Suraj Revanna Case: ಸೂರಜ್ ಪ್ರಕರಣದ ತನಿಖೆ ಹೊಣೆಯೂ ಬಿ.ಕೆ. ಸಿಂಗ್ ಹೆಗಲಿಗೆ - Vistara News

ಕರ್ನಾಟಕ

Suraj Revanna Case: ಸೂರಜ್ ಪ್ರಕರಣದ ತನಿಖೆ ಹೊಣೆಯೂ ಬಿ.ಕೆ. ಸಿಂಗ್ ಹೆಗಲಿಗೆ

Suraj Revanna Case: ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯ ಹೊಣೆ ಹೊತ್ತಿರುವ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ತಂಡಕ್ಕೆ ಸೂರಜ್ ರೇವಣ್ಣ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ನೀಡಲಾಗಿದೆ. ಡಿಐಜಿ ಸುಧೀರ್ ಕುಮಾರ್ ರೆಡ್ಡಿ ಸಿ.ಎಚ್ ಕೂಡ ತನಿಖಾ ತಂಡಕ್ಕೆ ನೇಮಕವಾಗಿದ್ದಾರೆ.

VISTARANEWS.COM


on

Suraj Revanna Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸೂರಜ್ ರೇವಣ್ಣ ಪ್ರಕರಣದ (Suraj Revanna Case) ತನಿಖೆಯ ಹೊಣೆಯನ್ನೂ ಎಡಿಜಿಪಿ ಬಿ.ಕೆ. ಸಿಂಗ್ ಹೆಗಲಿಗೆ ನೀಡಲಾಗಿದೆ. ಈಗಾಗಲೇ ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯ ಹೊಣೆ ಹೊತ್ತಿರುವ ಸಿಐಡಿ ಆರ್ಥಿಕ ಅಪರಾಧಗಳ ವಿಭಾಗದ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ತಂಡಕ್ಕೆ ಸೂರಜ್ ರೇವಣ್ಣ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ನೀಡಿದೆ.

ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಾಕ್ಷ್ಯ ನೀಡಲು ಪೊಲೀಸ್‌ ಠಾಣೆಗೆ ಹೋಗಿ ತಾವಾಗಿಯೇ ಎಂಎಲ್‌ಸಿ ಸೂರಜ್‌ ರೇವಣ್ಣ (Suraj Revanna Case) ಸಿಕ್ಕಿಬಿದ್ದಿದ್ದರು. ಸಂತ್ರಸ್ತ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಶನಿವಾರ ರಾತ್ರಿ ಕೇಸ್ ದಾಖಲಾದ ಬೆನ್ನಲ್ಲೇ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೀಗಾಗಿ ಈ ಕೇಸ್‌ನ ತನಿಖೆ ಹೊಣೆಯನ್ನು ಬಿ.ಕೆ.ಸಿಂಗ್ ನೇತೃತ್ವದ ತಂಡಕ್ಕೆ ವಹಿಸಲಾಗದೆ.

ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಡಿಐಜಿ ಸುಧೀರ್ ಕುಮಾರ್ ರೆಡ್ಡಿ ಸಿ.ಎಚ್ ಕೂಡ ತನಿಖಾ ತಂಡಕ್ಕೆ ನೇಮಕವಾಗಿದ್ದಾರೆ. ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ‌ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿದ ಬಳಿಕ ಬೆಂಗಳೂರಿನ ಕೋರಮಂಗಲದ ಜಡ್ಜ್ ನಿವಾಸದಲ್ಲಿ ಹಾಜರುಪಡಿಸಲು ಕರೆತರಲಾಗುತ್ತಿದೆ.

ಹಾಸನ ಅಶ್ಲೀಲ ವಿಡಿಯೊ ಪ್ರಕರಣದ (Hassan Pen Drive Case) ತನಿಖೆಗಾಗಿ ಈ ಹಿಂದೆ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡಲಾಗಿತ್ತು. ಇದರಲ್ಲಿ ಇಬ್ಬರು ಮಹಿಳಾ ಐಪಿಎಸ್‌ ಅಧಿಕಾರಿಗಳು ಇದ್ದರು. ಎಡಿಜಿಪಿ ಬಿ.ಕೆ. ಸಿಂಗ್ ಅವರು ಎಸ್‌ಐಟಿ ಮುಖ್ಯಸ್ಥರಾಗಿದ್ದು, ಎಸ್‌ಪಿ ಸುಮನ್ ಡಿ ಪನ್ನೇಕರ್, ಎಸ್‌ಪಿ ಸೀಮಾ ಲಾಟ್ಕರ್ ಸದಸ್ಯರಾಗಿದ್ದಾರೆ. ಸಿಐಡಿಯಲ್ಲಿ ಎಡಿಜಿಪಿಯಾಗಿರುವ ಬಿ.ಕೆ ಸಿಂಗ್ ಅವರು, ಈ ಹಿಂದೆ ಗೌರಿ ಲಂಕೇಶ್ ಕೊಲೆ ಕೇಸ್‌ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಆರೋಪ ಸಾಬೀತಾದರೆ ಶಿಕ್ಷೆ ಏನು?

