ಬೆಂಗಳೂರು: ವಾರ್ಡ್ ಮರುವಿಂಗಡಣೆ ಮತ್ತು ಮೀಸಲಾತಿ ಕಾರಣದಿಂದ ಮುಂದೂಡಲ್ಪಡುತ್ತಿದ್ದ ಬಿಬಿಎಂಪಿ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಬಿಬಿಎಂಪಿ ಚುನಾವಣೆ ಪ್ರಕ್ರಿಯೆಯ ಬುಮುಖ್ಯ ಭಾಗವಾದ ವಾರ್ಡ್ ಮರುವಿಂಗಡಣೆಯನ್ನಯು 8 ವಾರಗಳಲ್ಲಿ ಒಊರೈಸಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಪಾಲಿಕೆ ವ್ಯಾಪ್ತಿಯಲ್ಲಿ 198 ವಾರ್ಡ್‌ಗಳಿದ್ದು, ಇದರ ಸಂಖ್ಯೆಯನ್ನು 243ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದ್ದರಿಂದ ಚುನಾವಣೆ ವಿಳಂಬವಾಗಿತ್ತು. ಆದರೆ ಕರ್ನಾಟಕ ನಗರ ಪಾಲಿಕೆಯ ಮೂರನೇ ತಿದ್ದುಪಡಿ ಕಾಯಿದೆ(2020) ಅನ್ವಯ 2020ರ ಸೆ.23ರಂದು ಹೊರಡಿಸಿರುವ ಅಧಿಸೂಚನೆಯಂತೆ ಮೊದಲಿದ್ದ 198 ವಾರ್ಡ್‌ಗಳಿಗೆ ಚುನಾವಣೆ ನಡೆಸಲು ನಿರ್ದೇಶನ ನೀಡಿತ್ತು. ನಂತರ ವಿಧಾನಸಭೆಯಲ್ಲಿ, ಹೈಕೋರ್ಟ್ ಆದೇಶವನ್ನು ಮೀರಿ 243 ವಾರ್ಟ್‌ಗಳಿಗೆ ಚುನಾವಣೆ ನಡೆಸಲು ಸದನದಲ್ಲಿ ನಿರ್ಣಯ ಅಂಗೀಕರಿಸಲಾಯಿತು. ಜತೆಗೆ ಹೈಕೋಟ್ ತೀರ್ಪಿನ ವಿರುದ್ಧ ಸುಪ್ರೀಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.
ಇದನ್ನೂ ಓದಿ | Detailed Story | ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ ಎಂದ ಸುಪ್ರೀಂ ತೀರ್ಪಿನಿಂದ ಗೊಂದಲದಲ್ಲಿ ಸರಕಾರ
ಇತ್ತೀಚೆಗೆ ಮಧ್ಯಪ್ರದೇಶದ ಸ್ಥಳೀಯ ಸಂಸ್ಥೆ ಚುನಾವಣೆ ಕುರಿತಂತೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ದೇಶದಲ್ಲಿ ಬಾಕಿ ಇರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸುವಂತೆ ಸೂಚನೆ ನೀಡಿತ್ತು. ಇದೇ ಆದೇಶ ಬಿಬಿಎಂಪಿಗೂ ಅನ್ವಯವಾಗುತ್ತದೆ ಎನ್ನಲಾಗಿತ್ತು. ಅದರೆ ಬಿಬಿಎಂಪಿ ಕುರಿತಂತೆ ಪ್ರತ್ಯೇಕ ಪ್ರಕರಣ ವಿಚಾರಣೆಯಲ್ಲಿರುವುದರಿಂದ ಮಧ್ಯಪ್ರದೇಶ ಕುರಿತ ಆದೇಶ ಅನ್ವಯ ಆಗುವುದಿಲ್ಲ ಎಂದು ತಿಳಿದುಬಂದಿತ್ತು.
ಇದೀಗ ಸುಪ್ರೀಂಕೋರ್ಟ್‌ನಲ್ಲಿ ಶುಕ್ರವಾರ ತೀರ್ಪು ನೀಡಿದೆ. ಬಿಬಿಎಂಪಿ ಚುನಾವಣೆ ಅರ್ಜಿ ವಿಚಾರಣೆ ನಡೆಸಿದ್ದು, 8 ವಾರಗಳ ಒಳಗೆ ಚುನಾವಣೆ ವಾರ್ಡ್ ಮರುವಿಂಗಡಣೆ ಪ್ರಕ್ರಿಯೆ ನಡೆಸಬೇಕು ಎಂದು ಕಾಲಮಿತಿ ನಿಗದಿ ಪಡಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ನಿದೇಶನ ನೀಡಿದೆ.
ಇದನ್ನೂ ಓದಿ | ರಾಜ್ಯದಲ್ಲಿ ಯಾವುದೇ ಚುನಾವಣೆ ಎದುರಿಸಲು ಬಿಜೆಪಿ ಸಂಪೂರ್ಣ ಸಿದ್ಧ: ನಳಿನ್ ಕುಮಾರ್ ಕಟೀಲ್