Sumalatha Ambareesh: ಬಿಜೆಪಿಗೆ ಬೆಂಬಲ ಕೊಟ್ಟ ಸುಮಲತಾ; ರಂಗಮಂದಿರದಲ್ಲಿದ್ದ ಫೋಟೊ ತೆರವುಗೊಳಿಸಿ ಆಕ್ರೋಶ - Vistara News

ಕರ್ನಾಟಕ

Sumalatha Ambareesh: ಬಿಜೆಪಿಗೆ ಬೆಂಬಲ ಕೊಟ್ಟ ಸುಮಲತಾ; ರಂಗಮಂದಿರದಲ್ಲಿದ್ದ ಫೋಟೊ ತೆರವುಗೊಳಿಸಿ ಆಕ್ರೋಶ

Sumalatha Ambareesh: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಬಿಜೆಪಿಗೆ ಬೆಂಬಲ ಸೂಚಿಸಿರುವುದು ಹಲವರ ಅಸಮಾಧಾನಕ್ಕೆ ಕಾರಣವಾಗಿದೆ. ಸುಮಲತಾ ಸಂಸದರಾಗಿ ಗೆದ್ದಾಗ ಬಿದರಕೆರೆ ಗ್ರಾಮದ ರಂಗಮಂದಿರದಲ್ಲಿ ಅವರ ಫೋಟೊವನ್ನು ಅಳವಡಿಸಲಾಗಿತ್ತು. ಆದರೆ, ಈಗ ಆ ಫೋಟೊವನ್ನು ತೆರವುಗೊಳಿಸಲಾಗಿದೆ.

VISTARANEWS.COM


on

Sumalatha extends support to BJP, Photo removed from theatre
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ನನ್ನ ಬೆಂಬಲ ಎಂದು ಸಂಸದೆ ಸುಮಲತಾ ಅಂಬರೀಶ್‌ (Sumalatha Ambareesh) ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಹಲವು ಕಡೆ ಆಕ್ರೋಶಗಳು ವ್ಯಕ್ತವಾಗಿವೆ. ನಾಗಮಂಗಲ ತಾಲೂಕಿನ ಬಿದರಕೆರೆ ಗ್ರಾಮದಲ್ಲಿರುವ ಲಂಕೇಶ್‌ ರಂಗಮಂದಿರದಲ್ಲಿ ಹಾಕಿದ್ದ ಅವರ ಫೋಟೊವನ್ನು ಗ್ರಾಮಸ್ಥರು ತೆರವು ಮಾಡಿದ್ದಾರೆ.

Sumalatha extends support to BJP, Photo removed from theatre
ಲಂಕೇಶ್‌ ರಂಗಮಂದಿರ

ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ವಿರುದ್ಧ ಜಯಗಳಿಸಿದ್ದ ಸುಮಲತಾ ಅಂಬರೀಶ್‌, ಬಿಜೆಪಿ ಸೇರ್ಪಡೆಯಾಗುವುದಾಗಿ ಶುಕ್ರವಾರ (ಮಾ.10) ಅಧಿಕೃತವಾಗಿ ಘೋಷಣೆ ಮಾಡಿದ್ದರು. ಆದರೆ, ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿದ್ದಕ್ಕೆ ಬಿದರಕೆರೆ ಗ್ರಾಮಸ್ಥರು ಅಸಮಾಧಾನ ಹೊರಹಾಕಿದ್ದಾರೆ.

Sumalatha extends support to BJP, Photo removed from theatre
ರಂಗಮಂದಿರದಲ್ಲಿ ಅಳವಡಿಸಿದ್ದ ಸಂಸದೆ ಸುಮಲತಾ ಅಂಬರೀಶ್‌ ಫೋಟೊ

ಇದನ್ನೂ ಓದಿ: Bengaluru Theft Case: ಮನೆ ಮಾಲೀಕನಿಗೆ ಊಟದಲ್ಲಿ ಅಮಲು ಔಷಧಿ ಬೆರೆಸಿ ಚಿನ್ನಾಭರಣ ಕಳ್ಳತನ; ನೇಪಾಳಿ ಗ್ಯಾಂಗ್‌ ಅರೆಸ್ಟ್‌

Sumalatha extends support to BJP, Photo removed from theatre
ಫೋಟೊ ತೆರವುಗೊಳಿಸಿದ ಗ್ರಾಮಸ್ಥರು

