ಬೆಂಗಳೂರು: ಅಖಿಲ ಕರ್ನಾಟಕ ಬಂಜಾರ ಧರ್ಮಗುರುಗಳ ಮಹಾಸಭಾ ಒಕ್ಕೂಟವು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ತಿರುಗಿ ಬಿದ್ದಿದ್ದಾರೆ. ಸಮಾಜ ಸೇವಕ ಯುವ ನಾಯಕ ಮಣಿಕಂಠ ರಾಠೋಡ್‌ರ ಜನೋಪಯೋಗಿ ಕೆಲಸ ಮಾಡುತ್ತಿದ್ದು, ಇದನ್ನು ಸಹಿಸದ ಶಾಸಕ ಪ್ರಿಯಾಂಕ್ ಖರ್ಗೆ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿದ್ದಾರೆ.
ಕಲಬುರಗಿ ಜನರು ಮಣಿಕಂಠ ರಾಠೋಡ್‌ರನ್ನು ನಾಯಕ ಎಂದು ಸ್ವೀಕರಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳನ್ನು ಸಹಿಸದೆ ಪ್ರಿಯಾಂಕ್ ಖರ್ಗೆಯವರು ಕಲಬುರಗಿ ಮತ್ತು ಸುತ್ತಮುತ್ತಲಿನ ಪೊಲೀಸರಿಗೆ ಒತ್ತಡ ಹಾಕಿ ಮಣಿಕಂಠ ರಾಠೋಡ ಮತ್ತು ಅವರ ಗೆಳೆಯರ ಬಳಗದ ವಿರುದ್ಧ ಸುಳ್ಳು ಪ್ರಕರಣ ಹಾಕಿ ಕಿರುಕುಳ ಕೊಡುತ್ತಿದ್ದಾರೆಂದು ಕಿಡಿಕಾರಿದ್ದಾರೆ.
ಹೀಗಾಗಿ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಹಾಗೂ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್‌ರಿಗೆ ಸುಮಾರು 50ಕ್ಕೂ ಹೆಚ್ಚು ಮಠಾಧೀಶರು ದೂರು ನೀಡಿದ್ದಾರೆ.
ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹಿಂದು ಕಾರ್ಯಕರ್ತರ ಮೇಲೆ ಪ್ರಿಯಾಂಕ್ ಖರ್ಗೆ ದಬ್ಬಾಳಿಕೆ ನಡೆಸುತ್ತಿದ್ದು, ಖರ್ಗೆ ಹೇಳಿದ ಹಾಗೇ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಕೇಳುತ್ತಿದ್ದಾರೆಂದು ಆರೋಪಿಸಿದ್ದಾರೆ. ಸುಳ್ಳು ಕೇಸ್ ದಾಖಲು ಮಾಡಿದ್ದು, ಕೂಡಲೇ ಕೇಸ್ ವಾಪಸ್ ಪಡೆಯಬೇಕೆಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ | PSI Scam | ರಾಜಕಾರಣಿಗಳ ಬೆಂಬಲವಿಲ್ಲದೆ ಪಿಎಸ್‌ಐ ಅಕ್ರಮ ಸಾಧ್ಯವೇ?; ಪ್ರಿಯಾಂಕ್ ಖರ್ಗೆ ಪ್ರಶ್ನೆ