Site icon Vistara News

Suicide case: ಪ್ರೇಮ ವೈಫಲ್ಯಕ್ಕೆ ಯುವತಿ ಆತ್ಮಹತ್ಯೆ; ಸಾಲ ವಾಪಸ್‌ ಕೊಡದಿದ್ದಕ್ಕೆ ವಿಷ ಕುಡಿದ ಪಶುವೈದ್ಯ

Suicide case Young woman commits suicide due to love failure Veterinarian poisoned for not paying loans

ಗದಗ/ಬಾಗಲಕೋಟೆ: ತಾಲೂಕಿನ ಕಣಗಿನಹಾಳ ಗ್ರಾಮದಲ್ಲಿ ಪ್ರೀತಿ ವೈಫಲ್ಯ ಹಿನ್ನೆಲೆಯಲ್ಲಿ ಯುವತಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ (Suicide case) ಶರಣಾಗಿದ್ದಾಳೆ.

ಪಾರ್ವತಿ ಬಾವಿ (24) ಮೃತ ಯುವತಿ. ರೈಲ್ವೆ ಕೀಪರ್ ಆಗಿ ಕೆಲಸ ಮಾಡುತ್ತಿದ್ದ ಪಾರ್ವತಿ ಅನ್ಯ ಕೋಮಿನ ಯುವಕನೊಬ್ಬನನ್ನು ಪ್ರೀತಿ ಮಾಡುತ್ತಿದ್ದಳು. ಆದರೆ, ಬುಧವಾರ (ಮಾ. 15) ಇದ್ದಕ್ಕಿದ್ದಂತೆ ನೇಣಿಗೆ ಶರಣಾಗಿದ್ದಾಳೆ. ಪ್ರೇಮಿಗಳಿಬ್ಬರೂ ಜಗಳ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮನನೊಂದ ಯುವತಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ.

ಇದನ್ನೂ ಓದಿ: Border Dispute: ರಾಜ್ಯದ ಗಡಿ ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರದ ಯೋಜನೆ ಜಾರಿ: ಸಿಎಂ ರಾಜೀನಾಮೆಗೆ ಡಿ.ಕೆ. ಶಿವಕುಮಾರ್ ಆಗ್ರಹ

ಸಾಯುವ ಮುಂಚೆ ಡೆತ್‌ನೋಟ್ ಬರೆದಿಟ್ಟಿದ್ದಾಳೆ ಎಂದು ಕುಟುಂಬಸ್ಥರು ಹೇಳುತ್ತಿದ್ದರೆ, ಪೊಲೀಸರು ಮಾತ್ರ ಡೆತ್‌ನೋಟ್ ಬಹಿರಂಗಪಡಿಸಿಲ್ಲ. ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

ಕೊಟ್ಟ ಸಾಲ ವಾಪಸ್‌ ಬಾರದ್ದಕ್ಕೆ ಪಶುವೈದ್ಯ ಆತ್ಮಹತ್ಯೆ

ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಗ್ರಾಮದ ಪಶುವೈದ್ಯರೊಬ್ಬರು ಸಹೋದ್ಯೋಗಿ ವೈದ್ಯರೊಬ್ಬರಿಗೆ ಕೊಟ್ಟ ಸಾಲವನ್ನು ವಾಪಸ್‌ ಕೊಡಲಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಮಖಂಡಿ ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಯಲ್ಲಿ ವಿಷ ಸೇವಿಸಿದ್ದಾರೆ. ನಂದೆಪ್ಪ ಬಾಗೇವಾಡಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ನಂದೆಪ್ಪ ತನ್ನ ಸಹೋದ್ಯೋಗಿ ವೈದ್ಯರೊಬ್ಬರಿಗೆ ಐದು ಲಕ್ಷ ರೂಪಾಯಿ, ಮತ್ತೊಬ್ಬ ಗೆಳೆಯನಿಗೆ ತನ್ನ ಮನೆ ಆಧಾರವಾಗಿಟ್ಟುಕೊಂಡು ಏಳು ಲಕ್ಷ ರೂಪಾಯಿ ಸಾಲ‌ ಕೊಡಿಸಿದ್ದರು. ಸಾಲ‌ ಪಡೆದವರು ವಾಪಸ್‌ ಕೊಟ್ಟಿರಲಿಲ್ಲ. ಕೇಳಿ ಕೇಳಿ ಬೇಸತ್ತ ನಂದೆಪ್ಪ ಮನನೊಂದು ಮನೆಯಲ್ಲಿ ವಿಷ ಸೇವಿಸಿದ್ದಾರೆ.

ಇದನ್ನೂ ಓದಿ: Hasana Politics : ಪಕ್ಷ ಬಿಡದಂತೆ ಶಿವಲಿಂಗೇಗೌಡರ ಮನವೊಲಿಕೆ; ಎಚ್‌.ಡಿ. ರೇವಣ್ಣ ಮಾತುಕತೆಯ ಆಡಿಯೊ ವೈರಲ್

ಸಾಯುವ ಮುನ್ನ ಡೆತ್‌ನೋಟ್‌ ಬರೆದಿಟ್ಟಿದ್ದು, ಯಾರು ಯಾರಿಗೆ ಸಾಲ ಕೊಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ. ಪೊಲೀಸರಿಂದ ತನಿಖೆ ಮುಂದುವರಿದಿದೆ.

Exit mobile version