Tanveer Sait: ನನ್ನ ಆರೋಗ್ಯ ಸರಿ ಇಲ್ಲದ್ದಕ್ಕೆ ರಾಜಕೀಯ ನಿವೃತ್ತಿ: ಎನ್‌ಆರ್‌ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೂ ಗೆಲ್ಲಿಸುವೆ: ತನ್ವೀರ್‌ ಸೇಠ್‌ - Vistara News

ಕರ್ನಾಟಕ

Tanveer Sait: ನನ್ನ ಆರೋಗ್ಯ ಸರಿ ಇಲ್ಲದ್ದಕ್ಕೆ ರಾಜಕೀಯ ನಿವೃತ್ತಿ: ಎನ್‌ಆರ್‌ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೂ ಗೆಲ್ಲಿಸುವೆ: ತನ್ವೀರ್‌ ಸೇಠ್‌

Tanveer Sait: ಎನ್‌ಆರ್‌ ಕ್ಷೇತ್ರದ ಶಾಸಕ, ಮಾಜಿ ಸಚಿವ ತನ್ವೀರ್‌ ಸೇಠ್‌ ರಾಜಕೀಯ ನಿವೃತ್ತಿ ಘೋಷಿಸಿರುವ ವಿಷಯ ತಿಳಿಯುತ್ತಿದ್ದಂತೆ ಅವರ ಮನೆ ಮುಂದೆ ಹೈಡ್ರಾಮಾವೇ ನಡೆದಿದೆ. ಇಬ್ಬರು ಕಾರ್ಯಕರ್ತರು ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ. ಆದರೆ, ತಮ್ಮ ಅನಾರೋಗ್ಯದ ಕಾರಣ ನೀಡಿ ರಾಜಕೀಯದಿಂದ ಹಿಂದೆ ಸರಿಯುತ್ತಿರುವುದಾಗಿ ತನ್ವೀರ್‌ ಸೇಠ್ ಘೋಷಿಸಿದ್ದಾರೆ.

VISTARANEWS.COM


on

Tanveer Sait announced his political retirement will support Siddaramaiah even contest from NR Constituency
ಮನೆ ಮುಂದೆ ಜಮಾಯಿಸಿರುವ ಕಾರ್ಯಕರ್ತರೊಂದಿಗೆ ಮಾತನಾಡುತ್ತಿರುವ ಶಾಸಕ ತನ್ವೀರ್‌ ಸೇಠ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ನನ್ನ ಆರೋಗ್ಯ ಸರಿ ಇಲ್ಲ. ಅದೇ ಕಾರಣಕ್ಕೆ ಚುನಾವಣಾ ರಾಜಕೀಯ ನಿವೃತ್ತಿಯನ್ನು ಬಯಸಿದ್ದೇನೆ. ಜನ ನನ್ನ ತಾತನನ್ನು ಒಮ್ಮೆ, ತಂದೆಯನ್ನು 6 ಬಾರಿ, ನನ್ನನ್ನು 5 ಬಾರಿ ಗೆಲ್ಲಿಸಿದ್ದಾರೆ. ನರಸಿಂಹ ರಾಜ ಕ್ಷೇತ್ರದ ಮತದಾರರ ಋಣ ತೀರಿಸಬೇಕಿದೆ. ಕಾಂಗ್ರೆಸ್ ನನಗೆ ಹಲವಾರು ಅವಕಾಶ ನೀಡಿದೆ. ಯಾವುದೇ ಬೇಸರ ಇಲ್ಲ. ನರಸಿಂಹ ರಾಜ (ಎನ್‌ಆರ್‌) ಕ್ಷೇತ್ರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೂ ನಾನು ಗೆಲ್ಲಿಸಿಕೊಂಡು ಬರುತ್ತೇನೆ ಎಂದು ಶಾಸಕ, ಮಾಜಿ ಸಚಿವ ತನ್ವೀರ್‌ ಸೇಠ್‌ (Tanveer Sait) ಘೋಷಿಸಿದ್ದಾರೆ.

ತಮ್ಮ ರಾಜಕೀಯ ನಿವೃತ್ತಿ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ತನ್ವೀರ್‌ ಸೇಠ್‌, ನನಗೆ ಇಲ್ಲಿ ಯಾವುದೇ ರೀತಿಯಾದಂತಹ ಬೇಸರ ಇಲ್ಲ. ನನ್ನ ಆರೋಗ್ಯ ಸರಿ ಇಲ್ಲ. ಬೇರೆ ಯಾವುದೇ ಬೆಳವಣಿಗೆಗಳ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ‌ಸ್ಪರ್ಧಿಸುವುದಾದರೆ ನಾನೇ ಮುಂದೆ ನಿಂತು ಗೆಲ್ಲಿಸುತ್ತೇನೆ.‌ ಬೇರೆಯವರಿಗೆ ಟಿಕೆಟ್ ಕೊಟ್ಟರೂ ಕಾಂಗ್ರೆಸ್‌ಗೆ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಆತಂಕ ನಿಜವಾಯ್ತು! ಉದ್ಯೋಗ ಕಸಿಯುತ್ತಿರುವ ChatGPT, ಚಾಟ್‌ಬಾಟ್ ನಿಯೋಜಿಸುತ್ತಿರುವ ಅಮೆರಿಕನ್ ಕಂಪನಿಗಳು

ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂಬುದು ನನ್ನ ನಿರ್ಧಾರವಾಗಿದೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ ಎಂದು ತನ್ವೀರ್‌ ಸೇಠ್‌ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದರು.

