Target to provide drinking water to 4.64 lakh households in Vijayapura Chief Minister Basavaraj BommaiBasavaraj Bommai: ವಿಜಯಪುರದಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿ; ಬೊಮ್ಮಾಯಿ Vistara News
Connect with us

ಕರ್ನಾಟಕ

Basavaraj Bommai: ವಿಜಯಪುರದಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿ; ಬೊಮ್ಮಾಯಿ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳತ್ತ ರಾಜ್ಯ ಸರ್ಕಾರ ಮುಂದಾಗುತ್ತಿದೆ. ಮಂಗಳವಾರ ವಿಜಯಪುರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ.

VISTARANEWS.COM


on

Koo

ವಿಜಯಪುರ: ಜಿಲ್ಲೆಯಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿಯಿದ್ದು, ಈಗಾಗಲೇ 2.87 ಸಾವಿರ ಮನೆಗಳಿಗೆ ನೀರು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಜಿಲ್ಲಾಡಳಿತ ವಿಜಯಪುರ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮುದ್ದೇಬಿಹಾಳದ ನಾಲತಾವಾಡ ಪಟ್ಟಣದಲ್ಲಿ ಆಯೋಜಿಸಿದ್ದ ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಕಾರ್ಯವನ್ನು ಹಾಗೂ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ನೆರವೇರಿಸಿ ಮಾತನಾಡಿದರು.

ಜಲ ಜೀವನ್ ಮಿಷನ್ ಅಡಿಯಲ್ಲಿ ದೇಶದಲ್ಲಿ 12 ಕೋಟಿ ಮನೆಗಳಿಗೆ ನೀರು ಒದಗಿಸಲಾಗಿದೆ. ಮೂರು ವರ್ಷಗಳಲ್ಲಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಒದಗಿಸಲಾಗಿದೆ. ಮುಂದಿನ ವರ್ಷ 25 ಲಕ್ಷ ಮನೆಗಳಿಗೆ ನೀರು ಒದಗಿಸಲಾಗುತ್ತಿದೆ. ಜಲಧಾರೆಯಲ್ಲಿ ನಗರ ಪ್ರದೇಶಗಳಲ್ಲಿ3000 ಕೋಟಿ ರೂ.ಗಳನ್ನು ಒದಗಿಸಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಪ್ರದೇಶಗಳಲ್ಲಿ ನೀರು ಒದಗಿಸುವ ಚಿಂತನೆ ಇದೆ ಎಂದರು.

4 ಸಾವಿರ ಕೋಟಿ ರೂ. ಗಳಿಂತ ಹೆಚ್ಚು ಮೌಲ್ಯದ ಅಭಿವೃದ್ಧಿ

1,600 ಕೋಟಿ ರೂ.ಗಳ ಮೌಲ್ಯದ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿದೆ. ಈ ಮೊದಲು 2500 ಕೋಟಿ ರೂ.ಗಳ ವೆಚ್ಚದ ಅಭಿವೃದ್ಧಿಯನ್ನು ಶಾಸಕ ನಡಹಳ್ಳಿ ಮಾಡಿದ್ದಾರೆ. ಒಂದು ಅವಧಿಯಲ್ಲಿ ನಾಲ್ಕು ಸಾವಿರ ಕೋಟಿ ರೂ.ಗಳಿಂತ ಹೆಚ್ಚು ಮೌಲ್ಯದ ಅಭಿವೃದ್ಧಿ ಮಾಡಲಾಗಿರುವುದು ಒಂದು ದಾಖಲೆಯಾಗಿದೆ. ಉತ್ತರ ಕರ್ನಾಟಕದ, ಹಿಂದುಳಿದ ವರ್ಗಗಳ ಅಭಿವೃದ್ಧಿಯಾಗಬೇಕು ಎಂದು ಹೇಳಿದರು.

ನಂಜುಂಡಪ್ಪ ವರದಿಯಿಂದ ಹಿಡಿದು ಬಹಳಷ್ಟು ವರದಿಗಳಿವೆ. ನಂಜುಂಡಪ್ಪ ವರದಿಯ ಅನುಷ್ಠಾನವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಡಿದ್ದು. ಈ ಭಾಗದಲ್ಲಿ ವಿಶೇಷವಾಗಿ ನೀರಾವರಿಗೆ ಮೂಲಭೂತ ಸೌಕರ್ಯ, ಕುಡಿಯುವ ನೀರು, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಿರುವ ಪರಿಣಾಮ ಇಷ್ಟು ದೊಡ್ಡ ಪ್ರಮಾಣದಲ್ಲಿ ಈ ಕ್ಷೇತ್ರದ ಅಭಿವೃದ್ಧಿ ಮಾಡಲು ಸಾಧ್ಯವಾಗಿದೆ ಎಂದರು.