ಸೂರಜ್‌ ರೇವಣ್ಣ ವಿರುದ್ಧ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಸೆಕ್ಷನ್ 342, 377, 506 ಅಡಿ ಎಫ್‌ಐಆರ್‌ ದಾಖಲಾಗಿದೆ. ಇದರಲ್ಲಿ ಸೆಕ್ಷನ್ 342 ಅಕ್ರಮವಾಗಿ ಬಂಧನಕ್ಕೆ ಸಂಬಂಧಿಸಿದ್ದು, 1 ವರ್ಷ ಶಿಕ್ಷೆ ಹಾಗೂ ದಂಡ, ಬೇಲೇಬಲ್ ಅಫೆನ್ಸ್ ಆಗಿದೆ. ಸೆಕ್ಷನ್ 377 ಅಸಹಜ ಲೈಂಗಿಕ ಕ್ರಿಯೆಗೆ ಸಂಬಂಧಿಸಿದ್ದು, ಜೀವಾವಧಿ ಶಿಕ್ಷೆ ಅಥವಾ 10 ವರ್ಷ ಶಿಕ್ಷೆ + ದಂಡ ನಾನ್ ಬೇಲೇಬಲ್ ಪ್ರಕರಣವಾಗಿದೆ. ಸೆಕ್ಷನ್ 506 ಕ್ರಿಮಿನಲ್ ಬೆದರಿಕೆ , ಪ್ರಾಣ ಬೆದರಿಕೆಗೆ ಸಂಬಂಧಿಸಿದ್ದು, ಕ್ರಿಮಿನಲ್ ಬೆದರಿಕೆ ಆಗಿದ್ದರೆ ಎರಡು ವರ್ಷ ಜೈಲು ಶಿಕ್ಷೆ, ಪ್ರಾಣ ಬೆದರಿಕೆ ಆಗಿದ್ದರೆ ಏಳು ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಲಾಗುತ್ತದೆ.

ಇದನ್ನೂ ಓದಿ |Suraj Revanna Case: ಸಾಕ್ಷಿ ನೀಡಲು ಠಾಣೆಗೆ ಬಂದು ಪೊಲೀಸ್‌ ಬಲೆಗೆ ಬಿದ್ದ ಸೂರಜ್‌ ರೇವಣ್ಣ

ಸೂರಜ್ ಮೊಬೈಲ್ ಸೀಜ್

ಸೂರಜ್ ರೇವಣ್ಣ ಮೊಬೈಲ್ ಅನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಬ್ಲ್ಯಾಕ್ ಮೇಲ್ ವಿಚಾರವಾಗಿ ಮೊಬೈಲ್ ಸಾಕ್ಷ್ಯಗಳನ್ನ ನೀಡಲು ಸೂರಜ್ ಮುಂದಾಗಿದ್ದಾಗ ಅವರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಅವರ ಮೊಬೈಲ್ ಸೀಜ್ ಮಾಡಿ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧ ಪಟ್ಟ ಸಾಕ್ಷ್ಯ ಸಂಗ್ರಹಕ್ಕೆ ಪೊಲೀಸರು ಮುಂದಾಗಿದ್ದಾರೆ. ಮೊಬೈಲ್‌ನಿಂದ ಹೋಗಿರುವ ಮೆಸೇಜ್, ವಾಟ್ಸ್ ಆಫ್ ಕಾಲ್, ಪೋನ್ ಕಾಲ್ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ; ಬೆಂಗಳೂರಿನಲ್ಲಿ ಎಷ್ಟಿದೆ ದರ?

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,615 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,216 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 52,920, 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,150 ಮತ್ತು ₹ 6,57,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,728 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,160 ಮತ್ತು ₹ 7,21,600 ವೆಚ್ಚವಾಗಲಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ (ಜೂನ್‌ 28) ಮತ್ತೆ ಚಿನ್ನದ ಬೆಲೆ ತುಸು ಏರಿಕೆ ಕಂಡಿದೆ. (Gold Rate Today). ನಿನ್ನೆ ಇಳಿಕೆ ಕಂಡಿದ್ದ ಚಿನ್ನದ ದರ ಇಂದು ಏರಿಕೆ ಆಗಿದೆ, ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ ₹ 40 ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ ₹ 43 ಏರಿಕೆ ಕಂಡಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,615 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,216 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 52,920, 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,150 ಮತ್ತು ₹ 6,57,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,728 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,160 ಮತ್ತು ₹ 7,21,600 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,630₹ 7,233
ಮುಂಬೈ₹ 6,615₹ 7,216
ಬೆಂಗಳೂರು₹ 6,615₹ 7,216
ಚೆನ್ನೈ₹ 6,666₹ 7,272

ಬೆಳ್ಳಿ ಧಾರಣೆ
ಬೆಳ್ಳಿಯ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಬೆಳ್ಳಿ ಒಂದು ಗ್ರಾಂಗೆ ₹ 89.50 ಹಾಗೂ 8 ಗ್ರಾಂಗೆ ₹ 716 ಇದೆ. 10 ಗ್ರಾಂಗೆ ₹ 895 ಹಾಗೂ 1 ಕಿಲೋಗ್ರಾಂಗೆ ₹ 89,500 ಬೆಲೆ ಬಾಳುತ್ತದೆ.

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ:Hindu Temple: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಹಿಂದು ದೇವಾಲಯವನ್ನೇ ನೆಲಸಮಗೊಳಿಸಿದ ಪಾಕ್‌ ಆಡಳಿತ

Continue Reading

ಪ್ರಮುಖ ಸುದ್ದಿ

Haveri Accident: ಪೂಜೆ ಮಾಡಿಸಿಕೊಂಡು ಬಂದ ಹೊಸ ವಾಹನ 13 ಜನರ ಬಲಿ ಪಡೆಯಿತು!

Haveri Accident: ಕಳೆದ 15 ದಿನದ ಹಿಂದಷ್ಟೇ ಹೊಸ ಸೆಕೆಂಡ್ ಹ್ಯಾಂಡ್ ಟೆಂಪೊ ಟ್ರಾಕ್ಸ್‌ ವಾಹನ ಖರೀದಿ ಮಾಡಿದ್ದ ಕುಟುಂಬ, ವಾಹನಕ್ಕೆ ಪೂಜೆ ಮಾಡಿಸಲು ಮನೆ ದೇವರು ಯಲ್ಲಮ್ಮ ದೇವಾಲಯಕ್ಕೆ ತೆರಳಿದ್ದರು. ನಾಗೇಶ್‌ ಕುಟುಂಬಸ್ಥರು ಸವದತ್ತಿ ಯಲ್ಲಮ್ಮ, ಚಿಂಚಲಿ ಮಾಯಮ್ಮ ದೇವಾಲಯಕ್ಕೆ ಸೋಮವಾರ ರಾತ್ರಿ ತೆರಳಿದ್ದರು.

