Site icon Vistara News

Suicide Case | ತಾಯಿಯ ಅಕ್ರಮ ಸಂಬಂಧಕ್ಕೆ ಮನನೊಂದು ಮಗ ಆತ್ಮಹತ್ಯೆ

suicide case

ಮೈಸೂರು: ಇಲ್ಲಿನ ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದಲ್ಲಿ ತಾಯಿಯ ಅಕ್ರಮ ಸಂಬಂಧಕ್ಕೆ ಮನನೊಂದು ಮಗ ಆತ್ಮಹತ್ಯೆ (Suicide Case) ಮಾಡಿಕೊಂಡಿರುವ ಘಟನೆ ನಡೆದಿದೆ. ಮಹೇಂದ್ರ (20) ಮೃತ ದುರ್ದೈವಿ.

ಅಕ್ರಮ ಸಂಬಂಧದ ವಿಚಾರವಾಗಿ ಮನೆಯಲ್ಲಿ ತಂದೆ- ತಾಯಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಇದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ಮಹೇಂದ್ರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಷಯ ತಿಳಿದು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Leopard Attack | ರಾತ್ರಿ ವೇಳೆ ಚಿರತೆ ಗಸ್ತು; ಜನರು ಮನೆಯಲ್ಲಿಯೇ ಸುಸ್ತು

Exit mobile version