Suspicious Death: ಕಾರೊಳಗೆ ಕೂತಲ್ಲೇ ಶವವಾದ ಮಂಡ್ಯ ವೈದ್ಯ - Vistara News

ಕರ್ನಾಟಕ

Suspicious Death: ಕಾರೊಳಗೆ ಕೂತಲ್ಲೇ ಶವವಾದ ಮಂಡ್ಯ ವೈದ್ಯ

Suspicious Death : ಕೊಡಗಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಕಾರೊಳಗೆ ಮಂಡ್ಯ ವೈದ್ಯರೊಬ್ಬರ ಮೃತದೇಹ ಪತ್ತೆಯಾಗಿದೆ.

VISTARANEWS.COM


on

Mandya doctor satish body found in Kodagu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಕೊಡಗು/ಮಂಡ್ಯ: ಮಂಡ್ಯದ ವೈದ್ಯರೊಬ್ಬರು ಕಾರೊಂದರಲ್ಲಿ ಶವವಾಗಿ (Suspicious Death) ಪತ್ತೆಯಾಗಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಪಾಂಡವಪುರದ ಶಿವಳ್ಳಿ ಗ್ರಾಮದ ಡಾ. ಸತೀಶ್ (47) ಮೃತ ದುರ್ದೈವಿ.

ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಕೆಂಪು ಕಾರೊಂದರಲ್ಲಿ ಸತೀಶ್‌ ಮೃತದೇಹವು ಪತ್ತೆಯಾಗಿದೆ. ಡಾ ಸತೀಶ್ ಅವರು ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊಣಸೂರು ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು. ವೈದ್ಯ ಸತೀಶ್ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಡ್ರೈವರ್‌ ಸೀಟ್‌ನಲ್ಲಿರುವ ಸತೀಶ್‌ ಅವರಿಗೇನಾದರೂ ಹೃದಯಾಘಾತ ಆಗಿದ್ಯಾ? ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದರಾ? ಎಂಬ ಎಲ್ಲ ಆಯಾಮದಲ್ಲೂ ತನಿಖೆಯನ್ನು ನಡೆಸುತ್ತಿದ್ದಾರೆ.

Mandya doctor satish body found in Kodagu

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ತನಿಖೆಯ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ಏನು ಎಂಬುದು ತಿಳಿದು ಬರಲಿದೆ.

ತಂಗಿ ಮಗನನ್ನೇ ಕೊಂದು ಹೂತು ಹಾಕಿದ ದೊಡ್ಡಮ್ಮ!

ಚಿಕ್ಕಬಳ್ಳಾಪುರ: 6 ವರ್ಷದ ಗಂಡು ಮಗುವನ್ನು ಆಕೆಯ ದೊಡ್ಡಮ್ಮಳೇ ಕೊಂದು ಹೂತು ಹಾಕಿದ (Murder Case) ಘಟನೆ ಚಿಕ್ಕಬಳ್ಳಾಪುರದ ಮುತಕದಹಳ್ಳಿ ಗ್ರಾಮದ ಮಾವಿನ ತೋಪಿನಲ್ಲಿ ನಡೆದಿದೆ.

ಅಂಬಿಕಾ ಎಂಬಾಕೆ ಕೊಲೆ ಪಾತಕಿಯಾಗಿದ್ದಾಳೆ. ಅಂಬಿಕಾಳ ಸಿಟ್ಟಿಗೆ ಮುಗ್ದ ಮಗುವೊಂದು ಪ್ರಾಣ ಬಿಟ್ಟಿದೆ. ಅಂಬಿಕಾ ಹಾಗೂ ಅನಿತಾ ಇಬ್ಬರು ಅಕ್ಕ ತಂಗಿಯರು. ತಂಗಿ ಅನಿತಾ ಮೇಲಿನ ಕೋಪಕ್ಕೆ ಆಕೆಯ ಮಗನನ್ನು ಕೊಲೆ ಮಾಡಿ ಹೂತು ಹಾಕಿದ್ದಾಳೆ.

murder case in chikbalapura
ಮೃತ ದುರ್ದೈವಿ

ಅಂಬಿಕಾಳ ಅನೈತಿಕ ಸಂಬಂಧಗಳಿಗೆ ತಂಗಿ ಅನಿತಾ ಅಡ್ಡಿಯಾಗುತ್ತಿದ್ದಳು ಎನ್ನಲಾಗಿದೆ. ಇದರಿಂದ ಸಿಟ್ಟಿಗೆದ್ದ ಅಂಬಿಕಾ, ತಂಗಿ ಮೇಲಿನ ಕೋಪಕ್ಕೆ ಆಕೆ ಮಗನನ್ನು ಕೊಲೆ ಮಾಡಿದ್ದಾಳೆ. ಸ್ಥಳಕ್ಕೆ ಪೆರೆಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಕೇರಳದಲ್ಲಿ ಇಸ್ರೇಲ್‌ ಮಹಿಳೆ ಸಾವು; ಮಲಯಾಳಿ ಗಂಡನಿಂದಲೇ ಹತ್ಯೆ?

