ಸಾಗರ: ವರದಕ್ಷಿಣೆ ಕಿರುಕುಳದಿಂದ ಗೃಹಿಣಿಯೊಬ್ಬರು ಆತ್ಮಹತ್ಯೆಗೆ (Suicide case) ಶರಣಾಗಿರುವ ಘಟನೆ ಸಾಗರ ತಾಲೂಕಿನ ದಿಗಟೆಕೊಪ್ಪ ಗ್ರಾಮದಲ್ಲಿ ನಡೆದಿದೆ.
ದಿಗಟೆಕೊಪ್ಪ ಗ್ರಾಮದ 23 ವರ್ಷದ ಸುಶ್ಮಿತಾ ನೇಣಿಗೆ ಶರಣಾದ ಗೃಹಿಣಿ. ಕಳೆದ ಏಳು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು ಎಂದು ತಿಳಿದು ಬಂದಿದೆ. ಸುಷ್ಮಿತಾ ಮನೆಯ ಶೌಚಗೃಹದಲ್ಲಿ ವೇಲ್‌ನಿಂದ ನೇಣಿಗೆ ಶರಣಾಗಿದ್ದಾರೆ.
ಈ ಸಂಬಂಧ ಪತಿ ಹಾಗೂ ಅತ್ತೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ತನ್ನ ಮಗಳಿಗೆ ವರದಕ್ಷಿಣೆ ತರುವಂತೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಮೃತಳ ತಂದೆ ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.