Site icon Vistara News

Suraj Revanna Case:  ಸಲಿಂಗ ಕಾಮ ಆರೋಪ; ಸಂತ್ರಸ್ತನ ವೈದ್ಯಕೀಯ ಪರೀಕ್ಷೆ ಬಳಿಕ ಇಂದೇ ಅರೆಸ್ಟ್‌ ಆಗ್ತರಾ ಸೂರಜ್‌ ರೇವಣ್ಣ?

Suraj Revanna Case

Suraj Revanna Case

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್‌.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಪ್ರಜ್ವಲ್‌ ಸಹೋದರ, ವಿಧಾನ ಪರಿಷತ್ ಸದಸ್ಯ  ಸೂರಜ್‌ ರೇವಣ್ಣ (Suraj Revanna Case) ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ (Unnatural sexual abuse) ಆರೋಪಗಳು ಕೇಳಿ ಬಂದಿದೆ. ಸದ್ಯ ಸಂತ್ರಸ್ತನನ್ನು ಪೊಲೀಸರು ಬೆಂಗಳೂರಿಗೆ ಕರೆ ತಂದಿದ್ದು, ಇಂದು (ಜೂನ್‌ 23) ವೈದ್ಯಕೀಯ ಪರೀಕ್ಷೆ ನಡೆಯಲಿದೆ.

ತನ್ನ ಮೇಲೆ ಸೂರಜ್‌ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿರುವ ಸಂತ್ರಸ್ತನಿಗೆ ಬೆಂಗಳೂರಿನಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಶನಿವಾರ ತಡರಾತ್ರಿ 2 ಗಂಟೆಗೆ ಹೊಳೆನರಸೀಪುರ ಪೊಲೀಸರು ಸಂತ್ರಸ್ತನನ್ನು ಹಾಸನದಿಂದ ಬೌರಿಂಗ್ ಆಸ್ಪತ್ರೆಗೆ ಕರೆ ತಂದಿದ್ದಾರೆ. ಸಂತ್ರಸ್ತನ ಮನವಿ ಮೇರೆಗೆ ಹಾಸನದ ಬದಲು ಬೆಂಗಳೂರಿನಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ.

ಸಂತ್ರಸ್ತ ಲೈಂಗಿಕ ಕ್ರಿಯೆ ನಡೆಸಲು ಸಮರ್ಥನಾಗಿದ್ದಾನ ಎನ್ನುವ ಬಗ್ಗೆ ವೈದ್ಯರು ಪರೀಕ್ಷೆ ಮಾಡಲಿದ್ದಾರೆ. ಬಿಪಿ, ಶುಗರ್, ಇಸಿಜಿ, ದೇಹದ ಮೇಲೆ ಕಚ್ಚಿರುವ ಕಲೆಗಳ ಬಗ್ಗೆ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ ಹಿರಿಯ ವೈದ್ಯರ ಸಮ್ಮುಖದಲ್ಲಿ ಪರೀಕ್ಷೆ ನಡೆಯಲಿದೆ.

ತೀವ್ರ ವಿಚಾರಣೆ

ಪ್ರಕರಣದ ಸಂಬಂಧ ಇತ್ತ ಹಾಸನದಲ್ಲಿ ಸೂರಜ್‌ ರೇವಣ್ಣ ಅವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳ ಪಡಿಸಿದರು. ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ತಡರಾತ್ರಿವರೆಗೂ ವಿಚಾರಣೆ ನಡೆಯಿತು. ಸಕಲೇಶಪುರ ಡಿವೈಎಸ್‌ಪಿ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಭಾನುವಾರ ಮುಂಜಾನೆ 4 ಗಂಟೆವರೆಗೂ ಸೂರಜ್‌ನನ್ನು ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು. ಬಳಿಕ ಹಾಸನ ನಗರದ ಸೆನ್ ಠಾಣೆಯಲ್ಲೇ ಸೂರಜ್‌ಗೆ ಮಲಗಲು ವ್ಯವಸ್ಥೆ ಮಾಡಲಾಯಿತು. ಇಂದು ಕೂಡ ವಿಚಾರಣೆ ಮುಂದುವರಿಯಲಿದೆ.

ಬಂಧನ ಸಾಧ್ಯತೆ

ಸೂರಜ್‌ ವಿರುದ್ಧ ಕೇಳಿ ಬಂದ ಅಸಹಜ ಲೈಂಗಿಕ ದೌರ್ಜನ್ಯ ಮತ್ತು ಸಂತ್ರಸ್ತನ ವಿರುದ್ಧ ಸೂರಜ್‌ ಆಪ್ತ ದಾಖಲಿಸಿದ ಬ್ಲ್ಯಾಕ್‌ಮೇಲ್‌ ಆರೋಪದ ಬಗ್ಗೆಯೂ ವಿಚಾರಣೆ ನಡೆಸಲಾಗುತ್ತಿದೆ. ಇನ್ನು ಸೂರಜ್ ವಿರುದ್ಧ ದೂರು ನೀಡಿರುವ ಸಂತ್ರಸ್ತನ ವೈದ್ಯಕೀಯ ಪರೀಕ್ಷೆಯ ಪ್ರಾಥಮಿಕ ವರದಿ ವರದಿ ಆಧರಿಸಿ ಸೂರಜ್‌ ಬಂಧನದ ಬಗ್ಗೆ ಪೊಲೀಸರು ತೀರ್ಮಾನಿಸಲಿದ್ದಾರೆ.

ಸೂರಜ್ ವಿರುದ್ಧ ಐಪಿಸಿ ಸೆಕ್ಷೆನ್ 377, 342, 506 ಅಡಿ ಕೇಸ್ ದಾಖಲಾಗಿದ್ದು, ಬಂಧನ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ. ಸೂರಜ್ ಬಂಧನವಾದರೆ ವೈದ್ಯಕೀಯ ಪರೀಕ್ಷೆ ಬಳಿಕ ನ್ಯಾಯಾಧೀಶರ ಎದುರು ಪೊಲೀಸರು ಹಾಜರುಪಡಿಸಲಿದ್ದಾರೆ.

ಇದನ್ನೂ ಓದಿ: Suraj Revanna Case: ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎಂದ ಸೂರಜ್‌ ರೇವಣ್ಣ

ಏನಿದು ಪ್ರಕರಣ?

ಲೋಕಸಭಾ ಚುನಾವಣಾ ವೇಳೆ ಅರಕಲಗೂಡು ತಾಲೂಕಿನ ಜೆಡಿಎಸ್ ಕಾರ್ಯಕರ್ತನಾಗಿದ್ದ ಸಂತ್ರಸ್ತನನ್ನು ಪರಿಚಯ ಮಾಡಿಕೊಂಡು ಎಂಎಲ್‌ಸಿ ಸೂರಜ್‌ ಫೋನ್‌ ನಂಬರ್‌ ಪಡೆದುಕೊಂಡಿದ್ದರು. ಬಳಿಕ ಮನೆಗೆ ಕರೆಸಿ ದೌರ್ಜನ್ಯ ನಡೆಸಿದ್ದಾಗಿ ಸಂತ್ರಸ್ತ ಹೇಳಿಕೆ ನೀಡಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.

Exit mobile version