VISTARANEWS.COM


on

haveri accident tt
ಚಾಲಕ ಹಾಕಿಕೊಂಡಿದ್ದ ವಾಹನ ಪೂಜೆಯ ಸ್ಟೇಟಸ್‌; ಛಿದ್ರಗೊಂಡ ಟಿಟಿ
Koo

ಹಾವೇರಿ: ಬ್ಯಾಡಗಿಯಲ್ಲಿ (Haveri Accident) ಇಂದು ಮುಂಜಾನೆ 13 ಮಂದಿಯನ್ನು ಬಲಿ ಪಡೆದುಕೊಂಡ ಅಪಘಾತ (Road Accident) ಸಂಭವಿಸಿದ ಟಿಟಿ ವಾಹನವನ್ನು 15 ದಿನಗಳ ಹಿಂದೆಯಷ್ಟೇ ಖರೀದಿಸಲಾಗಿತ್ತು ಎಂದು ತಿಳಿದುಬಂದಿದೆ. ವಾಹನದ ಪೂಜೆಗಾಗಿ (Vehicle Puja) ಕುಟುಂಬ ತೆರಳಿದ್ದು, ಪೂಜೆ ಮುಗಿಸಿಕೊಂಡು ಮರಳಿ ಬರುತ್ತಿತ್ತು.

ಕಳೆದ 15 ದಿನದ ಹಿಂದಷ್ಟೇ ಹೊಸ ಸೆಕೆಂಡ್ ಹ್ಯಾಂಡ್ ಟೆಂಪೊ ಟ್ರಾಕ್ಸ್‌ ವಾಹನ ಖರೀದಿ ಮಾಡಿದ್ದ ಕುಟುಂಬ, ವಾಹನಕ್ಕೆ ಪೂಜೆ ಮಾಡಿಸಲು ಮನೆ ದೇವರು ಯಲ್ಲಮ್ಮ ದೇವಾಲಯಕ್ಕೆ ತೆರಳಿದ್ದರು. ನಾಗೇಶ್‌ ಕುಟುಂಬಸ್ಥರು ಸವದತ್ತಿ ಯಲ್ಲಮ್ಮ, ಚಿಂಚಲಿ ಮಾಯಮ್ಮ ದೇವಾಲಯಕ್ಕೆ ಸೋಮವಾರ ರಾತ್ರಿ ತೆರಳಿದ್ದರು. ವಾಹನಕ್ಕೆ ಪೂಜೆ ಮಾಡಿಸಿಕೊಂಡು ಮರಳುತ್ತಿದ್ದಾಗ ಈ ಘೋರ ದುರಂತ ಸಂಭವಿಸಿದೆ. ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದವರು.

ಟಿಟಿ ವಾಹನ ಖರೀದಿಸಿ ದೇವರ ದರ್ಶನಕ್ಕೆ ಕುಟುಂಬ ಸಮೇತ ತೆರಳಿದ್ದ ಚಾಲಕ ಆದರ್ಶ, ಪೂಜೆಯ ಬಳಿಕ ಅದರ ಫೋಟೋಗಳನ್ನು ತಮ್ಮ ಸ್ಟೇಟಸ್‌ನಲ್ಲಿ ಹಾಕಿಕೊಂಡಿದ್ದರು. ಸೋಮವಾರದಿಂದ ದೇವರ ದರ್ಶನಕ್ಕೆ ಹೊರಟಿದ್ದ ಆದರ್ಶ, ನಿನ್ನೆ ಮಹಾರಾಷ್ಟ್ರ ತಿವಾರಿ ಲಕ್ಷ್ಮೀ ಟೆಂಪಲ್‌ನಲ್ಲಿ ವಾಹನ ಪೂಜೆ ಮಾಡಿಸಿ ಪೂಜೆ ಪೋಟೋಗಳನ್ನ ವಾಟ್ಸಪ್ ಸ್ಟೇಟಸ್ ಹಾಕಿಕೊಂಡಿದ್ದರು. ಇಂದು ವಾಹನ ಛಿದ್ರಛಿದ್ರವಾಗಿದೆಯಲ್ಲದೆ ಇಡೀ ಕುಟುಂಬವನ್ನು ಬಲಿ ತೆಗೆದುಕೊಂಡಿದೆ.

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ದುರ್ಘಟನೆ ನಡೆದಿದೆ. ಹೆದ್ದಾರಿ ಪಕ್ಕದಲ್ಲಿ ನಿಂತಿದ್ದ ಲಾರಿ ನಂಬರ್ ಕೆಎ 51 ಡಿ3530ಗೆ ಟಿಟಿ ವಾಹನ ಸಂಖ್ಯೆ ಕೆಎ01 ಎಬಿ4760 ಡಿಕ್ಕಿ ಹೊಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ಲಾರಿಯನ್ನು ಕಾಣದೆ ಟಿಟಿ ಚಾಲಕ ಆದರ್ಶ ಇದಕ್ಕೆ ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ. ರಸ್ತೆಯಲ್ಲಿ ಮಂಜು ಕವಿದಿದ್ದ ಕಾರಣ ಬಹುಶಃ ಲಾರಿ ಕಾಣಿಸಿರಲಾರದು. ಬೆಳಗಿನ ಜಾವ ನಿದ್ರೆಯ ಮಂಪರಿನಲ್ಲಿ ಈ ಅಪಘಾತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

ನಿಂತಿದ್ದ ಲಾರಿಗೆ ಗುದ್ದಿದ ಪರಿಣಾಮ ಟಿಟಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿವೆ. ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹೊರ ತೆಗೆದರು. ಸ್ಥಳಕ್ಕೆ ಹಾವೇರಿ ಎಸ್‌ಪಿ ಅಂಶುಕುಮಾರ ಭೇಟಿ ನೀಡಿ ಪರಿಶೀಲಿಸಿದರು.

