ಕಾರವಾರ: ಮನೆಯಲ್ಲಿ ಪೋಷಕರು ಬೈದರು ಎಂಬ ಕಾರಣಕ್ಕೆ ಮನನೊಂದ ಶಿರಸಿಯ ೯ನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲೆಯ ಬಾವಿಗೆ ಹಾರಿ ಆತ್ಮಹತ್ಯೆ (Suicide Case) ಮಾಡಿಕೊಂಡಿದ್ದಾನೆ.
ಶಿರಸಿಯ ಖಾಸಗಿ ಪ್ರೌಢಶಾಲೆ ಆವರಣದಲ್ಲಿ ಘಟನೆ ನಡೆದಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಅಯನ್ ಬಾಬು ಶೇಖ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ. ಅಯನ್ 9ನೇ ತರಗತಿ ಓದುತ್ತಿದ್ದ. ಮನೆಯಲ್ಲಿ ಪೋಷಕರು ಬೈದಿದ್ದಾರೆ ಎಂಬ ಕಾರಣಕ್ಕೆ ಬೇಸರಗೊಂಡಿದ್ದು, ಶಾಲೆಗೆ ಬಂದವನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಶವವನ್ನು ಮೇಲಕ್ಕೆತ್ತಿದ್ದಾರೆ. ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ | ಮಾಯಾಂಗನೆ ಹಿಂದೆ ಬಿದ್ದು ನಿನಗೆ ಅನ್ಯಾಯ ಮಾಡಿದೆ ಹೆಂಡ್ತೀ: ಹಿರೇಕೆರೂರ ಶಿರಸ್ತೇದಾರ್ Suicide Note