ಕೆಲಸಗಳೇ ನಮ್ಮ ಗ್ಯಾರಂಟಿ, ಆಶ್ವಾಸನೆಗಳಲ್ಲ

ಕಿಸಾನ್ ಸಮ್ಮಾನ್ ಯೋಜನೆಯಡಿ 16 ಸಾವಿರ ಕೋಟಿ ವೆಚ್ಚದಲ್ಲಿ 54 ಲಕ್ಷ ರೈತರಿಗೆ ಅನುಕೂಲ ಕಲ್ಪಿಸಲಾಗಿದ್ದು ನಮ್ಮದು ರೈತಪರ ಸರ್ಕಾರ. ಮುಧೋಳದಲ್ಲಿ 975 ಕೋಟಿ ರೂ.ಗಳ ಅನುದಾನವನ್ನು 47 ಲಕ್ಷ ರೈತರಿಗೆ ಬಿಡುಗಡೆ ಮಾಡಲಾಗುತ್ತಿದೆ. ನಾವು ಮಾತಿಗಿಂತ ಮಾಡಿ ತೋರಿಸುತ್ತೇವೆ. ನಮ್ಮ ಕೆಲಸಗಳೇ ನಮ್ಮ ಗ್ಯಾರಂಟಿ. ಆಶ್ವಾಸನೆಗಳು ನಮ್ಮ ಗ್ಯಾರಂಟಿ ಅಲ್ಲ ಸಿಎಂ ಬೊಮ್ಮಾಯಿ ವಿರೋಧ ಪಕ್ಷಗಳಿಗೆ ತಿವಿದರು.

ರೈತ ವಿದ್ಯಾನಿಧಿ ಯೋಜನೆ, ರೈತಶಕ್ತಿ ಯೋಜನೆಯಡಿ 386 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಈ ವರ್ಷ ಭೂ ಶಕ್ತಿ ಯೋಜನೆಯಡಿ ಬೀಜಗೊಬ್ಬರಕ್ಕೆ 10 ಸಾವಿರ ರೂ.ಗಳನ್ನು ನೀಡಲಾಗುವುದು. ರೈತರಿಗೆ ಜೀವ ವಿಮೆಗಾಗಿ 180 ಕೋಟಿ ಮೀಸಲಿಡಲಾಗಿದೆ. 53 ಲಕ್ಷ ಜನರಿಗೆ ಇದರ ಪ್ರಯೋಜನವಾಗಲಿದೆ. ಶೂನ್ಯ ಬಡ್ಡಿದರದಲ್ಲಿ 5 ಲಕ್ಷದವರೆಗೆ ಸಾಲದ ವ್ಯವಸ್ಥೆ, 3500 ಕೋಟಿ ರೂ.ಗಳ ಆವರ್ತ ನಿಧಿಯಡಿ ಮೀಸಲಿಡಲಾಗಿದೆ. ಸಿರಿಧಾನ್ಯ ಬೆಳೆದವರಿಗೆ 1 ಹೆಕ್ಟೇರ್‌ಗೆ 10 ಸಾವಿರ ರೂ.ಗಳ ವ್ಯವಸ್ಥೆ ಮಾಡಲಾಗಿದೆ ಎಂದರು.

ಸ್ವಯಂ ಉದ್ಯೋಗ ಮಹತ್ವ

ಸ್ತ್ರೀ ಶಕ್ತಿ ಸಂಘಗಳಿಗೆ ಸ್ವಯಂ ಉದ್ಯೋಗಕ್ಕಾಗಿ 20 ಸಾವಿರ ಹಣ ಬಿಡುಗಡೆ ಮಾಡಲಾಗುತ್ತಿದೆ. ಸ್ವಾಮಿ ವಿವೇಕಾನಂದ ಯೋಜನೆಯನ್ನು 23 ರಂದು 13 ಸಾವಿರ ಯುವಶಕ್ತಿ ಕೇಂದ್ರಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು. ಈ ಮೂಲಕ ಕಾಯಕ ಕ್ರಾಂತಿ ಮಾಡಬೇಕು ಎಂದರು. ಎಸ್‌ಸಿ, ಎಸ್‌ಟಿಗಳಿಗೆ ಮೀಸಲಾತಿ ಹೆಚ್ಚಿಸಿ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗಿದೆ. ಎಲ್ಲ ವರ್ಗಕ್ಕೆ ನ್ಯಾಯ ನೀಡುವ ಕೆಲಸ ಮಾಡಿದ್ದೇವೆ. ಮುದ್ದೇಬಿಹಾಳ ಮಾದರಿಯಾಗುವಂತೆ ಕೆಲಸ ಮಾಡಲಾಗಿದೆ ಎಂದು ಸಿಎಂ ಹೇಳುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದರು.

ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಕಟಿ ಬದ್ದ

ನಮ್ಮ ಸರ್ಕಾರ ಕೆರೆ ತುಂಬಿಸುವ ಯೋಜನೆಗಳನ್ನು ಸಂಪೂರ್ಣಗೊಳಿಸಲಾಗುತ್ತಿದೆ. ರೇವಣಸಿದ್ದೇಶ್ವರ ಏತ ನೀರಾವರಿಗೆ ಅಡಿಗಲ್ಲು ಹಾಕಲಾಗಿದೆ. ನಮ್ಮ ಪಾಲಿನ ನೀರನ್ನು ಸದ್ಬಳಕೆ ಮಾಡಲು ನಮ್ಮ ಸರ್ಕಾರ ಆದ್ಯತೆ ನೀಡಿದೆ. ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಈ ಬಾರಿ ಕಿತ್ತೂರು ಅಭಿವೃದ್ಧಿ ಮಂಡಳಿ ರಚನೆ ಮಾಡಲಾಗಿದೆ. ಅದಕ್ಕೆ ಅನುದಾನ ನೀಡಿ, ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಕಟಿಬದ್ಧರಾಗಿ ಕೆಲಸ ಮಾಡುವುದಾಗಿ ತಿಳಿಸಿದರು.

ಇದನ್ನೂ ಓದಿ: Murder Case: ಅವಳದ್ದು ಮೋಹ, ಇವನಿಗೆ ಮಧುಮೇಹ; ಕೊಲೆಯಲ್ಲಿ ಅಂತ್ಯವಾಯ್ತು ಕಾಳಜಿ ಕಲಹ

ವಿಜಯಪುರ ಜಿಲ್ಲೆಗೆ ಐದು ನದಿಗಳು ಹರಿದರೂ ಬರ ತಪ್ಪಲಿಲ್ಲ. ವಿಜಯಪುರ ಜಿಲ್ಲೆಯ ಎಲ್ಲ ಕ್ಷೇತ್ರಗಳ ನೀರಾವರಿಯಾಗುವವರೆಗೂ ಸುಮಾರು 5 ಲಕ್ಷ ಹೆಕ್ಟೇರ್‌ಗೆ ನೀರಾವರಿಯಾಗುವವರೆಗೂ ನಾವು ವಿಶ್ರಮಿಸುವುದಿಲ್ಲ. ಮುದ್ದೇಬಿಹಾಳ ಕ್ಷೇತ್ರ ಎಲ್ಲಾ ರೀತಿಯಲ್ಲೂ ಅಭಿವೃದ್ಧಿಯಾದಂತೆ ಕರ್ನಾಟಕದ ಎಲ್ಲ ಕ್ಷೇತ್ರಗಳೂ ಅಭಿವೃದ್ಧಿಪಡಿಸಲು ಶ್ರಮವಹಿಸುತ್ತಿವೆ. ಕಳೆದ 3 ವರ್ಷಗಳಲ್ಲಿ 2 ಲಕ್ಷ ಕೋಟಿ ರೂ.ಗಳ ಅಭಿವೃದ್ಧಿ ಮಾಡಲಾಗಿದೆ. ಇದೊಂದು ದಾಖಲೆ ಎಂದರು.

ರಾಜ್ಯದ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕರ್ನಾಟಕ

ಜೂ.16 ರಿಂದ 22ರವರೆಗೆ ಗೋವಾದಲ್ಲಿ ‘ವೈಶ್ವಿಕ ಹಿಂದು ರಾಷ್ಟ್ರ ಮಹೋತ್ಸವʼ

ಗೋವಾದ ಫೋಂಡಾ ನಗರದ ಶ್ರೀ ರಾಮನಾಥ ದೇವಸ್ಥಾನ ಆವರಣದಲ್ಲಿ ಜೂನ್ 16 ರಿಂದ 22ರವರೆಗೆ 11ನೇ ಅಖಿಲ ಭಾರತೀಯ ಹಿಂದು ರಾಷ್ಟ್ರ ಅಧಿವೇಶನ ನಡೆಯಲಿದೆ.

