ಕರ್ನಾಟಕ ವಿಧಾನ ಪರಿಷತ್ ಶಾಸಕರು ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾದ ಟಿ.ಎ ಶರವಣ ಅವರು ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಕಚೇರಿ ಉದ್ಘಾಟನೆಯ ಪೂಜಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಟಿ. ಎ. ಶರವಣ ಅವರ ಕುಟುಂಬಸ್ಥರು, ಬಂಧು ಮಿತ್ರರು ಹಾಗೂ ಇತರ ರಾಜಕೀಯ ಗಣ್ಯರು ಭಾಗಿಯಾಗಿದ್ದರು.
ಕರ್ನಾಟಕ ವಿಧಾನ ಪರಿಷತ್ ಶಾಸಕ ಟಿ. ಎ. ಶರವಣ (TA Sharavana) ಅವರು ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿತ್ತು. ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4) ರ ಮೇರೆಗೆ ಸಭಾಪತಿ ನೇಮಕ ಮಾಡಿದ್ದಾರೆ. ವಿಧಾನ ಪರಿಷತ್ ಶಾಸಕರು ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾದ ಟಿ. ಎ. ಶರವಣ ಅವರನ್ನು ಕರ್ನಾಟಕ ವಿಧಾನ ಪರಿಷತ್‌ನ ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಸರ್ಕಾರಿ ಭರವಸೆಗಳ ಸಮಿತಿಯು ಒಟ್ಟು 9 ಮಂದಿ ಸದಸ್ಯರನ್ನೊಳಗೊಂಡಿದೆ. ಪ್ರಕಾಶ್ ಕೆ ರಾಥೋಡ್, ಶರವಣ ಟಿ.ಎ, ನಿರಾಣಿ ಹಣಮಂತ್ ರುದ್ರಪ್ಪ, ಯು.ಬಿ. ವೆಂಕಟೇಶ್, ಪ್ರತಾಫ್ ಸಿಂಹ ನಾಯಕ್ ಕೆ, ಡಿ.ಎಸ್ ಅರುಣ್ ಹಾಗೂ ಕೆ.ಎಸ್ ನವೀನ್, ಮಂಜುನಾಥ್ ಭಂಡಾರಿ, ತಿಪ್ಪಣ್ಣಪ್ಪ ಕಮಕನೂರ ಅವರು ಸದಸ್ಯರಾಗಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