ಬೆಂಗಳೂರು: ಇಲ್ಲಿನ ಲಕ್ಷ್ಮಣ್ ಪುರಿಯಲ್ಲಿ ವರದಕ್ಷಿಣಿ ಕಿರುಕುಳಕ್ಕೆ ಬೇಸತ್ತ ಗೃಹಿಣಿಯೊಬ್ಬರು ನೇಣಿಗೆ (Suicide Case) ಶರಣಾಗಿದ್ದಾರೆ. ಸೌಂದರ್ಯ (26) ಮೃತ ದುರ್ದೈವಿ. ವರದಕ್ಷಿಣೆ ಕಿರುಕುಳ ಹಾಗೂ ಮದುವೆಯಾಗಿ 3 ವರ್ಷ ಕಳೆದರೂ ಮಕ್ಕಳು ಆಗಿಲ್ಲ ಎಂದು ಪತಿಯ ಮನೆಯವರು ಕಿರುಕುಳ ನೀಡುತ್ತಿದ್ದರು ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಿದರೂ ತೆಗೆದುಕೊಂಡಿಲ್ಲ ಎಂದು ಕಿಡಿಕಾರಿದ್ದಾರೆ.
ಹೀಗಾಗಿ ಶನಿವಾರ ನಗರದ ಶೇಷಾದ್ರಪುರ ಪೊಲೀಸ್ ಠಾಣೆಗೆ ಮೃತದೇಹವನ್ನು ತಂದು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ದೂರು ದಾಖಲಿಸಿಕೊಳ್ಳುವ ತನಕ ಠಾಣೆಯಿಂದ ಕದಲುವುದಿಲ್ಲ ಎಂದು ಕುಟುಂಬಸ್ಥರು ಪಟ್ಟುಹಿಡಿದರು. ಪತಿ ವಿಘ್ನೇಶ್ ಹಾಗೂ ಕಾವ್ಯ ಅನ್ಯೋನ್ಯವಾಗಿಯೇ ಇದ್ದರು. ಆದರೆ, ವಿಘ್ನೇಶ್ ತಾಯಿ ಇರ್ಚಮ್ಮ, ಸಂಬಂಧಿಕರಾದ ಯಳಿಲ್, ವಿಮಲಾ, ರೇವತಿ ಹಾಗೂ ಶಿವು ಎಂಬುವರಿಂದ ಕಾವ್ಯಳಿಗೆ ಕಿರುಕುಳ ನೀಡುತ್ತಿದ್ದರು ಎಂದು ಕಾವ್ಯ ಕುಟುಂಬದವರು ಆರೋಪಿಸಿದ್ದಾರೆ.
ಕಳೆದ ಮೂರು ದಿನಗಳಿಂದ ವರದಕ್ಷಿಣೆ ವಿಷಯಕ್ಕೆ ಗಲಾಟೆ ನಡೆದಿದ್ದು ವಿಘ್ನೇಶ್ ಕುಟುಂಬಸ್ಥರು ಹಲ್ಲೆ ನಡೆಸಿದ್ದಾರೆ. ಇವರ ಕಿರುಕುಳದಿಂದಲೇ ಕಾವ್ಯ ಶುಕ್ರವಾರ ಸಂಜೆ ತಾಯಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ದೂರು ನೀಡಿದರೂ ಪೊಲೀಸರು ದಾಖಲಿಸಿಕೊಂಡಿಲ್ಲ. ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.
ಇದನ್ನೂ ಓದಿ: Fire Accident: ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ಕುರಿಗಾಹಿ ಸಜೀವ ದಹನ
ಇತ್ತ ಪ್ರತಿಭಟನಾಕಾರರ ಮನವೊಲಿಸಲು ಪೊಲೀಸರು ಹರಸಾಹಸವೇ ಪಡಬೇಕಾಯಿತು. ಸದ್ಯ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.
ಬೆಂಗಳೂರಿನ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