VISTARANEWS.COM


on

Edited by

Hindu janajagruti samiti pressmeet
Koo

ಬೆಂಗಳೂರು: ಹಿಂದು ರಾಷ್ಟ್ರ ಸ್ಥಾಪನೆಯ ಉದ್ದೇಶದೊಂದಿಗೆ ಪ್ರತಿ ವರ್ಷದಂತೆ ಜೂನ್ 16 ರಿಂದ 22ರವರೆಗೆ ಗೋವಾದ ಫೋಂಡಾ ನಗರದ ಶ್ರೀ ರಾಮನಾಥ ದೇವಸ್ಥಾನ ಆವರಣದಲ್ಲಿ ʼ11ನೇ ಅಖಿಲ ಭಾರತೀಯ ಹಿಂದು ರಾಷ್ಟ್ರ ಅಧಿವೇಶನʼ (ವೈಶ್ವಿಕ ಹಿಂದು ರಾಷ್ಟ್ರ ಮಹೋತ್ಸವ) ಆಯೋಜಿಸಲಾಗಿದೆ ಎಂದು ಹಿಂದು ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ್ ಗೌಡ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ವಿವಿಧ ವಿಷಯಗಳ ಬಗ್ಗೆ ವಿಶೇಷ ತಜ್ಞರ ಚರ್ಚಾಕೂಟ, ಗೌರವಾನ್ವಿತರ ಸಂದರ್ಶನ ಇರಲಿದೆ. ‘ಲವ್ ಜಿಹಾದ್, ‘ಹಲಾಲ್ ಸರ್ಟಿಫಿಕೇಷನ್, ‘ಲ್ಯಾಂಡ್ ಜಿಹಾದ್, ‘ಕಾಶಿ-ಮಥುರಾ ಮುಕ್ತಿ, ‘ಮತಾಂತರ, ‘ಗೋಹತ್ಯೆ, ‘ಕೋಟೆ ದೇವಸ್ಥಾನಗಳ ಮೇಲಿನ ಇಸ್ಲಾಂ ಅತಿಕ್ರಮಣ, ‘ದೇವಸ್ಥಾನ ಸಂಸ್ಕೃತಿಯ ರಕ್ಷಣೆ, ‘ಕಾಶ್ಮೀರಿ ಹಿಂದುಗಳ ಪುನರ್ವಸತಿ, ‘ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದುಗಳ ಮೇಲಿನ ದೌರ್ಜನ್ಯ ಸೇರಿ ವಿವಿಧ ವಿಷಯಗಳ ಜತೆಗೆ ಹಿಂದು ರಾಷ್ಟ್ರದ ಅಡಿಪಾಯಕ್ಕಾಗಿ ಅವಶ್ಯಕ ವಿಷಯಗಳ ಮೇಲೆ ಚರ್ಚೆ, ವಿಚಾರ ವಿನಿಮಯ ಆಗಲಿದೆ ಎಂದು ಹೇಳಿದರು.

ಇದನ್ನೂ ಓದಿ | ರಾಜಮಾರ್ಗ ಅಂಕಣ: ಆತ್ಮಾಹುತಿ ದಾಳಿಗೆ ಎದೆಕೊಟ್ಟು ಆಕೆ ಬಂಡೆಯಂತೆ ನಿಂತಿದ್ದರು!