ಆತ್ಮಹತ್ಯೆಗೆ ಯತ್ನಿಸಿದ ತನ್ವೀರ್ ಸೇಠ್ ಅಭಿಮಾನಿ

ಮಾಜಿ ಸಚಿವ ತನ್ವೀರ್‌ ಸೇಠ್‌ ರಾಜಕೀಯ ನಿವೃತ್ತಿಯನ್ನು ಘೋಷಣೆ ಮಾಡಿರುವ ವಿಷಯ ತಿಳಿಯುತ್ತಿದ್ದಂತೆ ನೂರಾರು ಕಾರ್ಯಕರ್ತರು ಅವರ ಮನೆ ಮುಂದೆ ದೌಡಾಯಿಸಿದ್ದರು. ಈ ವೇಳೆ ತನ್ವೀರ್ ಸೇಠ್ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರಸುಲ್‌ ಎಂಬಾತ ತನ್ನ ಶರ್ಟ್‌ ಬಿಚ್ಚಿ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಯತ್ನ ಮಾಡಿದ್ದು, ಸ್ಥಳದಲ್ಲಿದ್ದ ಉದಯಗಿರಿ ಠಾಣೆ ಪೊಲೀಸರು ಕೂಡಲೇ ಬಾಟಲಿ ಕಸಿದುಕೊಂಡು ಎಸೆದರು. ಬಳಿಕ ಅಲ್ಲಿಯೇ ಇದ್ದ ಉಳಿದ ಅಭಿಮಾನಿಗಳು ಈತನ ಮೈಮೇಲೆ ನೀರು ಸುರಿದು ಸಮಾಧಾನಪಡಿಸಿದರು.

ಮೂರು ದಿನದಲ್ಲಿ ಮತ್ತೊಮ್ಮೆ ಸ್ಪಷ್ಟನೆ ನೀಡುವುದಾಗಿ ಹೇಳಿದ್ದ ತನ್ವೀರ್‌

ಮತ್ತೊಬ್ಬ ಅಭಿಮಾನಿಯೊಬ್ಬ ತನ್ವೀರ್‌ ಸೇಠ್‌ ಮನೆ ಮೇಲೆ ಹತ್ತಿ ಕೆಳಗೆ ಹಾರುವುದಾಗಿ ಬೆದರಿಕೆಯೊಡ್ಡಿದ್ದಾನೆ. ಹಾರಿಯೇ ಬಿಡುವಂತೆ ಕೂಗಾಟ ನಡೆಸಿದ್ದಾನೆ. ಕೂಡಲೇ ಎಚ್ಚೆತ್ತ ಉಳಿದವರು ಮನೆ ಹತ್ತಿ ಆತನನ್ನು ಅಲ್ಲಿಂದ ಮೇಲಕ್ಕೆತ್ತಿಕೊಂಡು ಬಂದಿದ್ದಾರೆ. ಈ ನಡುವೆ ವಿಕಲಚೇತನ ಅಭಿಮಾನಿಯೊಬ್ಬ ತನ್ವೀರ್ ಸೇಠ್ ಅವರನ್ನು ಭೇಟಿ ಮಾಡಿ, ಹೂವಿನ ಹಾರ ಹಾಕಿ ಸ್ಪರ್ಧಿಸುವಂತೆ ಮನವಿ ಮಾಡಿದ್ದಾರೆ.

ಡಿಸೆಂಬರ್‌ನಲ್ಲೇ ಪತ್ರ ಬರೆದಿದ್ದ ಸೇಠ್‌!

ನರಸಿಂಹರಾಜ ಕ್ಷೇತ್ರದ ಶಾಸಕ, ಮಾಜಿ ಸಚಿವ ತನ್ವೀರ್ ಸೇಠ್ ಡಿಸೆಂಬರ್‌ನಲ್ಲಿಯೇ ರಾಜಕೀಯ ನಿವೃತ್ತಿಯನ್ನು ಘೋಷಣೆ ಮಾಡಿರುವ ವಿಷಯ ಈಗ ಗೊತ್ತಾಗಿದೆ. ಆದರೆ, ಚುನಾವಣೆ ಹೊಸ್ತಿಲಲ್ಲಿ ಈ ವಿಷಯ ಬಹಿರಂಗವಾಗಿದ್ದು, ಅಚ್ಚರಿಗೆ ಕಾರಣವಾಗಿದೆ.

ಶಾಸಕ ತನ್ವೀರ್‌ ಸೇಠ್‌ಗೆ ಕಾರ್ಯಕರ್ತರ ಕ್ಲಾಸ್‌; ಇಲ್ಲಿದೆ ವಿಡಿಯೊ

ಇದನ್ನೂ ಓದಿ: Karnataka Election: ಕಾಂಗ್ರೆಸ್‌ನಿಂದ ಸಮಾಜವನ್ನು ಕಾಪಾಡುವುದೇ ದೊಡ್ಡ ಕೆಲಸ ಆಗಿದೆ: ಡಾ. ಅಶ್ವತ್ಥನಾರಾಯಣ

