ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಡಾ.ಸೂರಜ್ ರೇವಣ್ಣ (Suraj Revanna Case) ಆಪ್ತ, ನಾಪತ್ತೆಯಾಗಿರುವ ಶಿವಕುಮಾರ್ ವಿರುದ್ಧವೂ ಸಂತ್ರಸ್ತ ದೂರು ದಾಖಲಿಸಿದ್ದಾರೆ. ನನಗೆ ಆಗಿರುವ ಅನ್ಯಾಯದ ಬಗ್ಗೆ ಶಿವಕುಮಾರ್ ಬಳಿ ಹೇಳಿದ್ದೆ, ನನಗೆ ದೈಹಿಕ ಹಿಂಸೆ ಆಗಿದ್ದರೂ ಶಿವಕುಮಾರ್ ಆಸ್ಪತ್ರೆಗೆ ಹೋಗಲು ಬಿಟ್ಟಿರಲಿಲ್ಲ ಎಂದು ಸಂತ್ರಸ್ತ ಆರೋಪಿಸಿದ್ದಾರೆ.
ಪ್ರಕರಣದಲ್ಲಿ ಎರಡನೇ ಆರೋಪಿಯಾಗಿ ಸೂರಜ್ ಆಪ್ತ ಶಿವಕುಮಾರ್ ಹೆಸರು ಸೇರ್ಪಡೆ ಮಾಡಲಾಗಿದೆ. ಶಿವಕುಮಾರ್ ಹೊಳೆನರಸೀಪುರ ತಾಲೂಕಿನ ಹನುಮನಹಳ್ಳಿ ಗ್ರಾಮದವನು. ಸೂರಜ್ ರೇವಣ್ಣ ವಿರುದ್ಧ ಸಂತ್ರಸ್ತ ದೂರು ನೀಡಿದ ಬಳಿಕ, ಸಂತ್ರಸ್ತನ ವಿರುದ್ಧ ದೂರು ಶಿವಕುಮಾರ್ ನಾಪತ್ತೆಯಾಗಿದ್ದಾನೆ.
ಸೂರಜ್‌ಗೆ 5 ಕೋಟಿ ರೂ. ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು ಸಂತ್ರಸ್ತನ ವಿರುದ್ಧ ಶಿವಕುಮಾರ್ ದೂರು ನೀಡಿದ್ದ. ಬಳಿಕ ಶಿವಕುಮಾರ್ ಹಾಗೂ ಸಂತ್ರಸ್ತ ಇಬ್ಬರೂ ಸೇರಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂಬ ಆರೋಪಗಳು ಕೇಳಿಬಂದವು. ಇದಾದ ನಂತರ ಶಿವಕುಮಾರ್ ನಾಪತ್ತೆಯಾಗಿದ್ದಾನೆ.
ಇದನ್ನೂ ಓದಿ | Actor Darshan: ಇನ್ಮುಂದೆ ದರ್ಶನ್ ಕೈದಿ ನಂಬರ್ ನನ್ನ ಗಾಡಿ ಮೇಲೆ ಇರತ್ತೆ ಎಂದು ಗಳಗಳನೇ ಅತ್ತ ಅಭಿಮಾನಿ!
ನನಗೆ ಆಗಿರುವ ಅನ್ಯಾಯದ ಬಗ್ಗೆ ಶಿವಕುಮಾರ್ ಬಳಿ ಹೇಳಿದ್ದೆ. ನನಗೆ ದೈಹಿಕ ಹಿಂಸೆ ಆಗಿದ್ದರೂ ಶಿವಕುಮಾರ್ ಆಸ್ಪತ್ರೆಗೆ ಹೋಗಲು ಬಿಟ್ಟಿರಲಿಲ್ಲ. ಅವರ ಫೋನ್‌ನಿಂದ ಸೂರಜ್ ರೇವಣ್ಣ ಜತೆ ಮಾತನಾಡಿಸಿದರು. ಎರಡು ಕೋಟಿ ಹಣ, ಕೆಲಸ ಕೊಡಿಸುವುದಾಗಿ ಹೇಳಿದ್ದರು. ನಾನು ಒಪ್ಪದಿದ್ದಾಗ ನೀನು ಯಾರ ಬಳಿಯಾದರೂ ಬಾಯಿ ಬಿಟ್ಟರೆ ನಿನ್ನನ್ನು ಮುಗಿಸುತ್ತಾರೆ ಎಂದು ಶಿವಕುಮಾರ್ ಕೊಲೆ ಬೆದರಿಕೆ ಹಾಕಿದ್ದ. ಶಿವಕುಮಾರ್ ನನ್ನನ್ನು ಮನೆಗೆ ಹೋಗಲು ಬಿಡದೆ ಲಾಡ್ಜ್‌ನಲ್ಲಿ ಕೂಡಿ ಹಾಕಿದ್ದ. ನನ್ನಿಂದಲೇ 1000 ರೂ. ಪಡೆದು ಊಟದ ವ್ಯವಸ್ಥೆ ಮಾಡಿದ್ದ. ನಂತರ ಅಲ್ಲಿಂದ ತಪ್ಪಿಸಿಕೊಂಡು ಸಂಬಂಧಿಕರ ಮನೆಗೆ ಹೋದೆ. ಹೀಗಾಗಿ ಶಿವಕುಮಾರ್ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಂಎಲ್‌ಸಿ ಸೂರಜ್ ರೇವಣ್ಣನನ್ನು ಅಪ್ಪಿಕೊಳ್ಳಲಿದೆ ಮತ್ತೊಂದು ಸಲಿಂಗಕಾಮ ಕೇಸ್
ಬೆಂಗಳೂರು: ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ (Homosexuality, abnormal sexual assault, physical abuse) ಪ್ರಕರಣದಲ್ಲಿ ಬಂಧನವಾಗಿರುವ ಎಂಎಲ್‌ಸಿ ಸೂರಜ್ ರೇವಣ್ಣಗೆ (Suraj Revanna Case) ಮತ್ತೊಂದು ಸಂಕಷ್ಟ ಎದುರಾಗುತ್ತಿದೆ. ಇಂದು ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಅಂತಹದೇ ಕೇಸ್ ದಾಖಲು ಮಾಡುವ ಸಾಧ್ಯತೆ ಇದೆ.