ಟಿಟಿ ವಾಹನದಲ್ಲಿ 17 ಜನ ಪ್ರಯಾಣ ಮಾಡುತ್ತಿದ್ದರು. 13 ಜನರ ಸಾವಿಗೀಡಾಗಿದ್ದು, 4 ಜನ ಗಂಭೀರ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಪರಶುರಾಮ್ (45), ಭಾಗ್ಯ (40), ನಾಗೇಶ್ (50), ವಿಶಾಲಾಕ್ಷಿ (50), ಸುಭದ್ರಾ ಭಾಯಿ (65), ಪುಣ್ಯ (50), ಮಂಜುಳಾಬಾಯಿ (57), ಆದರ್ಶ್ (23), ಮಾನಸಾ (24), ರೂಪಾ (40), ಮಂಜುಳಾ (50) ಎಂದು ಗುರುತಿಸಲಾಗಿದೆ. 4 ವರ್ಷದ ಹಾಗೂ 6 ವರ್ಷದ ಇಬ್ಬರು ಮಕ್ಕಳು ಸಹ ಮೃತಪಟ್ಟಿದ್ದಾರೆ. ಅರ್ಪಿತಾ, ಅರುಣಾ, ಅನ್ನಪೂರ್ಣ ಆಸ್ಪತ್ರೆಯಲ್ಲಿರುವ ಗಾಯಾಳುಗಳು.

13 ಜನರ ಸಾವಿನ ಸುದ್ದಿ ಕೇಳಿ ಎಮ್ಮೆಹಟ್ಟಿ ಗ್ರಾಮದ ಜನತೆ ಶಾಕ್ ಆಗಿದ್ದು, ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಮೃತ ವಿಶಾಲಾಕ್ಷಮ್ಮ, ಆದರ್ಶ್, ನಾಗೇಶ್, ಭಾಗ್ಯ, ಮಾನಸ, ಸುಭದ್ರತಾಯಿ ಮೂಲತಃ ಎಮ್ಮೆಹಟ್ಟಿ ಗ್ರಾಮದವರು. ಪರಶುರಾಮ್, ರೂಪ ದಂಪತಿಗಳು ಶಿವಮೊಗ್ಗ ನಗರದ ಹಾಲ್ಕೋಳ ನಿವಾಸಿಗಳು. ಮಂಜುಳಬಾಯಿ, ಮಂಜುಳ ಭದ್ರಾವತಿ ತಾಲೂಕಿನ ಕಲ್ಯಾಳ್ ಸರ್ಕಲ್‌ನವರು. ಅಂಜು ಕಡೂರು ತಾಲೂಕಿನ ಬೀರೂರು ನಿವಾಸಿ. ಪುಣ್ಯ ಬಾಯಿ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಹಾಲಿನ ಡೈರಿ ಗ್ರಾಮದ ನಿವಾಸಿ.

ಎಮ್ಮೆಹಟ್ಟಿ ಗ್ರಾಮದ ಶಾಲಾ ಆವರಣದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಮ್ಮೆಹಟ್ಟಿ ಗ್ರಾಮದ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗಿದೆ.

ಇದನ್ನೂ ಓದಿ: Haveri Accident: ಹಾವೇರಿಯಲ್ಲಿ ಭಯಾನಕ ಅಪಘಾತ: ಲಾರಿಗೆ ಟಿಟಿ ಡಿಕ್ಕಿ, 13 ಜನರ ಸಾವು

Continue Reading

ಪ್ರಮುಖ ಸುದ್ದಿ

Rain News: ಅಬ್ಬರಿಸುತ್ತಿರುವ ಮುಂಗಾರು: 3 ಜಿಲ್ಲೆಗೆ ರೆಡ್‌ ಅಲರ್ಟ್‌, ಇನ್ನೂ ನಾಲ್ಕು ದಿನ ಜೋರು ಮಳೆ

Rain News: ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ
ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

rain news bhagamandala
ಭಾಗಮಂಡಲದಲ್ಲಿ ರಸ್ತೆ ಮುಳುಗಡೆ, ಕೊಯ್ನಾಡಿನಲ್ಲಿ ಶಾಲೆ ಮೇಲೆ ಕುಸಿದ ಗುಡ್ಡ
Koo