ಈ ಹಿಂದೆ ಮಂಡ್ಯದ ಸಂಸದರಾಗಿ ಆಯ್ಕೆ ಆದಾಗ ಬಿದರಕೆರೆ ಗ್ರಾಮಸ್ಥರು, ಅಂಬರೀಶ್ ಅವರ ಎಂಪಿ ಅನುದಾನದಲ್ಲಿ ನಿರ್ಮಾಣವಾಗಿದ್ದ ರಂಗಮಂದಿರಕ್ಕೆ ಸುಮಲತಾರ ಫೋಟೊ ಅಳವಡಿಸಿದ್ದರು. ಆದರೆ, ಬಿಜೆಪಿಗೆ ಬೆಂಬಲ ನೀಡಿದ್ದಕ್ಕೆ ಇದೀಗ ರಂಗಮಂದಿರದಲ್ಲಿ ಹಾಕಿದ್ದ ಸುಮಲತಾ ಫೋಟೊ ತೆರವುಗೊಳಿಸಿ ಬಿದರಕೆರೆ ಗ್ರಾಮಸ್ಥರು ಅಸಮಾಧಾನ ಹೊರಹಾಕಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Shakti Scheme: ಉಚಿತ ಪ್ರಯಾಣದ ಶಕ್ತಿ ಯೋಜನೆಗೆ 1 ವರ್ಷ; ಖರ್ಚಾಗಿದ್ದೆಷ್ಟು? ಉಪಯೋಗ ಪಡೆದವರೆಷ್ಟು?

Shakti Scheme: ಹೆಣ್ಣುಮಕ್ಕಳು ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾದ ಶಕ್ತಿ ಯೋಜನೆಗೆ ಸೋಮವಾರ ಒಂದು ವರ್ಷ ತುಂಬಿದೆ. ಯೋಜನೆ ಜಾರಿ ಆರಂಭದಲ್ಲಿ ಸಂಚಲನ ಮೂಡಿಸಿದ, ಗೊಂದಲ, ಗಲಾಟೆಗಳಿಗೂ ಕಾರಣವಾದ ಯೋಜನೆ ಈಗ ಯಶಸ್ವಿಯಾಗಿದೆ. ಇದರಿಂದ ಕೋಟ್ಯಂತರ ಹೆಣ್ಣುಮಕ್ಕಳು ಲಾಭವನ್ನೂ ಪಡೆದಿದ್ದಾರೆ.

VISTARANEWS.COM


on

Shakti Scheme
Koo

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರವು ಹೆಣ್ಣುಮಕ್ಕಳ ಅನುಕೂಲಕ್ಕಾಗಿ ಜಾರಿಗೆ ತಂದ ಶಕ್ತಿ ಯೋಜನೆ ಜಾರಿಯಾಗಿ ಸೋಮವಾರಕ್ಕೆ (ಜೂನ್‌ 11) ಒಂದು ವರ್ಷ ತುಂಬಿದೆ. ಹೆಣ್ಣುಮಕ್ಕಳು ರಾಜ್ಯದ ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾದ, ರಾಜ್ಯ ಸರ್ಕಾರದ ಐದು ಜನಪ್ರಿಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಯಿಂದ ಜೂನ್‌ 9ರವರೆಗೆ 225 ಕೋಟಿ ಬಾರಿ ಮಹಿಳೆಯರು ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಿದ್ದಾರೆ.

2023ರ ಜೂನ್‌ 11ರಂದು ರಾಜ್ಯ ಸರ್ಕಾರವು ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಹಾಗೂ ಎನ್‌ಡಬ್ಲ್ಯೂಕೆಆರ್‌ಟಿಸಿ ಬಸ್‌ಗಳಲ್ಲಿ ಜೂನ್‌ 9ರವರೆಗೆ 225.15 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆಯ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರವು ಜೂನ್‌ 9ರವರೆಗೆ 5,481.40 ಕೋಟಿ ರೂಪಾಯಿಯನ್ನು ನಾಲ್ಕೂ ನಿಗಮಗಳಿಗೆ ವಿನಿಯೋಗ ಮಾಡಿದೆ.

