ಉತ್ತರ ಕನ್ನಡ
Suicide case : ದ್ವಿತೀಯ ಪಿಯು ಪರೀಕ್ಷೆಯ ನಡುವೆಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ
ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದೆ. ಈ ನಡುವೆಯೇ ಅಂಕೋಲಾ ತಾಲೂಕಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಸಾವಿಗೆ ಶರಣಾಗಿದ್ದಾಳೆ (Suicide case). ಆಕೆ ಎರಡು ಪರೀಕ್ಷೆ ಮುಗಿಸಿದ್ದಳು. ಸಾವಿಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
ಕಾರವಾರ: ಅಂಕೋಲಾ ತಾಲೂಕಿನ ಬೆಳಂಬಾರದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ (Suicide case) ಮಾಡಿಕೊಂಡಿದ್ದಾಳೆ. ಬೆಳಂಬಾರ ತಾಳೇಬೈಲಿನ ನಿವಾಸಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಶಿಲ್ಪಾ ಗೌಡ (17) ಮೃತ ದುರ್ದೈವಿ. ಇವಳು ಸರ್ಕಾರಿ ಪದವಿ ಪೂರ್ವ ಕಾಲೇಜು ಅಂಕೋಲಾದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದಳು.
ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಆಕೆ ಆರಂಭದ ಎರಡು ಪರೀಕ್ಷೆಗಳನ್ನು ಎದುರಿಸಿದ್ದಳು. ಬುಧವಾರ ಬೆಳಗ್ಗೆ ಪಾಲಕರು ಎಂದಿನಂತೆ ಕೂಲಿ ಕೆಲಸಕ್ಕೆ ಮನೆಯಿಂದ ಹೊರಗಡೆ ಹೋಗಿದ್ದ ವೇಳೆ ವಿಷ ಸೇವಿಸಿದ್ದಾಳೆ. ಕೆಲ ಹೊತ್ತಿನ ಬಳಿಕ ಆಕೆ ವಾಂತಿ ಮಾಡಿಕೊಳ್ಳುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಂಕೋಲಾದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಆದರೆ, ಆಸ್ಪತ್ರೆ ತಲುಪುವಷ್ಟರಲ್ಲಿ ಆಕೆ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದುಬಂದಿದೆ.
ಬಡ, ಸಾಮಾನ್ಯ ವರ್ಗಕ್ಕೆ ಸೇರಿದ ವಿದ್ಯಾರ್ಥಿನಿಯ ಸಾವಿಗೆ ಏನು ಕಾರಣ ಎನ್ನುವುದು ಸ್ಪಷ್ಟವಾಗಿಲ್ಲ. ಯಾವುದೇ ಡೆತ್ ನೋಟ್ ಬರೆದಿಟ್ಟಂತೆ ಕಾಣುತ್ತಿಲ್ಲ. ಆಕೆಗೆ ಪರೀಕ್ಷೆಗಳು ಕಷ್ಟವಾಗಿ ಇಲ್ಲವೇ ನಿರೀಕ್ಷಿತ ಅಂಕಗಳು ಬರಲಾರದು ಎಂಬ ಆತಂಕದಲ್ಲಿ ಈ ತೀವ್ರ ಹೆಜ್ಜೆಯನ್ನು ಇಟ್ಟಳೇ ಎನ್ನುವುದು ತನಿಖೆಯಿಂದ ಗೊತ್ತಾಗಬೇಕಾಗಿದೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರೇಮ ವೈಫಲ್ಯಕ್ಕೆ ನೊಂದು ಯುವತಿ ಆತ್ಮಹತ್ಯೆ
ಗದಗ ಜಿಲ್ಲೆ ಕಣಗಿನಹಾಳ ಗ್ರಾಮದಲ್ಲಿ ಪ್ರೀತಿ ವೈಫಲ್ಯ ಹಿನ್ನೆಲೆಯಲ್ಲಿ ಯುವತಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಪಾರ್ವತಿ ಬಾಯಿ (24) ಮೃತ ಯುವತಿ. ರೈಲ್ವೆ ಕೀಪರ್ ಆಗಿ ಕೆಲಸ ಮಾಡುತ್ತಿದ್ದ ಪಾರ್ವತಿ ಅನ್ಯ ಕೋಮಿನ ಯುವಕನೊಬ್ಬನನ್ನು ಪ್ರೀತಿ ಮಾಡುತ್ತಿದ್ದಳು. ಆದರೆ, ಬುಧವಾರ (ಮಾ. 15) ಇದ್ದಕ್ಕಿದ್ದಂತೆ ನೇಣಿಗೆ ಶರಣಾಗಿದ್ದಾಳೆ. ಪ್ರೇಮಿಗಳಿಬ್ಬರೂ ಜಗಳ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮನನೊಂದ ಯುವತಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ.
ಸಾಯುವ ಮುಂಚೆ ಡೆತ್‌ನೋಟ್ ಬರೆದಿಟ್ಟಿದ್ದಾಳೆ ಎಂದು ಕುಟುಂಬಸ್ಥರು ಹೇಳುತ್ತಿದ್ದರೆ, ಪೊಲೀಸರು ಮಾತ್ರ ಡೆತ್‌ನೋಟ್ ಬಹಿರಂಗಪಡಿಸಿಲ್ಲ.
ಕೊಟ್ಟ ಸಾಲ ವಾಪಸ್ ಬಾರದ್ದಕ್ಕೆ ಪಶುವೈದ್ಯ ಆತ್ಮಹತ್ಯೆ
ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಗ್ರಾಮದ ಪಶುವೈದ್ಯರೊಬ್ಬರು ಸಹೋದ್ಯೋಗಿ ವೈದ್ಯರೊಬ್ಬರಿಗೆ ಕೊಟ್ಟ ಸಾಲವನ್ನು ವಾಪಸ್ ಕೊಡಲಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಮಖಂಡಿ ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಯಲ್ಲಿ ವಿಷ ಸೇವಿಸಿದ್ದಾರೆ. ನಂದೆಪ್ಪ ಬಾಗೇವಾಡಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ನಂದೆಪ್ಪ ತನ್ನ ಸಹೋದ್ಯೋಗಿ ವೈದ್ಯರೊಬ್ಬರಿಗೆ ಐದು ಲಕ್ಷ ರೂಪಾಯಿ, ಮತ್ತೊಬ್ಬ ಗೆಳೆಯನಿಗೆ ತನ್ನ ಮನೆ ಆಧಾರವಾಗಿಟ್ಟುಕೊಂಡು ಏಳು ಲಕ್ಷ ರೂಪಾಯಿ ಸಾಲ ಕೊಡಿಸಿದ್ದರು. ಸಾಲ ಪಡೆದವರು ವಾಪಸ್ ಕೊಟ್ಟಿರಲಿಲ್ಲ. ಕೇಳಿ ಕೇಳಿ ಬೇಸತ್ತ ನಂದೆಪ್ಪ ಮನನೊಂದು ಮನೆಯಲ್ಲಿ ವಿಷ ಸೇವಿಸಿದ್ದಾರೆ. ಸಾಯುವ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದು, ಯಾರು ಯಾರಿಗೆ ಸಾಲ ಕೊಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಬೆಂಗಳೂರಲ್ಲಿ ಗಗನಸಖಿ ಸಾವು: ಆತ್ಮಹತ್ಯೆ ಅಲ್ಲ ಕೊಲೆ?; ಮಗಳನ್ನು ಪ್ರಿಯಕರನೇ ತಳ್ಳಿದ್ದು ಎಂದು ತಾಯಿ ದೂರು
ಉತ್ತರ ಕನ್ನಡ
Karnataka Elections : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಎನ್‌ವೈ ಗೋಪಾಲಕೃಷ್ಣ; ಕಾಂಗ್ರೆಸ್ ಸೇರಲ್ಲ, ಚುನಾವಣೆಯಲ್ಲಿ ಸ್ಪರ್ಧಿಸಲ್ಲ!
ಕೂಡ್ಲಿ ಬಿಜೆಪಿ ಶಾಸಕ ಎನ್.ವೈ ಗೋಪಾಲಕೃಷ್ಣ ಅವರು ಶಾಸಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಜತೆಗೆ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಹಾಗಿದ್ದರೆ ಮೊಳಕಾಲ್ಮುರು ಕ್ಷೇತ್ರದಿಂದ ಮಗನಿಗೆ ಕಾಂಗ್ರೆಸ್ ಟಿಕೆಟ್ ಕೊಡಿಸುತ್ತಾರಾ?
ಶಿರಸಿ/ವಿಜಯನಗರ: ಕೂಡ್ಲಿಗಿ ಕ್ಷೇತ್ರದ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರು ತಮ್ಮ ಶಾಸಕ ಸ್ಥಾನಕ್ಕೆ (Karnataka Elections) ರಾಜೀನಾಮೆ ನೀಡಿದ್ದು, ಅದರ ಬೆನ್ನಿಗೇ ರಾಜಕೀಯ ನಿವೃತ್ತಿಯ ಘೋಷಣೆಯನ್ನು ಮಾಡಿದ್ದಾರೆ. ತಾನು ಯಾವುದೇ ಪಕ್ಷ ಸೇರುವುದಿಲ್ಲ, ಚುನಾವಣೆಗೂ ಸ್ಪರ್ಧಿಸುವುದಿಲ್ಲ ಎಂದು ಅವರು ಘೋಷಿಸಿದರು.
ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಶಿರಸಿಯ ಅವರ ನಿವಾಸದಲ್ಲಿ ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಅವರು ಕಾಂಗ್ರೆಸ್ ಸೇರುವ ಮತ್ತು ಮೊಳಕಾಲ್ಮುರು ಕ್ಷೇತ್ರದಿಂದ ಅಭ್ಯರ್ಥಿಯಾಗುವ ಸಾಧ್ಯತೆಗಳನ್ನು ಅಲ್ಲಗಳೆದರು. ಮಾತ್ರವಲ್ಲ, ತಾನು ರಾಜಕೀಯದಿಂದಲೇ ನಿವೃತ್ತಿ ಹೊಂದುವುದಾಗಿ ಪ್ರಕಟಿಸಿದರು.
ವಿಸ್ತಾರ ನ್ಯೂಸ್‌ನೊಂದಿಗೆ ಮಾತನಾಡಿದ ಅವರು, ನಾನು ಯಾವ ಪಕ್ಷವನ್ನೂ ಸೇರೊಲ್ಲ, ರಾಜಕೀಯದಿಂದಲೇ ದೂರವಿರುತ್ತೇನೆ ಎಂದು ಹೇಳಿದರು. ಆದರೆ ಈ ಬಾರಿ ತಮ್ಮ ಮಗನಿಗೆ ಟಿಕೆಟ್ ಕೊಡಿಸಲು ಅವರು ಈ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಅವರು ಸೂಚ್ಯವಾಗಿ ಹೇಳಿದ್ದಾರೆ.
ʻʻನನಗೆ ವಯಸ್ಸಾಗಿದೆ. ಕ್ಷೇತ್ರದ ಜನರು ಬೇರೆಯವರಿಗೆ ನೀಡಿ ಎನ್ನುತ್ತಿದ್ದಾರೆ. ಜೊತೆಗೆ ಮಕ್ಕಳು ನಮಗೆ ಅವಕಾಶ ನೀಡಿ ಎಂದು ಕೇಳುತ್ತಿದ್ದಾರೆ. ಆದರೆ, ಅವರು ಯಾವ ಪಕ್ಷಕ್ಕೆ ಹೋಗುತ್ತಾರೋ ಗೊತ್ತಿಲ್ಲ.ʼʼ ಎಂದು ಎನ್.ವೈ ಗೋಪಾಲಕೃಷ್ಣ ಹೇಳಿದರು.