ತಿರುವನಂತಪುರಂ: ಕೇರಳದಲ್ಲಿ ಇಸ್ರೇಲ್‌ನ 36 ವರ್ಷದ ಮಹಿಳೆಯೊಬ್ಬರ (Israeli Woman) ಶವ ಮನೆಯಲ್ಲಿ ಪತ್ತೆಯಾಗಿದ್ದು, ಅವರ ಜತೆ ವಾಸವಿದ್ದ ಕೇರಳದ ವ್ಯಕ್ತಿಯೇ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕೊಲ್ಲಂ ಜಿಲ್ಲೆಯ ಮುಕ್ತಥಲ ಗ್ರಾಮದಲ್ಲಿರುವ ಮಹಿಳೆಯ ಶವ ಪತ್ತೆಯಾಗಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇಸ್ರೇಲ್‌ ಮೂಲದ ಮಹಿಳೆಯನ್ನು ಸ್ವಾತಾ ಅಲಿಯಾಸ್‌ ರಾಧಾ ಎಂಬುದಾಗಿ ಗುರುತಿಸಲಾಗಿದೆ. ಇವರ ಜತೆ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ 70 ವರ್ಷದ ಕೃಷ್ಣ ಚಂದ್ರನ್‌ ಎಂಬಾತನೇ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಇಸ್ರೇಲ್‌ನಿಂದ ಭಾರತಕ್ಕೆ ಬಂದಿರುವ ಸ್ವಾತಾ ಹಾಗೂ ಕೃಷ್ಣ ಚಂದ್ರನ್‌ ಒಟ್ಟಿಗೆ ಇದ್ದರು. ಇವರಿಬ್ಬರೂ ಮದುವೆಯಾಗಿದ್ದಾರೆ ಎಂಬ ಮಾತುಗಳು ಕೂಡ ಕೇಳಿಬಂದಿವೆ.

ಸ್ವಾತ ಅವರ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ಹತ್ಯೆ ಮಾಡಿದ ಕೃಷ್ಣ ಚಂದ್ರನ್‌ ಕೂಡ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಅಸ್ವಸ್ಥನಾಗಿರುವ ಕೃಷ್ಣ ಚಂದ್ರನ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಕೃಷ್ಣ ಚಂದ್ರನ್‌ ಯೋಗ ಶಿಕ್ಷಕನಾಗಿದ್ದ ಎಂದು ತಿಳಿದುಬಂದಿದೆ. ಸ್ವಾತಾ ಅವರು ಇಸ್ರೇಲ್‌ನಿಂದ ಉತ್ತರಾಖಂಡಕ್ಕೆ ಆಗಮಿಸಿ, ಅಲ್ಲಿ 15 ವರ್ಷ ನೆಲೆಸಿದ್ದರು. ಕಳೆದ ಒಂದು ವರ್ಷದಿಂದ ಅವರು ಕೇರಳದಲ್ಲಿ ನೆಲೆಸಿದ್ದರು ಎಂದು ಮೂಲಗಳು ತಿಳಿಸಿವೆ.

ಇಬ್ಬರೂ ಆತ್ಮಹತ್ಯೆಗೆ ಯತ್ನ?