Shakti scheme and CM Siddaramaiah

2023ರ ವಿಧಾನಸಭೆ ಚುನಾವಣೆಗೂ ಮುನ್ನ ಐದು ಗ್ಯಾರಂಟಿ ಯೋಜನೆಗಳನ್ನು ಕರ್ನಾಟಕ ಕಾಂಗ್ರೆಸ್‌ ಘೋಷಣೆ ಮಾಡಿತ್ತು. ಚುನಾವಣೆ ವೇಳೆ ಗ್ಯಾರಂಟಿ ಯೋಜನೆಗಳ ಕುರಿತು ಅಬ್ಬರದ ಪ್ರಚಾರ ಕೈಗೊಂಡಿತ್ತು. ಐದು ಯೋಜನೆಗಳಲ್ಲಿ ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾದ ಶಕ್ತಿ ಯೋಜನೆಯೂ ಒಂದಾಗಿತ್ತು. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿತು. ಅದರಂತೆ, ಶಕ್ತಿ ಯೋಜನೆಯು ಒಂದು ವರ್ಷವನ್ನು ಯಶಸ್ವಿಯಾಗಿ ಪೂರೈಸಿದೆ. ಇದರಿಂದ ಕೋಟ್ಯಂತರ ಮಹಿಳೆಯರು ಲಾಭ ಪಡೆದಿದ್ದಾರೆ.

ಶಕ್ತಿ ಯೋಜನೆಗೆ ಆರಂಭದಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಇನ್ನು ಬಸ್‌ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹೆಣ್ಣುಮಕ್ಕಳು ಓಡಾಟ ಆರಂಭಿಸಿದ ಕಾರಣ ಬಸ್‌ನಲ್ಲಿ ಕಂಡಕ್ಟರ್‌ ಜತೆ ಜಗಳ, ಪ್ರಯಾಣಿಕರೇ ಬಡಿದಾಡಿಕೊಂಡ ಪ್ರಕರಣಗಳು ಸುದ್ದಿಯಾಗಿದ್ದವು. ಇದಾದ ಬಳಿಕ ಪರಿಸ್ಥಿತಿಯು ನಿಯಂತ್ರಣಕ್ಕೆ ಬಂದಿದೆ. ಶಕ್ತಿ ಯೋಜನೆ ಜಾರಿಗೂ ಮೊದಲು ಕರ್ನಾಟಕದ ಸಾರಿಗೆ ಬಸ್‌ಗಳಲ್ಲಿ ನಿತ್ಯ 84.5 ಲಕ್ಷ ಜನ ಪ್ರಯಾಣಿಸುತ್ತಿದ್ದರು. ಆದರೆ, ಯೋಜನೆ ಜಾರಿ ಬಳಿಕ ನಿತ್ಯ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ 1.06 ಕೋಟಿಗೆ ಏರಿಕೆಯಾಗಿದೆ. ಇದರಿಂದ ಸಾರಿಗೆ ನಿಗಮಗಳಿಗೂ ಲಾಭವಾಗಿದೆ.

ಇದನ್ನೂ ಓದಿ: Congress Guarantee: ಗ್ಯಾರಂಟಿ ನಿಲ್ಲಿಸುವ ಮಾತು ಬೇಡ: ಕೈ ನಾಯಕರಿಗೆ ಎಚ್.ಎಂ ರೇವಣ್ಣ ಎಚ್ಚರಿಕೆ

Continue Reading

ಕರ್ನಾಟಕ

Tax Devolution: ರಾಜ್ಯಗಳಿಗೆ 1.39 ಲಕ್ಷ ಕೋಟಿ ರೂ. ಹಂಚಿದ ಮೋದಿ ಸರ್ಕಾರ; ಕರ್ನಾಟಕಕ್ಕೆ ಸಿಕ್ಕಿದ್ದೆಷ್ಟು?