ಮಂತ್ರಿ ಸ್ಥಾನ ನೀಡದ ಬಗ್ಗೆ ಬೇಸರ
ಆರು ಬಾರಿ ಗೆಲುವು ಸಾಧಿಸಿದರೂ ಮಂತ್ರಿ ಸ್ಥಾನ ಸಿಗಲಿಲ್ಲ ಎಂಬ ಬಗ್ಗೆ ಎನ್‌ವೈ ಗೋಪಾಲಕೃಷ್ಣ ಅವರಿಗೆ ಬೇಸರ ಇರುವುದು ಸ್ಪಷ್ಟವಾಗಿದೆ. ʻʻನಾಲ್ಕು ಬಾರಿ ಗೆದ್ದವರಿಗೆ ಮಂತ್ರಿ ಸ್ಥಾನ ನೀಡಿದ್ದಾರೆ. ಆದರೆ ನಾನು ಆರು ಬಾರಿ ಶಾಸಕನಾದರೂ ಮಂತ್ರಿ ಸ್ಥಾನ ನೀಡಿಲ್ಲ. ಬಿಜೆಪಿಯೂ ನೀಡಿಲ್ಲ. ಕಾಂಗ್ರೆಸ್ ಸಹ ನೀಡಿಲ್ಲ. ಇದಕ್ಕೆ ಅಸಮಧಾನವಿದೆʼʼ ಎಮದು ಹೇಳಿದರು.
ʻʻನನಗೆ ಈಗ 73 ವರ್ಷ. ವಯಸ್ಸಾದ ಕಾರಣಕ್ಕೆ, ಆರೋಗ್ಯದ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೂ ಸೇರೋದಿಲ್ಲ. ಅದಕ್ಕೆ ರಾಜಕೀಯದಿಂದ ದೂರವಿರುತ್ತೇನೆ. ರಾಜಕೀಯ ನಿವೃತ್ತಿ ಪಡೆಯಲೆಂದೇ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಶಾಸಕನಾಗಿದ್ದರೆ ಅವರು ಕರೆಯುವುದು, ಇವರು ಕರೆಯುವ ಗೊಂದಲ ಉಂಟಾಗುತ್ತದೆ. ನಾನು ಬೇರೆ ಪಕ್ಷಕ್ಕೆ ಹೋಗುತ್ತೇನೆ ಎಂದೆಲ್ಲ ಸುದ್ದಿಯಾಗಿದೆ. ಆದರೆ, ಸ್ಪಷ್ಟವಾಗಿ ಹೇಳುತ್ತೇನೆ. ನಾನು ಯಾವ ಪಕ್ಷಕ್ಕೂ ಹೋಗುವುದಿಲ್ಲʼʼ ಎಂದಿದ್ದಾರೆ.
ಹಾಗಿದ್ದರೆ ಮುಂದಿನ ಕಥೆ ಏನು?
ಇದುವರೆಗಿನ ಮಾಹಿತಿ ಪ್ರಕಾರ ಎನ್‌ವೈ ಗೋಪಾಲಕೃಷ್ಣ ಅವರು ಶಾಸಕತ್ವಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರಿ ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಈಗ ಸ್ವತಃ ಗೋಪಾಲಕೃಷ್ಣ ಅವರೇ ಬೇರೆ ಪಕ್ಷ ಸೇರುವ, ಸ್ಪರ್ಧಿಸುವ ಸಾಧ್ಯತೆಯನ್ನು ನಿರಾಕರಿಸಿರುವುದರಿಂದ ಮುಂದೇನು ಎಂಬ ಕುತೂಹಲ ಮೂಡಿದೆ. ಒಂದು ಸಾಧ್ಯತೆಯ ಪ್ರಕಾರ, ಎನ್.ವೈ. ಗೋಪಾಲಕೃಷ್ಣ ಅವರ ಪುತ್ರ ಮೊಳಕಾಲ್ಮುರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ. ಅದಕ್ಕಾಗಿಯೇ ಗೋಪಾಲಕೃಷ್ಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವುದು ಸ್ಪಷ್ಟ.
ಆರು ಬಾರಿ ಕಾಂಗ್ರೆಸ್‌ನಿಂದ ಶಾಸಕರಾಗಿದ್ದರು
ಎನ್. ಯಲ್ಲಪ್ಪ ಗೋಪಾಲಕೃಷ್ಣ ಅವರು ಒಟ್ಟು ಆರು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ನಾಲ್ಕು ಬಾರಿ ಮೊಳಕಾಲ್ಮುರುವಿನಿಂದ (1993ರಿಂದ 2013) ಶಾಸಕರಾಗಿದ್ದು, 2014ರಲ್ಲಿ ಕಾಂಗ್ರೆಸ್‌ನಿಂದ ಬಳ್ಳಾರಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಅವರು 2018ರಲ್ಲಿ ಬಿಜೆಪಿ ಸೇರಿ ಕೂಡ್ಲಿಗಿ ಶಾಸಕರಾದರು.
ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದು ನಂತರ 2018ರಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಸಿಗದ ಕಾರಣ ಕೂಡ್ಲಿಗಿಯಿಂದ ಬಿಜೆಪಿ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.
