Site icon Vistara News

ಸುವರ್ಣಸೌಧಕ್ಕೆ ಶಾಶ್ವತ ವಿದ್ಯುತ್‌ ದೀಪಾಲಂಕಾರ; ಕಲರ್‌ಫುಲ್‌ ಫೋಟೊಗಳು ಇಲ್ಲಿವೆ

Suvarna Vidhana Soudha

ಬೆಳಗಾವಿ: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ನಗರದ ಸುವರ್ಣಸೌಧ (Suvarna Vidhana Soudha) ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ಇನ್ನು ಮುಂದೆ ವರ್ಷ ಪೂರ್ತಿ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಇರಲಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುವರ್ಣಸೌಧದ ಶಾಶ್ವತ ವಿದ್ಯುತ್ ಅಲಂಕಾರವನ್ನು ಸೋಮವಾರ ಉದ್ಘಾಟಿಸಿದರು.

ಈ ವೇಳೆ ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಸೇರಿ ಹಲವು ಸಚಿವರು ಮತ್ತು ಎಲ್ಲಾ ಶಾಸಕರು ಉಪಸ್ಥಿತರಿದ್ದರು.

ಈವರೆಗೂ ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಮಾತ್ರ ಸುವರ್ಣ ವಿಧಾನಸೌಧವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗುತ್ತಿತ್ತು. ಆದರೆ, ಇನ್ನು ಮುಂದೆ ವರ್ಷ ಪೂರ್ತಿ ವಿದ್ಯುತ್ ದೀಪಗಳಿಂದ ಸುವರ್ಣಸೌಧ ಕಂಗೊಳಿಸಲಿದೆ. ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಗೊಳಿಸಲು ವರ್ಷವಿಡಿ ಲೈಟಿಂಗ್ ವ್ಯವಸ್ಥೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Exit mobile version