ಈ ಅಧಿವೇಶನಕ್ಕೆ ಅಮೆರಿಕ, ಬಾಂಗ್ಲಾದೇಶ, ನೇಪಾಳ, ಇಂಗ್ಲೆಂಡ್, ಸಿಂಗಪುರ ಈ ದೇಶಗಳ ಜತೆಗೆ ಭಾರತದಲ್ಲಿನ 28 ರಾಜ್ಯಗಳಲ್ಲಿನ 350ಕ್ಕೂ ಹೆಚ್ಚಿನ ಹಿಂದು ಸಂಘಟನೆಗಳ 1500ಕ್ಕಿಂತಲೂ ಹೆಚ್ಚಿನ ಪ್ರತಿನಿಧಿಗಳಿಗೆ ಆಮಂತ್ರಿಸಲಾಗಿದೆ. ಇದರಲ್ಲಿ ಕರ್ನಾಟಕದ ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ಹಿಂದು ನಾಯಕರಾದ ಅರುಣ್ ಪುತ್ತಿಲ, ಡಾ. ಎಸ್. ಆರ್ ಲೀಲಾ, ಅಡ್ಡಂಡ ಕಾರ್ಯಪ್ಪ ಸೇರಿ ಸುಮಾರು 250ಕ್ಕೂ ಅಧಿಕ ಹಿಂದುತ್ವವಾದಿ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಅದೇ ರೀತಿ ಅಮರಾವತಿಯ ರುಕ್ಮಿಣಿ ವಲ್ಲಭ ಪೀಠದ ಶ್ರೀ ಜಗದ್ಗುರು ರಾಮಾನಂದಚಾರ್ಯ, ಶ್ರೀ ಸ್ವಾಮಿ ರಾಮರಾಜೇಶ್ವರಾಚಾರ್ಯಜಿ, ವಿಶ್ವ ಹಿಂದು ಪರಿಷತ್ತಿನ ದೇವಗಿರಿ ಪ್ರಾಂತದ ಧರ್ಮಚಾರ್ಯ ಹ.ಭ.ಪ. ಜನಾರ್ಧನ ಮಹಾರಾಜ್ಮೇಟೆ, ಕಾಶಿಯ ಜ್ಞಾನವಾಪಿ ಮಸೀದಿಯ ವಿರುದ್ಧ ಹೋರಾಟ ನಡೆಸುತ್ತಿರುವ ವಕೀಲ ಹರಿಶಂಕರ್ ಜೈನ್, ನ್ಯಾಯವಾದಿ ವಿಷ್ಣು ಶಂಕರ ಜೈನ್, ತೆಲಂಗಾಣದ ಹಿಂದುತ್ವ ನಿಷ್ಠ ಶಾಸಕ ಟಿ. ರಾಜಾಸಿಂಗ್, ದೆಹಲಿಯ ಭಾಜಪದ ನಾಯಕ ಕಪಿಲ್ ಮಿಶ್ರಾ‌ ಮತ್ತಿತರು ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.

ಹಿಂದು ಧರ್ಮವು ವಿಶ್ವ ಬಂಧುತ್ವ ಮತ್ತು ‘ವಸುದೈವ ಕುಟುಂಬಕಂ ಸಂಕಲ್ಪವನ್ನು ಪ್ರಸ್ತುತಪಡಿಸುತ್ತದೆ. ಆದ್ದರಿಂದ ಭಾರತವನ್ನು ಮತ್ತೆ ತುಂಡಾಗುವುದನ್ನು ತಡೆಯಲು ಭಾರತವನ್ನು ಆದರ್ಶ ರಾಮರಾಜ್ಯ ಅರ್ಥಾತ್ ಹಿಂದು ರಾಷ್ಟ್ರ ಮಾಡದೆ ಪರ್ಯಾಯವಿಲ್ಲ ಎಂದು ಮೋಹನ್ ಗೌಡ ಹೇಳಿದರು.

ಈ ಅಧಿವೇಶನದ ನೇರಪ್ರಸಾರ ಹಿಂದೂ ಜನಜಾಗೃತಿ ಸಮಿತಿಯ ಜಾಲತಾಣ HinduJagruti.org ಮೂಲಕ, ಹಾಗೂ ಸಮಿತಿಯ @Hindujagruti ಈ ಯೂಟ್ಯೂಬ್ ಚಾನೆಲ್ ಮತ್ತು @HinduJagrutiOrg ಈ ಟ್ವಿಟರ್ ಹ್ಯಾಂಡಲ್ ಮೂಲಕ ಆಗಲಿದೆ. ಜಗತ್ತಿನಾದ್ಯಂತ ಇರುವ ಹಿಂದುತ್ವ ನಿಷ್ಠರು ಈ ವೈಶ್ವಿಕ ಹಿಂದು ರಾಷ್ಟ್ರ ಮಹೋತ್ಸವದ ಲಾಭ ಪಡೆಯಬೇಕೆಂದು ಹಿಂದು ಜನಜಾಗೃತಿ ಸಮಿತಿಯು ಕರೆ ನೀಡಿದೆ.

ಇದನ್ನೂ ಓದಿ | ವಿಸ್ತಾರ ಅಂಕಣ: ಪಠ್ಯ ಪುಸ್ತಕ ಪರಿಷ್ಕರಣೆ ಎಂದರೆ ಮಕ್ಕಳ ಆಟ ಎಂದುಕೊಂಡಿದೆಯೇ ಸರ್ಕಾರ?