ಸ್ವಾತಾ ಹಾಗೂ ಕೃಷ್ಣ ಚಂದ್ರನ್‌ ಆತ್ಮಹತ್ಯೆ ಮಾಡಿಕೊಳ್ಳಲು ತೀರ್ಮಾನಿಸಿದ್ದರು ಎಂದು ತಿಳಿದುಬಂದಿದೆ. ಇದೇ ಕಾರಣಕ್ಕಾಗಿ ಮೊದಲು ಕೃಷ್ಣ ಚಂದ್ರನ್‌ ಸ್ವಾತಾ ಅವರ ಕತ್ತು ಸೀಳಿದ್ದಾನೆ. ಇದಾದ ಬಳಿಕ ತಾನೂ ಚಾಕು ಚುಚ್ಚಿಕೊಂಡಿದ್ದಾನೆ. ಇದಾದ ಬಳಿಕ ಇಬ್ಬರೂ ಗಾಯಗೊಂಡು ನೆಲದ ಮೇಲೆ ಬಿದ್ದಿದ್ದಾರೆ. ಇದೇ ವೇಳೆ ಇಬ್ಬರೂ ಬಿದ್ದಿದ್ದನ್ನು ಕಂಡ ಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇಸ್ರೇಲ್‌ ಮಹಿಳೆಯು ಹಲವು ವರ್ಷಗಳಿಂದ ಮಾನಸಿಕ ಒತ್ತಡದ ಸಮಸ್ಯೆಯಿಂದ ಬಳಲುತ್ತಿದ್ದರು. ಕೃಷ್ಣ ಚಂದ್ರನ್‌ ಯೋಗ ತರಗತಿಗೆ ಹಾಜರಾದರೂ ಅವರು ಗುಣಮುಖರಾಗಿರಲಿಲ್ಲ. ಖಿನ್ನತೆಯಿಂದ ಕೊನೆಗೆ ಆತ್ಮಹತ್ಯೆಯ ಹಾದಿ ಹಿಡಿದಿರಬಹುದು ಎನ್ನಲಾಗಿದೆ. ಆದರೆ, ಕೃಷ್ಣ ಚಂದ್ರನ್‌ ಆತ್ಮಹತ್ಯೆಗೆ ಯತ್ನಿಸಿದ್ದೇಕೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ.ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಮರು ಮತ ಎಣಿಕೆಯಲ್ಲೂ ಜಯ ಸಾಧಿಸಿದ ಶಾಸಕ ಟಿ.ಡಿ ರಾಜೇಗೌಡ

VISTARANEWS.COM


on

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್​ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ. ಹೈಕೋರ್ಟ್ ಆದೇಶದ ಮೇರೆಗೆ ಇಂದು ಅಂಚೆ ಮತಗಳ ಮರು ಎಣಿಕೆ ಮಾಡಲಾಯಿತು. ಹಾಲಿ ಮತ್ತು ಮಾಜಿ ಶಾಸಕರ ನಡುವೆ ಮರು ಎಣಿಕೆ ಫೈಟ್ ಜೋರಾಗಿತ್ತು. ಸಾಕಷ್ಟು ಕುತೂಹಲದ ಮಧ್ಯೆ ಇದೀಗ ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್​ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರ ತೀವ್ರ ಕುತೂಹಲ ಮೂಡಿಸಿತ್ತು. ಅಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು, ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರ ವಿರುದ್ಧ ಕೇವಲ 201 ಮತಗಳ ಅಂತರದಲ್ಲಿ ಸೋಲನುಭವಿಸಿದ್ದರು. ಈ ಚುನಾವಣೆಯಲ್ಲಿ ಚಲಾವಣೆಯಾದ 1822 ಅಂಚೆ ಮತಗಳ ಪೈಕಿ 279 ಮತಗಳನ್ನು ತಿರಸ್ಕೃತಗೊಳಿಸಲಾಗಿತ್ತು. ಈ ಫಲಿತಾಂಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜೀವರಾಜ್ ಅವರು ಮರು ಎಣಿಕೆಗೆ ಮನವಿ ಮಾಡಿದ್ದರು.
ಆದರೆ ಅಂದಿನ ಜಿಲ್ಲಾ ಚುನಾವಣಾಧಿಕಾರಿಗಳು ಆ ಮನವಿಯನ್ನು ಪರಿಗಣಿಸದೆ ರಾಜೇಗೌಡರನ್ನು ವಿಜೇತರೆಂದು ಘೋಷಿಸಿದ್ದರು. ಈ ಕ್ರಮವನ್ನು ಪ್ರಶ್ನಿಸಿ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಇಂದು ಅಂಚೆ ಮತಗಳ ಮರು ಎಣಿಕೆಗೆ ಆದೇಶ ಹೊರಡಿಸಿತ್ತು. ಅದರಂತೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮರು ಎಣಿಕೆಯಲ್ಲೂ ಟಿ.ಡಿ.ರಾಜೇಗೌಡ ಅವರು ಜಯಭೇರಿ ಬಾರಿಸಿದ್ದಾರೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading
Advertisement
Latest4 hours ago

ಮರು ಮತ ಎಣಿಕೆಯಲ್ಲೂ ಜಯ ಸಾಧಿಸಿದ ಶಾಸಕ ಟಿ.ಡಿ ರಾಜೇಗೌಡ

Latest10 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest11 hours ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest2 days ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest2 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest2 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest2 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest2 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest2 days ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest2 days ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