ಕರ್ನಾಟಕ
Suicide case: ಪ್ರೇಮ ವೈಫಲ್ಯಕ್ಕೆ ಯುವತಿ ಆತ್ಮಹತ್ಯೆ; ಸಾಲ ವಾಪಸ್ ಕೊಡದಿದ್ದಕ್ಕೆ ವಿಷ ಕುಡಿದ ಪಶುವೈದ್ಯ
Suicide case: ಗದಗಿನಲ್ಲಿ ಅನ್ಯ ಕೋಮಿನ ಯುವಕನನ್ನು ಪ್ರೀತಿ ಮಾಡುತ್ತಿದ್ದ ಯುವತಿಯೊಬ್ಬಳು ನೇಣಿಗೆ ಶರಣಾಗಿದ್ದರೆ, ಬಾಗಲಕೋಟೆಯಲ್ಲಿ ಸಹೋದ್ಯೋಗಿ ಮತ್ತು ಸ್ನೇಹಿತನಿಗೆ ಸಾಲ ನೀಡಿ ವಾಪಸ್ ಸಿಗದೇ ಇದ್ದಿದ್ದಕ್ಕೆ ಪಶುವೈದ್ಯರೊಬ್ಬರು ವಿಷ ಸೇವಿಸಿದ್ದಾರೆ.
ಗದಗ/ಬಾಗಲಕೋಟೆ: ತಾಲೂಕಿನ ಕಣಗಿನಹಾಳ ಗ್ರಾಮದಲ್ಲಿ ಪ್ರೀತಿ ವೈಫಲ್ಯ ಹಿನ್ನೆಲೆಯಲ್ಲಿ ಯುವತಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ (Suicide case) ಶರಣಾಗಿದ್ದಾಳೆ.
ಪಾರ್ವತಿ ಬಾವಿ (24) ಮೃತ ಯುವತಿ. ರೈಲ್ವೆ ಕೀಪರ್ ಆಗಿ ಕೆಲಸ ಮಾಡುತ್ತಿದ್ದ ಪಾರ್ವತಿ ಅನ್ಯ ಕೋಮಿನ ಯುವಕನೊಬ್ಬನನ್ನು ಪ್ರೀತಿ ಮಾಡುತ್ತಿದ್ದಳು. ಆದರೆ, ಬುಧವಾರ (ಮಾ. 15) ಇದ್ದಕ್ಕಿದ್ದಂತೆ ನೇಣಿಗೆ ಶರಣಾಗಿದ್ದಾಳೆ. ಪ್ರೇಮಿಗಳಿಬ್ಬರೂ ಜಗಳ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮನನೊಂದ ಯುವತಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ.
ಇದನ್ನೂ ಓದಿ: Border Dispute: ರಾಜ್ಯದ ಗಡಿ ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರದ ಯೋಜನೆ ಜಾರಿ: ಸಿಎಂ ರಾಜೀನಾಮೆಗೆ ಡಿ.ಕೆ. ಶಿವಕುಮಾರ್ ಆಗ್ರಹ
ಸಾಯುವ ಮುಂಚೆ ಡೆತ್‌ನೋಟ್ ಬರೆದಿಟ್ಟಿದ್ದಾಳೆ ಎಂದು ಕುಟುಂಬಸ್ಥರು ಹೇಳುತ್ತಿದ್ದರೆ, ಪೊಲೀಸರು ಮಾತ್ರ ಡೆತ್‌ನೋಟ್ ಬಹಿರಂಗಪಡಿಸಿಲ್ಲ. ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಕೊಟ್ಟ ಸಾಲ ವಾಪಸ್ ಬಾರದ್ದಕ್ಕೆ ಪಶುವೈದ್ಯ ಆತ್ಮಹತ್ಯೆ
ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಗ್ರಾಮದ ಪಶುವೈದ್ಯರೊಬ್ಬರು ಸಹೋದ್ಯೋಗಿ ವೈದ್ಯರೊಬ್ಬರಿಗೆ ಕೊಟ್ಟ ಸಾಲವನ್ನು ವಾಪಸ್ ಕೊಡಲಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಮಖಂಡಿ ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಯಲ್ಲಿ ವಿಷ ಸೇವಿಸಿದ್ದಾರೆ. ನಂದೆಪ್ಪ ಬಾಗೇವಾಡಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ನಂದೆಪ್ಪ ತನ್ನ ಸಹೋದ್ಯೋಗಿ ವೈದ್ಯರೊಬ್ಬರಿಗೆ ಐದು ಲಕ್ಷ ರೂಪಾಯಿ, ಮತ್ತೊಬ್ಬ ಗೆಳೆಯನಿಗೆ ತನ್ನ ಮನೆ ಆಧಾರವಾಗಿಟ್ಟುಕೊಂಡು ಏಳು ಲಕ್ಷ ರೂಪಾಯಿ ಸಾಲ ಕೊಡಿಸಿದ್ದರು. ಸಾಲ ಪಡೆದವರು ವಾಪಸ್ ಕೊಟ್ಟಿರಲಿಲ್ಲ. ಕೇಳಿ ಕೇಳಿ ಬೇಸತ್ತ ನಂದೆಪ್ಪ ಮನನೊಂದು ಮನೆಯಲ್ಲಿ ವಿಷ ಸೇವಿಸಿದ್ದಾರೆ.