ಬೆಂಗಳೂರು: ರಾಜ್ಯದಲ್ಲಿ ಮುಂಗಾರು (Monsoon) ಅಬ್ಬರಿಸುತ್ತಿದೆ. ಕರಾವಳಿ (Coast), ಮಲೆನಾಡಿನಲ್ಲಿ (Wester Gaht) ಮಳೆಯ ಆರ್ಭಟ (Rain News) ಜೋರಾಗಿದೆ. ಒಳನಾಡು, ಬಯಲುಸೀಮೆ ಹಾಗೂ ರಾಜಧಾನಿಯಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ಕರಾವಳಿ, ಮಲೆನಾಡಿನಲ್ಲಿ ನದಿಗಳು ತುಂಬಿ ಹರಿಯುತ್ತಿದೆ; ಜಲಪಾತಗಳು ಧುಮ್ಮಿಕ್ಕುತ್ತಿವೆ. ಹಲವೆಡೆ ಧರೆ ಕುಸಿದು ಮನೆಗಳು ನೆಲಕಚ್ಚಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಅನಾಹುತಗಳಿಂದ ಎರಡೇ ದಿನಗಳಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಉಳ್ಳಾಲ ತಾಲೂಕಿನ ಕುತ್ತಾರುವಿನ ಮದನಿನಗರದಲ್ಲಿ ಮನೆ ಕುಸಿದು ನಾಲ್ವರು ಮೃತಪಟ್ಟಿದ್ದರೆ, ಮಂಗಳೂರು ನಗರದ ರೋಸಾರಿಯೊ ಶಾಲೆ ಹಿಂಭಾಗದಲ್ಲಿ ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ್ದಾರೆ. ಗುರುವಾರ ಸಂಜೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ಮಳೆ ನೀರಿನಲ್ಲಿ ವಿದ್ಯುತ್ ಪ್ರವಹಿಸಿ 20 ವರ್ಷದ ಯುವತಿ ಪ್ರತೀಕ್ಷಾ ಶೆಟ್ಟಿ ಅಸುನೀಗಿದ್ದಾರೆ.

ದಕ್ಷಿಣ ಕನ್ನಡ, ಚಿಕ್ಕಮಗಳೂರಿನಲ್ಲಿ ಶಾಲೆಗಳಿಗೆ ರಜೆ

ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಚಿಕ್ಕಮಗಳೂರಿನ ಶಾಲೆಗಳಿಗೆ ಇಂದೂ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಶುಕ್ರವಾರ ಕೂಡಾ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ. ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೂಡಿಗೆರೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಿ ತಹಶೀಲ್ದಾರ್ ಪರಮಾನಂದ ಆದೇಶ ಹೊರಡಿಸಿದ್ದಾರೆ. ಪಿಯುಸಿ ಹಾಗೂ ಪದವಿ ಕಾಲೇಜುಗಳು ಎಂದಿನಂತೆ ನಡೆಯಲಿವೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನದಲ್ಲಿ ಭಾರಿ ಮಳೆಗೆ ಮಣ್ಣು ಶಕ್ತಿ ಕಳೆದುಕೊಂಡಿದ್ದು, ಮನೆಯ ಆವರಣದಲ್ಲಿದ್ದ ಬಾವಿ ಕಣ್ಣೆದುರಿಗೇ ಕುಸಿದುಹೋಗಿದೆ. ಬಾವಿ ಕುಸಿಯುವ ದೃಶ್ಯ ಮೊಬೈಲ್ ಫೋನ್‌ನಲ್ಲಿ ಸೆರೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಬಳಿ ಭದ್ರಾ ನದಿ ಮೈತುಂಬಿದೆ. ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆಗೆ 4-5 ಅಡಿಯಷ್ಟೇ ಬಾಕಿ ಇದೆ. ಕಾಸರಗೋಡಿನ ಇತಿಹಾಸ ಪ್ರಸಿದ್ಧ ಮಧೂರು ದೇಗುಲ ಜಲಾವೃತಗೊಂಡಿದೆ

ಮೈದುಂಬಿದ ಜೋಗ ಜಲಪಾತ

ಶಿವಮೊಗ್ಗ ಸುತ್ತಮುತ್ತಲೂ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ವಿಶ್ವವಿಖ್ಯಾತ ಜೋಗ ಜಲಪಾತ ಭೋರ್ಗರೆದು ಧುಮ್ಮಿಕ್ಕುತ್ತಿದೆ. ತೀರ್ಥಹಳ್ಳಿ ಭಾಗದಲ್ಲಿ ವರ್ಷಧಾರೆಯಿಂದಾಗಿ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಆಗುಂಬೆಯಲ್ಲಿ ಭೂಕುಸಿತ ಭೀತಿ ಇರುವುದರಿಂದ ಸೆಪ್ಟೆಂಬರ್ 15ರವರೆಗೆ ವಾಹನ ಸಂಚಾರ ಬಂದ್‌ ಮಾಡಲಾಗಿದೆ.

ಘಟ್ಟ ಪ್ರದೇಶದಲ್ಲಿನ ಮಳೆಗೆ ಕುಮಾಧಾರಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ಕುಕ್ಕೆ ಸುಬ್ರಹ್ಮಣ್ಯ ಬಳಿ ಸ್ನಾನಘಟ್ಟ, ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆ ಆಗಿದೆ. ನೇತ್ರಾವತಿ ನದಿ ಕೂಡಾ ಮೈದುಂಬಿ ಹರಿಯುತ್ತಿದೆ. ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತವಾಗಿದೆ. ಪವಿತ್ರ ಸ್ನಾನಘಟ್ಟ ಮುಳುಗಿ, ಮುಖ್ಯ ದ್ವಾರದವೆರಗೂ ನೀರು ತಲುಪಿದೆ. ಭಕ್ತರು ಪುಣ್ಯ ಸ್ನಾನ ಹಾಗೂ ಪಿಂಡ ಪ್ರದಾನ ಮಾಡಲು ಸಾಧ್ಯವಾಗುತ್ತಿಲ್ಲ. ಕೊಡಗಿನ ಕೊಯ್ನಾಡಿನಲ್ಲಿ ಶಾಲಾ ಕಟ್ಟಡ ಮೇಲೆ ಗುಡ್ಡ ಕುಸಿದು ಶಾಲಾ ಕೊಠಡಿಯ ಗೋಡೆ, ಕಿಟಕಿ ಜಖಂ ಆಗಿವೆ. ಶಾಲೆಗೆ ರಜೆ ಇದ್ದುದ್ದರಿಂದ ಅನಾಹುತ ತಪ್ಪಿದೆ. ಕಳೆದ ಮಳೆಗಾಲದಲ್ಲೂ ಶಾಲೆಯ ಮೇಲೆ ಗುಡ್ಡ ಕುಸಿದು ಹಾನಿಯಾಗಿತ್ತು.