ಇದನ್ನೂ ಓದಿ : Karnataka Elections : ಬಿಜೆಪಿಯ ಮತ್ತೊಂದು ವಿಕೆಟ್ ಪತನ, ಕೂಡ್ಲಿಗಿ ಶಾಸಕ ಎನ್.ವೈ ಗೋಪಾಲಕೃಷ್ಣ ಕಾಂಗ್ರೆಸ್‌ಗೆ
ಉತ್ತರ ಕನ್ನಡ
Joida News: ಸುಪಾ ಅಣೆಕಟ್ಟೆಯಲ್ಲಿ ಹೆಜ್ಜೇನು ಗೂಡು: ವಿಷ ಸಿಂಪಡಣೆಯಿಂದ ಸತ್ತಿರುವ ಜೇನುಹುಳಗಳು
Joida News: ಜೇನು ಈ ಭೂಮಿಯ ಮೇಲೆ ಇದ್ದರೆ ಪರಾಗ ಸ್ಪರ್ಶ ಕ್ರಿಯೆ ನಡೆದು ನಮ್ಮ ತೋಟದ ಬೆಳೆಗಳೂ ಸೇರಿದಂತೆ ಕಾಡಿನ ಬೆಳೆವಣಿಗೆಗೆ ಅನುಕೂಲ ಆಗುತ್ತದೆ. ಒಂದು ವೇಳೆ ಅಣೆಕಟ್ಟೆ ಮೇಲೆ ಕಟ್ಟಿರುವ ಜೇನುಗೂಡನ್ನು ರಾಸಾಯನಿಕ ಸಿಂಪಡಣೆ ಮಾಡಿ ಕೊಂದಿದ್ದರೆ ಅದು ಅಕ್ಷಮ್ಯ. ಈ ರೀತಿ ಮಾಡಬಾರದು ಎಂದು ಪರಿಸರ ತಜ್ಞ ಶಿವಾನಂದ ಕಳವೆ ಪ್ರತಿಕ್ರಿಯೆ ನೀಡಿದ್ದಾರೆ.
ಜೋಯಿಡಾ: ತಾಲೂಕಿನ ಕಾಳಿ ನದಿಯ (Kali River) ಹುಲಿ ಸಂರಕ್ಷಿತ ಪ್ರದೇಶ ಮತ್ತು ಹಾರ್ನ್ ಬಿಲ್ ಸಂರಕ್ಷಿತ ಪರಿಸರ ಸೂಕ್ಷ್ಮ ಪ್ರದೇಶದ ಪಕ್ಕದಲ್ಲಿಯೇ ಜೇನು ಗೂಡಿಗೆ ರಾಸಾಯನಿಕ ವಿಷ ಸಿಂಪಡಿಸಿ ಜೇನು ಕುಟುಂಬವನ್ನೇ ನಾಶ ಮಾಡುವ ಕಾರ್ಯವು ಕರ್ನಾಟಕ ವಿದ್ಯುತ್ ನಿಗಮದಿಂದ ನಡೆಯುತ್ತಿದೆ. ಇದನ್ನು ಗಮನಿಸಬೇಕಾದ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಮಾತ್ರ ಈ ಬಗ್ಗೆ ಯಾವುದೇ ಗಮನ ನೀಡದೆ ನಿರ್ಲಕ್ಷ್ಯ ಮಾಡಿದ್ದು ಮಾತ್ರ ಅಕ್ಷಮ್ಯ ಅಪರಾಧ ಎನ್ನುವುದು ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಈ ಒಂದೊಂದು ಕಟ್ಟಡದ ಮೇಲೆ 50ರಿಂದ 200ರಷ್ಟು ಸಂಖ್ಯೆಯಲ್ಲಿ ವರ್ಷಕ್ಕೆ ಎರಡು ಬಾರಿ ಹೆಜ್ಜೇನು ಬಂದು ಇಲ್ಲಿ ಜೇನುಗೂಡು ಕಟ್ಟುತ್ತವೆ. ಪ್ರತಿ ವರ್ಷ ಕರ್ನಾಟಕ ವಿದ್ಯುತ್ ನಿಗಮದಿಂದ ಕಾಳಿ ಜಲ ವಿದ್ಯುತ್ ಯೋಜನೆಯ ಸುಪಾ ಜಲಾಶಯ, ಪವರ್ ಹೌಸ್, ಬೊಮ್ಮನಳ್ಳಿ ಜಲಾಶಯ, ಅಂಬಿಕಾ ನಗರ ಪವರ್ ಹೌಸ್‌ಗಳನ್ನು ನಿರ್ವಹಣೆ ಮಾಡಲು ಟೆಂಡರ್ ನೀಡಲಾಗುತ್ತದೆ. ಟೆಂಡರ್ ಪಡೆದ ಗುತ್ತಿಗೆದಾರರು ಇಲ್ಲಿ ನಿರ್ವಹಣೆ ಮಾಡುವುದರ ಜತೆಗೆ ಕಡಿಮೆ ಖರ್ಚಿನಲ್ಲಿ ಈ ಜೇನುಗಳನ್ನು ಯಾವುದೋ ವಿಷ ಸಿಂಪಡಿಸಿ ಸಂಪೂರ್ಣವಾಗಿ ಸಾಯಿಸಿ ಇಡೀ ಜೇನು ಸಂಕುಲವನ್ನೇ ನಾಶ ಮಾಡುವ ಕಾರ್ಯ ಮಾಡುತ್ತಿದ್ದಾರೆ. ಇದು ವನ್ಯ ಜೀವಿ ಕಾನೂನು ಅಡಿ ಕೂಡ ಅಪರಾಧವಾಗಿದೆ.
