ನೆಲಮಂಗಲ: ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಹೆಚ್ಚು ಅಂಕ ಗಳಿಸಲು ಸಾಧ್ಯವಾಗಲಿಲ್ಲ ಎಂದು ಯುವಕನೊಬ್ಬ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide Case) ಮಾಡಿಕೊಂಡಿದ್ದಾನೆ. ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಹುಬ್ಬಳ್ಳಿ ಮೂಲದ ಆದಿತ್ಯ ಸಂಕಣ್ಣ (18) ಮೃತ ದುರ್ದೈವಿ. ಆಚಾರ್ಯ ಕಾಲೇಜಿನಲ್ಲಿ ಡಿಪ್ಲೊಮಾ ಕಂಪ್ಯೂಟರ್ ಸೈನ್ಸ್ 3ನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದ ಆದಿತ್ಯ, ಜೀವನದಲ್ಲಿ ಜಿಗುಪ್ಸೆ ಮತ್ತು ಭರವಸೆ ಕಳೆದುಕೊಂಡಿದ್ದಾಗಿ ಡೆತ್ನೋಟ್ ಬರೆದಿಟ್ಟಿದ್ದಾನೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ರೂಮಿನಲ್ಲಿರುವ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾನೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Suicide Case | ತಾಯಿಯ ಅಕ್ರಮ ಸಂಬಂಧಕ್ಕೆ ಮನನೊಂದು ಮಗ ಆತ್ಮಹತ್ಯೆ