Site icon Vistara News

Raj B Shetty: ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದ ಟ್ರೇಲರ್ ರಿಲೀಸ್

Swathi Muttina Male Haniye film

ಬೆಂಗಳೂರು: ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದ ಟ್ರೇಲರ್ ಅನ್ನು ಚಿತ್ರತಂಡ ಶುಕ್ರವಾರ ಬಿಡುಗಡೆ ಮಾಡಿದೆ. ನಟ ರಾಜ್ ಬಿ ಶೆಟ್ಟಿ (Raj B Shetty) ಹಾಗೂ ಆರ್‌.ಜೆ. ಸಿರಿ ರವಿಕುಮಾರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ, ಸ್ಯಾಂಡಲ್‌ವುಡ್‌ ಕ್ವೀನ್ ರಮ್ಯಾ ಅವರ ಆ್ಯಪಲ್ ಬಾಕ್ಸ್ ನಿರ್ಮಾಣ ಸಂಸ್ಥೆಯಲ್ಲಿ ಮೂಡಿಬಂದ ಈ ಸಿನಿಮಾ, ನವೆಂಬರ್ 24ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ.

ಕಾರ್ಯಕ್ರಮದಲ್ಲಿ ನಟ ರಾಜ್ ಬಿ ಶೆಟ್ಟಿ ಮಾತನಾಡಿ, ನಾವು ಆಟವಾಡಿಕೊಂಡು ಸಿನಿಮಾ ಮಾಡಿದೆವು. ಈ ಕತೆಯನ್ನು ಬರೆದಿದ್ದು, ಗರುಡ ಗಮನ ವೃಷಭ ವಾಹನ ಸಿನಿಮಾ ನಂತರ. ಸಿರಿಯವರ ಈ ಹಿಂದಿನ ಸಿನಿಮಾ ನೋಡಿದ್ದೆ. ಆಗ ಪ್ರೇರಣಾ ಪಾತ್ರಕ್ಕೆ ತುಂಬಾ ಸೂಟೆಬಲ್ ಅನಿಸಿದರು, ಹೀಗಾಗಿ ಸಿನಿಮಾ ನಟಿಯಾಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ನಟಿ ಸಿರಿ ರವಿಕುಮಾರ್‌ ಮಾತನಾಡಿ, ಪ್ರೇರಣಾ ಎಂಬ ಕೌನ್ಸೆಲರ್ ಪಾತ್ರದಲ್ಲಿ ನಟಿಸಿದ್ದೇನೆ. ಈ ಪಾತ್ರ ಮಾಡೋದಕ್ಕೆ ನನಗೆ ಸಮಯ ಹಿಡಿಯಿತು. ಆದರೆ 18 ದಿನದಲ್ಲೇ ಶೂಟಿಂಗ್ ಮುಗಿಸಿದೆವು ಎಂದು ಹೇಳಿದರು.

ʼಸ್ವಾತಿ ಮುತ್ತಿನ ಮಳೆ ಹನಿಯೇ’ ಸ್ಯಾಂಡಲ್‌ವುಡ್‌ ನಟಿ ರಮ್ಯಾ (Actress Ramya) ನಿರ್ಮಾಣದ ಚೊಚ್ಚಲ ಸಿನಿಮಾ ಆಗಿದ್ದು, ಇದನ್ನು ರಾಜ್ ಬಿ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿದ್ದಾರೆ. ಬಾಲಾಜಿ ಮನೋಹರ್‌, ಸೂರ್ಯ ವಶಿಷ್ಟ, ರೇಖಾ ಕುಡ್ಲಿಗಿ, ಸ್ನೇಹಾ ಶರ್ಮಾ, ಜೆ.ಪಿ.ತುಮ್ಮಿನಾಡು, ಗೋಪಾಲಕೃಷ್ಣ ದೇಶ್‌ಪಾಂಡೆ ಚಿತ್ರದ ಮುಖ್ಯ ಪಾತ್ರದಲ್ಲಿ ನಟಿಸಿದ್ದು, ಮಿಧುನ್‌ ಮುಕುಂದನ್‌ ಸಂಗೀತ ಸಂಯೋಜಿಸಿದ್ದಾರೆ.

ಇದನ್ನೂ ಓದಿ | SSE SideB Twitter Review: ʻಸಪ್ತ ಸಾಗರದಾಚೆ ಎಲ್ಲೋʼ ಸೈಡ್‌ ಬಿ ಬಗ್ಗೆ ಜನಾಭಿಪ್ರಾಯ ಹೀಗಿದೆ

ʼಒಂದು ಮೊಟ್ಟೆಯ ಕಥೆʼ, ʻಗರುಡ ಗಮನ ವೃಷಭ ವಾಹನʼ ಚಿತ್ರಗಳ ನಂತರ ರಾಜ್‌ ಬಿ. ಶೆಟ್ಟಿ ಈ ಸಿನಿಮಾ ನಿರ್ದೇಶಿಸಿದ್ದಾರೆ. ಆರಂಭದಲ್ಲಿ ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಚಿತ್ರರಂಗಕ್ಕೆ ಕಂಬ್ಯಾಕ್‌ ಮಾಡುತ್ತಾರೆ ಎನ್ನಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಅವರು ನಟನೆಯಿಂದ ಹಿಂದೆ ಸರಿದು ಕೇವಲ ನಿರ್ಮಾಪಕಿಯಾಗಿ ಮುಂದುವರಿದಿದ್ದರು. ಅವರ ಜಾಗಕ್ಕೆ ಸಿರಿ ರವಿಕುಮಾರ್‌ ಎಂಟ್ರಿಯಾಗಿತ್ತು.

Exit mobile version