ಡಿಸೆಂಬರ್‌ನಲ್ಲಿ ನಡೆದಿದ್ದ ಅಧಿವೇಶನದ ಸಂದರ್ಭದಲ್ಲಿಯೇ ಎಐಸಿಸಿ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ನಿವೃತ್ತಿ ಘೋಷಿತ ಪತ್ರವನ್ನು ತನ್ವೀರ್‌ ಸೇಠ್‌ ನೀಡಿದ್ದರು. ತಮ್ಮ ರಾಜಕೀಯ ಜೀವನವನ್ನು ಕೊನೆಗೊಳಿಸುತ್ತಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದರು. ಇದಕ್ಕೆ ಅನಾರೋಗ್ಯದ ಕಾರಣವನ್ನೂ ನೀಡಿದ್ದರು. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ರಾಜಕೀಯ ನಿವೃತ್ತಿ ಬಗ್ಗೆ ತಿಳಿಸಿದ್ದರು. ಆಗ ಈ ಇಬ್ಬರು ನಾಯಕರೂ ಸಾರಾಸಗಟಾಗಿ ತಿರಸ್ಕರಿಸಿದ್ದು ನೀವೇ ಸ್ಪರ್ಧೆ ಮಾಡಿ ಎಂದು ಹೇಳಿದ್ದರು ಎಂದು ತಿಳಿದುಬಂದಿದೆ. ಅಲ್ಲದೆ, ತನ್ವೀರ್‌ ಈ ವಿಷಯವನ್ನು ಸಿದ್ದರಾಮಯ್ಯ ಅವರ ಗಮನಕ್ಕೂ ತಂದಿದ್ದರು ಎನ್ನಲಾಗಿದ್ದು, ಅವರೂ ಸಹ ನಿರಾಕರಿಸಿದ್ದರು ಎಂದು ಹೇಳಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: 247 ಪಿಡಿಒ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ; ಇಲ್ಲಿದೆ ಡೈರಕ್ಟ್‌ ಲಿಂಕ್‌

Job Alert: ಕರ್ನಾಟಕ ಲೋಕಸೇವಾ ಆಯೋಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್‌ ಸಿ ವೃಂದದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಭರ್ತಿಗೆ ಡೈರಕ್ಟ್‌ ಲಿಂಕ್‌ ಬಿಡುಗಡೆ ಮಾಡಿದೆ. ಒಟ್ಟು 247 ಹುದ್ದೆಗಳಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮೇ 15.

VISTARANEWS.COM


on

Job Alert
Koo

ಬೆಂಗಳೂರು: ಉದ್ಯೋಗ ಹುಡುಕುತ್ತಿರುವವರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ಕರ್ನಾಟಕ ಲೋಕಸೇವಾ ಆಯೋಗ (KPSC) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್‌ ಸಿ ವೃಂದದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ಭರ್ತಿಗೆ ಈ ಹಿಂದೆಯೇ ಅಧಿಸೂಚನೆ ಬಿಡುಗಡೆ ಮಾಡಿತ್ತು (Panchayat Development Officer Recruitment 2024).‌ ಉಳಿಕೆ ಮೂಲ ವೃಂದ ಹಾಗೂ ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ ಒಟ್ಟು 247 ಹುದ್ದೆಗಳಿವೆ. ಹೀಗಾಗಿ ಎರಡು ವೃಂದಗಳಿಗೆ ಪ್ರತ್ಯೇಕ ಅಧಿಸೂಚನೆ ಬಿಡುಗಡೆ ಮಾಡಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ಲಿಂಕ್‌ ಅನ್ನೂ ಬಿಡುಗಡೆ ಮಾಡಲಾಗಿದೆ. ಆಸಕ್ತರು ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 15 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಳಿಕೆ ಮೂಲ ವೃಂದದಲ್ಲಿ 150 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 97 ಹುದ್ದೆಗಳಿವೆ. ಅಭ್ಯರ್ಥಿಗಳು ಭಾರತದ ಕಾನೂನಿನ್ವಯ ಸ್ಥಾಪಿತವಾದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ. ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ವಿನಾಯಿತಿ ಇದೆ. ಅರ್ಜಿ ಶುಲ್ಕವಾಗಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ರೂ., ಇತರ ಹಿಂದುಳಿದ ಎಲ್ಲ ವರ್ಗದ ಅಭ್ಯರ್ಥಿಗಳು 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಇನ್ನು ಅರ್ಜಿ ಶುಲ್ಕ ಸಲ್ಲಿಸುವವರು ಆನ್‌ಲೈನ್‌ ಮೂಲಕ ಪಾವತಿಸಬೇಕು. ಇದಕ್ಕಾಗಿ ನೆಟ್‌ ಬ್ಯಾಂಕಿಂಗ್‌, ಡೆಬಿಡ್‌, ಕ್ರೆಡಿಟ್‌ ಕಾರ್ಡ್‌ ಅಥವಾ ಯುಪಿಐ ವಿಧಾನವನ್ನು ಬಳಬಹುದು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 37,900 ರೂ. – 70,850 ರೂ. ಮಾಸಿಕ ವೇತನವಿದೆ.

ಸ್ಪರ್ಧಾತ್ಮಕ ಪರೀಕ್ಷೆಯ ವಿಧಾನ

ಎರಡು ಪತ್ರಿಕೆಗಳ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಪತ್ರಿಕೆ-1ರಲ್ಲಿ ಸಾಮಾನ್ಯ ಜ್ಞಾನ, ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್ ಕುರಿತ ವಸ್ತುನಿಷ್ಠ ಬಹು ಆಯ್ಕೆ ಪ್ರಶ್ನೆಗಳು ಇರುತ್ತವೆ. ಪತ್ರಿಕೆ-2ರಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ವಿಷಯಕ್ಕೆ ಸಂಬಂಧಿಸಿದ 100 ಪ್ರಶ್ನೆಗಳು ಇರುತ್ತವೆ. ಇದು ಕೂಡ ವಸ್ತುನಿಷ್ಠ ಬಹು ಆಯ್ಕೆ ಪ್ರಶ್ನೆಗಳಾಗಿರುತ್ತವೆ. ತಪ್ಪು ಉತ್ತರಕ್ಕೆ ನೆಗೆಟಿವ್‌ ಅಂಕಗಳಿದ್ದು ಗಮನಿಸಿ ಉತ್ತರಿಸುವುದು ಮುಖ್ಯ. ಪ್ರಶ್ನೆ ಪತ್ರಿಕೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿರುತ್ತದೆ. ಪರೀಕ್ಷೆಗಳನ್ನು ಆಯೋಗ ನಿಗದಿಪಡಿಸಿದ ಯಾವುದೇ ಕೇಂದ್ರದಲ್ಲಿ ನಡೆಸಲಾಗುವುದು.

