ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ಪಟ್ಟಣದ ಇಂದಿರಾ ನಗರದ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಸತಿ ನಿಲಯದಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide Case) ಮಾಡಿಕೊಂಡಿದ್ದಾನೆ.
ಬೈಲಹೊಂಗಲ ತಾಲೂಕಿನ ಕೊಡ್ಡಿವಾಡ ಗ್ರಾಮದ ಪರುಶರಾಮ ಕೋನೇರಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಹಾಸ್ಟೆಲ್‌ನ ಇತರ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ಬಳಿಕ ನೇಣು ಬಿಗಿದುಕೊಂಡಿದ್ದಾನೆ ಎಂದು ಹೇಳಲಾಗಿದೆ.
ಉಳಿದ ವಿದ್ಯಾರ್ಥಿಗಳು ಕಾಲೇಜಿನಿಂದ ವಸತಿ ನಿಲಯಕ್ಕೆ ಮರಳಿದ್ದು, ಎಷ್ಟೇ ಬಾಗಿಲು ಬಡಿದರೂ ಆತ ತೆರೆಯಲಿಲ್ಲ. ಒಳಗೆ ಯಾರಿದ್ದಾರೆಂಬುದೂ ಗೊತ್ತಾಗಿಲ್ಲ. ವಿದ್ಯಾರ್ಥಿ ಬಾಗಿಲು ತೆರೆಯದ ಕಾರಣ ಇತರ ವಿದ್ಯಾರ್ಥಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ಪೊಲೀಸರು ಪರಿಶೀಲನೆ ನಡೆಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಗೆ ವಿದ್ಯಾರ್ಥಿ ಶವವನ್ನು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ | ಮಂಗಳೂರು ಸ್ಫೋಟ | ಕರಾವಳಿಯಲ್ಲಿ ಎನ್‌ಐಎ ಕೇಂದ್ರ ಸ್ಥಾಪನೆಗೆ ಕೇಂದ್ರದ ಜತೆ ಮಾತುಕತೆ ಎಂದ ತೇಜಸ್ವಿಸೂರ್ಯ