Tax Devolution: ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪದಗ್ರಹಣ ಮಾಡಿದ ಬೆನ್ನಲ್ಲೇ ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಕೇಂದ್ರ ಸರ್ಕಾರವು ಜೂನ್‌ ತಿಂಗಳ ತೆರಿಗೆ ಹಂಚಿಕೆ ಮಾಡಿದೆ. ಕೇಂದ್ರ ಹಣಕಾಸು ಸಚಿವಾಲಯವು 1.39 ಲಕ್ಷ ಕೋಟಿ ರೂಪಾಯಿಯನ್ನು ಹಂಚಿಕೆ ಮಾಡಿದೆ. ಕರ್ನಾಟಕ ಸೇರಿ ಯಾವ ರಾಜ್ಯಗಳಿಗೆ ಎಷ್ಟು ಮೊತ್ತ ಸಿಕ್ಕಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Tax Devolution
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ (NDA) ಮೈತ್ರಿಕೂಟವು ಬಹುಮತ ಸಾಧಿಸಿದ ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ, ರೈತರಿಗೆ ಕಿಸಾನ್‌ ಸಮ್ಮಾನ್‌ ಯೊಜನೆಯ ನಿಧಿ ಬಿಡುಗಡೆ, 3 ಕೋಟಿ ಮನೆಗಳ ನಿರ್ಮಾಣಕ್ಕೆ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದರ ಜತೆಗೆ, ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಜೂನ್‌ ತಿಂಗಳ ತೆರಿಗೆ ಹಂಚಿಕೆ (Tax Devolution) ಮಾಡಲಾಗಿದೆ. ಕೇಂದ್ರ ಹಣಕಾಸು ಸಚಿವಾಲಯವು 1.39 ಲಕ್ಷ ಕೋಟಿ ರೂಪಾಯಿಯನ್ನು ಹಂಚಿಕೆ ಮಾಡಿದೆ.

ರಾಜ್ಯಗಳ ಆರ್ಥಿಕ ಏಳಿಗೆ, ಪ್ರಗತಿಯ ದೃಷ್ಟಿಯಿಂದಾಗಿ ಕೇಂದ್ರ ಸರ್ಕಾರವು ತೆರಿಗೆ ಹಂಚಿಕೆ ಮಾಡಿದೆ. ಹಣಕಾಸು ಸಚಿವಾಲಯದ ಉನ್ನತ ಸಭೆಯಲ್ಲಿ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ. ಅದರಂತೆ, ಕರ್ನಾಟಕಕ್ಕೆ 5,096 ಕೋಟಿ ರೂ. ತೆರಿಗೆ ಹಂಚಿಕೆ ಲಭಿಸಿದೆ. ಹಾಗೆಯೇ, ಕೇಂದ್ರ ಸರ್ಕಾರವು ಮಧ್ಯಪ್ರದೇಶಕ್ಕೆ 10,970 ಕೋಟಿ ರೂ., ಬಿಹಾರ 14,056 ಕೋಟಿ ರೂ., ಆಂಧ್ರಪ್ರದೇಶ 5,655 ಕೋಟಿ ರೂ., ಗೋವಾಗೆ 539 ಕೋಟಿ ರೂ., ತೆಲಂಗಾಣ 2,937 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ.

ದೇಶದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸಿಕೊಡುವ ಮಹತ್ವದ ತೀರ್ಮಾನವನ್ನು ಮೊದಲ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬಡವರು ಸ್ವಂತ ಮನೆ ಕನಸನ್ನು ನನಸು ಮಾಡುವ ದಿಸೆಯಲ್ಲಿ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್‌ ಯೋಜನೆ ಜಾರಿಗೆ ತಂದಿದೆ. ಯೋಜನೆ ಅಡಿಯಲ್ಲಿ ಫಲಾನುಭವಿಗಳು ಬಯಲು ಪ್ರದೇಶದಲ್ಲಿ ಮನೆ ನಿರ್ಮಿಸಿಕೊಳ್ಳಲು 1.20 ಲಕ್ಷ ರೂ. ನೀಡಲಾಗುತ್ತದೆ. ಇನ್ನು ಗುಡ್ಡಗಾಡು ಪ್ರದೇಶದಲ್ಲಿ ಮನೆ ನಿರ್ಮಿಸಿಕೊಳ್ಳಲು 1.30 ಲಕ್ಷ ರೂ. ಸಹಾಯಧನ ನೀಡಲಾಗುತ್ತದೆ. ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರವು ಸುಮಾರು 4.21 ಕೋಟಿ ಮನೆಗಳನ್ನು ನಿರ್ಮಿಸಿಕೊಟ್ಟಿದೆ.

