ಚಾಮರಾಜನಗರ: ಇಲ್ಲಿನ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ರಸ್ತೆ ಒತ್ತುವರಿ ತೆರವು ವಿರೋಧಿಸಿ ಅಂಗಡಿ ಮಾಲೀಕರೊಬ್ಬರು ವಿಷ ಕುಡಿದು ಆತ್ಮಹತ್ಯೆಗೆ (suicide case) ಯತ್ನಿಸಿದ ಘಟನೆ ನಡೆದಿದೆ. ಗ್ರಾಮದ ರಂಗಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದವರು.
ರಂಗಸ್ವಾಮಿ ರಸ್ತೆ ಒತ್ತುವರಿ ಮಾಡಿ ಅಂಗಡಿ ನಿರ್ಮಾಣ ಮಾಡಿದ್ದರು. ಈ ಬಗ್ಗೆ ಗ್ರಾಮಸ್ಥರು ತಹಸೀಲ್ದಾರ್‌ಗೆ ದೂರು ನೀಡಿದ್ದರು. ಸರ್ವೇ ಅಧಿಕಾರಿಗಳು ಜಾಗ ಪರಿಶೀಲಿಸಿದಾಗ ರಸ್ತೆ ಒತ್ತುವರಿ ಮಾಡಿರುವುದು ಗೊತ್ತಾಗಿದೆ. ಹೀಗಾಗಿ ಅಂಗಡಿ ತೆರವುಗೊಳಿಸುವಂತೆ ಅಧಿಕಾರಿಗಳು ಸೂಚಿಸಿದ್ದರು.
ಆದರೆ, ಅಂಗಡಿ ತೆರವುಗೊಳಿಸದೇ ಇದ್ದಾಗ ತಹಸೀಲ್ದಾರ್ ಮಂಜುಳಾ ನೇತೃತ್ವದಲ್ಲಿ ಶುಕ್ರವಾರ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಲಾಗಿದೆ. ಈ ವೇಳೆ ರಂಗಸ್ವಾಮಿ ಮತ್ತೊಮ್ಮೆ ಕಾಲಾವಕಾಶ ಕೇಳಿದ್ದಾರೆ. ಕಾಲಾವಕಾಶ ನೀಡಲು ನಿರಾಕರಿಸಿದಾಗ, ಅಂಗಡಿಯಲ್ಲೇ ವಿಷ ಸೇವಿಸಿದ್ದಾರೆ.
ವಿಷ ಸೇವಿಸಿ ಅಸ್ವಸ್ಥರಾದ ರಂಗಸ್ವಾಮಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಳ್ಳೇಗಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Suicide Case | ವಯಸ್ಸು 30 ದಾಟಿದರೂ ಸಿಗ್ತಿಲ್ಲ ಹೆಣ್ಣು; ಖಿನ್ನತೆಗೆ ಜಾರಿದ ಯುವಕ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