ಅರಬ್ಬಿ ಸಮುದ್ರದಲ್ಲಿ ಭಾರಿ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಕಡಲ ಕೊರೆತ ಆರಂಭವಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯವುದನ್ನು ನಿಲ್ಲಿಸಿದ್ದಾರೆ. ಕಾರವಾರದ ದೇವಬಾಗ್ ಕಡಲತೀರದಲ್ಲಿ ಕಡಲಕೊರೆತ ಹೆಚ್ಚಾಗಿದ್ದು, ರೆಸಾರ್ಟ್‌ಗೆ ಹಾನಿಯಾಗಿದೆ. ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ
ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Agumbe Ghat: ಭಾರಿ ಮಳೆ; ಸೆ.15ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ!

Continue Reading

ಪ್ರಮುಖ ಸುದ್ದಿ

CM Siddaramaiah: ವಿನಾಕಾರಣ ಕೇಂದ್ರವನ್ನು ದೂರಬೇಡಿ: ರಾಜ್ಯ ಸಂಸದರ ಸಭೆಯಲ್ಲಿ ಸಿಎಂಗೆ ಎನ್‌ಡಿಎ ಪಾಠ

CM Siddaramaiah: ನಿನ್ನೆ ಹೊಸದಿಲ್ಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ರಾಜ್ಯದಿಂದ ನೂತನವಾಗಿ ಆಯ್ಕೆಯಾದ ಲೋಕಸಭೆ ಹಾಗೂ ರಾಜ್ಯಸಭೆ ಸಂಸದರ ಸಭೆ ನಡೆಸಲಾಯಿತು.

VISTARANEWS.COM


on

mp meet cm siddaramaiah
Koo

ಹೊಸದಿಲ್ಲಿ: ʼಕೇಂದ್ರ ಸರ್ಕಾರ (Central Govt) ರಾಜ್ಯಕ್ಕೆ ಏನೂ ಮಾಡಿಲ್ಲ, ಬಿಜೆಪಿ (BJP) ನಮಗೆ ಸಹಾಯ ಮಾಡ್ತಿಲ್ಲ, ರಾಜ್ಯದ ಬಗ್ಗೆ ನಮ್ಮ ರಾಜ್ಯದ ಬಿಜೆಪಿ ಸಂಸದರಿಗೇ ಕಾಳಜಿ ಇಲ್ಲ ಅನ್ನುವ ಮಾತುಗಳನ್ನು ಪದೇ ಪದೆ ಆಡುವುದನ್ನು ಬಿಡಿʼ ಎಂದು ಎನ್‌ಡಿಎ (NDA) ಸಂಸದರು ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಪಾಠ ಹೇಳಿದ್ದಾರೆ.

ನಿನ್ನೆ ಹೊಸದಿಲ್ಲಿಯಲ್ಲಿ ಸಿಎಂ ನೇತೃತ್ವದಲ್ಲಿ ನಡೆದ, ರಾಜ್ಯದ ನೂತನ ಸಂಸದರ ಸಭೆಯಲ್ಲಿ ಈ ಕುರಿತು ಮಾತುಗಳು ವಿನಿಮಯಗೊಂಡವು. ರಾಜ್ಯದ ಅಭಿವೃದ್ಧಿಗೆ ನಾವು ಬದ್ದರಿದ್ದೇವೆ. ರಾಜ್ಯದ ಸರ್ವತೋಮುಖ ಬೆಳವಣಿಗೆಗೆ ನಾವು ಸಹ ಸಹಕಾರ ನೀಡ್ತೇವೆ. ಹಾಗಂತ ಎಲ್ಲಾ ವಿಚಾರಗಳಿಗೂ ಸಹ ಕೇಂದ್ರ ಸರ್ಕಾರದ ತಪ್ಪು ಎನ್ನುವುದು ಸರಿ ಅಲ್ಲ. ಒಂದು ಯೋಜನೆ ಯಶಸ್ವಿಯಾಗಿ ಜಾರಿ ಆಗ್ಬೇಕು ಅಂದ್ರೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಬ್ಬರೂ ಸಹಕರಿಸಬೇಕು. ನೀವು ಏನೂ ಮಾಡದೆ, ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದು ಎಷ್ಟರ ಮಟ್ಟಿಗೆ ಸರಿ? ಎಂದು NDA ಸಂಸದರು ಕಾಂಗ್ರೆಸ್‌ಗೆ ಚಾಟಿ ಬೀಸಿದರು.

ರೈಲ್ವೆ ಯೋಜನೆ ಬಾಕಿ ಇದೆ, ರಾಷ್ಟ್ರೀಯ ಹೆದ್ದಾರಿಗಳು ಆಗಿಲ್ಲ ಅಂತ ಹೇಳುವ ಮೊದಲು ಅದಕ್ಕೆ ಬೇಕಾದ ಸಹಕಾರ ರಾಜ್ಯ ಸರ್ಕಾರ ಎಷ್ಟರ ಮಟ್ಟಿಗೆ ನೀಡಿದೆ ಎಂಬುದನ್ನು ಹೇಳಿ. ಸುಖಾ ಸುಮ್ಮನೆ ಕೇಂದ್ರ ಸರ್ಕಾರದ ಮೇಲೆ ಇಲ್ಲಾ ಸಲ್ಲದ ಆರೋಪ ಮಾಡಬೇಡಿ. ಬದಲಾಗಿ, ರಾಜ್ಯಕ್ಕೆ ಬೇಕಾದ ಅನುದಾನದ ಬಗ್ಗೆ ಫಾಲೋ ಅಪ್ ಮಾಡುವ ಕೆಲಸ ಮಾಡಿ. ನಾವು ನಿಮ್ಮೊಂದಿಗೇ ಇದ್ದೇವೆ, ರಾಜ್ಯದ ಹಿತಾಸಕ್ತಿಗೇ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ಸಂಸದರು ಹಾಗೂ ಸಚಿವರು ಹೇಳಿದ್ದಾರೆ.