ಭಾನುವಾರ (ಜೂನ್‌ 9) ಸಂಜೆ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಜೂನ್‌ 10) ‘ಪಿಎಂ ಕಿಸಾನ್ ನಿಧಿ’ ಬಿಡುಗಡೆಯ ಕಡತಕ್ಕೆ ಸಹಿ ಹಾಕಿದರು. ಇದು ಅವರು ಮೂರನೇ ಅವಧಿಯಲ್ಲಿ ಸಹಿ ಹಾಕಿದ ಮೊದಲ ಫೈಲ್​. ಪಿಎಂ ಕಿಸಾನ್ ನಿಧಿಯ 17 ನೇ ಕಂತಿನ ಬಿಡುಗಡೆಗೆ ಅಧಿಕಾರ ನೀಡುವ ಕಡತಕ್ಕೆ ಅವರು ಸಹಿ ಹಾಕಿದರು. ಇದು 9.3 ಕೋಟಿ ರೈತರಿಗೆ ಪ್ರಯೋಜನ ನೀಡುವ ಸುಮಾರು 20,000 ಕೋಟಿ ರೂ. ಬಿಡುಗಡೆಯಾಗಲಿದೆ.

ಇದನ್ನೂ ಓದಿ: Modi 3.0 Cabinet: ಮೋದಿಗೆ ಬಾಹ್ಯಾಕಾಶ, ಅಮಿತ್‌ ಶಾಗೆ ಗೃಹ ಖಾತೆ; ಇಲ್ಲಿದೆ 72 ಸಚಿವರು ಹಾಗೂ ಖಾತೆಗಳ ಪಟ್ಟಿ

Continue Reading

ಮಳೆ

Karnataka Weather : ಬೆಂಗಳೂರಲ್ಲಿ ಭಾರಿ ಮಳೆ ಎಚ್ಚರಿಕೆ; ಮುಕ್ಕಾಲು ಕರ್ನಾಟಕಕ್ಕೆ ರೆಡ್‌ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ (Rain News) ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ರೆಡ್‌, ಯೆಲ್ಲೋ, ಆರೆಂಜ್‌ ಅಲರ್ಟ್‌ಗಳನ್ನು ನೀಡಲಾಗಿದೆ. ಜೂನ್‌ 13ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ತಿಳಿಸಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ ಮತ್ತು ಬಾಗಲಕೋಟೆ, ಹಾವೇರಿ, ವಿಜಯನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಗಾಳಿ ವೇಗವು 55-65 ಕಿ.ಮೀ ಇರಲಿದೆ. ಹೀಗಾಗಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಕೆಲವು ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಾಳಿ ವೇಗವು 40-50 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಸೇರಿದಂತೆ ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್‌ 13ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Yuva Rajkumar: ಕಾಂತಾರ ಕ್ವೀನ್‌ ಸಪ್ತಮಿ ಗೌಡ ಜತೆ ಯುವ ರಾಜ್‌ಕುಮಾರ್‌ ಸಂಬಂಧ; ಪತ್ನಿ ಶ್ರೀದೇವಿ ಆರೋಪ

Yuva Rajkumar: ಡಿವೋರ್ಸ್‌ ನೋಟಿಸ್‌ ಬೆನ್ನಲ್ಲೇ ನಟ ಯುವ ರಾಜ್‌ಕುಮಾರ್‌ ಹಾಗೂ ಅವರ ಪತ್ನಿ ಶ್ರೀದೇವಿ ಭೈರಪ್ಪ ಅವರ ನಡುವೆ ಆರೋಪ-ಪ್ರತ್ಯಾರೋಪಗಳು ಜಾಸ್ತಿಯಾಗಿವೆ. ಪರಸ್ಪರ ಅಕ್ರಮ ಸಂಬಂಧಗಳ ಕುರಿತು ಬಹಿರಂಗ ಆರೋಪಗಳು ಹೆಚ್ಚಾಗಿವೆ. ಈಗ ಶ್ರೀದೇವಿ ಭೈರಪ್ಪ ಅವರು ಯುವ ರಾಜ್‌ಕುಮಾರ್‌ ನಟಿ ಸಪ್ತಮಿ ಗೌಡ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬುದಾಗಿ ಆರೋಪಿಸಿದ್ದಾರೆ.

