ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಎಲ್‌ಸಿ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ಹೊಳೆನರಸೀಪುರ ಟೌನ್‌ನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸೂರಜ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಿದೆ.
ಸದ್ಯ ಒಂದು ಪ್ರಕರಣದಲ್ಲಿ ಜಾಮೀನು ಮಂಜೂರು ಆಗಿದ್ದು, ಇನ್ನೊಂದು ಪ್ರಕರಣದ ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕಣದಲ್ಲಿ ಸೂರಜ್‌ಗೆ ಷರತ್ತು ಬದ್ಧ ಜಾಮೀನನ್ನು ನ್ಯಾಯಾಲಯ ನೀಡಿದೆ.
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 3ರಂದು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತ್ತು. ಸಿಐಡಿ ಕಸ್ಟಡಿ ಮುಕ್ತಾಯಗೊಂಡ ನಂತರ 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಲಾಗಿತ್ತು. ಇದರಿಂದ ಸೂರಜ್ ರೇವಣ್ಣ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದರು. ಇದೀಗ ಜಾಮೀನು ಮಂಜೂರು ಆಗಿದ್ದರೂ ಸೂರಜ್‌ಗೆ ಬಿಡುಗಡೆ ಭಾಗ್ಯವಿಲ್ಲ. ಯಾಕೆಂದರೆ ಮತ್ತೊಂದು ಪ್ರಕರಣದಲ್ಲಿ ತೀರ್ಪು ಕಾಯ್ದಿರಿಸಿದ ಹಿನ್ನೆಲೆಯಲ್ಲಿ ಸದ್ಯಕ್ಕೆ ಜೈಲೇ ಗತಿಯಾಗಿದೆ.
ಜೂನ್ 23 ರಂದು ಬಂಧನವಾಗಿದ್ದ ಸೂರಜ್ ರೇವಣ್ಣ ಪರಪ್ಪನ ಅಗ್ರಹಾರ ಸೇರಿದ್ದರು. ಪ್ರಕರಣ ನಡೆದು 29 ದಿನಗಳ ನಂತರ ಈಗ ಸೂರಜ್‌ಗೆ ಜಾಮೀನು ಸಿಕ್ಕಿದೆ. ಸೂರಜ್ ವಿರುದ್ಧ ಇಬ್ಬರು ದೂರು ಸಲ್ಲಿಸಿದ್ದರು. ಇದರಲ್ಲಿ ಒಂದು ಕೇಸ್‌ನಲ್ಲಿ ಮಾತ್ರ ಜಾಮೀನು ಮಂಜೂರಾಗಿದೆ.
ಇದನ್ನೂ ಓದಿ | Accident News : ಭಾರಿ ಮಳೆಗೆ ಉರುಳಿ ಬಿದ್ದ ಮರ; ಬೈಕ್‌ನಲ್ಲಿ ತೆರಳುತ್ತಿದ್ದ ಹೆಸ್ಕಾಂ ನೌಕರರ ದುರ್ಮರಣ
ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದವರಿಗೆ ಬ್ರೈನ್ ವಾಶ್; ಮತಾಂತರಕ್ಕೆ ಯತ್ನಿಸಿದ ಇಬ್ಬರು ಅರೆಸ್ಟ್
ಬಳ್ಳಾರಿ: ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರಿಗೆ ಮುಸ್ಲಿಂ ಧರ್ಮಕ್ಕೆ ಮತಾಂತರ (Forced Conversion) ಆಗುವಂತೆ ಒತ್ತಾಯಿಸಲಾಗಿದೆ. ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬಳ್ಳಾರಿಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ಕಳೆದ ಜುಲೈ 18 ರಂದು ಘಟನೆ ನಡೆದಿದೆ.
ಯಾತ್ರಾತ್ರಿಗಳಿಬ್ಬರು ಸಿರುಗುಪ್ಪ ರಾಷ್ಟ್ರೀಯ ಹೆದ್ದಾರಿ ಮೂಲಕ ಮಂತ್ರಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ತೆಕ್ಕಲಕೋಟೆ ಪಟ್ಟಣದ ಹುಸೇನ್ ಭಾಷಾ (44) ಹಾಗೂ ಸಾಯಿ ಬಾಬಾ (24) ಎಂಬುವವರು ಮತಾಂತರಕ್ಕೆ ಯತ್ನಿಸಿದ್ದರು ಎಂಬ ಆರೋಪವಿದೆ.
ಇದನ್ನೂ ಓದಿ: Fraud Case : ಮಸಾಜ್ ಥೆರಪಿಸ್ಟ್‌ಗೆ ಬ್ಲ್ಯಾಕ್‌ಮೇಲ್ ಮಾಡಿ ಲಕ್ಷ ಲೂಟಿ ಮಾಡಿದ ನಕಲಿ ಪೊಲೀಸ್
ಕೇಸರಿ ಧ್ವಜ ಹಿಡಿದುಕೊಂಡು ಮಂತ್ರಾಲಯಕ್ಕೆ ಪಾದಯಾತ್ರೆ ಮಾಡುತ್ತಿದ್ದ ಭಕ್ತರನ್ನು ನಿಲ್ಲಿಸಿ, ಕುರಾನ್ ಹಾಗೂ ಮುಸ್ಲಿಂ ಧರ್ಮ ಶ್ರೇಷ್ಠ ಎನ್ನುವಂತೆ ಹೇಳಿ ಮತಾಂತರಕ್ಕೆ ಯತ್ನಿಸಿದ್ದಾರೆ. ಸದ್ಯ ಗಾದಿಲಿಂಗಪ್ಪ ಎಂಬವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತಾಂತರ ಮಾಡಲು ಪ್ರಯತ್ನ ಮಾಡಿದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ತೆಕ್ಕಲಕೋಟೆ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ತೆಕ್ಕಲಕೋಟೆ ಠಾಣೆಯಲ್ಲಿ ವಿಡಿಯೋ ದಾಖಲೆ ಆಧಾರದ ಮೇಲೆ ಮತಾಂತರ ಯತ್ನದ ದೂರು ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ. ಆದರೆ ಯಾತ್ರಾತ್ರಿಗಳು ಯಾರೆಂದು ತಿಳಿದು ಬಂದಿಲ್ಲ.