ಪಿಡಿಒ ಉಳಿಕೆ ಮೂಲವೃಂದದ ನೇಮಕಾತಿಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.
ಪಿಡಿಒ ಉಳಿಕೆ ಹೈದರಾಬಾದ್‌ ಕರ್ನಾಟಕ ನೇಮಕಾತಿಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಹೆಚ್ಚಿನ ವಿವರಗಳಿಗೆ: 080-30574957 / 30574901 ನಂಬರ್‌ ಸಂಪರ್ಕಿಸಿ.

ಇದನ್ನೂ ಓದಿ: Job Alert: ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಗುಡ್‌ನ್ಯೂಸ್‌; ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸ್ ಹುದ್ದೆಯ ಸಂದರ್ಶನಕ್ಕೆ ನೇರ ಹಾಜರಾಗಿ

Continue Reading

ಕ್ರೈಂ

Neha Murder Case: ನೇಹಾ ಕೇಸ್‌ನಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ; ಡಿಜಿಗೆ ಸಿಎಂ ಸೂಚನೆ

Neha Murder Case: ಕಾವೇರಿ ನಿವಾಸದಲ್ಲಿ ಪೊಲೀಸ್‌ ಮಹಾನಿರ್ದೇಶಕ ಅಲೋಕ್ ಮೋಹನ್ ಹಾಗೂ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಇಬ್ಬರು ಹಿರಿಯ ಅಧಿಕಾರಿಗಳ ಜತೆ ಸಿಎಂ ಸಿದ್ದರಾಮಯ್ಯ ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಚರ್ಚೆ ನಡೆಸಿ, ಕಠಿಣ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಇದು ಚುನಾವಣೆ ಸಮಯ ಆಗಿದ್ದು, ಜಾಗ್ರತೆ ವಹಿಸಲು ಸೂಚನೆ ನೀಡಿದ್ದಾರೆ.

VISTARANEWS.COM


on

Take strict action in Neha Murder Case CM instructs to DG
Koo

ಬೆಂಗಳೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿಯೊಬ್ಬಳನ್ನು ಪ್ರೀತಿಸಲು ನಿರಾಕರಣೆ ಮಾಡಿದಳು ಎಂಬ ಕಾರಣಕ್ಕೆ ಮಾಡಿದ ಹತ್ಯೆ (‌Neha Murder Case) ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಸಿದ್ದರಾಮಯ್ಯ (CM Siddaramaiah), ಪೊಲೀಸ್ ಮಹಾ ನಿರ್ದೇಶಕರು ಹಾಗೂ ಬೆಂಗಳೂರು ಪೊಲೀಸ್‌ ಆಯುಕ್ತರ ಜತೆಗೆ ಚರ್ಚೆ ನಡೆಸಿದ್ದಾರೆ. ಆರೋಪಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮವನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಕಾವೇರಿ ನಿವಾಸದಲ್ಲಿ ಪೊಲೀಸ್‌ ಮಹಾನಿರ್ದೇಶಕ ಅಲೋಕ್ ಮೋಹನ್ ಹಾಗೂ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಇಬ್ಬರು ಹಿರಿಯ ಅಧಿಕಾರಿಗಳ ಜತೆ ಸಿಎಂ ಸಿದ್ದರಾಮಯ್ಯ ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಚರ್ಚೆ ನಡೆಸಿದರು. ಚರ್ಚೆ ವೇಳೆ ಘಟನೆ ಕುರಿತು ಅಲೋಕ್ ಮೋಹನ್ ಅವರು ಸಿಎಂಗೆ ಹೆಚ್ಚಿನ ಮಾಹಿತಿ ನೀಡಿದರು.

Hubli Murder Case

ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ

ಈಗ ಚುನಾವಣಾ ಸಮಯವಾಗಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದಲ್ಲಿ ಯಾವುದೇ ರೀತಿಯಾದಂತಹ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು. ಇಂತಹ ಘಟನೆಗಳು ಮತ್ತೆ ಮತ್ತೆ ನಡೆಯದಂತೆ ಎಚ್ಚರ ವಹಿಸಬೇಕು. ಆರೋಪಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಮಹಾನಿರ್ದೇಶಕರಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದೇ ವೇಳೆ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚದಂತೆ ನೋಡಿಕೊಳ್ಳಲು ಬೆಂಗಳೂರು ಪೊಲೀಸ್ ಆಯುಕ್ತರಿಗೂ ಎಚ್ಚರಿಕೆ ನೀಡಿದ್ದಾರೆ.

ನೇಹಾ ಹತ್ಯೆಗೆ ಸಿಎಂ ಸಂತಾಪ

ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್‌ ಮಗಳು ನೇಹಾ ಹಿರೇಮಠ ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಘಟನೆ ಸಂಬಂಧ ಯಾರೊಬ್ಬರೂ ಉದ್ವೇಗಕ್ಕೆ ಒಳಗಾಗಿ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಹೇಳಿದ್ದಾರೆ.

ಸಿಎಂ ಟ್ವೀಟ್‌ನಲ್ಲೇನಿದೆ?

“ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಮೃತ ಯುವತಿಯ ಕುಟುಂಬಕ್ಕೆ ನನ್ನ ಸಂತಾಪಗಳು.

ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ.

ಘಟನೆ ಸಂಬಂಧ ಯಾರೊಬ್ಬರೂ ಉದ್ವೇಗಕ್ಕೆ ಒಳಗಾಗಿ ಕಾನೂನನ್ನು ಕೈಗೆತ್ತಿಕೊಳ್ಳುವುದಾಗಲೀ ಅಥವಾ ಸಮಾಜದ ಶಾಂತಿ ಕದಡುವ ಪ್ರಯತ್ನಕ್ಕೆ ಮುಂದಾಗಬಾರದು. ಯುವತಿಯ ಸಾವಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ‌ ಕರ್ತವ್ಯ, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶಕ್ತಿಮೀರಿ ಶ್ರಮಿಸಲಿದೆ” ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ.

ಏನಿದು ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌, ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ. ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ನೇಹಾ ಹಿರೇಮಠ ಕೊಲೆಯಾದ ಯುವತಿ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ. ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಲವ್‌ ಜಿಹಾದ್‌ ಫಲಿಸದ್ದಕ್ಕೆ ಕೃತ್ಯ: ಪ್ರಮೋದ್‌ ಮುತಾಲಿಕ್

ಕೊಲೆ ಎನ್ನುವುದು ಇಸ್ಲಾಮ್‌ನಲ್ಲಿ ಸಹಜ ಪ್ರಕ್ರಿಯೆಯಾಗಿದೆ. ವಿದ್ಯಾರ್ಥಿನಿಯರಿಗೆ ರಕ್ಷಣೆ ಇಲ್ಲ ಎನ್ನುವಂತಾಗಿದೆ. ಆತ ಐಸಿಸ್ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಆರೋಪಿ ಫಯಾಜ್‌ ಲವ್ ಮಾಡಿ ಮತಾಂತರ ಮಾಡಲು ಮುಂದಾಗಿದ್ದ. ಲವ್ ಜಿಹಾದ್ ಯಶಸ್ವಿಯಾಗಲಿಲ್ಲವೆಂದು ಈಗ ಕೊಲೆ ಮಾಡಿದ್ದಾನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಮೋದ್‌ ಮುತಾಲಿಕ್‌, ಫಯಾಜ್‌ ಐಸಿಸ್‌ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಚಾಕು ಹಾಕಲು ಆತ ಎಲ್ಲಿ ತರಬೇತಿ ಪಡೆದಿದ್ದಾನೆ? ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಬೆಳೆಸಿದ ವಿಷಬೀಜವಿದು. ಕಾಂಗ್ರೆಸ್ ಹುಟ್ಟಿದಾಗ ಆ ಪಕ್ಷದ ನಾಯಕರು ಬ್ರಿಟಿಷರ ಪರವಿದ್ದರು. ಈಗ ಮುಸ್ಲಿಮರು, ಕೊಲೆಗಡುಕರ ಪರ‌ ಇದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿಜವಾಗಿ ಕಳಕಳಿ ಇದ್ದರೆ ಕೊಲೆಗಡುಕನನ್ನು ಎನ್ಕೌಂಟರ್ ಮಾಡಿಸಬೇಕು. ಕೊಲೆಗಡುಕನ ಮನೆಗೆ ಬುಲ್ಡೋಜರ್ ಹಚ್ಚಿಸಿ ಕಿತ್ತು ಬಿಸಾಕಬೇಕು. ಜಮಾತೆ ಇಸ್ಲಾಮಿನವರು ಕೂಡಲೇ ಫತ್ವಾ ಹೊರಡಿಸಿ ಅವರ ಮನೆಯನ್ನು ಬಹಿಷ್ಕರಿಸಬೇಕು. ವಕೀಲರು ಅವನ ಪರ ವಾದ ಮಾಡಲು ನಿಲ್ಲಬಾರದು. ಎಲ್ಲಿಯವರೆಗೆ ಕಾಂಗ್ರೆಸ್ ಇರುತ್ತೆದೆಯೋ ಅಲ್ಲಿಯವರೆಗೆ ಈ ರೀತಿ ಕೊಲೆಗಳು ಆಗುತ್ತಲೇ ಇರುತ್ತವೆ ಎಂದು ಪ್ರಮೋದ್‌ ಮುತಾಲಿಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಮತ್ತೊಂದು ಬಿಹಾರವಾಗುತ್ತಿದೆ: ಬಸವರಾಜ ಬೊಮ್ಮಾಯಿ

ಹಾಡಹಗಲೇ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿಯಾಗಿದೆ. ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿವೆ. ಕಾಲೇಜು ಯುವತಿಯ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ಮೂಲಕ ತನಿಖೆ ನಡೆಸಬೇಕು. ಕರ್ನಾಟಕವು ಇನ್ನೊಂದು ಬಿಹಾರ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್‌ಗೆ ಭೇಟಿ ನೀಡಿ ನೇಹಾ ಕುಟುಂಬದವರಿಗೆ ಸಾಂತ್ವನ ಹೇಳಿದ ಬಸವರಾಜ ಬೊಮ್ಮಾಯಿ, ಇದೊಂದು ಆಘಾತಕರ ವಿಚಾರ. ಈ ರೀತಿ ಹುಬ್ಬಳ್ಳಿಯಲ್ಲಿ ಯಾವತ್ತೂ ನಡೆದಿಲ್ಲ. ಇದೊಂದು ಸಮಾಜದ ನಡುವೆ ಇರುವ ಕ್ಷೋಭೆ. ಸಮಾಜಗಳ ನಡುವೆ ಸಾಮರಸ್ಯ ಕಡಿಮೆಯಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಗದಗಿನಲ್ಲಿ ನಮ್ಮ ನಗರ ಸಭೆಯ ಉಪಾಧ್ಯಕ್ಷರ ಕುಟುಂಬದವರು ಕಗ್ಗೊಲೆಯಾಗಿದೆ. ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಹೇಳಿದವರ ಮೇಲೆ ಹಲ್ಲೆಯಾಗಿದೆ. ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿದೆ. ಈ ಸರ್ಕಾರದಲ್ಲಿ ಗೂಂಡಾಗಳನ್ನು ರಕ್ಷಿಸುವವರು ಇದ್ದಾರೆ ಎನ್ನುವ ನಂಬಿಕೆ ಇರುವುದರಿಂದ ಈ ರೀತಿ ಘಟನೆ ನಡೆಯುತ್ತಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಟ್ವೀಟ್ ಮಾಡಿ ಕೈತೊಳೆದುಕೊಳ್ಳಬಾರದು ಎಂದು ಹೇಳಿದರು.

