ಕೋಲಾರ: ಮಾಲೂರು ಕೆರೆಯಲ್ಲಿ ತಾಯಿ ಹಾಗೂ ಇಬ್ಬರು ಹೆಣ್ಣುಮಕ್ಕಳ ಶವ ಪತ್ತೆಯಾಗಿದ್ದು, ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ (Suicide Case) ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಮಾಲೂರು ಕೆರೆಯಲ್ಲಿ ಶವ ತೇಲುತ್ತಿದ್ದರಿಂದ ಘಟನೆ ಬೆಳಕಿಗೆ ಬಂದಿದೆ. ಶವಗಳನ್ನು ನೋಡಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಶವಗಳನ್ನು ಮೇಲೆತ್ತಲು ಕ್ರಮ ವಹಿಸಿದ್ದಾರೆ. ಆದರೆ, ಮೃತರು ಯಾರು ಎಂಬ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ. ಸ್ಥಳೀಯರು ಅಲ್ಲದಿರುವ ಕಾರಣಕ್ಕೆ ಈಗ ಅಪರಿಚಿತ ಶವ ಎಂದು ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಶವ ಪತ್ತೆಗೆ ಬಲೆ ಬೀಸಿದ್ದಾರೆ.
ಈಗಾಗಲೇ ಕಾರ್ಯಾಚರಣೆಗೆ ಇಳಿದಿರುವ ಮಾಲೂರು ಪೊಲೀಸರು, ಶವಗಳ ಫೋಟೊಗಳನ್ನು ತೆಗೆದು ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಿಗೂ ರವಾನೆ ಮಾಡಿದ್ದಾರೆ. ಇನ್ನೂ ಮೃತರ ಮಾಹಿತಿ ತಿಳಿದುಬಂದಿಲ್ಲ. ಕಳೆದ 3-4 ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಇವರು ಯಾರು? ಮಾಲೂರಿಗೆ ಏಕೆ ಬಂದರು? ಇವರು ಮೂರೇ ಜನ ಬಂದಿದ್ದಾರೆಯೇ? ಅಥವಾ ಯಾರಾದರೂ ಕರೆ ತಂದಿದ್ದರೇ? ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ? ಇಲ್ಲವೇ ಕೊಲೆ ಮಾಡಲಾಗಿದೆ ಎಂಬ ಆಯಾಮದಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಇದನ್ನೂ ಓದಿ | Make in India : ಸ್ಥಳೀಯ ಸಹಭಾಗಿತ್ವದಲ್ಲಿ ಆ್ಯಪಲ್ ಐಫೋನ್ ಉತ್ಪಾದನೆಗೆ ಚೀನಾದ 14 ಕಂಪನಿಗಳಿಗೆ ಅನುಮತಿ