ಇದನ್ನೂ ಓದಿ: KPSC Departmental Examination : ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆ; ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಜೇನು ನೊಣಗಳು ಕೂಡ ಪರಿಸರ ವ್ಯವಸ್ಥೆಯ ಒಂದು ಭಾಗ. ಸುಪಾ ಡ್ಯಾಂ, ಜಲ ವಿದ್ಯುತ್ ಕಟ್ಟಡ, ಬೊಮ್ಮನಳ್ಳಿ ಜಲಾಶಯ, ಅಂಬಿಕಾ ನಗರ ಪವರ್ ಹೌಸ್ ಇದೆಲ್ಲ ಈ ಕಾಳಿ ಹುಲಿ ಸಂರಕ್ಷಿತ ಪ್ರದೇಶ ಮತ್ತು ಹಾರ್ನ್ ಬಿಲ್ ಸಂರಕ್ಷಿತ ಪ್ರದೇಶ ಪರಿಸರ ವ್ಯವಸ್ಥೆಯ ಒಳಗೆ ಇದೆ. ಜೇನು ನೊಣಗಳು ಈ ಪ್ರದೇಶದ ಎಲ್ಲ ಮರಗಳ ಪರಾಗ ಸ್ಪರ್ಶ ನಡೆಸಲು ಅತಿ ಅಗತ್ಯ. ಈ ಜೇನು ಹುಳಗಳನ್ನು ಯಾವುದೇ ವಿಷ ಸಿಂಪಡಿಸಿ ಸಾಯಿಸುವ ಕಾರ್ಯ ಮಾಡಬಾರದು. ಈ ಜೇನು ತೆಗೆಯಲೇ ಬೇಕಾದ ಅನಿವಾರ್ಯತೆ ಇದ್ದಲ್ಲಿ ಸ್ಥಳಿಯ ಜನರಿಗೆ ಅಥವಾ ಗ್ರಾಮಾರಣ್ಯ ಸಮಿತಿಗೆ ಈ ಜೇನುಗಳನ್ನು ತೆಗೆಯಲು ಅವಕಾಶ ನೀಡುವ ಕಾರ್ಯ ಮಾಡಿದರೆ ಈ ಜೇನು ಸಂತತಿ ಉಳಿಯುವುದು. ಇಲ್ಲದಿದ್ದಲ್ಲಿ ಜೇನು ಸಂಕುಲ ಕೂಡ ವಿನಾಶದ ಅಂಚಿಗೆ ತಲುಪಲಿದೆ ಎಂಬ ಆತಂಕ ವ್ಯಕ್ತವಾಗಿದೆ.
“ಪ್ರತಿ ವರ್ಷ ಸುಪಾ ಡ್ಯಾಂ ಮತ್ತು ಪವರ್ ಹೌಸ್ ಕಟ್ಟಡ ನಿರ್ವಹಣೆ ಮಾಡಲು ಟೆಂಡರ್ ಕೊಡುತ್ತೇವೆ. ಅವರೇ ಈ ಜೇನುಗೂಡುಗಳನ್ನು, ಜೇನು ಹುಳಗಳನ್ನು ಹೇಗೆ ತೆಗೆಯುತ್ತಾರೆ ಎಂದು ಕೇಳಿ ಹೇಳುತ್ತೇನೆ” ಎಂದು ಕೆಪಿಸಿ ಚೀಫ್ ಎಂಜಿನಿಯರ್ ನಿಂಗಣ್ಣ ಹೇಳಿದ್ದಾರೆ.
ಇದನ್ನೂ ಓದಿ: Amritpal Singh: ಪೊಲೀಸರಿಗೆ ನಾನು ಶರಣಾಗಲ್ಲ; ಯುಟ್ಯೂಬ್ ಲೈವ್‌ನಲ್ಲಿ ಅಮೃತ್ ಪಾಲ್ ಸಿಂಗ್ ಹೇಳಿಕೆ
“ಕಾಡಿನ ಹೆಜ್ಜೇನುಗಳು ಅಣೆಕಟ್ಟು ಮತ್ತು ಇತರ ಕಟ್ಟಡಗಳಿಗೆ ಬಂದಿದ್ದಾಗ ವಿಷ ಸಿಂಪಡಿಸಿ ಕೊಲ್ಲುವುದು ಅಕ್ಷಮ್ಯ ಅಪರಾಧ. ಇದು ವನ್ಯಜೀವಿ ಕಾನೂನಿನ ಪ್ರಕಾರ ತಪ್ಪು ಕ್ರಮ ಆಗುತ್ತದೆ. ಜೇನು ಈ ಭೂಮಿಯ ಮೇಲೆ ಇದ್ದರೆ, ಕಾಡಿನಲ್ಲಿ ಇದ್ದರೆ ಮಾತ್ರ ಪರಾಗಸ್ಪರ್ಶ ಕ್ರಿಯೆ ನಡೆದು ನಮ್ಮ ತೋಟದ ಬೆಳೆಗೂ ಸೇರಿದಂತೆ ಕಾಡಿನ ಬೆಳೆವಣಿಗೆಗೂ ಅನುಕೂಲ ಆಗುತ್ತದೆ. ಜೇನಿನ ಮೇಲೆ ದ್ವೇಷ ಸಾಧಿಸುವ ರೀತಿ ಸಾಯಿಸುತ್ತಿರುವುದು ಜೇನಿನ ಮೇಲೆ ಮಾಡುತ್ತಿರುವ ದ್ರೋಹ. ತಕ್ಷಣ ಇದನ್ನು ನಿಲ್ಲಿಸಬೇಕು. ಈ ರೀತಿ ತಪ್ಪು ನಡೆದರೆ ಇವರ ಮೇಲೆ ನಿರ್ದಾಕ್ಷಿಣ್ಯವಾಗಿ ಸೂಕ್ತ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದು ನನ್ನ ನಿಲುವು” ಎಂದು ಪರಿಸರ ಬರಹಗಾರ ಶಿವಾನಂದ ಕಳವೆ ಹೇಳಿದ್ದಾರೆ.
ಉತ್ತರ ಕನ್ನಡ
Karwar News: ಕಾರವಾರದ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ನಾಗಪ್ಪ ಭೋವಿಗೆ 2022ನೇ ಸಾಲಿನ ಮುಖ್ಯಮಂತ್ರಿ ಪದಕ
Karwar News: 2022ನೇ ಸಾಲಿನಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟಲು ವಿಶೇಷ ಕ್ರಮ ಕೈಗೊಂಡು ಜನ ಮೆಚ್ಚುಗೆ ಗಳಿಸಿದ ಪಿಎಸ್‌ಐ ನಾಗಪ್ಪ ಭೋವಿ ಅವರು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಕಾರವಾರ: ರಾಜ್ಯದ 42 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ 2022ನೇ ಸಾಲಿನ ಮುಖ್ಯಮಂತ್ರಿ ಪದಕ (Chief Minister’s Medal) ಘೋಷಿಸಲಾಗಿದ್ದು, ನಗರದ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ನಾಗಪ್ಪ ಭೋವಿ ಅವರನ್ನೂ ಪದಕಕ್ಕೆ ಆಯ್ಕೆ ಮಾಡಲಾಗಿದೆ.