ಯಾವುದೇ ಬಾಕಿ ಉಳಿಸಿಲ್ಲ: ನಿರ್ಮಲಾ

ಕೇಂದ್ರ ಸರಕಾರ ಬಾಕಿ ಹಣ ನೀಡಿಲ್ಲ ಎಂಬ ಸಿಎಂ ಆರೋಪಕ್ಕೆ ಸಿಎಂ ನೇತೃತ್ವದ ಸಭೆಯಲ್ಲೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ವಿವರಣೆ ನೀಡಿದರು. ಕೇಂದ್ರ ಸರ್ಕಾರ ನಮಗೆ ಅನ್ಯಾಯ ಮಾಡಿದೆ, ನಮ್ಮ ಹಣ ನಮಗೆ ನೀಡಿಲ್ಲ, GST ದುಡ್ಡು ನಮಗೆ ಸೇರಿಲ್ಲ ಅಂತ ಎಲ್ಲರೂ ಹೇಳಿದ್ದೀರಿ. ಬರ ಪರಿಹಾರದ ಹಣ ನೀಡಿಲ್ಲ ಅಂತ ಮಾಧ್ಯಮದ ಮುಂದೆ ದಿನಂಪ್ರತಿ ಹೇಳಿದ್ದೀರಿ. ಆದರೆ ನಾವು ಯಾವುದೇ ಹಣ ಬಾಕಿ ಉಳಿಸಿಲ್ಲ. ರಾಜ್ಯಕ್ಕೆ ಪೂರಕವಾಗಿ ಹಣ ಬಿಡುಗಡೆ ಮಾಡಿದ್ದೇವೆ ಎಂದು ನಿರ್ಮಲಾ ಹೇಳಿದರು.

ಬರ ಪರಿಹಾರ ಅಂತ 18 ಸಾವಿರ ಕೋಟಿ ಕೇಳಿದಾಗಲೂ ಸಹ ನಾವು ಅಗತ್ಯ ಹಣ ಬಿಡುಗಡೆ ಮಾಡಿದ್ದೇವೆ. GST ಹಣ ಸಹಿತ ನಾವು ನೀಡಿದ್ದೇವೆ. ನಿಮಗೆ ಪಕ್ಕಾ ಅಂಕಿ ಅಂಶ ಬೇಕಾದರೆ, ನಮ್ಮ ಜೊತೆ ಚರ್ಚೆಗೆ ಬನ್ನಿ. ಎಲ್ಲಾ ಅಂಕಿ ಅಂಶ ಸಮೇತ ನಾನು ನೀಡಬಲ್ಲೆ. ಅನವಶ್ಯಕವಾಗಿ ಕೇಂದ್ರದ ಮೇಲೆ ವಾಗ್ದಾಳಿ ಮಾಡಬೇಡಿ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ರಾಜ್ಯದ ಸಹಕಾರವೇ ಪ್ರಮುಖ: ಜೋಶಿ

ಕೇಂದ್ರ ಸರ್ಕಾರದಿಂದ ನಮಗೆ ಬರಬೇಕಾದದ್ದು ಬಹಳಷ್ಟಿದೆ ಅಂತ ಯಾವಾಗಲೂ ಹೇಳೋದು ಸರಿಯಲ್ಲ. ರೈಲ್ವೆ ಯೋಜನೆ ಬಾಕಿ ಇದೆ ಅಂತ ಆರೋಪ ಮಾಡೋದು ಒಳ್ಳೇದಲ್ಲ. ಅದಕ್ಕೆ ಬೇಕಾದ ಸೌಕರ್ಯ ಒದಗಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಈ ವರ್ಷದ ಬಜೆಟ್‌ನಲ್ಲಿ 7524 ಕೋಟಿ ರೂ.ಗಳನ್ನ ರಾಜ್ಯದ ರೈಲ್ವೆ ಅಭಿವೃದ್ಧಿಗೆ ಮೀಸಲು ಇಡಲಾಗಿದೆ. ಹುಬ್ಬಳ್ಳಿ -ಅಂಕೋಲಾ , ತುಮಕೂರು – ಚಿತ್ರದುರ್ಗ, ಧಾರವಾಡ- ಬೆಳಗಾವಿ ಸೇರಿದಂತೆ ಹಲವು ಯೋಜನೆ ಬಾಕಿ ಇದೆ. ಈ ಯೋಜನೆಗಳು ಬಾಕಿ ಉಳಿಯುವುದಕ್ಕೆ ಕೇವಲ ಕೇಂದ್ರ ಸರ್ಕಾರ ಮಾತ್ರ ಕಾರಣ ಅಲ್ಲ ಎಂದು ಸಂಸದ ಪ್ರಹ್ಲಾದ್‌ ಜೋಶಿ (Prahlad Joshi) ಗುಡುಗಿದರು.