ಇದನ್ನೂ ಓದಿ: Hasana Politics : ಪಕ್ಷ ಬಿಡದಂತೆ ಶಿವಲಿಂಗೇಗೌಡರ ಮನವೊಲಿಕೆ; ಎಚ್.ಡಿ. ರೇವಣ್ಣ ಮಾತುಕತೆಯ ಆಡಿಯೊ ವೈರಲ್
ಸಾಯುವ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದು, ಯಾರು ಯಾರಿಗೆ ಸಾಲ ಕೊಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ. ಪೊಲೀಸರಿಂದ ತನಿಖೆ ಮುಂದುವರಿದಿದೆ.
ಕರ್ನಾಟಕ
Siddaramaiah: ಕೋಲಾರದಿಂದಲೂ ಸಿದ್ದರಾಮಯ್ಯ ಸ್ಪರ್ಧೆ: ರಾಹುಲ್ ಗಾಂಧಿಯಿಂದಲೇ ಘೋಷಣೆಗೆ ಮುಹೂರ್ತ?
ಕೋಲಾರದಿಂದ ಮಾತ್ರ ಸ್ಪರ್ಧೆ ಎನ್ನುತ್ತಿದ್ದ ಸಿದ್ದರಾಮಯ್ಯ, ವರುಣಾ ಕ್ಷೇತ್ರದಲ್ಲಿ ಸ್ಪರ್ಧೆಯನ್ನು ಈಗಾಗೆಲ ಖಚಿತಪಡಿಸಿದ್ದಾರೆ.
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದ ಜತೆಗೆ ಕೋಲಾರದಿಂದಲೂ ಸ್ಪರ್ಧೆ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದ್ದು, ರಾಹುಲ್ ಗಾಂಧಿಯವರಿಂದಲೇ ಈ ಘೋಷಣೆಯಾಗುವ ಸಾಧ್ಯತೆಯಿದೆ.
ಈ ಬಗ್ಗೆ ಈಗಾಗಲೇ ಸುರ್ಜೇವಾಲಾ ಜತೆ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ. ಸಿದ್ದರಾಮಯ್ಯ ಟೀಮ್ ಈಗಾಗಲೆ ಕೋಲಾರದಲ್ಲಿ ಕಾರ್ಯ ನಡೆಸುತ್ತಿದೆ. ಬಗೆಹರಿಯದ ಮುನಿಯಪ್ಪ ಮತ್ತು ರಮೇಶ್ ಕುಮಾರ್ ಬಣ ಜಗಳದ ಕಾರಣಕ್ಕೆ ಕೋಲಾರದಿಂದ ಸ್ಪರ್ಧೆ ಬೇಡ ಎಂದು ಸಿದ್ದರಾಮಯ್ಯ ನಿರ್ಧರಿಸಿದ್ದರು.
ಆದರೆ ನಂತರದಲ್ಲಿ ದೇವನಹಳ್ಳಿಯಿಂದ ಮುನಿಯಪ್ಪ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಟಿಕೆಟ್ ಘೋಷಣೆ ನಂತರ ದೇವನಹಳ್ಳಿಯಲ್ಲೇ ಮುನಿಯಪ್ಪ ಠಿಕಾಣಿ ಹೂಡಿದ್ದು, ಅವರ ಸಂಪೂರ್ಣ ತಂಡ ಸಹ ಅಲ್ಲಿಗೇ ತೆರಳಿದೆ. ಈ ಕಾರಣಕ್ಕೆ ಕೋಲಾರದಿಂದಲೂ ಸ್ಪರ್ಧೆಗೆ ಸಿದ್ದರಾಮಯ್ಯ ಒಲವು ತೋರಿದ್ದಾರೆ.
ಆದರೆ ಸಿದ್ದರಾಮಯ್ಯಗೆ ಎರಡು ಕ್ಷೇತ್ರ ಕೊಡುವ ಬಗ್ಗೆ ಡಿಕೆಶಿ, ಮಲ್ಲಿಕಾರ್ಜುನ ಖರ್ಗೆ ಅಪಸ್ವರ ಎತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೀಸೋದರಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕಾಂಗ್ರೆಸ್‌ಗೆ ಅನುಕೂಲ ಎನ್ನುವ ವಾದವನ್ನು ಅನೇಕರು ಮುಂದೆ ಇಟ್ಟಿದ್ದಾರೆ.
