ಕಾರವಾರ: ಇಲ್ಲಿನ ಭಟ್ಕಳದ ಹಡೀಲ್ ಸಬ್ಬತ್ತಿಯಲ್ಲಿ ಪೋಕ್ಸೊ ಪ್ರಕರಣದ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಾರಾಯಣ ನಾಯ್ಕ (64) ಆತ್ಮಹತ್ಯೆ (Suicide) ಮಾಡಿಕೊಂಡವನು.
ಮನೆಯ ಹಿಂಬದಿಯ ಗೇರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ನಾರಾಯಣನ ವಿರುದ್ಧ ಭಟ್ಕಳ ಗ್ರಾಮೀಣ ಠಾಣೆಯಲ್ಲಿ 2014ರಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿತ್ತು.
ಕಾರವಾರದ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿತ್ತು. ಇದೇ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದನ್ನೂ ಓದಿ | Murder Case | ಪತ್ನಿಯ ಅನುಮಾನಿಸಿ ಕೊಚ್ಚಿ ಕೊಂದ; ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