Site icon Vistara News

Suicide Case | ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಗೃಹಿಣಿ ಆತ್ಮಹತ್ಯೆ

Suicide Case

ನೆಲಮಂಗಲ: ಬಾಗಲಗುಂಟೆಯ ಡಿಫೆನ್ಸ್ ಕಾಲೋನಿಯಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು‌ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹೊಳೆನರಸೀಪುರ ಮೂಲದ ಲಕ್ಷ್ಮೀದೇವಿ (42) ಮೃತರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆಯ ಮಾಂಗಲ್ಯ ಎಗರಿಸಲು ಹೋಗಿ ಸಿಕ್ಕಿಬಿದ್ದ ಕಳ್ಳ
ದೇವನಹಳ್ಳಿ: ಮಹಿಳೆಯ ಮಾಂಗಲ್ಯ ಎಗರಿಸಲು ಹೋಗಿ ಕಳ್ಳ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ರೈಲ್ವೆ ಸ್ಟೇಷನ್ ಸಮೀಪದ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿ ನಡೆದಿದೆ. ಮಹಿಳೆ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮುಗಿಸಿ ಹಿಂದಿರುಗುತ್ತಿದ್ದಾಗ ಸರ ಕಿತ್ತುಕೊಳ್ಳಲು ಕಳ್ಳ ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಕೂಗಿಕೊಂಡಿದ್ದಾರೆ. ತಕ್ಷಣವೇ ಸ್ಥಳದಲ್ಲಿದ್ದ ಸಾರ್ವಜನಿಕರು ಕಳ್ಳನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ | Suicide Case | ಭದ್ರಾವತಿಯಲ್ಲಿ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ

Exit mobile version