಿಕ ಸಮಸ್ಯೆ ಹಿನ್ನೆಲೆ ಮಲಪ್ರಭಾ ನದಿಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವುದು ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿಯಲ್ಲಿ ನಡೆದಿದೆ.
ಸೂಳಿಬಾವಿ ಗ್ರಾಮದ ನಿವಾಸಿ ಉಮಾ ಮಾಸರೆಡ್ಡಿ (೪೫), ಸೌಂದರ್ಯ (೧೮) ಹಾಗೂ ಐಶ್ವರ್ಯ (೨೦) ಮೃತರು. ಇವರು ಕಮತಗಿ ಗ್ರಾಮದ ಮಲಪ್ರಭಾ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಅಮೀನಗಢ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಹುನಗುಂದ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರಕ್ಕೆ ತೆಗೆದಿದ್ದಾರೆ.
ಐಶ್ವರ್ಯ ಬೆಂಗಳೂರಿನಲ್ಲಿ ಬಿಇ ಸಿವಿಲ್ ಎಂಜಿನಿಯರಿಂಗ್ ಓದುತ್ತಿದ್ದರು. ಸೌಂದರ್ಯ ಬಾಗಲಕೋಟೆಯಲ್ಲಿ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿಟ್ಟು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ | Woman murdered | ಮನೆಗೆ ನುಗ್ಗಿ ಯುವತಿ ಕೊಲೆ: ಗುಣ ನಡತೆ ಇಷ್ಟವಾಗದೆ ದೂರ ಮಾಡಿದ ಭಗ್ನಪ್ರೇಮಿಯೇ ಹಂತಕ?