ಸೂರಜ್‌ಗೆ ಮೊದಲ ಪ್ರಕರಣದಲ್ಲಿ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹೀಗಾಗಿ ಸೂರಜ್ ಪರಪ್ಪನ ಅಗ್ರಹಾರ ಸೇರಿದ್ದಾರೆ. ಈ ನಡುವೆ ಸಿಐಡಿ ಕಚೇರಿಯಲ್ಲಿ ಮತ್ತೊಬ್ಬ ಸಂತ್ರಸ್ತನಿಂದ ಇಂದು ಕೇಸ್ ದಾಖಲು ಸಾಧ್ಯತೆ ಇದೆ. ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಅಡಿಯಲ್ಲಿ ಕೇಸ್ ದಾಖಲಾಗುತ್ತಿದೆ.
ಸಲಿಂಗ ಕಾಮ ಪ್ರಕರಣದಲ್ಲಿ ಜೈಲುಪಾಲಾಗಿರುವ ಸೂರಜ್ ರೇವಣ್ಣನನ್ನು ಕಳೆದ ರಾತ್ರಿ ಎಂಟು ಗಂಟೆಯ ಸುಮಾರಿಗೆ ಪೊಲೀಸರು ಕಂರೆತಂದಿದ್ದು, ಪರಪ್ಪನ ಅಗ್ರಹಾರ ಜೈಲಿನ ಕ್ವಾರಂಟೈನ್ ಬ್ಯಾರಕ್‌ಗೆ ಶಿಫ್ಟ್ ಮಾಡಿದ್ದಾರೆ. ಕ್ವಾರಂಟೈನ್ ಸೆಲ್‌ನಲ್ಲಿ ಸೆರೆವಾಸ ಅನುಭವಿಸುತ್ತಿರುವ ಸೂರಜ್ ರೇವಣ್ಣಗೆ ಎಲ್ಲ ಕೈದಿಗಳಿಗೆ ನೀಡುವ ಊಟವನ್ನು ಸಿಬ್ಬಂದಿ ನೀಡಿದ್ದರು.
ರಾತ್ರಿ ಊಟ ಮಾಡಿ 12 ಗಂಟೆಯ ಸುಮಾರಿಗೆ ಸೂರಜ್ ನಿದ್ರೆಗೆ ಜಾರಿದ್ದರು. ಬೆಳಿಗ್ಗೆ ಆರು ಗಂಟೆಯ ಸುಮಾರಿಗೆ ನಿದ್ರೆಯಿಂದ ಎದ್ದು ನಿತ್ಯ ಕರ್ಮ ಮುಗಿಸಿ ಕಾಫಿ ಸೇವನೆ ಮಾಡಿದ್ದು, ಜೈಲಿನಲ್ಲಿದ್ದ ನ್ಯೂಸ್ ಪೇಪರ್ ಓದಿದ್ದಾರೆ ಎಂದು ಗೊತ್ತಾಗಿದೆ. ನ್ಯೂಸ್ ಪೇಪರ್‌ನಲ್ಲಿನ ತನ್ನ ಮೇಲಿನ ಆರೋಪದ ಸುದ್ದಿ ಓದಿದ ಸೂರಜ್, ಜೈಲು ಸಿಬ್ಬಂದಿ ಜೊತೆಗಾಗಲೀ ಸಹಕೈದಿಗಳ ಜೊತೆಗಾಗಲೀ ಮಾತನಾಡದೆ ಮೌನಕ್ಕೆ ಶರಣಾಗಿದ್ದಾರೆ.
ಇದನ್ನೂ ಓದಿ | Actor Darshan: ಪರಪ್ಪನ ಅಗ್ರಹಾರದಿಂದ ದರ್ಶನ್ ಬೇರೆ ಜೈಲಿಗೆ ಶಿಫ್ಟ್? ಇಂದು ಜಾಮೀನು ಅರ್ಜಿ ಸಲ್ಲಿಕೆ
ರಾತ್ರಿ ಸೂರಜ್ ರೇವಣ್ಣನನ್ನು ಪೊಲೀಸರು ಜೈಲಿಗೆ ತಡವಾಗಿ ಕರೆತಂದ ಹಿನ್ನೆಲೆಯಲ್ಲಿ, ಬೆಳಿಗ್ಗೆ 10 ಗಂಟೆಯ ಬಳಿಕ ಸೂರಜ್‌ಗೆ ವಿಚಾರಣಾಧೀನ ಕೈದಿ ನಂಬರ್ ಕೊಡಲಾಗುತ್ತದೆ. ಮಧ್ಯಾಹ್ನ ಅಥವಾ ಸಂಜೆ ವೇಳೆ ಬಾಡಿ ವಾರಂಟ್ ಮೇಲೆ ಮತ್ತೆ ಸಿಐಡಿ ಕಸ್ಟಡಿಗೆ ನೀಡಲಾಗುತ್ತದೆ. ಸೂರಜ್‌ನನ್ನು ಸಿಐಡಿ ಕಸ್ಟಡಿಗೆ ಪಡೆದು ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ.