ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ನನ್ನ ಬೆಂಬಲ ಎಂದು ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಹಲವು ಕಡೆ ಆಕ್ರೋಶಗಳು ವ್ಯಕ್ತವಾಗಿವೆ. ನಾಗಮಂಗಲ ತಾಲೂಕಿನ ಬಿದರಕೆರೆ ಗ್ರಾಮದಲ್ಲಿರುವ ಲಂಕೇಶ್ ರಂಗಮಂದಿರದಲ್ಲಿ ಹಾಕಿದ್ದ ಅವರ ಫೋಟೊವನ್ನು ಗ್ರಾಮಸ್ಥರು ತೆರವು ಮಾಡಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಜಯಗಳಿಸಿದ್ದ ಸುಮಲತಾ ಅಂಬರೀಶ್, ಬಿಜೆಪಿ ಸೇರ್ಪಡೆಯಾಗುವುದಾಗಿ ಶುಕ್ರವಾರ (ಮಾ.10) ಅಧಿಕೃತವಾಗಿ ಘೋಷಣೆ ಮಾಡಿದ್ದರು. ಆದರೆ, ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿದ್ದಕ್ಕೆ ಬಿದರಕೆರೆ ಗ್ರಾಮಸ್ಥರು ಅಸಮಾಧಾನ ಹೊರಹಾಕಿದ್ದಾರೆ.
ಇದನ್ನೂ ಓದಿ: Bengaluru Theft Case: ಮನೆ ಮಾಲೀಕನಿಗೆ ಊಟದಲ್ಲಿ ಅಮಲು ಔಷಧಿ ಬೆರೆಸಿ ಚಿನ್ನಾಭರಣ ಕಳ್ಳತನ; ನೇಪಾಳಿ ಗ್ಯಾಂಗ್ ಅರೆಸ್ಟ್
ಈ ಹಿಂದೆ ಮಂಡ್ಯದ ಸಂಸದರಾಗಿ ಆಯ್ಕೆ ಆದಾಗ ಬಿದರಕೆರೆ ಗ್ರಾಮಸ್ಥರು, ಅಂಬರೀಶ್ ಅವರ ಎಂಪಿ ಅನುದಾನದಲ್ಲಿ ನಿರ್ಮಾಣವಾಗಿದ್ದ ರಂಗಮಂದಿರಕ್ಕೆ ಸುಮಲತಾರ ಫೋಟೊ ಅಳವಡಿಸಿದ್ದರು. ಆದರೆ, ಬಿಜೆಪಿಗೆ ಬೆಂಬಲ ನೀಡಿದ್ದಕ್ಕೆ ಇದೀಗ ರಂಗಮಂದಿರದಲ್ಲಿ ಹಾಕಿದ್ದ ಸುಮಲತಾ ಫೋಟೊ ತೆರವುಗೊಳಿಸಿ ಬಿದರಕೆರೆ ಗ್ರಾಮಸ್ಥರು ಅಸಮಾಧಾನ ಹೊರಹಾಕಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