VISTARANEWS.COM


on

Yuva Rajkumar
Koo

ಬೆಂಗಳೂರು: ಡಾ.ರಾಜ್‌ಕುಮಾರ್‌ ವಂಶದ ಕುಡಿ, ನಟ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಅವರಿಗೆ ಡಿವೋರ್ಸ್ ನೋಟಿಸ್‌ ನೀಡಿದ ಬಳಿಕ ಇಬ್ಬರ ನಡುವಿನ ಆರೋಪ- ಪ್ರತ್ಯಾರೋಪಗಳು ಜಾಸ್ತಿಯಾಗಿವೆ. ಅದರಲ್ಲೂ, ಅನೈತಿಕ ಸಂಬಂಧಗಳ ಆರೋಪಗಳು ಇನ್ನೂ ಹೆಚ್ಚಾಗಿವೆ. “ಶ್ರೀದೇವಿ ಭೈರಪ್ಪ ಅವರು ರಾಧಯ್ಯ ಎಂಬ ವ್ಯಕ್ತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದ್ದಾರೆ. ಇನ್ನು, ನಟನ ಲೀಗಲ್‌ ನೋಟಿಸ್‌ಗೆ ಉತ್ತರಿಸಿದ ಶ್ರೀದೇವಿ ಭೈರಪ್ಪ, “ಯುವ ರಾಜ್‌ಕುಮಾರ್‌ ನಟಿ ಸಪ್ತಮಿ ಗೌಡ (Sapthami Gowda) ಜತೆ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಆರೋಪಿಸಿದ್ದಾರೆ. ಆ ಮೂಲಕ ಡಿವೋರ್ಸ್‌ ಪ್ರಕರಣವೀಗ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ.

ಹೌದು, ನಟ ಯುವ ರಾಜ್‌ಕುಮಾರ್‌ ಕಳುಹಿಸಿದ ಲೀಗಲ್‌ ನೋಟಿಸ್‌ಗೆ ಶ್ರೀದೇವಿ ಭೈರಪ್ಪ ಮರುತ್ತರ ನೀಡಿದ್ದು, ಹಲವು ಆರೋಪಗಳನ್ನು ಮಾಡಿದ್ದಾರೆ. ಇದೇ ವರ್ಷದ ಮೇ 30ರಂದು ಶ್ರೀದೇವಿ ಭೈರಪ್ಪ ಅವರು ರಿಪ್ಲೈ ನೋಟಿಸ್‌ ನೀಡಿದ್ದಾರೆ. “ಸಪ್ತಮಿ ಗೌಡ ಜತೆಗೆ ಯುವ ರಾಜ್‌ಕುಮಾರ್‌ ಒಂದು ವರ್ಷದಿಂದ ಸಂಬಂಧ ಹೊಂದಿದ್ದಾರೆ. ಇದೇ ಕಾರಣಕ್ಕಾಗಿ ನನ್ನನ್ನು ಮನೆಯಿಂದ ಹೊರಹಾಕಲು ಪ್ರಯತ್ನಿಸಿದರು. ಪ್ರೀತಿಸಿ ಮದುವೆಯಾದ ಯುವ ರಾಜ್‌ಕುಮಾರ್‌, ಬಳಿಕ ಸಪ್ತಮಿ ಗೌಡ ಹಿಂದೆ ಬಿದ್ದಿದ್ದಾರೆ” ಎಂಬುದಾಗಿ ಶ್ರೀದೇವಿ ಭೈರಪ್ಪ ಆರೋಪಿಸಿದ್ದಾರೆ.

“ನಾನು ಹಾಗೂ ಯುವ ರಾಜ್‌ಕುಮಾರ್‌ 5 ವರ್ಷ ಪ್ರೀತಿಸಿದ್ದೆವು. 2019ರಲ್ಲಿ ಹಿಂದು ಸಂಪ್ರದಾಯದಂತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ಮಾಡಿಕೊಂಡೆವು. ಮದುವೆಗೂ ಮುಂಚೆ ಯುವ ರಾಜ್‌ಕುಮಾರ್‌ ನಿರುದ್ಯೋಗಿ ಆಗಿದ್ದರು. ಅವರಿಗೆ ಕರಿಯರ್‌ ಬಗ್ಗೆ ಫೋಕಸ್‌ ಇರಲಿಲ್ಲ. ಅವರ ಕುಟುಂಬವು ಕೂಡ ಆರ್ಥಿಕವಾಗಿ ಸ್ಟೇಬಲ್‌ ಇರಲಿಲ್ಲ. ಇದಾದ ಬಳಿಕ ಯುವ ರಾಜ್‌ಕುಮಾರ್‌ ಸಪ್ತಮಿ ಗೌಡ ಹಿಂದೆ ಬಿದ್ದರು. ನಟಿಯನ್ನು ಮನೆಗೆ ಕರೆದುಕೊಂಡು ಬರುತ್ತಿದ್ದರು. ಸಪ್ತಮಿ ಗೌಡ ಜತೆ ಹೋಟೆಲ್‌ನಲ್ಲಿ ಇರುವಾಗಲೇ ಯುವ ಸಿಕ್ಕಿಬಿದ್ದಿದ್ದರು. ಸಂಬಂಧ ಗೊತ್ತಾದ ಮೇಲೆ ನನ್ನ ಮೇಲೆ ಆರೋಪ ಮಾಡಲು ಶುರುವಿಟ್ಟುಕೊಂಡರು” ಎಂಬುದಾಗಿ ಶ್ರೀದೇವಿ ಆರೋಪಿಸಿದ್ದಾರೆ.

