Site icon Vistara News

Skeletons Found: 5 ಅಸ್ಥಿಪಂಜರ ಪತ್ತೆ ಕೇಸ್‌; ವಿಷ ಸೇವಿಸಿ ಆತ್ಮಹತ್ಯೆ ಶಂಕೆ

Skeletons Found

ಚಿತ್ರದುರ್ಗ: ನಗರದ ಜಗನ್ನಾಥರೆಡ್ಡಿ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ ಪ್ರಕರಣದಲ್ಲಿ (Skeletons Found) ಹಲವು ಅನುಮಾನಗಳು ವ್ಯಕ್ತವಾಗಿವೆ. ಸಾವಿಗೆ ಕಾರಣವೇನು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಕುಟುಂಬದ ಐವರು ಸದಸ್ಯರೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಐವರು ಆತ್ಮಹತ್ಯೆಗೆ ಶರಣಾಗಿದ್ದು, ಡೆತ್ ನೋಟ್ ಅನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. 2019ರಲ್ಲಿ ಡೆತ್ ನೋಟ್ ಬರೆದಿಟ್ಟು ಐವರು ಆತ್ಮಹತ್ಯೆ ಮಾಡಿಕೊಂಡಿದ್ದರು.

ದಡೋಡೆ ಕೇಸ್‌ನಿಂದ ಮನನೊಂದು ಆತ್ಮಹತ್ಯೆ?

ಜಗನ್ನಾಥರೆಡ್ಡಿ ಪುತ್ರ ನರೇಂದ್ರರೆಡ್ಡಿ ವಿರುದ್ಧ ರಾಬರಿ ಕೇಸ್ ಇತ್ತು. 2013ರಲ್ಲಿ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿದ್ದ ನರೇಂದ್ರರೆಡ್ಡಿ, 2013ರಲ್ಲಿ ಬಿಡದಿ ಬಳಿ ವಾಹನ ತಡೆದು ದರೋಡೆ ಮಾಡಿದ ಆರೋಪದಲ್ಲಿ ನರೇಂದ್ರರೆಡ್ಡಿ ಮತ್ತು ಗೆಳೆಯರ ವಿರುದ್ಧ ಕೇಸ್ ದಾಖಲಾಗಿತ್ತು. ನಂತರ ಆತ ದರೋಡೆ ಕೆಲದಿನ ಜೈಲು ಪಾಲಾಗಿದ್ದ. ನರೇಂದ್ರರೆಡ್ಡಿ ವಿರುದ್ಧದ ಕೇಸ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್‌ನಲ್ಲಿ ಉಲ್ಲೇಖವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ | Theft Case : ದೇವರ ಪೂಜೆ ದಿನ ಉಂಡು ಹೋದವರು 21 ಕೆಜಿ ಚಿನ್ನ, ಬೆಳ್ಳಿ ಕೊಂಡೂ ಹೋದರು!

ಊಟದಲ್ಲಿ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಐವರು ತಿಂದ ತಟ್ಟೆಗಳಲ್ಲಿನ ಊಟವನ್ನು ತಿಂದು ಮನೆಯಲ್ಲಿನ ನಾಯಿ ಮೃತಪಟ್ಟ ಹಿನ್ನೆಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಏನಿದು ಪ್ರಕರಣ?

ಚಿತ್ರದುರ್ಗ: ಚಿತ್ರದುರ್ಗದ ಚಳ್ಳಕೆರೆ ಗೇಟ್‌ನಲ್ಲಿರುವ, ಹಳೆ ಬೆಂಗಳೂರು ರಸ್ತೆಯ ಬದಿ ಇರುವ ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಕಂಡುಬಂದಿವೆ. ಚಿತ್ರದುರ್ಗದ ದೊಡ್ಡ ಸಿದ್ದವ್ವನಹಳ್ಳಿಯ ಜಗನ್ನಾಥ್ ರೆಡ್ಡಿ ಎಂಬವರಿಗೆ ಸೇರಿದ ಮನೆ ಇದಾಗಿದೆ. ಇವರು ಪಿಡಬ್ಲ್ಯುಡಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿದ್ದು ನಿವೃತ್ತರಾಗಿದ್ದರು. ಈ ಪ್ರಕರಣ ಪೊಲೀಸರು ಸೇರಿದಂತೆ ಊರಿನವರನ್ನೂ ಬೆಚ್ಚಿ ಬೀಳಿಸಿದೆ. ನಗರದ ನಡುವೆಯೇ ಇದ್ದರೂ ವರ್ಷಗಳಿಂದ ಯಾರ ಗಮನಕ್ಕೂ ಬಾರದಿದ್ದಕ್ಕೆ ಕಾರಣ ಇನ್ನೂ ನಿಗೂಢವಾಗಿದೆ.

