ನವದೆಹಲಿ: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ (b s Yediyurappa) ಹಾಗೂ ಅವರ ಕುಟುಂಬದ ಕೆಲ ಸದಸ್ಯರ ವಿರುದ್ಧ ಭ್ರಷ್ಟಾಚಾರ ಪ್ರಕರಣಕ್ಕೆ (Corruption Case) ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಫೆ.20, ಸೋಮವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ. ಕರ್ನಾಟಕ ಹೈಕೋರ್ಟ್(Karnataka High Court), ಯಡಿಯೂರಪ್ಪ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರು ಕುರಿತು ಮರು ತನಿಖೆಗೆ ಆದೇಶಿಸಿತ್ತು.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಫೆ.20, ಸೋಮವಾರ ಯಡಿಯೂರಪ್ಪ ಅವರ ಅರ್ಜಿಯನ್ನು ವಿಚಾರಣೆ ನಡೆಸಲಾಗದು. ಮತ್ತೊಂದು ದಿನ ವಿಚಾರಣೆ ಮಾಡಲಾಗುವುದು. ಇಲ್ಲವೇ ಸಾಮಾನ್ಯ ವಿಚಾರಣಾ ದಿನದ ಪಟ್ಟಿಗೆ ಕೇಸ್ ಸೇರಿಸುವಂತೆ ಸೂಚಿಸಿದ್ದಾರೆ.
ಇದನ್ನೂ ಓದಿ: Denotification Case: ಸ್ಟೇ ತೆರವಿಗೆ ಸುಪ್ರೀಂ ಕೋರ್ಟ್ ನಕಾರ, ಯಡಿಯೂರಪ್ಪ ನಿರಾಳ
ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂರ್ವಾನುಮತಿ ಸಿಗದ್ದರಿಂದ ಈ ಪ್ರಕರಣವನ್ನು ವಿಚಾರಣಾ ನ್ಯಾಯಾಲವು ವಜಾ ಮಾಡಿತ್ತು. ಇದರಿಂದ ಬಿ. ಎಸ್.ಯಡಿಯೂರಪ್ಪ ಹಾಗೂ ಅವರ ಕುಟುಂಬದ ಸದಸ್ಯರು ನಿರಾಳತೆಯನ್ನು ಅನುಭವಿಸಿದ್ದರು. ಆದರೆ, ಈ ಆದೇಶವನ್ನು ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್, ಪ್ರಕರಣದ ಮರು ವಿಚಾರಣೆಗೆ ಆದೇಶಿಸಿತ್ತು. ಹೈಕೋರ್ಟ್‌ನ ಈ ಆದೇಶ ಪ್ರಶ್ನಿಸಿ ಈಗ ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ವಸತಿ ಯೋಜನೆ ಗುತ್ತಿಗೆ ನೀಡುವುದರಲ್ಲಿ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಸದಸ್ಯರ ವ್ಯಾಪಕ ಭ್ರಷ್ಟಾಚಾರ ಎಸಗಿದ್ದಾರೆಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಾಂ ಎಂಬುವವರು ಖಾಸಗಿ ದೂರು ದಾಖಲಿಸಿದ್ದರು.