Site icon Vistara News

Surathkal Murder | ಗೃಹ ಸಚಿವ ಆರಗ ಖಂಡನೆ; ಶಾಂತಿ ಕಾಪಾಡುವಂತೆ ಮನವಿ

ಆರಗ ಜ್ಞಾನೇಂದ್ರ

ಬೆಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್‌ನಲ್ಲಿ ಗುರುವಾರ ರಾತ್ರಿ ನಡೆದ ಫಾಜಿಲ್‌ (೨೩) ಎಂಬ ಯುವಕನ ಹತ್ಯೆಯನ್ನು (Surathkal Murder ) ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರವಾಗಿ ಖಂಡಿಸಿದ್ದಾರೆ.

ಸುರತ್ಕಲ್‌ನ ಮಂಗಲಪೇಟೆಯಲ್ಲಿ ನಡೆದ ಅಮಾನುಷ ಕೊಲೆಯನ್ನು ನಾನು ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ದುಷ್ಕೃತ್ಯ ನಡೆಸಿದವರನ್ನು ಬಂಧಿಸಿ, ಕಾನೂನಿನ ಕ್ರಮ ಜರುಗಿಸಲು ಪೊಲೀಸರು ಪೂರ್ಣ ಸ್ವಾತಂತ್ರ್ಯ ಹೊಂದಿದ್ದು, ಜನತೆ ಶಾಂತಿಯಿಂದ ಸಹಕರಿಸಬೇಕು ಎಂದು ಕೋರಿದ್ದಾರೆ.

ಈ ಹತ್ಯೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ಮಾತನಾಡಿ ಮಾಹಿತಿ ಸಂಗ್ರಹಿಸಿರುವ ಅವರು, ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಆಗತ್ಯ ಎಲ್ಲ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ | Surathkal Murder | ಹಳೆಯ ದ್ವೇಷದಿಂದ ಫಾಜಿಲ್‌ ಕೊಲೆ; ಮಂಗಳೂರು ಪೊಲೀಸರ ಮಾಹಿತಿ

Exit mobile version