ಏಪ್ರಿಲ್ ಮೊದಲ ವಾರದಲ್ಲಿ ರಾಹುಲ್ ಗಾಂಧಿ ಕೋಲಾರಕ್ಕೆ ಆಗಮಿಸಲಿದ್ದಾರೆ. 2019ರಲ್ಲಿ ಕೋಲಾರದಲ್ಲಿ ಮೋದಿ ಕುರಿತು ಮಾಡಿದ ಭಾಷಣಕ್ಕೆ ಇತ್ತೀಚೆಗೆ ಲೋಕಸಭೆ ಸ್ಥಾನದಿಂದ ಅನರ್ಹರಾಗಿರುವ ರಾಹುಲ್ ಗಾಂಧಿ, ಕೋಲಾರದಲ್ಲೇ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲೇ ಸಿದ್ದರಾಮಯ್ಯ ಅವರ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: Congress ticket : ವರುಣಾ ಜತೆ ಕೋಲಾರದಲ್ಲೂ ಸ್ಪರ್ಧೆ ಮಾಡ್ತೀನಿ; ಖಚಿತಪಡಿಸಿದ ಸಿದ್ದರಾಮಯ್ಯ
ಕರ್ನಾಟಕ
Bengaluru Murder Case: ಬೆಂಗಳೂರಲ್ಲಿ ನೇಪಾಳಿ ಯುವಕನ ಕೊಲೆಗೆ ಕಾರಣವಾಯ್ತು ಗಾಂಜಾ ನಶೆ; ಹಂತಕರ ಸೆರೆ
Bengaluru Murder Case: ಬೆಂಗಳೂರಲ್ಲಿ ಯುವಕನೊಬ್ಬ ಗಾಂಜಾ (Drugs) ಸೇವನೆ ಮಾಡಲು ಹೋಗಿ ಹೆಣವಾಗಿದ್ದಾನೆ. ಗಾಂಜಾಕ್ಕಾಗಿ ಶುರುವಾಗಿದ್ದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿದ್ದು, ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಇಲ್ಲಿನ ವಿವಿ ಪುರಂನ (VV puram) ನ್ಯೂ ತರುಗುಪೇಟೆಯಲ್ಲಿ ನೇಪಾಳಿ ಯುವಕನ ಹತ್ಯೆ (murder Case) ಮಾಡಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೆ ಗಾಂಜಾ (Durgs) ನಶೆ ಕಾರಣವೆಂದು ತಿಳಿದುಬಂದಿದೆ. ಸತೀಶ್ ಅಲಿಯಾಸ್ ಕಳಿ ಹಾಗೂ ಶ್ರೀನಿವಾಸ್ ಅಲಿಯಾಸ್ ಚಿನು ಬಂಧಿತ ಆರೋಪಿಗಳಾಗಿದ್ದು, ರಮೇಶ್ ಕೊಲೆಯಾದವನು.
ರಮೇಶ್ ತನ್ನ ಮಾವ ರತನ್ ಎಂಬುವವರ ಬಳಿ ಮನೆ ಹಾಗೂ ತೋಟಗಳಿಗೆ ಹಾಗೂ ಬೃಹತ್ ಕಟ್ಟಡಗಳಿಗೆ ಗ್ರೀನ್ ಮೆಶ್ ಅಳವಡಿಸುವ ಕೆಲಸ ಮಾಡಿಕೊಂಡಿದ್ದ. ಕಳೆದ ಭಾನುವಾರ (ಮಾ.28ರಂದು) ಮೆಟೀರಿಯಲ್ ತರಲು ತನ್ನ ಸ್ನೇಹಿತ ಇಂದ್ರೇಶ್ ಜತೆಗೆ ಜೆ.ಸಿ ರೋಡ್‌ಗೆ ಬಂದಿದ್ದ. ಮಾರ್ಗ ಮಧ್ಯೆ ಇಬ್ಬರು ಜತೆಯಾಗಿ ಮದ್ಯಪಾನ ಮಾಡಲು ಬಾರ್‌ಗೆ ಹೋಗಿದ್ದರು.
ಈ ವೇಳೆ ಅಲ್ಲೇ ಇದ್ದ ಆರೋಪಿ ಸತೀಶ್ ಹಾಗೂ ಶ್ರೀನಿವಾಸ್ ಗಾಂಜಾ ಸೇವನೆ ಮಾಡುತ್ತಿದ್ದರು. ಇದನ್ನು ನೋಡಿದ ರಮೇಶ್ ಹಾಗೂ ಇಂದ್ರೇಶ್ ಗಾಂಜಾ ಪೆಡ್ಲರ್ ಎಂದುಕೊಂಡಿದ್ದರು. ಬಳಿಕ ಆರೋಪಿಗಳ ಹಿಂದೆ ಬಿದ್ದ ರಮೇಶ್ ಹಾಗೂ ಇದ್ರೇಶ್ 500 ರೂ. ಕೊಟ್ಟು ಗಾಂಜಾ ಕೊಡುವಂತೆ ಕೇಳಿದ್ದರು. ಮೊದಲೇ ಗಾಂಜಾ ನಶೆಯಲ್ಲಿದ್ದ ಆರೋಪಿಗಳು ಗಾಂಜಾ ಇಲ್ಲವೆಂದು ಹೇಳಿದ್ದಾರೆ. ಆದರೂ ಬಿಡದ ರಮೇಶ್ ಪದೇ ಪದೆ ಗಾಂಜಾ ನೀಡುವಂತೆ ಪೀಡಿಸಿ ಜಗಳ ಶುರುಮಾಡಿದ್ದ. ಸತೀಶ್ ಹಾಗೂ ಶ್ರೀನಿವಾಸ್‌ಗೆ ಇವರಿಬ್ಬರೂ ಸೇರಿ ಹಲ್ಲೆ ಮಾಡಿದ್ದಾರೆ.
ಸಿಟ್ಟಿಗೆದ್ದ ಸತೀಶ್ ಹಿಂದೆಯಿಂದ ಬಂದು ಬಿಯರ್ ಬಾಟಲಿಯಿಂದ ರಮೇಶ್ ಕುತ್ತಿಗೆಯನ್ನು ಇರಿದಿದ್ದಾನೆ. ಬಳಿಕ ಇಬ್ಬರೂ ಪರಾರಿ ಆಗಿದ್ದರು. ಈ ಗಲಾಟೆಯಲ್ಲಿ ಹೇಗೋ ಇಂದ್ರೇಶ್ ತಪ್ಪಿಸಿಕೊಂಡಿದ್ದು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದ. ಈ ಸಂಬಂಧ ದೂರು ದಾಖಲಿಸಿಕೊಂಡಿದ್ದ ವಿವಿಪುರ ಪೊಲೀಸರು, ಸಿಸಿಟಿವಿ ಆಧರಿಸಿ ಪ್ರಕರಣವನ್ನು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ತಮಿಳುನಾಡು ಮೂಲದವರಾಗಿದ್ದು, ನ್ಯೂ ತರುಗು ಪೇಟೆಯಲ್ಲಿ ಮೂಟೆ ಹೊರುವ ಕೆಲಸ ಮಾಡಿಕೊಂಡಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ.
ಕಾಂತಾರ ಚಿತ್ರದ ದೃಶ್ಯ ಕಳಿಸಿ ಕೊಲೆ ಬೆದರಿಕೆ! ದೂರು ದಾಖಲು
ಬೆಂಗಳೂರು: ʼಕಾಂತಾರʼ ಚಲನಚಿತ್ರದ ದೃಶ್ಯವೊಂದು ಕೊಲೆ ಬೆದರಿಕೆಗೆ ಬಳಕೆಯಾಗಿರುವ ವಿಲಕ್ಷಣ ಘಟನೆ ನಡೆದಿದೆ. ಜಮೀನು ವ್ಯಾಜ್ಯ ಸಂಬಂಧ ಹಿರಿಯ ನಾಗರಿಕರೊಬ್ಬರಿಗೆ ಹೀಗೆ ಕೊಲೆ ಬೆದರಿಕೆ ಹಾಕಲಾಗಿದೆ.
ಕುಣಿಗಲ್‌ನಲ್ಲಿ ನರಸಿಂಹಮೂರ್ತಿ ಎಂಬ ಹಿರಿಯ ನಾಗರಿಕರಿಗೆ ಶರತ್ ಕುಮಾರ್ ಎಂಬಾತ ಹೀಗೆ ಹತ್ಯೆ ಬೆದರಿಕೆ ಒಡ್ಡಿದ್ದಾನೆ. ಕುಣಿಗಲ್‌ನಲ್ಲಿ ಪತ್ನಿ ಹೆಸರಿನಲ್ಲಿ ನರಸಿಂಹ ಮೂರ್ತಿ ಎರಡು ಎಕರೆ ಜಮೀನು ಖರೀದಿ ಮಾಡಿದ್ದರು. ಈ ಜಮೀನಿನ ಕುರಿತು ಶರತ್ ಕುಮಾರ್ ಎಂಬಾತ ತಗಾದೆ ತೆಗೆದಿದ್ದ. ಜಮೀನಿಗೆ ಈತ ಅತಿಕ್ರಮ ಪ್ರವೇಶ ಮಾಡಿದ್ದಾನೆ ಎಂದು ಈ ಹಿಂದೆ ನರಸಿಂಹಮೂರ್ತಿ ದೂರು ನೀಡಿದ್ದರು. ಸದ್ಯ ಜಮೀನು ವ್ಯಾಜ್ಯ ನ್ಯಾಯಾಲಯದಲ್ಲಿದೆ.