ಲೀಗಲ್‌ ನೋಟಿಸ್‌ಗೆ ಶ್ರೀದೇವಿ ರಿಪ್ಲೈ

ಯುವ ಪರ ವಕೀಲರು ಹೇಳಿದ್ದೇನು?

ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. “ಮಾನಸಿಕ ಹಾಗೂ ದೈಹಿಕ ದೌರ್ಜನ್ಯದ ಆಧಾರದ ಮೇಲೆ ನಾವು ಅರ್ಜಿ ಹಾಕಿದ್ದೇವೆ. ಒಟ್ಟು 54 ಪೇಜಿನ ಡಿವೋರ್ಸ್ ಪಿಟೀಷನ್ ಹಾಕಿದ್ದೇವೆ. ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅದರಂತೆ, ಇವರು ನೋಟಿಸ್‌ ಜಾರಿಗೊಳಿಸಲಾಗಿದೆ. ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬ ವ್ಯಕ್ತಿ ಜತೆ ಅಕ್ರಮ ಸಂಬಂಧ ಇದೆ. ಇದರಿಂದಾಗಿ ಕಳೆದ ಎರಡು ವರ್ಷಗಳಿಂದ ಯುವ ಹಾಗೂ ಶ್ರೀದೇವಿ ನಡುವಿನ ಸಂಬಂಧ ಹಳಸಿತ್ತು” ಎಂಬುದಾಗಿ ಅವರು ಹೇಳಿದ್ದಾರೆ.

“ನಾನು ಅಮೆರಿಕದಲ್ಲಿ ಇರುತ್ತೇನೆ, ನೀನು ಬೆಂಗಳೂರಿನಲ್ಲಿಯೇ ಇರು ಎಂಬುದಾಗಿ ಕಿರುಕುಳ ಕೊಟ್ಟಿದ್ದಾರೆ. ಒಂದು ತಿಂಗಳ ಹಿಂದೆ ರಾಧಯ್ಯನಿಗೆ ಮದುವೆ ಆಗಿದೆ. ಆ ಸಮಯದಲ್ಲಿ ಆಕೆ ಬಹಳ ಖಿನ್ನತೆಗೆ ಜಾರಿದ್ದರು. ಇದಕ್ಕೆ ಈಗ ಯುವನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ದೈಹಿಕವಾಗಿ ಸಂಪರ್ಕಿಸಲು ಹೋದಾಗ ಅವಮಾನ ಮಾಡುತ್ತಿದ್ದರು. ಹಲ್ಲುಜ್ಜಿಕೊಂಡು ಬಾ, ಸ್ನಾನ ಮಾಡು ಅಂತ ಹೇಳುತ್ತಿದ್ದರು. ನೀನು ದೈಹಿಕವಾಗಿ ಫಿಟ್‌ ಇಲ್ಲ, ರಾಧಯ್ಯ ಫಿಟ್‌ ಇದ್ದಾನೆ ಎಂದು ಅವಮಾನ ಮಾಡುತ್ತಿದ್ದರು. ರಾಧಯ್ಯನ ಹೆಂಡತಿ ಮನೆಯಲ್ಲಿ ಇದ್ದಿದ್ದಾಗ ಆತನ ಮನೆಗೆ ಹೋಗುತ್ತಾರೆ. ಈ ರೀತಿಯ ಸಂಬಂಧ ಇಟ್ಟುಕೊಂಡಿದ್ದಾರೆ” ಎಂಬುದಾಗಿ ತಿಳಿಸಿದರು.

