ವಿಜಯನಗರ: ಹರಪನಹಳ್ಳಿ ತಾಲೂಕಿನ ನೀಲಗುಂದ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ತಾಯಿ ಮತ್ತು ಇಬ್ಬರು ಹೆಣ್ಣು ಮಕ್ಕಳು ನೇಣು ಬಿಗಿದುಕೊಂಡಿದ್ದಾರೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ (Suicide Case) ಕಾರಣ ಇರಬಹುದು ಎಂದು ಶಂಕಿಸಲಾಗಿದೆ.
ತಾಯಿ ಭವ್ಯಾ (36) ಕಾವ್ಯಾ (14) ಅಮೂಲ್ಯ ನೇಣಿಗೆ ಶರಣಾದ ದುರ್ದೈವಿಗಳು. ಕಳೆದ ಮೂರು ದಿನಗಳಿಂದ ಪತಿ ವೀರೇಶ್ ಗ್ರಾಮದಲ್ಲಿ ಇರಲಿಲ್ಲ ಎನ್ನಲಾಗಿದೆ. ಈ ವೇಳೆ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ನೇಣಿಗೆ ಕೊರಳೊಡ್ಡಿದ್ದಾರೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಹಲವಾಗಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ, ಸುತ್ತಮುತ್ತಲ ಮನೆಗಳಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ.
ಇದನ್ನೂ ಓದಿ | Vows Letter: ತನಗೆ ಆಗದವರು ನರಳಿ ನರಳಿ ಸಾಯಲಿ; ಹೀಗೊಂದು ಹರಕೆ ಪತ್ರ ಬರೆದು ದೇವರಿಗೆ ಮೊರೆಯಿಟ್ಟ ಭಕ್ತ!