ಒಂದೇ ಕುಟುಂಬದ ಐವರು ಸದಸ್ಯರು ಸುಮಾರು 4 ವರ್ಷಗಳ ಹಿಂದೆಯೇ ಮೃತಪಟ್ಟಿರಬಹುದು (Mass death) ಎಂದು ಶಂಕಿಸಲಾಗಿದೆ. ಜಗನ್ನಾಥ ರೆಡ್ಡಿ, ಪತ್ನಿ ಪ್ರೇಮಾ ಹಾಗೂ ಮಗಳು ಮೃತಪಟ್ಟಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಜಗನ್ನಾಥ ರೆಡ್ಡಿಗೆ 3 ಜನ ಗಂಡು ಮಕ್ಕಳು ಹಾಗೂ ಒಬ್ಬರು ಹೆಣ್ಣು ಮಗಳು ಎಂದು ಹೇಳಲಾಗಿದೆ. ಕುಟುಂಬಸ್ಥರಿಗೆ ಗಂಭೀರ ಆರೋಗ್ಯ ಸಮಸ್ಯೆ ಇತ್ತು ಎಂಬ ಮಾಹಿತಿಯಿದೆ.

ಜಗನ್ನಾಥ ರೆಡ್ಡಿಯವರ ಪತ್ನಿ ಅಸ್ವಸ್ಥರಾಗಿದ್ದು , 2 ಕೋಟಿ ಖರ್ಚು ಮಾಡಿ ಚಿಕಿತ್ಸೆ ಕೊಡಿಸಿದ್ದರೂ ಫಲಕಾರಿಯಾಗಿರಲಿಲ್ಲ. ಈ ಮನೆಯವರು ಯಾರನ್ನೂ ಒಳಬಿಟ್ಟುಕೊಳ್ಳುತ್ತಿರಲಿಲ್ಲ. ಬಾಗಿಲು ತೆರೆಯದೇ ಕಿಟಕಿಯಿಂದ ಮಾತಾಡಿಸಿ ಕಳುಹಿಸುತ್ತಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. 2022ರ ಬಳಿಕ ಈ ಮನೆಯವರು ಯಾರಿಗೂ ಕಾಣಿಸಿಕೊಂಡಿಲ್ಲ. ಮನೆಯಲ್ಲಿ ಆಕ್ಸಿಜನ್‌ ಸಿಲಿಂಡರ್‌ ಕೂಡ ಕಂಡುಬಂದಿದೆ.

ಇದನ್ನೂ ಓದಿ | Honey trap : ಉದ್ಯಮಿಯ ಬೆತ್ತಲೆ ವಿಡಿಯೊ ತೆಗೆದು Honey trap; ಮುಸ್ಲಿಂ ಮಹಿಳೆ ಸಹಿತ ಮೂವರ ಸೆರೆ

ಆದರೆ ಈ ಪ್ರಕರಣ ಹೆಚ್ಚಿನ ಕುತೂಹಲ ಗರಿಗೆದರಿಸುವಂತಿದೆ. ಸಿಕ್ಕ ಐದು ಅಸ್ಥಿಪಂಜರಗಳು ಯಾರು ಯಾರದು? ಎಲ್ಲರೂ ಏಕಕಾಲಕ್ಕೆ ಸತ್ತರೇ? ಸಾವಿಗೆ ಆತ್ಮಹತ್ಯೆ ಕಾರಣವೇ? ‌ಸಾವಿಗೆ ಕಾಯಿಲೆ ಅಥವಾ ಅನ್ಯ ಕಾರಣಗಳಿದ್ದಿರಬಹುದೇ? ನಾಲ್ಕಾರು ವರ್ಷಗಳೇ ಆದರೂ ಈ ಸಾವುಗಳು ಯಾರ ಗಮನಕ್ಕೂ ಬರದೇ ಇದ್ದುದು ಹೇಗೆ? ಈ ಎಲ್ಲ ಪ್ರಶ್ನೆಗಳಿಗೂ ಪೊಲೀಸ್‌ ತನಿಖೆ ಉತ್ತರಿಸಬೇಕಿದೆ. ಸ್ಥಳಕ್ಕೆ ಚಿತ್ರದುರ್ಗ ಬಡಾವಣೆ ಪೊಲೀಸರು, ಎಎಸ್‌ಪಿ ಎಸ್.ಜೆ. ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಂಡ ಹಾಗೂ ವಿಧಿ ವಿಜ್ಞಾನ ತಂಡ ಭೇಟಿ ನೀಡಿದ್ದು, ಇಂಚಿಂಚು ಜಾಗವನ್ನೂ ಪರಿಶೀಲನೆ ನಡೆಸುತ್ತಿವೆ.

Exit mobile version