Site icon Vistara News

Suspicious Death:‌ ಚರಂಡಿಯಲ್ಲಿ ತೇಲಿ ಬಂತು ಮಗುವಿನ ಶವ; ಕೋಲಾರದಲ್ಲಿ ಮೃತದೇಹಗಳು ಪತ್ತೆ!

Dead bodies found

ದೊಡ್ಡಬಳ್ಳಾಪುರ/ಕೋಲಾರ: ಚರಂಡಿ ಮೋರಿಯಲ್ಲಿ 2 ವರ್ಷದ ಹೆಣ್ಣು ಮಗುವಿನ ಮೃತದೇಹ (Suspicious Death) ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಬಳಿಯ ಮೋರಿಯಲ್ಲಿ ಪತ್ತೆಯಾಗಿದೆ. ಚಾಪೆ ಹಾಕಿ ಮಗುವನ್ನು ಮಲಗಿಸಿದ ರೀತಿಯಲ್ಲಿ ಮಗು ಪತ್ತೆಯಾಗಿದೆ. ಆದರೆ ಮಗುವಿನ ದೇಹದ ಮೇಲೆ ಯಾವುದೇ ಗಾಯದ ಗುರುತು ಕಂಡು ಬಂದಿಲ್ಲ. ಇದು ಕೊಲೆಯೊ ಅಥವಾ ಸಹಜ ಸಾವುವೋ ತಿಳಿದು ಬಂದಿಲ್ಲ. ಮಗುವಿನ ಮೃತದೇಹ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ರೈಲ್ವೆ ನಿಲ್ದಾಣದಲ್ಲಿ ಶವ ಪತ್ತೆ

ಕೋಲಾರದ ಮಾಲೂರು ತಾಲೂಕು ಟೇಕಲ್ ರೈಲ್ವೆ ನಿಲ್ದಾಣದಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದೆ. ಮಲಗಿದ ರೀತಿಯಲ್ಲೇ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ವ್ಯಕ್ತಿಯ ವಿವರವನ್ನು ಕಲೆ ಹಾಕುತ್ತಿದ್ದು, ಇದು ಕೊಲೆಯೋ ಅಥವಾ ಸಹಜವೋ ಎಂದು ತಿಳಿಯಲು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಠಾಣಾ ವ್ಯಾಪ್ತಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದೆ. ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದು ಮೃತಪಟ್ಟಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತ ಪಟ್ಟು ಒಂದು ತಿಂಗಳು ಕಳೆದಿರಬಹುದು ಎಂದು ಅಂದಾಜಿಸಲಾಗಿದೆ. ಟೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version