ತುಮಕೂರು: ಕೌಟುಂಬಿಕ ಕಲಹಕ್ಕೆ ಮನನೊಂದು ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide case) ಮಾಡಿಕೊಂಡ ಘಟನೆ ತುಮಕೂರು ನಗರದ ಹನುಮಂತಪುರ 4ನೇ ಕ್ರಾಸ್‌ನಲ್ಲಿ ನಡೆದಿದೆ. ಗುಬ್ಬಿ ತಾಲೂಕಿನ ಮದನಘಟ್ಟ ಗ್ರಾಮದ ನಿವಾಸಿಯಾಗಿರುವ ಮೋನಿಕಾ (21) ಎಂಬವರೇ ಮೃತ ದುರ್ದೈವಿ.
ಮೋನಿಕಾ ಅವರಿಗೆ ಮೂರು ವರ್ಷದ ಹಿಂದೆ ಅಭಿರಾಮ್ ಎಂಬವರನ್ನು ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದರು. ತುಮಕೂರು ಮೂಲದ ಅಭಿರಾಮ್ ಜತೆ ಅವರು ಹನುಮಂತಪುರದ 4ನೇ ಕ್ರಾಸ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಮೋನಿಕಾ ತುಮಕೂರಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮಾಡುತ್ತಿದ್ದರು. ಈ ನಡುವೆ, ಸೋಮವಾರ ತಡರಾತ್ರಿ ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗಂಡನ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಮೋನಿಕಾ ಪೋಷಕರು ಆರೋಪಿಸಿದ್ದಾರೆ. ಸ್ಥಳಕ್ಕೆ ತುಮಕೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಗಂಡ ಅಭಿರಾಮ್‌ನನ್ನು ವಶಕ್ಕೆ ಪಡೆದಿದ್ದಾರೆ. ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷ್ಣಾ ನದಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು
ವಿಜಯಪುರ: ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ವ್ಯಕ್ತಿಯೊಬ್ಬರು ಕೃಷ್ಣಾ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತಪಟ್ಟಿರುವ ವ್ಯಕ್ತಿಯ ಹೆಸರು ಹಾಗೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ವಿಜಯಪುರದಿಂದ ಬಾಡಿಗೆ ವಾಹನ ಮಾಡಿಕೊಂಡು ಹೋಗಿದ್ದ ಆತ ಕೊಲ್ಹಾರ ಬ್ರಿಜ್ ಮೇಲೆ ವಾಹನ ನಿಲ್ಲಿಸಿ ನದಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶವಕ್ಕಾಗಿ ಶೋಧ ಕಾರ್ಯಾಚರಣೆ ಆರಂಭವಾಗಿದೆ.
ಇದನ್ನೂ ಓದಿ : Suicide case: ಪೊಲೀಸರಿಂದ ಬುದ್ಧಿ ಹೇಳಿಸಿದ ಪತ್ನಿ, ಜನನಿಬಿಡ ಪ್ರದೇಶದಲ್ಲಿ ವ್ಯಕ್ತಿ ಆತ್ಮಹತ್ಯೆ