ಎಂ.ಎ ಕನ್ನಡ ವ್ಯಾಸಂಗ ಮಾಡಿರುವ ನಾಗಪ್ಪ, ಮೂಲತಃ ರಾಯಚೂರು ಜಿಲ್ಲೆಯ ಮಸ್ಕಿ ಜಿಲ್ಲೆಯ ಪಾಮನಕಲ್ಲೂರಿನವರು. 2015ರಲ್ಲಿ ಕರ್ತವ್ಯಕ್ಕೆ ಸೇರ್ಪಡೆಯಾದ ಅವರು, ಕಲಬುರಗಿಯ ಕುಂಚಾವರ, ಯಡ್ರಾಮಿ, ದಾಂಡೇಲಿ ನಗರ, ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ, ಪ್ರಸ್ತುತ ಕಾರವಾರ ನಗರ ಸಂಚಾರ ಠಾಣೆಯ ಪಿಎಸ್‌ಐ ಆಗಿ ಕರ್ತವ್ಯ ಸಲ್ಲಿಸುತ್ತಿದ್ದಾರೆ.
2022ನೇ ಸಾಲಿನಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟಲು ವಿಶೇಷ ಕ್ರಮ ಕೈಗೊಂಡು ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ 10,000ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಿ, ಅಂದಾಜು 52 ಲಕ್ಷಕ್ಕೂ ಹೆಚ್ಚು ದಂಡ ವಸೂಲಿ, ಹಿಟ್ ಅಂಡ್ ರನ್ ಪ್ರಕರಣಗಳ ಪತ್ತೆ, ನಗರದಲ್ಲಿ ವಾಹನಗಳ ನೂತನ ಪಾರ್ಕಿಂಗ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಅವರು ಪ್ರಯತ್ನ ನಡೆಸಿ ಮೆಚ್ಚುಗೆಗೆ ಪಾತ್ರರಾಗಿದ್ದರು.
ಸಿಬ್ಬಂದಿಗಳಿಗಾಗಿ ಸಾರ್ವಜನಿಕರ ಸಹಭಾಗಿತ್ವದಲ್ಲಿ 13 ಸಂಚಾರ ಪೊಲೀಸ್ ಚೌಕಿಗಳು ಮತ್ತು 55 ಬ್ಯಾರಿಕೇಡ್‌ಗಳ ನಿರ್ಮಾಣ ಮತ್ತು ಠಾಣಾ ಮರು ನವೀಕರಣ ಕಾರ್ಯ, ರಸ್ತೆ ಅಪಘಾತಗಳನ್ನು ತಡೆಯಲು ವಿನೂತನ ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳ ಆಯೋಜನೆ, ಏಕ ಗವಾಕ್ಷಿ ಯೋಜನೆಯಡಿಯಲ್ಲಿ ಸಾರ್ವಜನಿಕ ವಾಹನ ದಾಖಲೆಗಳ ತಿದ್ದುಪಡಿ ಅಭಿಯಾನ ನಡೆಸಿದ್ದರು.
ಇದನ್ನೂ ಓದಿ: ವೃತ್ತಿಪರ ಭಿಕ್ಷುಕನಾಗಿದ್ದರೂ ಹೆಂಡತಿಗೆ ಜೀವನಾಂಶ ನೀಡಲೇಬೇಕು: ಹೈಕೋರ್ಟ್
‘ಹೆಲ್ಮೆಟ್ ಧರಿಸಿ – ಜೀವ ಉಳಿಸಿ’ ಜಾಗೃತಿ ಜಾಥಾ ಅಭಿಯಾನ, ಶಾಲಾ- ಕಾಲೇಜುಗಳಲ್ಲಿ ರಸ್ತೆ ಅಪಘಾತ ತಡೆ ಕುರಿತು ವಿಶೇಷ ಜಾಗೃತಿ ಉಪನ್ಯಾಸ, ಸ್ಟೂಡೆಂಟ್ ಪೊಲೀಸ್ ಕೆಡೆಟ್‌ಗಳಿಗೆ ರಸ್ತೆ ಸುರಕ್ಷತಾ ಜಾಗೃತಿ ಉಪನ್ಯಾಸ, ‘ನನ್ನನ್ನು ಕ್ಷಮಿಸಿ’ ಹೆಲ್ಮೆಟ್ ಜಾಗೃತಿ ಅಭಿಯಾನ, ‘ರಸ್ತೆ ಅಪಘಾತ ಮುಕ್ತ ಭಾರತಕ್ಕಾಗಿ ನಮ್ಮೊಂದಿಗೆ ಕೈ ಜೋಡಿಸಿ’ ಸಹಿ ಸಂಗ್ರಹ ಅಭಿಯಾನ ಮತ್ತು ಜಾಗೃತಿ ಜಾಥಾ, ಆಟೋ/ಲಘು/ಭಾರಿ/ಆಂಬುಲೆನ್ಸ್/ ಟೂರ್ಸ್ ಮತ್ತು ಟ್ರಾವೆಲ್ಸ್/ಸಾರಿಗೆ ಇಲಾಖೆ/ ವಾಹನ ಚಾಲಕರಿಗೆ ರಸ್ತೆ ಅಪಘಾತಗಳ ಜಾಗೃತಿ ಕಾರ್ಯಕ್ರಮ, ಆಟೋ ಚಾಲಕರಿಗೆ ಕಣ್ಣಿನ ಉಚಿತ ತಪಾಸಣಾ ಶಿಬಿರ, ‘ರನ್ ಫಾರ್ ರೋಡ್ ಸೇಫ್ಟಿ’ ಜಾಗೃತಿ ಅಭಿಯಾನ ಹೀಗೆ ರಸ್ತೆ ಅಪಘಾತ ತಡೆ ಮತ್ತು ಸಾರ್ವಜನಿಕ ಸಂಚಾರ ಸುವ್ಯವಸ್ಥೆ ಕಾಪಾಡುವಲ್ಲಿ ದಕ್ಷ ಮತ್ತು ಪ್ರಾಮಾಣಿಕ ಪ್ರಯತ್ನ ನಡೆಸಿರುವ ಅವರು ಈ ಸಾಲಿನ ಸಿಎಂ ಮೆಡಲ್‌ಗೆ ಆಯ್ಕೆಯಾಗಿದ್ದಾರೆ.