ಸುದ್ದಿಗೋಷ್ಠಿಯಲ್ಲಿ ಹಿಂದು ವಿದಿಜ್ಞ ಪರಿಷತ್ ರಾಷ್ಟ್ರೀಯ ಉಪಾಧ್ಯಕ್ಷ ನ್ಯಾಯವಾದಿ ಅಮೃತೇಶ್ ಎನ್.ಪಿ, ಹಿಂದು ಜೈ ಭೀಮ್ ಸಂಘಟನೆಯ ಅಧ್ಯಕ್ಷ ಚಂದ್ರಶೇಖರ್ (ಕೋಟೆ ಶೇಕಿ), ಅಯ್ಯಪ್ಪ ಸೇವಾ ಸಮಾಜಂ ಕರ್ನಾಟಕ ಅಧ್ಯಕ್ಷ ಎನ್. ಜಯರಾಮ, ನೆಲಮಂಗಲದ ಶ್ರೀ ರಾಮಾನುಜ ಪೀಠಂ ಉಪಾಧ್ಯಕ್ಷರು & ಉದ್ಯಮಿ ಜಯರಾಮ.ಎಸ್ ಉಪಸ್ಥಿತರಿದ್ದರು.

Continue Reading

ಕರ್ನಾಟಕ

ಹುಬ್ಬಳ್ಳಿ ಏರ್‌ಪೋರ್ಟ್‌ ವಿಸ್ತರಣೆಗೆ 273 ಕೋಟಿ ರೂ.; ಕೇಂದ್ರಕ್ಕೆ ಪ್ರಲ್ಹಾದ್‌ ಜೋಶಿ ಧನ್ಯವಾದ

ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ಕೇಂದ್ರ ಸರ್ಕಾರ 273 ಕೋಟಿ ರೂ. ಬಿಡುಗಡೆ ಮಾಡಿದೆ. ಹೀಗಾಗಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ಧನ್ಯವಾದ ಸಲ್ಲಿಸಿದ್ದಾರೆ.

VISTARANEWS.COM


on

Edited by

Minister Pralhad Joshi
Koo

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆ ಪ್ರಸ್ತಾವನೆಗೆ ಶೀಘ್ರವಾಗಿ ಸ್ಪಂದಿಸಿ 273 ಕೋಟಿ ರೂ. ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ಧನ್ಯವಾದ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ನೂತನ ಯೋಜನೆಯಂತೆ ವಿಮಾನ ನಿಲ್ದಾಣದ ಟರ್ಮಿನಲ್ 20,000 ಚ.ಮೀ ವಿಸ್ತರಣೆಗೊಳ್ಳಲಿದ್ದು (ನೆಲಮಹಡಿ ಹಾಗೂ ಮೊದಲ ಮಹಡಿ ಸೇರಿ) ಹಾಗೂ ಏಕಕಾಲಕ್ಕೆ 1400ಕ್ಕೂ ಅಧಿಕ ಪ್ರಯಾಣಿಕರನ್ನು (ಆಗಮಿಸುವ ಮತ್ತು ನಿರ್ಗಮಿಸುವ) ನಿರ್ವಹಿಸುವ ಸಾಮರ್ಥ್ಯ ಹೊಂದಲಿದೆ. ವಿಸ್ತರಣೆ ಕಾಮಗಾರಿ 2014ರ ಜನವರಿಯಲ್ಲಿ ಆರಂಭವಾಗಲಿದ್ದು, ಎರಡು ವರ್ಷಗಳಲ್ಲಿ ಪ್ರಯಾಣಿಕರ ಉಪಯೋಗಕ್ಕೆ ಮುಕ್ತವಾಗಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | H.D. Kumaraswamy: ಇದು 40+5 ಪರ್ಸೆಂಟ್ ಕಮಿಷನ್‌ ಸರ್ಕಾರ: ಕಾಂಗ್ರೆಸ್‌ ವಿರುದ್ಧ ಎಚ್‌.ಡಿ. ಕುಮಾರಸ್ವಾಮಿ ಹೊಸ ಬಾಂಬ್‌!

Continue Reading

ಕರ್ನಾಟಕ

Bellary News: ಪತ್ನಿ, ಮಕ್ಕಳು ಸೇರಿ ಐವರನ್ನು ಕೊಂದವನಿಗೆ ಮರಣ ದಂಡನೆ

Bellary News: 2017ರಲ್ಲಿ ನಡೆದಿದ್ದ ಐವರ ಕೊಲೆ ಪ್ರಕರಣದಲ್ಲಿ ಅಪರಾಧಿಗೆ ಬಳ್ಳಾರಿ ಸೆಷನ್ಸ್ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಹೈಕೋರ್ಟ್‌ನ ಧಾರವಾಡ ಪೀಠ ಎತ್ತಿ ಹಿಡಿದಿದೆ.