ಇದನ್ನು ಕೇವಲ ವೈಯಕ್ತಿಕ ಘಟನೆ ಎಂದು ನೋಡಬಾರದು. ಇಂಥದ್ದು ಇಡೀ ಸಮಾಜದ ಮೇಲೆ ಪರಿಣಾಮ ಬೀರುತ್ತವೆ. ಕರ್ನಾಟಕವು ಇನ್ನೊಂದು ಬಿಹಾರ ಆಗುತ್ತಿದೆ. ಗೃಹ ಸಚಿವರು, ಡಿಜಿಪಿ ಏನು ಮಾಡುತ್ತಿದ್ದಾರೆ? ಈ ಸರ್ಕಾರದ ಅವಧಿಯಲ್ಲಿ ವಿಧಾನಸೌಧದಲ್ಲಿಯೇ ಪಾಕಿಸ್ತಾನ ಜಿಂದಾಬಾದ್ ಹೇಳುತ್ತಾರೆ. ಗದಗಿನಲ್ಲಿ ಕುಟುಂಬದ ಕಗ್ಗೊಲೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: Neha Murder Case: ನೇಹಾ ಕೊಲೆಗಾರ ಫಯಾಜ್‌ಗೆ 14 ದಿನ ನ್ಯಾಯಾಂಗ ಬಂಧನ; ʼಲವ್‌ ಜಿಹಾದ್‌ ಕೊಲೆʼ ವಿರೋಧಿಸಿ ಮೂರು ದಿನ ಮುನವಳ್ಳಿ ಬಂದ್

ಹುಬ್ಬಳ್ಳಿ ಕಮಿಷನರ್ ಹೇಳಿಕೆಗಳನ್ನು ನೋಡಿದಾಗ ಅವರು ಯಾವುದೇ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ನೇಹಾ ಹತ್ಯೆ ಪ್ರಕರಣವನ್ನು ಎಸ್‌ಐಟಿ ಮೂಲಕ ತನಿಖೆ ನಡೆಸಬೇಕು. ರಾಜ್ಯದಲ್ಲಿ ಎಲ್ಲ ಕುಟುಂಬಗಳು ಭಯಭೀತರಾಗಿದ್ದಾರೆ. ಅಪರಾಧ ವಿಭಾಗದ ಡಿಜಿಪಿ ಇದರ ಮುಂದಾಳತ್ವ ವಹಿಸಿ ತನಿಖೆ ನಡೆಸಬೇಕು. ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. ಈ ಪ್ರಕರಣದ ತಾರ್ಕಿಕ ಅಂತ್ಯ ಆಗುವವರೆಗೂ ಹೋರಾಟ ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕುಟುಂಬಕ್ಕೆ ಸಾಂತ್ವನ

ಹತ್ಯೆಗೀಡಾದ ನೇಹಾ ಅವರ ತಂದೆಗೆ ದೂರವಾಣಿ ಮೂಲಕ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಈ ರೀತಿಯ ಘಟನೆ ದುರದೃಷ್ಟಕರ ನಾವು ನಿಮ್ಮೊಂದಿಗಿದ್ದೇವೆ. ಧೈರ್ಯವಾಗಿರಿ ಎಂದು ಸಾಂತ್ವನ ಹೇಳಿದರು.

Continue Reading

ರಾಯಚೂರು

Murder Case : ಕಲ್ಲಿನಿಂದ ಜಜ್ಜಿ ಪತ್ನಿಯ ಕೊಂದು ನೇಣಿಗೆ ಶರಣಾದ ಅನುಮಾನ ಪಿಶಾಚಿ

Murder case : ಪತ್ನಿಯ ಶೀಲ ಶಂಕಿಸಿ ನಿತ್ಯವು ಜಗಳವಾಡುತ್ತಿದ್ದ ಪತಿಯೊಬ್ಬ ಸಿಟ್ಟಿನಲ್ಲಿ ಕಲ್ಲಿನಿಂದ ಜಜ್ಜಿ ಕೊಂದು, ಬಳಿಕ ತಾನೂ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

VISTARANEWS.COM


on

By

Murder case In Raichur
Koo

ರಾಯಚೂರು: ಕ್ಷುಲ್ಲಕ ಕಾರಣಕ್ಕೆ ಗಂಡ- ಹೆಂಡತಿ ನಡೆದ ಜಗಳವು ಕೊಲೆಯಲ್ಲಿ (Murder Case) ಅಂತ್ಯವಾಗಿದೆ. ಸಿಟ್ಟಿನಿಂದ ಪತ್ನಿಯನ್ನು ಕೊಂದು ಪತಿಯೂ ನೇಣಿಗೆ ಶರಣಾಗಿದ್ದಾನೆ. ರಾಯಚೂರಿನ ಸಿಂಧನೂರು ತಾಲೂಕಿನ ದಿದ್ದಿಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಕವಿತಾ (26) ಕೊಲೆಯಾದವಳು. ಭೀಮಣ್ಣ (28) ಎಂಬಾತ ಪತ್ನಿಯನ್ನು ಕೊಂದು ನೇಣಿಗೆ ಶರಣಾದವನು.

ಕವಿತಾ ಹಾಗೂ ಭೀಮಣ್ಣ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಇಬ್ಬರಿಗೂ ಮದುವೆಯಾಗಿತ್ತು. ಈ ದಂಪತಿ ಮೊದಮೊದಲು ಖುಷಿಯಾಗಿಯೇ ಇದ್ದರು. ಆದರೆ ಇತ್ತೀಚೆಗೆ ಭೀಮಣ್ಣನಿಗೆ ಕವಿತಾಳ ಮೇಲೆ ಅನುಮಾನ ಮೂಡಿತ್ತು. ಆಕೆಯ ಶೀಲವನ್ನು ಶಂಕಿಸಿದ್ದ. ಇದೇ ವಿಚಾರಕ್ಕೆ ಪದೇಪದೆ ಪತ್ನಿ ಜತೆ ಜಗಳ ಮಾಡುತ್ತಿದ್ದ.

ಇದೇ ವಿಚಾರಕ್ಕೆ ನಿನ್ನೆ ಗುರುವಾರ ಗಲಾಟೆ ನಡೆದಿದೆ.‌ ಕೋಪದ ಕೈಗೆ ಬುದ್ಧಿಕೊಟ್ಟ ಭೀಮಣ್ಣನ ಕಲ್ಲಿನಿಂದ ಕವಿತಾಳನ್ನು ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಆಕೆ ಮೃತಪಟ್ಟ ಕೂಡಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಳಗಾನೂರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಳಗಾನೂರು ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Self Harming : ಕಾಲೇಜಿನಿಂದ ಬಂದವಳೇ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿ 4 ಮಂದಿ ಮಲಗಿದಲ್ಲೇ ಕೊಚ್ಚಿ ಕೊಲೆ

ಗದಗ: ಒಂದೇ ಕುಟುಂಬದ ನಾಲ್ಕು ಮಂದಿಯನ್ನು ಮನೆಯಲ್ಲಿ ಮಲಗಿದಲ್ಲೇ ಕೊಚ್ಚಿ ಭೀಕರವಾಗಿ ಹತ್ಯೆ (Murder Case) ಮಾಡಲಾಗಿದೆ. ಈ ಬರ್ಬರ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದ್ದು, ಕೃತ್ಯದ (Crime news) ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಹುಬ್ಬಳ್ಳಿಯ ಕಾರ್ಪೊರೇಟರ್‌ ಪುತ್ರಿ ನೇಹಾ ಕೊಲೆ (Hubli Neha Murder) ಕೃತ್ಯ ಇನ್ನೂ ಹಸಿಯಾಗಿರುವಾಗಲೇ ಈ ಘಟನೆ ನಡೆದಿದೆ.

ಕೊಲೆಯಾದವರಲ್ಲಿ ನಗರಸಭೆ ಉಪಾಧ್ಯಕ್ಷೆಯ ಪುತ್ರನೊಬ್ಬ ಸೇರಿದ್ದಾನೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ದರೋಡೆ ಸೇರಿದಂತೆ ವಿವಿಧ ಆಯಾಮಗಳನ್ನು ತನಿಖೆ ನಡೆಸಲಾಗುತ್ತಿದೆ.

ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳನ್ನು ಕೊಲೆ ಮಾಡಲಾಗಿದೆ. ಈ ಮೂವರೂ ಕೊಪ್ಪಳ ಮೂಲದವರಾಗಿದ್ದು, ಏಪ್ರಿಲ್‌ 17ರಂದು ನಡೆದ ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್‌ನ ಮದುವೆ ಫಿಕ್ಸ್ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ಸಂಬಂಧಿಗಳಾಗಿದ್ದಾರೆ.

ಮೇಲಿನ ಮಹಡಿಯ ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಕುಟುಂಬಸ್ಥರು ಪೊಲೀಸರಿಗೆ ಫೋನ್ ಮಾಡಿದ್ದರು. ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಬಾಗಿಲು ತೆಗೆದಿದ್ದರೆ ನಮ್ಮನ್ನೂ ಕೊಲೆ ಮಾಡುವ ಸಾಧ್ಯತೆಯಿತ್ತು ಎಂದು ಮನೆ ಮಾಲೀಕ‌ ಪ್ರಕಾಶ್ ಬಾಕಳೆ ಹೇಳಿಕೆ ನೀಡಿದ್ದಾರೆ.

ಶ್ವಾನದಳ, ಫಾರೆನ್ಸಿಕ್‌ ತಂಡಗಳು ಆಗಮಿಸಿದ್ದು, ಮನೆಯ ಇಂಚಿಂಚೂ ಪರಿಶೀಲನೆ ಮಾಡಲಾಗಿದೆ. ಸ್ಥಳಕ್ಕೆ ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೇಲ್ನೋಟಕ್ಕೆ ದರೋಡೆಗೆ ಬಂದ ತಂಡ ನಡೆಸಿರುವ ಕೃತ್ಯದಂತೆ ಕಂಡುಬಂದಿದ್ದರೂ, ಪ್ರಕರಣದ ಹಲವು ಮಗ್ಗಲುಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿನ್ನದ ದರ

Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ; ಬೆಂಗಳೂರಿನಲ್ಲಿ ಇಂದು ಹೀಗಿದೆ ದರ

Gold Rate Today: ಕಳೆದ ಒಂದು ತಿಂಗಳಿನಿಂದ ಚಿನ್ನದ ದರ ಏರುತ್ತಲೇ ಇದ್ದುದು ನಿನ್ನೆ ಸ್ವಲ್ಪ ಇಳಿಕೆ ಕಂಡಿತ್ತು. ಇಂದು ಮತ್ತೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ.