ಕೇವಲ ಪೊಲೀಸ್ ಆಗಿರದೆ, ಸಾಹಿತ್ಯ ಸೇವೆಯಲ್ಲೂ ತೊಡಗಿಸಿಕೊಂಡಿರುವ ನಾಗಪ್ಪ, ಪುಸ್ತಕಗಳನ್ನೂ ಬರೆದಿದ್ದಾರೆ. ಇವರ ಸಾಹಿತ್ಯ ಸೇವೆಗೂ ಅನೇಕ ಪ್ರಶಸ್ತಿಗಳು ದೊರೆತಿವೆ. ಏಪ್ರಿಲ್ 2ರ ಪೊಲೀಸ್ ಧ್ವಜ ದಿನಾಚರಣೆಯ ದಿನದಂದು ಸಿಎಂ ಮೆಡಲ್ ಪ್ರದಾನ ಮಾಡಲಾಗುತ್ತದೆ.
ಉತ್ತರ ಕನ್ನಡ
Karnataka Election 2023: ಜಿಲ್ಲಾದ್ಯಂತ 25 ಚೆಕ್‌ಪೋಸ್ಟ್ ನಿರ್ಮಾಣ; ಅಕ್ರಮ ಸಾಗಾಟಗಳ ಮೇಲೆ ಹೆಚ್ಚಿನ ನಿಗಾ: ಪ್ರಭುಲಿಂಗ ಕವಳಿಕಟ್ಟಿ
Karnataka Election 2023: ನೀತಿ ಸಂಹಿತೆ ಉಲ್ಲಂಘನೆಯಾಗದ ರೀತಿಯಲ್ಲಿ ಕಾಮಗಾರಿಗಳ ಕೆಲಸದ ಮೇಲೂ ನಿಗಾವಹಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಭುಲಿಂಗ ಕವಳಿಕಟ್ಟಿ ಹೇಳಿದ್ದಾರೆ.
ಕಾರವಾರ: “ಚುನಾವಣಾ ನೀತಿ ಸಂಹಿತೆ (Karnataka Election 2023) ಜಾರಿಗೆ ಎರಡು ವಾರಗಳ ಮೊದಲೇ ಪ್ರಾಥಮಿಕ ಹಂತದ ಚುನಾವಣಾ ಕಾರ್ಯಗಳನ್ನು ಜಿಲ್ಲಾಡಳಿತ ಆರಂಭಿಸಿದ್ದು, ಚೆಕ್‌ಪೋಸ್ಟ್‌ಗಳಲ್ಲಿ ಸುಮಾರು 69 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ” ಉತ್ತರ ಕನ್ನಡ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಭವನದಲ್ಲಿ ನಡೆದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಈಗಾಗಲೇ ಜಿಲ್ಲಾದ್ಯಂತ ಇದ್ದ ರಾಜಕೀಯ ವ್ಯಕ್ತಿಗಳ ಬ್ಯಾನರ್, ಬಂಟಿಂಗ್ಸ್‌ಗಳನ್ನು ತೆರವುಗೊಳಿಸುವ ಕಾರ್ಯ ಮಾಡಲಾಗಿದೆ. ಇಂದಿನಿಂದ ಮಾದರಿ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ರಾಜಕೀಯ ವ್ಯಕ್ತಿಗಳ ಫೋಟೊಗಳಿರುವ ಬ್ಯಾನರ್‌ಗಳು ಹಾಗೂ ಸರ್ಕಾರದ ವೆಬ್‌ಸೈಟ್‌ಗಳಿಂದ ಅದನ್ನು ಕೂಡಲೇ ತೆರವುಗೊಳಿಸಲಾಗುವುದು” ಎಂದರು.
ಇದನ್ನೂ ಓದಿ: Rajkummar Rao: ಶಾರುಖ್ ಖಾನ್ ವ್ಯಕ್ತಿತ್ವ ಕೊಂಡಾಡಿದ ನಟ ರಾಜಕುಮಾರ್ ರಾವ್, ತಮ್ಮ ತಾಯಿಯ ಬಗ್ಗೆ ಹೇಳಿದ್ದೇನು?