VISTARANEWS.COM


on

Edited by

murder case accused tippayya
Koo

ಬಳ್ಳಾರಿ: ಪತ್ನಿ ಹಾಗೂ ಮಕ್ಕಳು ಸೇರಿ ಐವರನ್ನು ಕೊಲೆ ಮಾಡಿದ್ದ ಅಪರಾಧಿಗೆ ಮರಣ ದಂಡನೆ ಶಿಕ್ಷೆ ವಿಧಿಸಿದ್ದ ಬಳ್ಳಾರಿ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್‌ನ ಧಾರವಾಡ ಪೀಠ ಎತ್ತಿ ಹಿಡಿದಿದೆ. ಪತ್ನಿಯ ಶೀಲ ಶಂಕಿಸಿ ಪತ್ನಿ,, ಪತ್ನಿಯ ತಂಗಿ, ಹೆತ್ತ ಮೂವರು ಮಕ್ಕಳು ಸೇರಿ ಒಟ್ಟು ಐವರನ್ನು ಕೊಲೆ ಮಾಡಿದ ಹಿನ್ನೆಲೆಯಲ್ಲಿ ಅಪರಾಧಿಗೆ ಮರಣ ದಂಡನೆ ಶಿಕ್ಷೆ (Bellary News) ನೀಡಲಾಗಿದೆ.

ಜಿಲ್ಲೆಯ ಕಂಪ್ಲಿಯ ಚಪ್ಪರದಳ್ಳಿ ವಡ್ಡರ ತಿಪ್ಪೇಸ್ವಾಮಿ ಮನೆ ಬಳಿ 2017ರ ಫೆಬ್ರವರಿ 25 ರಂದು ಬೈಲೂರು ತಿಪ್ಪಯ್ಯ, ಐವರನ್ನು ಕೊಚ್ಚಿ ಕೊಲೆ ಮಾಡಿದ್ದ. ಪತ್ನಿ ಫಕೀರಮ್ಮ (36), ಪತ್ನಿಯ ತಂಗಿ ಗಂಗಮ್ಮ (30), ಮಕ್ಕಳಾದ ಬಸಮ್ಮ (9), ರಾಜಪ್ಪ(8), ಪವಿತ್ರ(6) ಹತ್ಯೆಯಾಗಿದ್ದರು.

ಇದನ್ನೂ ಓದಿ | Murder Case: ರೂಮಿನಲ್ಲಿ ಬೆಚ್ಚಗೆ ಮಲಗಿದ್ದವಳ ಕತ್ತು ಕೊಯ್ದ ಪ್ರಿಯಕರ!

The five who were murdered in kampli

ತಿಪ್ಪಯ್ಯನಿಗೆ 2019ರ ಡಿಸೆಂಬರ್ 3ರಂದು ಬಳ್ಳಾರಿ ಸೆಷನ್ಸ್ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿತ್ತು. ಹೀಗಾಗಿ ಧಾರವಾಡ ಹೈಕೋರ್ಟ್‍ನಲ್ಲಿ ಈತ ಮೇಲ್ಮನವಿ ಸಲ್ಲಿಸಿದ್ದ. ವಿಚಾರಣೆ ನಡೆದು ಬಳ್ಳಾರಿ ಸೆಷೆನ್ಸ್ ನ್ಯಾಯಾಲಯದ ತೀರ್ಪನ್ನೇ ಹೈಕೋರ್ಟ್‌ನ ಧಾರವಾಡ ಪೀಠ ಹಿಡಿದು ಮರಣ ದಂಡನೆ ಶಿಕ್ಷೆ ಖಚಿತಪಡಿಸಿದೆ.

Continue Reading

ಕರ್ನಾಟಕ

Koppala News: ಅಂಜನಾದ್ರಿ ಬೆಟ್ಟದಲ್ಲಿ ಕ್ಲೀನ್‌ ಡ್ರೈವ್‌; ಎಲ್ಲೆಂದರಲ್ಲಿ ಬಿಸಾಡಿದ ಸಾವಿರಾರು ವಾಟರ್‌ ಬಾಟಲ್‌ಗಳು: ಪರಿಸರ ನಾಶದ ಆತಂಕ

