ಮಂಗಳೂರು: ಸುರತ್ಕಲ್ನಲ್ಲಿ (Surathkal Murder) ಗುರುವಾರ ರಾತ್ರಿ ಹತ್ಯೆಯಾದ ಫಾಜಿಲ್ (೨೩) ಮೃತದೇಹವನ್ನು ಅವರ ನಿವಾಸಕ್ಕೆ ರವಾನಿಸಲು ಕೊನೆಯ ಹಂತದ ಸಿದ್ಧತೆ ನಡೆಯುತ್ತಿದೆ.
ಮಂಗಲಪೇಟೆ ಮಸೀದಿಯಲ್ಲಿ ಅಂತಿಮ ದರ್ಶನದ ಬಳಿಕ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ರಾಜಕೀಯ ಮುಖಂಡರು ಭಾಗವಹಿಸದಂತೆ ಹಾಗೂ ಶಾಂತಿಯುತವಾಗಿ ಅಂತ್ಯಕ್ರಿಯೆಗೆ ಸಹಕರಿಸಲು ಕುಟುಂಬ ಸದಸ್ಯರು ಮನವಿ ಮಾಡಿದ್ದಾರೆ.
ಸುರತ್ಕಲ್ ಹೈವೆಯಿಂದ ಎಂಆರ್ಪಿಎಲ್ ರೋಡ್ಗೆ ಬದಲಿ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಕೃತ್ಯ ನಡೆದ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಕೃತ್ಯ ನಡೆದ ಸ್ಥಳದ ಎದುರಿನ ರಸ್ತೆ ಸಂಪೂರ್ಣ ಬಂದ್ ಮಾಡಲಾಗಿದೆ. ಅಹಿತಕರ ಘಟನೆಗಳು ನಡೆಯದಂತೆ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ | Surathkal Murder | ಸುರತ್ಕಲ್ನಲ್ಲಿ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ
ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳೀಯ ಶಾಲೆ, ಕಾಲೇಜುಗಳಿಗೆ ಇಂದು (ಜುಲೈ ೨೯) ರಜೆ ಘೋಷಿಸಲಾಗಿದೆ. ಹಂತಕರ ಬಗ್ಗೆ ಸಾಕಷ್ಟು ಮಾಹಿತಿ ಸಂಗ್ರಹಿಸಿರುವ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಇದನ್ನೂ ಓದಿ | ದಕ್ಷಿಣ ಕನ್ನಡದಲ್ಲಿ ಮತ್ತೊಂದು ಹತ್ಯೆ: ಸುರತ್ಕಲ್ನಲ್ಲಿ ಮುಸ್ಲಿಂ ಯುವಕನ ಕೊಲೆ