Site icon Vistara News

Suicide case | ಬಾಗಲಕೋಟೆ ಜೈಲಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ!

Suicide case

ಬಾಗಲಕೋಟೆ: ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬರು ಆತ್ಮಹತ್ಯೆ (Suicide case) ಮಾಡಿಕೊಂಡಿದ್ದಾರೆ. ಮಂಜುನಾಥ ಕುರಿ (28) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಜೈಲು ಸಿಬ್ಬಂದಿ ಕೈದಿಗಳ ಜತೆ ಧ್ವಜಾರೋಹಣಕ್ಕೆ ಮುಂದಾಗಿದ್ದ ಸಂದರ್ಭದಲ್ಲಿ ಮೂತ್ರವಿಸರ್ಜನೆ ಮಾಡಿ ಬರುವುದಾಗಿ ಹೋಗಿ ಸ್ನಾನ ಗೃಹದಲ್ಲಿ ಕಿಟಕಿಗೆ ಟವೆಲ್‌ ಮೂಲಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೋಕ್ಸೋ ಕಾಯ್ದೆ ಅಡಿ ಮಂಜುನಾಥ್‌ನನ್ನು ಬಂಧಿಸಲಾಗಿತ್ತು.

ಮಂಜುನಾಥ್‌ ಮಲ್ಲಾಪುರ ಗ್ರಾಮದ ನಿವಾಸಿಯಾಗಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಬಂಧಿಸಲಾಗಿತ್ತು. ಲೋಕಾಪುರ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಕೇಸ್ ದಾಖಲಾಗಿತ್ತು. ಎರಡು ಬಾರಿ ಜಾಮೀನು ಅರ್ಜಿ ತಿರಸ್ಕೃತವಾಗಿತ್ತು. ಇದರಿಂದ ಮನನೊಂದಿದ್ದ ಮಂಜು ಬೆಳಗ್ಗೆ 8.30ರ ಸುಮಾರಿಗೆ ನೇಣಿಗೆ ಶರಣಾಗಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ | Rto Agent Suicide | ನದಿಗೆ ಹಾರಿ ಆರ್‌ಟಿಒ ಏಜೆಂಟ್‌ ಆತ್ಮಹತ್ಯೆ!

Exit mobile version