ಇದನ್ನೂ ಓದಿ: SC-ST Reservation: ಒಳಮೀಸಲಾತಿ ವಿರೋಧಿಸಿ ವಿಜಯನಗರ, ಕಲಬುರಗಿಯಲ್ಲಿ ಬಂಜಾರರ ಪ್ರತಿಭಟನೆ; ಶೆಟ್ಟರ್, ಖೂಬಾ ಸಮರ್ಥನೆ
ಇದೇ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಶರತ್ ಕುಮಾರ್ ತನಗೆ ಕೊಲೆ ಬೆದರಿಕೆ ಹಾಕುತ್ತಿದ್ದಾನೆ. ವಾಟ್ಸ್ಯಾಪ್ ಮೂಲಕ ʼಕಾಂತಾರʼ ಚಿತ್ರದ ದೃಶ್ಯಗಳನ್ನು ಕಳಿಸಿ ಇದೇ ರೀತಿ ಸಾಯ್ತೀಯ ಎಂದು ಬೆದರಿಕೆ ಹಾಕಿದ್ದಾನೆ ಎಂದು ನರಸಿಂಹಮೂರ್ತಿ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ಎಫ್‌ಐಆರ್‌ನಲ್ಲಿ ಕೂಡ ಉಲ್ಲೇಖಿಸಿದ್ದಾರೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಕಿರುಕುಳ, ಕೊಲೆ ಬೆದರಿಕೆ ದೂರು ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
ಕರ್ನಾಟಕ
Suicide Case: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 21ರ ಮಹಿಳೆ; ಕೌಟುಂಬಿಕ ಕಲಹ ಶಂಕೆ
ಶಿವಮೊಗ್ಗದ ಮಿಳಘಟ್ಟ ನಿವಾಸಿಯಾಗಿರುವ ಮಹಿಳೆಯೊಬ್ಬರು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide Case) ಶರಣಾಗಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ಕೌಟುಂಬಿಕ ಕಲಹ ಇರಬಹುದು ಎಂದು ಶಂಕಿಸಲಾಗಿದೆ.
ಶಿವಮೊಗ್ಗ: ಇಲ್ಲಿನ ಮಿಳಘಟ್ಟದ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide Case) ಶರಣಾಗಿದ್ದಾರೆ. ಕೌಟುಂಬಿಕ ಕಾರಣ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಮಳಘಟ್ಟದ ಸಂಗೀತ (21) ಮೃತ ಮಹಿಳೆ. ಇವರು ಎರಡು ವರ್ಷಗಳ ಹಿಂದಷ್ಟೇ ಮಿಳಘಟ್ಟದ ನಿವಾಸಿ ಗುರೂಮೂರ್ತಿ ವಿವಾಹವಾಗಿದ್ದರು. ಮನೆಯಲ್ಲಿ ಒಬ್ಬರೇ ಇದ್ದಾಗ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಲ್ಲದೆ, ಪ್ರಕರಣ ದಾಖಲು ಮಾಡಿಕೊಂಡಿದ್ದು, ಕುಟುಂಬದವರ ವಿಚಾರಣೆ ಕೈಗೊಂಡಿದ್ದಾರೆ. ಆತ್ಮಹತ್ಯೆ ನಿಖರ ಕಾರಣ ತಿಳಿದುಬಂದಿಲ್ಲ.
ಇದನ್ನೂ ಓದಿ: MySugar Factory: ಮೈಶುಗರ್ ಕಾರ್ಖಾನೆಗೆ ಬಾಕಿ ಇರುವ 17.42 ಕೋಟಿ ರೂ. ಬಿಡುಗಡೆ ಮಾಡಿ: ದಿನೇಶ್ ಗೂಳಿಗೌಡ
ನಿರ್ಜನ ಪ್ರದೇಶದಲ್ಲಿ 8 ವರ್ಷದ ಬಾಲಕನ ಶವ ಪತ್ತೆ; ದುಷ್ಕರ್ಮಿಗಳು ಕೊಲೆ ಮಾಡಿ ಎಸೆದ ಶಂಕೆ
ಹುಬ್ಬಳ್ಳಿ: ಇಲ್ಲಿನ ದೊಡ್ಡ ಮನಿ ಕಾಲೊನಿಯ ಪಾಳು ಬಿದ್ದ ನಿರ್ಜನ ಜಾಗದಲ್ಲಿ ಎಂಟು ವರ್ಷದ ಬಾಲಕನೊಬ್ಬನ ಶವ ಪತ್ತೆಯಾಗಿದ್ದು, ಪರಿಸರದಲ್ಲಿ ಆತಂಕಕ್ಕೆ ಕಾರಣವಾಗಿದೆ. ಆತನನ್ನು ಕೊಲೆ ಮಾಡಿ ಎಸೆದಿರುವ (Mysterious death) ಸಂಶಯವಿದೆ. ನದೀಮ್ ಹಸನಸಾಬ್ ಹುಬ್ಬಳ್ಳಿ (8) ಮೃತ ಬಾಲಕ. ಗುರುವಾರ ಸಂಜೆಯಿಂದ ನಾಪತ್ತೆಯಾಗಿದ್ದ ಈ ಹುಡುಗನಿಗಾಗಿ ಎಲ್ಲ ಕಡೆ ಹುಡುಕಾಟ ನಡೆದಿತ್ತು. ಪೋಷಕರು ಪೊಲೀಸರಿಗೂ ದೂರು ನೀಡಿದ್ದರು. ಆದರೆ, ಎಲ್ಲೂ ಆತ ಪತ್ತೆಯಾಗಿರಲಿಲ್ಲ. ಶುಕ್ರವಾಗ ಕುರುಚಲು ಗಿಡಗಳಿರುವ ನಿರ್ಜನ ಪ್ರದೇಶದಲ್ಲಿ ಆತನ ಶವ ಪತ್ತೆಯಾಗಿದ್ದು, ಹಲವು ಸಂಶಯಗಳನ್ನು ಹುಟ್ಟುಹಾಕಿದೆ.
ಮೂರನೇ ತರಗತಿಯಲ್ಲಿ ಓದುತ್ತಿರುವ ಈ ಹುಡುಗನಿಗೆ ಶಾಲೆಗೆ ರಜೆ ಸಿಕ್ಕಿದೆ. ಹೀಗಾಗಿ ಆತ ಘಂಟಿಕೇರಿಯಲ್ಲಿರುವ ಅಜ್ಜಿ ಮನೆಗೆ ಬಂದಿದ್ದ. ಸಂಜೆಯವರೆಗೂ ಆಟವಾಡುತ್ತಿದ್ದ ಆತ ಇದ್ದಕ್ಕಿದ್ದಂತೆಯೇ ನಾಪತ್ತೆಯಾಗಿದ್ದ. ಶುಕ್ರವಾರ ಮನೆಯಿಂದ ಸ್ವಲ್ಪ ದೂರದಲ್ಲಿರುವ ದೊಡ್ಡಮನಿ ಕಾಲನಿಯ ಪಾಳುಬಿದ್ದ ಜಾಗದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಎಸೆದಿರುವ ಶಂಕೆಯನ್ನು ವ್ಯಕ್ತಪಡಿಸಲಾಗುತ್ತಿದೆಯಾದರೂ ಇಷ್ಟು ಸಣ್ಣ ಹುಡುಗನನ್ನು ಯಾಕೆ ಕೊಲೆ ಮಾಡಿದರು ಎಂಬ ಸಂಶಯವಿದೆ. ಕುಟುಂಬದ ವಿವರಗಳು, ಈ ಭಾಗದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು, ಹಂತಕರನ್ನು ಪತ್ತೆ ಹಚ್ಚುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ʼಕಾಂತಾರ’ ಚಿತ್ರದ ದೃಶ್ಯ ಕಳಿಸಿ ಕೊಲೆ ಬೆದರಿಕೆ! ದೂರು ದಾಖಲು
ಬೆಂಗಳೂರು: ʼಕಾಂತಾರʼ ಚಲನಚಿತ್ರದ ದೃಶ್ಯವೊಂದು ಕೊಲೆ ಬೆದರಿಕೆಗೆ ಬಳಕೆಯಾಗಿರುವ ವಿಲಕ್ಷಣ ಘಟನೆ ನಡೆದಿದೆ. ಜಮೀನು ವ್ಯಾಜ್ಯ ಸಂಬಂಧ ಹಿರಿಯ ನಾಗರಿಕರೊಬ್ಬರಿಗೆ ಹೀಗೆ ಕೊಲೆ ಬೆದರಿಕೆ ಹಾಕಲಾಗಿದೆ.
ಕುಣಿಗಲ್‌ನಲ್ಲಿ ನರಸಿಂಹಮೂರ್ತಿ ಎಂಬ ಹಿರಿಯ ನಾಗರಿಕರಿಗೆ ಶರತ್ ಕುಮಾರ್ ಎಂಬಾತ ಹೀಗೆ ಹತ್ಯೆ ಬೆದರಿಕೆ ಒಡ್ಡಿದ್ದಾನೆ. ಕುಣಿಗಲ್‌ನಲ್ಲಿ ಪತ್ನಿ ಹೆಸರಿನಲ್ಲಿ ನರಸಿಂಹ ಮೂರ್ತಿ ಎರಡು ಎಕರೆ ಜಮೀನು ಖರೀದಿ ಮಾಡಿದ್ದರು. ಈ ಜಮೀನಿನ ಕುರಿತು ಶರತ್ ಕುಮಾರ್ ಎಂಬಾತ ತಗಾದೆ ತೆಗೆದಿದ್ದ. ಜಮೀನಿಗೆ ಈತ ಅತಿಕ್ರಮ ಪ್ರವೇಶ ಮಾಡಿದ್ದಾನೆ ಎಂದು ಈ ಹಿಂದೆ ನರಸಿಂಹಮೂರ್ತಿ ದೂರು ನೀಡಿದ್ದರು. ಸದ್ಯ ಜಮೀನು ವ್ಯಾಜ್ಯ ನ್ಯಾಯಾಲಯದಲ್ಲಿದೆ.
ಇದನ್ನೂ ಓದಿ: Fire tragedy : ಹೊಸಕೋಟೆಯಲ್ಲಿ ಭೀಕರ ದುರಂತ; ಗ್ಯಾಸ್ ಸಿಲಿಂಡರ್ ಲೀಕ್ ಆಗಿ 7 ಕಾರ್ಮಿಕರ ದಾರುಣ ಸಾವು
ಇದೇ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಶರತ್ ಕುಮಾರ್ ತನಗೆ ಕೊಲೆ ಬೆದರಿಕೆ ಹಾಕುತ್ತಿದ್ದಾನೆ. ವಾಟ್ಸ್ಯಾಪ್ ಮೂಲಕ ʼಕಾಂತಾರʼ ಚಿತ್ರದ ದೃಶ್ಯಗಳನ್ನು ಕಳಿಸಿ ಇದೇ ರೀತಿ ಸಾಯ್ತೀಯ ಎಂದು ಬೆದರಿಕೆ ಹಾಕಿದ್ದಾನೆ ಎಂದು ನರಸಿಂಹಮೂರ್ತಿ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ಎಫ್‌ಐಆರ್‌ನಲ್ಲಿ ಕೂಡ ಉಲ್ಲೇಖಿಸಿದ್ದಾರೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಕಿರುಕುಳ, ಕೊಲೆ ಬೆದರಿಕೆ ದೂರು ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
ಕರ್ನಾಟಕ
JDS Karnataka: ಬಿಜೆಪಿಯಿಂದ ಜೆಡಿಎಸ್‌ಗೆ ಮರಳಿದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ
ಖೂಬಾ ಅವರು ಜೆಡಿಎಸ್ ಪಕ್ಷದಲ್ಲಿಯೇ ಇದ್ದವರು. ಕಾರಣಾಂತರಗಳಿಂದ ಅವರು ಪಕ್ಷ ಬಿಟ್ಟಿದ್ದರು. ಈಗ ಮರಳಿ ತಮ್ಮ ಮನೆಗೆ ವಾಪಸ್ ಆಗಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು: ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ಮರಳಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಜೆಡಿಎಸ್ ಪಕ್ಷದ ಶಾಲು ಹಾಕುವ ಮೂಲಕ ಖೂಬಾ ಅವರನ್ನು ಪಕ್ಷಕ್ಕೆ ಕುಮಾರಸ್ವಾಮಿ ಬರಮಾಡಿಕೊಂಡರು. ಶುಭ ಸಮಯ ಇದ್ದ ಕಾರಣಕ್ಕೆ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾಗಿ ಖೂಬಾ ಅವರು ತಿಳಿಸಿದ್ದಾರೆ.
ಜೆಡಿಎಸ್ ಪಕ್ಷದಿಂದ ಬಸವ ಕಲ್ಯಾಣ ಕ್ಷೇತ್ರವನ್ನು ಎರಡು ಅವಧಿಗೆ ಪ್ರತಿನಿಧಿಸಿದ್ದರು ಖೂಬಾ. ಕಳೆದ ಚುನಾವಣೆ ವೇಳೆ ಬಿಜೆಪಿಗೆ ಮರಳಿದ್ದರು. 2018ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಕಾಂಗ್ರೆಸ್ ಅಭ್ಯರ್ಥಿ ಬಿ. ನಾರಾಯಣ ರಾವ್ ವಿರುದ್ಧ ಸೋಲುಂಡಿದ್ದರು.
ಈ ಕುರಿತು ಮಾತನಾಡಿದ ಕುಮಾರಸ್ವಾಮಿ, ಖೂಬಾ ಅವರು ಜೆಡಿಎಸ್ ಪಕ್ಷದಲ್ಲಿಯೇ ಇದ್ದವರು. ಕಾರಣಾಂತರಗಳಿಂದ ಅವರು ಪಕ್ಷ ಬಿಟ್ಟಿದ್ದರು. ಈಗ ಮರಳಿ ತಮ್ಮ ಮನೆಗೆ ವಾಪಸ್ ಆಗಿದ್ದಾರೆ. ಒಳ್ಳೆಯ ಸಮಯ ಇದೆ ಎನ್ನುವ ಕಾರಣಕ್ಕೆ ಬಂದು ಪಕ್ಷಕ್ಕೆ ಸೇರಿದರು. ಶೀಘ್ರದಲ್ಲಿಯೇ ಅವರು ಪಕ್ಷದ ರಾಜ್ಯದ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾದ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ಬಂಡೆಪ್ಪ ಕಾಷೆಂಪೂರ್ ಮತ್ತಿತರೆ ಹಿರಿಯ ನಾಯಕರ ಸಮಕ್ಷಮದಲ್ಲಿ ತಮ್ಮ ಬೆಂಬಲಿಗರ ಜತೆ ಪಕ್ಷಕ್ಕೆ ಅಧಿಕೃತವಾಗಿ ಸೇರಿಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದರು.
ಇದನ್ನೂ ಓದಿ: ರಾಮ ರಾಮ! ಶ್ರೀರಾಮನ ಕಾಲಿನ ಮೇಲೆ ನಿಂತು ಪ್ರತಿಮೆಗೆ ಹೂವಿನ ಹಾರ ಹಾಕಿದ ಬಸವಕಲ್ಯಾಣ ಬಿಜೆಪಿ ಶಾಸಕ!
-
ಸುವಚನ11 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ8 hours ago
Chenab Bridge | ಐಫೆಲ್ ಟವರ್ಗಿಂತಲೂ ಎತ್ತರದ ರೈಲ್ವೇ ಸೇತುವೆ ಜಮ್ಮು ಕಾಶ್ಮೀರದಲ್ಲಿ ಲೋಕಾರ್ಪಣೆಗೆ ಸಿದ್ಧ
-
ಪ್ರಮುಖ ಸುದ್ದಿ17 hours ago
ವಿಸ್ತಾರ ಸಂಪಾದಕೀಯ: ಹಿಂದಿ ಬಗ್ಗೆ ಪೂರ್ವಗ್ರಹ ಬೇಡ, ಹಾಗಂತ ಹೇರಿಕೆ ಸಲ್ಲದು
-
ಕರ್ನಾಟಕ8 hours ago
SSLC Exam 2023: ಇಂದಿನಿಂದ SSLC ಎಕ್ಸಾಂ; ಪರೀಕ್ಷೆ ಬರೆಯಲಿರುವ 8.42 ಲಕ್ಷ ವಿದ್ಯಾರ್ಥಿಗಳು
-
ಕ್ರಿಕೆಟ್24 hours ago
IPL 2023: ಗುಜರಾತ್ vs ಚೆನ್ನೈ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ವೈರಲ್ ನ್ಯೂಸ್23 hours ago
Viral Video: ಇದು ರೋಲ್ಸ್ ರಾಯ್ಸ್ ಆಫ್ ಆಟೋ; ಒಂದು ಬಟನ್ ಪ್ರೆಸ್ ಮಾಡಿದ್ರೆ ಸಾಕು ಮೇಲ್ಭಾಗ ತೆರೆದುಕೊಳ್ಳತ್ತೆ!
-
ಕರ್ನಾಟಕ20 hours ago
ವಿಸ್ತಾರ Special: ಬಿಜೆಪಿ ಇತಿಹಾಸದಲ್ಲೇ ಮೊದಲ ಪ್ರಯತ್ನ ಇದು: ಅಭ್ಯರ್ಥಿ ಆಯ್ಕೆಗೆ ಶುಕ್ರವಾರ ನಡೆಯಲಿದೆ ಆಂತರಿಕ ಚುನಾವಣೆ
-
ಕ್ರಿಕೆಟ್20 hours ago
IPL 203 : ಐಪಿಎಲ್ 16ನೇ ಆವೃತ್ತಿಯ ವೇಳಾಪಟ್ಟಿ ಇಲ್ಲಿದೆ