ಇದನ್ನೂ ಓದಿ: Yuva Rajkumar: ಶ್ರೀದೇವಿ ಭೈರಪ್ಪಗೆ ಅಕ್ರಮ ಸಂಬಂಧ; ಯುವ ರಾಜ್‌ಕುಮಾರ್ ಪರ ವಕೀಲ ಸ್ಫೋಟಕ ಹೇಳಿಕೆ

Continue Reading
Advertisement
Vastu Tips
ಧಾರ್ಮಿಕ9 mins ago

Vastu Tips: ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚಿಸಿಕೊಳ್ಳಲು ಈ ವಾಸ್ತು ಸಲಹೆ ಪಾಲಿಸಿ

Shakti Scheme
ಕರ್ನಾಟಕ14 mins ago

Shakti Scheme: ಉಚಿತ ಪ್ರಯಾಣದ ಶಕ್ತಿ ಯೋಜನೆಗೆ 1 ವರ್ಷ; ಖರ್ಚಾಗಿದ್ದೆಷ್ಟು? ಉಪಯೋಗ ಪಡೆದವರೆಷ್ಟು?

Somnath Bharti
Lok Sabha Election 202444 mins ago

Somnath Bharti: ಮೋದಿ ಪ್ರಧಾನಿಯಾದರೆ ತಲೆ ಬೋಳಿಸುವುದಾಗಿ ಪ್ರತಿಜ್ಞೆ ಮಾಡಿದ್ದ ಆಪ್‌ ನಾಯಕ ಯೂ ಟರ್ನ್‌; ನೀಡಿದ ಸಮರ್ಥನೆ ಏನು?

Tax Devolution
ಕರ್ನಾಟಕ46 mins ago

Tax Devolution: ರಾಜ್ಯಗಳಿಗೆ 1.39 ಲಕ್ಷ ಕೋಟಿ ರೂ. ಹಂಚಿದ ಮೋದಿ ಸರ್ಕಾರ; ಕರ್ನಾಟಕಕ್ಕೆ ಸಿಕ್ಕಿದ್ದೆಷ್ಟು?

Modi 3.0 Cabinet
ದೇಶ1 hour ago

Modi 3.0 Cabinet: ಮೈತ್ರಿ ಸರ್ಕಾರದಲ್ಲೂ ಮೋದಿಯದ್ದೇ ಪ್ರಾಬಲ್ಯ; 4 ಪ್ರಮುಖ ಖಾತೆಗಳು ಬಿಜೆಪಿ ಪಾಲು!

Karnataka Weather Forecast
ಮಳೆ2 hours ago

Karnataka Weather : ಬೆಂಗಳೂರಲ್ಲಿ ಭಾರಿ ಮಳೆ ಎಚ್ಚರಿಕೆ; ಮುಕ್ಕಾಲು ಕರ್ನಾಟಕಕ್ಕೆ ರೆಡ್‌ ಅಲರ್ಟ್‌

Menopause
ಆರೋಗ್ಯ2 hours ago

Menopause: ಮಹಿಳೆಯರೇ, ಈ ಸಮಸ್ಯೆಗಳು ಕಾಣಿಸುತ್ತಿವೆಯೇ?; ಹಾಗಿದ್ದರೆ ನಿಮ್ಮ ಮೆನೋಪಾಸ್‌ ಸಮೀಪದಲ್ಲಿದೆ ಎಂದರ್ಥ!

Yuva Rajkumar
ಕರ್ನಾಟಕ2 hours ago

Yuva Rajkumar: ಕಾಂತಾರ ಕ್ವೀನ್‌ ಸಪ್ತಮಿ ಗೌಡ ಜತೆ ಯುವ ರಾಜ್‌ಕುಮಾರ್‌ ಸಂಬಂಧ; ಪತ್ನಿ ಶ್ರೀದೇವಿ ಆರೋಪ

Cervical Cancer
ಆರೋಗ್ಯ3 hours ago

Cervical Cancer: ಮಹಿಳೆಯರ ಗರ್ಭಕಂಠದ ಕ್ಯಾನ್ಸರ್‌; ಪುರುಷರಿಗೂ ಇದೆ ಅಪಾಯ!

Dina Bhavishya
ಭವಿಷ್ಯ3 hours ago

Dina Bhavishya : ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ16 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