ರೈಲ್ವೆ ಯೋಜನೆಯಲ್ಲಿ ರಾಜ್ಯ ಸರ್ಕಾರದ ಪಾತ್ರ ಸಹ ಪ್ರಮುಖವಾಗಿರಲಿದೆ. ರಾಜ್ಯ ಸರ್ಕಾರ ಫಾರೆಸ್ಟ್ ಕ್ಲಿಯರೆನ್ಸ್, ಲ್ಯಾಂಡ್ ಅಕ್ವಿಸಿಶನ್ ನೀಡಿದ್ರೆ ಮಾತ್ರ ಇವೆಲ್ಲಾ ಸಾಧ್ಯ. ಆದ್ರೆ ರಾಜ್ಯ ಸರ್ಕಾರ ಈ ಬಗ್ಗೆ ಪ್ರಸ್ತಾಪ ಮಾಡುವುದೇ ಇಲ್ಲ. ರೈಲ್ವೆ ಯೋಜನೆ ಬಂದಿಲ್ಲ, ಹೈವೇ ಆಗಿಲ್ಲ ಅಂತ ಹೇಳುವ ಕೆಲಸ ಮಾಡ್ತಿದೆ. ಈ ಎಲ್ಲಾ ಯೋಜನೆ ಸಂಪೂರ್ಣವಾಗಿ ರಾಜ್ಯಕ್ಕೆ ದೊರೆಯಬೇಕು ಅಂದ್ರೆ ನಿಮ್ಮ ಸಹಕಾರ ಸಹ ಅಗತ್ಯ. ನೀವು ನಮ್ಮೊಂದಿಗೆ ಕೆಲಸ ಮಾಡಿದರೆ, ಖಂಡಿತವಾಗಿಯೂ ರಾಜ್ಯದ ಹಿತಾಸಕ್ತಿ ನಾವು ಕಾಪಾಡಬಹುದು ಎಂದು ಪ್ರಹ್ಲಾದ್ ಜೋಶಿ ನುಡಿದಿದ್ದಾರೆ.

ಇದನ್ನೂ ಓದಿ: Kempegowda Jayanti: ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತರಾದವರಲ್ಲ; ಸಿದ್ದರಾಮಯ್ಯ

Continue Reading
Advertisement
Gold Rate Today
ವಾಣಿಜ್ಯ9 mins ago

Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ; ಬೆಂಗಳೂರಿನಲ್ಲಿ ಎಷ್ಟಿದೆ ದರ?

Sonu Srinivas Gowda harassed by darshan fans
ಸ್ಯಾಂಡಲ್ ವುಡ್13 mins ago

Sonu Srinivas Gowda: ದರ್ಶನ್‌ ಬಗ್ಗೆ ಮಾತನಾಡಿಲ್ಲ ಎಂದು ಸೋನು ಶ್ರೀನಿವಾಸ್ ಗೌಡಗೆ ಕಿರುಕುಳ ಕೊಟ್ಟ ದಚ್ಚು ಫ್ಯಾನ್ಸ್‌!

Paris Olympics 2024
ಕ್ರೀಡೆ33 mins ago

Paris Olympics 2024: ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುವ ಆ್ಯತ್ಲೀಟ್‌ಗಳಿಗೆ ಶುಭ ಕೋರಿದ ರಾಷ್ಟ್ರಪತಿ ಮುರ್ಮು

haveri accident tt
ಪ್ರಮುಖ ಸುದ್ದಿ53 mins ago

Haveri Accident: ಪೂಜೆ ಮಾಡಿಸಿಕೊಂಡು ಬಂದ ಹೊಸ ವಾಹನ 13 ಜನರ ಬಲಿ ಪಡೆಯಿತು!

Rohit Sharma
ಕ್ರೀಡೆ58 mins ago

Rohit Sharma: ಕೊಹ್ಲಿ, ಧೋನಿ ಬಳಿಕ ನಾಯಕನಾಗಿ ವಿಶೇಷ ದಾಖಲೆ ಬರೆದ ರೋಹಿತ್​

Payal Ghosh says she did not had physical relationship with anyone in past 9 years
ಬಾಲಿವುಡ್1 hour ago

Payal Ghosh: 9 ವರ್ಷ ಆಯ್ತು ಯಾರ ಜತೆಗೂ ಮಲಗಿಲ್ಲ, ಇರ್ಫಾನ್‌ ಪಠಾಣ್‌ನೇ ಕೊನೆ ಎಂದ ನಟಿ ಪಾಯಲ್‌ ಘೋಷ್‌ !

Delhi Rain
ದೇಶ2 hours ago

Delhi Rain: ಕುಸಿದು ಬಿದ್ದ ದಿಲ್ಲಿ ಏರ್‌ಪೋರ್ಟ್‌ ಛಾವಣಿ- ಒಬ್ಬ ಬಲಿ, 5 ಮಂದಿಗೆ ಗಂಭೀರ ಗಾಯ; ಕಾರುಗಳು ನಜ್ಜುಗುಜ್ಜು

ಕ್ರಿಕೆಟ್2 hours ago

Rohit Sharma: ತಂಡ ಫೈನಲ್​ ಪ್ರವೇಶಿಸಿದ ಖುಷಿಯಲ್ಲಿ ಕಣ್ಣೀರು ಹಾಕಿದ ರೋಹಿತ್​; ವಿಡಿಯೊ ವೈರಲ್​

rain news bhagamandala
ಪ್ರಮುಖ ಸುದ್ದಿ2 hours ago

Rain News: ಅಬ್ಬರಿಸುತ್ತಿರುವ ಮುಂಗಾರು: 3 ಜಿಲ್ಲೆಗೆ ರೆಡ್‌ ಅಲರ್ಟ್‌, ಇನ್ನೂ ನಾಲ್ಕು ದಿನ ಜೋರು ಮಳೆ

Actor Darshan incident Naga Shaurya support
ಟಾಲಿವುಡ್2 hours ago

Actor Darshan: ದರ್ಶನ್‌ ಅಣ್ಣ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ ಎಂದ ಟಾಲಿವುಡ್‌ ಸ್ಟಾರ್‌ ನಾಗ ಶೌರ್ಯ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ16 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ17 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು19 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ23 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 weeks ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