ಈಗಾಗಲೇ ಜಿಲ್ಲಾದ್ಯಂತ 25 ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿದ್ದು ಚುನಾವಣೆಯಲ್ಲಿ ಆಮಿಷ ಒಡ್ಡುವ ನಿಟ್ಟಿನಲ್ಲಿ ಹಣ ವಸ್ತುಗಳ ಅಕ್ರಮ ಸಾಗಾಟ ನಡೆಯುತ್ತದೆ. ಹೀಗಾಗಿ ವಾಹನಗಳ ಮೇಲೆ ನಿಗಾವಹಿಸಲಾಗಿದೆ. ಈಗಾಗಲೇ ವಿವಿಧ ಪ್ರಕರಣಗಳಲ್ಲಿ ಗೋವಾದಿಂದ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ 40 ಲಕ್ಷ ರೂ. ಮೌಲ್ಯದ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಎರಡು ಪ್ರಕರಣಗಳಲ್ಲಿ ಒಟ್ಟು 10 ಲಕ್ಷ ರೂ. ದಾಖಲೆರಹಿತ ಹಣವನ್ನು ವಶಪಡಿಸಿಕೊಳ್ಳಲಾಗಿದ್ದು, ದಾಖಲೆ ರಹಿತವಾಗಿ ಸಾಗಿಸಲಾಗುತ್ತಿದ್ದ 7.5 ಲಕ್ಷ ರೂ. ಮೌಲ್ಯದ ಬೆಳ್ಳಿಯನ್ನು ಜಪ್ತಿಪಡಿಸಿಕೊಳ್ಳಲಾಗಿದೆ. ಉಳಿದಂತೆ ಗಾಂಜಾ, ಚರಸ್‌ನಂತಹ ಮಾದಕ ವಸ್ತುಗಳನ್ನೂ ಭಾರೀ ಪ್ರಮಾಣದಲ್ಲಿ ಪತ್ತೆ ಹಚ್ಚಿದ್ದು ಒಟ್ಟು 69 ಲಕ್ಷ ರೂ. ಮೌಲ್ಯದ ಅಕ್ರಮವಾಗಿ ಸಾಗಿಸುತ್ತಿದ್ದ ವಸ್ತುಗಳನ್ನು ಈಗಾಗಲೇ ಜಪ್ತಿಪಡಿಸಿಕೊಳ್ಳಲಾಗಿದೆ” ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಇದನ್ನೂ ಓದಿ: Anjanadri Hill: 101 ಕೆಜಿ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ ಹನುಮನ ಭಕ್ತ
“ಸರ್ಕಾರದಿಂದ ಜಾರಿಯಾದ ಕಾಮಗಾರಿಗಳಲ್ಲಿ ಆರಂಭವಾಗಿರುವ, ಅನುಮೋದನೆಯಾಗಿ ಪ್ರಾರಂಭವಾಗದ ಹಾಗೂ ಅನುಮೋದನೆಯಾಗದ ಕಾಮಗಾರಿಗಳ ಪಟ್ಟಿಯನ್ನು ಮಾಡಲಾಗುತ್ತಿದೆ. ಇದರಿಂದ ನೀತಿ ಸಂಹಿತೆ ಉಲ್ಲಂಘನೆಯಾಗದ ರೀತಿಯಲ್ಲಿ ಕಾಮಗಾರಿಗಳ ಕೆಲಸದ ಮೇಲೂ ನಿಗಾವಹಿಸಲು ಕ್ರಮ ಕೈಗೊಳ್ಳಲಾಗಿದೆ. ಇದರೊಂದಿಗೆ ಮಾದ್ಯಮಗಳ ಮೇಲೂ ನಿಗಾ ಇರಿಸಲಾಗುತ್ತಿದ್ದು ಪ್ರಕಟವಾಗುವ ಜಾಹೀರಾತುಗಳು ಹಾಗೂ ಸುದ್ದಿಗಳಿಂದ ನೀತಿ ಸಂಹಿತೆ ಉಲ್ಲಂಘನೆಯಾಗುವಂತೆ ಇದ್ದಲ್ಲಿ ಅಂಥವುಗಳ ಮೇಲೂ ಕ್ರಮ ಕೈಗೊಳ್ಳಲಾಗುವುದು” ಎಂದರು.
-
ಸುವಚನ9 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ6 hours ago
Chenab Bridge | ಐಫೆಲ್ ಟವರ್ಗಿಂತಲೂ ಎತ್ತರದ ರೈಲ್ವೇ ಸೇತುವೆ ಜಮ್ಮು ಕಾಶ್ಮೀರದಲ್ಲಿ ಲೋಕಾರ್ಪಣೆಗೆ ಸಿದ್ಧ
-
ಕರ್ನಾಟಕ7 hours ago
SSLC Exam 2023: ಇಂದಿನಿಂದ SSLC ಎಕ್ಸಾಂ; ಪರೀಕ್ಷೆ ಬರೆಯಲಿರುವ 8.42 ಲಕ್ಷ ವಿದ್ಯಾರ್ಥಿಗಳು
-
ಪ್ರಮುಖ ಸುದ್ದಿ15 hours ago
ವಿಸ್ತಾರ ಸಂಪಾದಕೀಯ: ಹಿಂದಿ ಬಗ್ಗೆ ಪೂರ್ವಗ್ರಹ ಬೇಡ, ಹಾಗಂತ ಹೇರಿಕೆ ಸಲ್ಲದು
-
ಕ್ರಿಕೆಟ್22 hours ago
IPL 2023: ಗುಜರಾತ್ vs ಚೆನ್ನೈ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ವೈರಲ್ ನ್ಯೂಸ್22 hours ago
Viral Video: ಇದು ರೋಲ್ಸ್ ರಾಯ್ಸ್ ಆಫ್ ಆಟೋ; ಒಂದು ಬಟನ್ ಪ್ರೆಸ್ ಮಾಡಿದ್ರೆ ಸಾಕು ಮೇಲ್ಭಾಗ ತೆರೆದುಕೊಳ್ಳತ್ತೆ!
-
ಕರ್ನಾಟಕ18 hours ago
ವಿಸ್ತಾರ Special: ಬಿಜೆಪಿ ಇತಿಹಾಸದಲ್ಲೇ ಮೊದಲ ಪ್ರಯತ್ನ ಇದು: ಅಭ್ಯರ್ಥಿ ಆಯ್ಕೆಗೆ ಶುಕ್ರವಾರ ನಡೆಯಲಿದೆ ಆಂತರಿಕ ಚುನಾವಣೆ
-
ಕ್ರಿಕೆಟ್19 hours ago
IPL 203 : ಐಪಿಎಲ್ 16ನೇ ಆವೃತ್ತಿಯ ವೇಳಾಪಟ್ಟಿ ಇಲ್ಲಿದೆ