VISTARANEWS.COM


on

tamanna bhatia gold
Koo

ಬೆಂಗಳೂರು: ಶುಕ್ರವಾರ ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹50 ಮತ್ತು ₹54 ಏರಿಕೆಯಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ದರ ಏರುತ್ತಲೇ ಇದ್ದುದು ನಿನ್ನೆ ಸ್ವಲ್ಪ ಇಳಿಕೆ ಕಂಡಿತ್ತು. ಇಂದು ಮತ್ತೆ ಹೆಚ್ಚಳವಾಗಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,815ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,520 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹68,150 ಮತ್ತು ₹6,81,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,434 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,472 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹74,340 ಮತ್ತು ₹7,43,400 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹85.75, ಎಂಟು ಗ್ರಾಂ ₹686 ಮತ್ತು 10 ಗ್ರಾಂ ₹857.50ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,575 ಮತ್ತು 1 ಕಿಲೋಗ್ರಾಂಗೆ ₹85,750 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ68,30074,490
ಮುಂಬಯಿ68,150 74,340
ಬೆಂಗಳೂರು68,150 74,340
ಚೆನ್ನೈ68,90075,160

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Gold Rate Today: ₹74,130 ತಲುಪಿ ಯಥಾಸ್ಥಿತಿ ಕಾಪಾಡಿಕೊಂಡ ಚಿನ್ನದ ಬೆಲೆ; ಇಂದಿನ ದರ ಹೀಗಿದೆ

Continue Reading
Advertisement
IPL 2024
ಕ್ರೀಡೆ2 mins ago

IPL 2024: ಡಿಆರ್​ಎಸ್​ ಚೀಟಿಂಗ್ ವೇಳೆ ಸಿಕ್ಕಿ ಬಿದ್ದ ಮುಂಬೈ ಇಂಡಿಯನ್ಸ್​; ವಿಡಿಯೊ ವೈರಲ್​

Job Alert
ಉದ್ಯೋಗ7 mins ago

Job Alert: 247 ಪಿಡಿಒ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ; ಇಲ್ಲಿದೆ ಡೈರಕ್ಟ್‌ ಲಿಂಕ್‌

lok sabha election 2024 1st phase voting
ಪ್ರಮುಖ ಸುದ್ದಿ24 mins ago

Lok Sabha Election 2024: ಮೊದಲ ಹಂತದ ಮತದಾನ; ಪಶ್ಚಿಮ ಬಂಗಾಲ, ಮಣಿಪುರ, ಛತ್ತೀಸ್‌ಗಢದಲ್ಲಿ ಹಿಂಸಾಚಾರ

pesticide everest fish curry masala
ವೈರಲ್ ನ್ಯೂಸ್52 mins ago

Pesticide: ಎವರೆಸ್ಟ್‌ ಫಿಶ್‌ ಕರಿ ಮಸಾಲೆಯಲ್ಲಿ ಕೀಟನಾಶಕ; ಬ್ಯಾನ್‌ ಮಾಡಿದ ಸಿಂಗಾಪುರ

Take strict action in Neha Murder Case CM instructs to DG
ಕ್ರೈಂ1 hour ago

Neha Murder Case: ನೇಹಾ ಕೇಸ್‌ನಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ; ಡಿಜಿಗೆ ಸಿಎಂ ಸೂಚನೆ

IPL 2024
ಕ್ರಿಕೆಟ್2 hours ago

IPL 2024: ಸಿಕ್ಸರ್​ ಮೂಲಕ ದಾಖಲೆ ಬರೆದ ಹಿಟ್​ಮ್ಯಾನ್​ ರೋಹಿತ್​

Murder case In Raichur
ರಾಯಚೂರು2 hours ago

Murder Case : ಕಲ್ಲಿನಿಂದ ಜಜ್ಜಿ ಪತ್ನಿಯ ಕೊಂದು ನೇಣಿಗೆ ಶರಣಾದ ಅನುಮಾನ ಪಿಶಾಚಿ

Lok sabha election-2024
Latest2 hours ago

Lok Sabha Election 2024: ಲೋಕಸಭೆ ಚುನಾವಣೆ ಮೊದಲ ಹಂತದಲ್ಲಿ ಪ್ರಬಲ ಪೈಪೋಟಿಯ ಟಾಪ್ 10 ಕ್ಷೇತ್ರಗಳಿವು

tamanna bhatia gold
ಚಿನ್ನದ ದರ2 hours ago

Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ; ಬೆಂಗಳೂರಿನಲ್ಲಿ ಇಂದು ಹೀಗಿದೆ ದರ

CET 2024 exam Complaint against syllabus question of Mathematics and Biology KEA to set up committee on April 24
ಶಿಕ್ಷಣ2 hours ago

CET 2024 Exam: ಗಣಿತ, ಜೀವಶಾಸ್ತ್ರದ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ವಿರುದ್ಧ ದೂರು; ಏಪ್ರಿಲ್‌ 24ಕ್ಕೆ ಸಮಿತಿ ರಚನೆಗೆ ಕೆಇಎ ನಿರ್ಧಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ10 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 week ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

ಟ್ರೆಂಡಿಂಗ್‌