Koppala News: ಪ್ರಸಿದ್ಧ ಪ್ರಮುಖ ಧಾರ್ಮಿಕ ತಾಣವಾಗಿರುವ ಅಂಜನಾದ್ರಿ ಬೆಟ್ಟಕ್ಕೆ ದರ್ಶನಕ್ಕೆ ಬರುವ ಭಕ್ತರು, ಯಾತ್ರಾರ್ಥಿಗಳು ಬಳಸಿ ಬಿಸಾಡುತ್ತಿರುವ ವಾಟರ್‌ ಬಾಟಲ್‌ಗಳು, ತಿಂಡಿ-ತಿನಿಸುಗಳ ಪ್ಯಾಕೆಟ್‌, ತಂಬಾಕು ಪದಾರ್ಥಗಳು ಸೇರಿದಂತೆ ದಿನೇ ದಿನೇ ಸಾಕಷ್ಟು ತ್ಯಾಜ್ಯ ಸಂಗ್ರಹಗೊಳ್ಳುತ್ತಿದ್ದು, ಪರಿಸರ ನಾಶದ ಆತಂಕ ಸೃಷ್ಟಿಯಾಗಿದೆ. ಶನಿವಾರ ಗಂಗಾವತಿಯ ಕಿಷ್ಕಿಂಧಾ ಯುವ ಚಾರಣ ಬಳಗದ ಸದಸ್ಯರು ಕ್ಲೀನ್‌ ಡ್ರೈವ್‌ ಕಾರ್ಯ ಕೈಗೊಂಡು ಸಾವಿರಾರು ವಾಟರ್‌ ಬಾಟಲ್‌, ತ್ಯಾಜ್ಯವನ್ನು ಸಂಗ್ರಹಿಸಿದರು.

VISTARANEWS.COM


on

Edited by

Garbage collected at Anjanadri Hill
ಅಂಜನಾದ್ರಿ ಬೆಟ್ಟದಲ್ಲಿ ಎಲ್ಲೆಂದರಲ್ಲಿ ಬಿಸಾಡಿದ ವಾಟರ್‌ ಬಾಟಲ್‌, ತಿಂಡಿ-ತಿನಿಸುಗಳ ಪ್ಲಾಸ್ಟಿಕ್‌ ತ್ಯಾಜ್ಯದ ಸಂಗ್ರಹ.
Koo

ಗಂಗಾವತಿ: ಪ್ರಸಿದ್ಧ ಪ್ರಮುಖ ಧಾರ್ಮಿಕ ತಾಣವಾಗಿರುವ ಅಂಜನಾದ್ರಿ ಬೆಟ್ಟದಲ್ಲಿ (Anjanadri Hill) ಶನಿವಾರ ಗಂಗಾವತಿಯ ಕಿಷ್ಕಿಂಧಾ (Kishkindha) ಯುವ ಚಾರಣ ಬಳಗದ ಸದಸ್ಯರು ಕ್ಲೀನ್‌ ಡ್ರೈವ್‌ (Clean drive) ಕಾರ್ಯ ಕೈಗೊಂಡರು.

ಅಂಜನಾದ್ರಿ ಬೆಟ್ಟಕ್ಕೆ ದರ್ಶನಕ್ಕೆ ಬರುವ ಭಕ್ತರು, ಯಾತ್ರಾರ್ಥಿಗಳು ಬಿಸಾಡುತ್ತಿರುವ ತ್ಯಾಜ್ಯದಿಂದಾಗಿ ಇದೀಗ ಇಡೀ ಬೆಟ್ಟದಲ್ಲಿ ತ್ಯಾಜ್ಯಗಳಿಂದ ಸಂಗ್ರಹವಾಗುತ್ತಿರುವ ಪ್ಲಾಸ್ಟಿಕ್ ಬಾಟಲಿಗಳಿಂದ ಪರಿಸರ ನಾಶವಾಗುತ್ತಿರುವ ಆತಂಕ ಎದುರಾಗಿದ್ದು, ಇದನ್ನು ಮನಗಂಡ ಗಂಗಾವತಿಯ ಕಿಷ್ಕಿಂಧಾ ಯುವ ಚಾರಣ ಬಳಗದ ಸದಸ್ಯರು ಬೆಟ್ಟದ ಕಲ್ಲು ಸಂದಿಗಳಲ್ಲಿ, ಮೆಟ್ಟಿಲುಗಳ ಎರಡು ಕಡೆಗಳಲ್ಲಿ ಜನರು ಎಸೆದಿದ್ದ ನೀರಿನ ಬಾಟಲ್‌, ತ್ಯಾಜ್ಯಗಳ ಸಂಗ್ರಹಕ್ಕಾಗಿ `ಕ್ಲೀನ್ ಡ್ರೈವ್’ ಕಾರ್ಯ ಮಾಡಿದರು.

ಇದನ್ನೂ ಓದಿ: WTC Final 2023: ಭಾರತ-ಆಸ್ಟ್ರೇಲಿಯಾ ನಾಲ್ಕನೇ ದಿನದಾಟದ ಹೈಲೆಟ್ಸ್​

200 ರಿಂದ 300 ಚೀಲದಷ್ಟು ