ಬೆಂಗಳೂರು: ಮಗನ ಕುಡಿತದಿಂದ ಉಂಟಾಗಿರುವ ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ಹಿರಿಯ ವಯಸ್ಸಿನ ಪೋಷಕರು ಆತ್ಮಹತ್ಯೆ (Suicide News ) ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಘಟನೆ ನಡೆದಿದೆ. ಚಂದ್ರಶೇಖರ್ (54) ಹಾಗೂ ಶಾರದಮ್ಮ ಆತ್ಮಹತ್ಯೆ ಮಾಡಿಕೊಂಡ ದಂಪತಿ.
ಮಗ ಪ್ರಶಾಂತನಿಗೆ ವರ್ಷಗಳ ಹಿಂದೆ ಮದುವೆ ಮಾಡಿದ್ದರು. ಆದರೆ ಮಗ ಕುಡಿತದಿಂದ ಮನೆ ಬರೋದು ಕಡಿಮೆ ಮಾಡಿದ್ದ, ಇದರಿಂದ ನೊಂದು ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತನ ಹೆಂಡತಿ ಮನೆ ಬಿಟ್ಟು ತವರು ಮನೆ ಸೇರಿದ್ದರು. ಇದರಿಂದ ಮಗನ ಬಾಳು ಹೀಗಾಯಿತು ಎಂದು ನೊಂದು ಕೊಂಡಿದ್ದರು.
ಸೋಮವಾ ಎರಡನೇ ಮಗನನ್ನ ಅಂಗಡಿ ಕಳಿಸಿ ದಂಪತಿ ನೇಣಿಗೆ ಶರಣಾಗಿದ್ದರು. ಮಗ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರು ಹೊಸಕೋಟೆ ಮೂಲದವರು. ಅವರು ಹಲವು ವರ್ಷಗಳಿಂದ ಹಳೆ ಬೈಯಪ್ಪನಹಳ್ಳಿ ಯಲ್ಲಿ ವಾಸ ಮಾಡಿಕೊಂಡಿದ್ದರು. ಬೆಂಗಳೂರಿನಲ್ಲೊ ಕೂಲಿ ಕೆಲಸ ಮಾಡಿಕೊಂಡಿದ್ದರು. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕಿಗೆ ಲೈಂಗಿಕ ಕಿರುಕುಳ ಕೊಟ್ಟವನಿಗೆ 20 ವರ್ಷ ಜೈಲು ಶಿಕ್ಷೆ
ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಅಪರಾಧಿಯೊಬ್ಬನಿಗೆ 20 ವರ್ಷಗಳ ಕಾಲ ಕಠಿಣ ಜೈಲುಶಿಕ್ಷೆ ಹಾಗೂ ಒಂದು ಲಕ್ಷ ದಂಡ ವಿಧಿಸಿದ 1ನೇ ತ್ವರಿತಗತಿ ನ್ಯಾಯಾಲಯ ಆದೇಶಿಸಿದೆ. ದೇವರಾಜ್ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ.
ಇದನ್ನೂ ಓದಿ: Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮರು ನೇಮಕ
ಆರೋಪಿ ದೇವರಾಜ್ ಲಗ್ಗೆರೆ ನಿವಾಸಿಯಾಗಿದ್ದು, 2021ರಲ್ಲಿ ಬಾಲಕಿಯನ್ನ ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದ. ಆತನ ವಿರುದ್ಧ ವಿರುದ್ಧ ಫೊಕ್ಸೊ ಕಾಯ್ದೆಯಡಿ ನಂದಿನಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.. ಅಂದಿನ ಇನ್ ಸ್ಪೆಕ್ಟರ್ ವೆಂಕಟೇಗೌಡ ಅವರು ಆರೋಪಿಯನ್ನ ಬಂಧಿಸಿದ್ದರು. ಬಳಿಕ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿ ಕೃತ್ಯವೆಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಯನ್ನ ದೋಷಿ ನ್ಯಾಯಾಲಯ ಪರಿಗಣಿಸಿದೆ.
ಆರೋಪಿ ದೇವರಾಜ್ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಅದೇ ದಿನವೇ ಬಾಲಕಿಗೆ ಜ್ವರ ಬಂದಿದ್ದರಿಂದ ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದರು. ತಪಾಸಣೆ ನಡೆಸಿದ ವೈದ್ಯರು ಬಾಲಕಿಯ ಗುಪ್ತಾಂಗಕ್ಕೆ ಬಲವಾದ ಏಟಾಗಿದೆ ಎಂದು ವರದಿ ನೀಡಿದ್ದರು. ಈ ಬಗ್ಗೆ ಪೋಷಕರು ಆಕೆಯನ್ನು ಪ್ರಶ್ನಿಸಿದಾಗ ಆರೋಪಿಯು ತನ್ನನ್ನು ಮನೆಗೆ ಕರೆದೊಯ್ದು ಕೃತ್ಯವೆಸಗಿರುವುದಾಗಿ ತಿಳಿಸಿದ್ದಳು.
ಈ ಸಂಬಂಧ ನಂದಿನಿಲೇಔಟ್ ಪೊಲೀಸರಿಗೆ ಪೋಷಕರು ದೂರು ನೀಡಿದ್ದರು. ಪೊಕ್ಸೊ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನ ಪೊಲೀಸರು ಬಂಧಿಸಿದ್ದರು.