Site icon Vistara News

Surathkal Murder | ಸುರತ್ಕಲ್‌ ಕೊಲೆ ಪ್ರಕರಣ; 4 ಠಾಣೆಗಳ ವ್ಯಾಪ್ತಿಯಲ್ಲಿ ಡಿ.29ರವರೆಗೆ ನಿಷೇಧಾಜ್ಞೆ ಮುಂದುವರಿಕೆ

Surathkal Murder

ಮಂಗಳೂರು: ಸುರತ್ಕಲ್‌ನಲ್ಲಿ ಕಾಟಿಪಳ್ಳದ ಜಲೀಲ್ ಕೊಲೆ ಪ್ರಕರಣ (Surathkal Murder) ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸುರತ್ಕಲ್, ಕಾವೂರು, ಬಜಪೆ ಮತ್ತು ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ವಿಧಿಸಿದ್ದ 144 ಸೆಕ್ಷನ್‌ಅನ್ನು ಡಿ.29ರ ಬೆಳಗ್ಗೆ 6 ಗಂಟೆಯವರೆಗೆ ಮುಂದುವರಿಸಿ ಪೊಲೀಸ್‌ ಇಲಾಖೆ ಆದೇಶ ಹೊರಡಿಸಿದೆ.

ನಿಷೇಧಾಜ್ಞೆ ಸಮಯದಲ್ಲಿ ಸಂಜೆ‌ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಪುರುಷ ಸವಾರರ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದಕ್ಕೆ ಮಹಿಳೆಯರು, 60 ವರ್ಷ ಮೇಲ್ಪಟ್ಟ ಹಿರಿಯರು ಹಾಗೂ 18 ವರ್ಷ ಕೆಳಗಿನ ಮಕ್ಕಳಿಗೆ ವಿನಾಯಿತಿ ಇರಲಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತು ತುರ್ತು ಸಂದರ್ಭದಲ್ಲಿ ಸಂಚಾರಕ್ಕೆ ಯಾವುದೇ ‌ನಿರ್ಬಂಧ ಇಲ್ಲ.

ಇದನ್ನೂ ಓದಿ | Surathkal Murder | ಸುರತ್ಕಲ್‌ನ ಜಲೀಲ್ ಕೊಲೆ ಪ್ರಕರಣ; ಮೂವರ ಬಂಧನ, ಹಿಂದು ಮಹಿಳೆ ಜತೆ ಅಕ್ರಮ ಸಂಬಂಧ ಕೊಲೆಗೆ ಕಾರಣ?

Exit mobile version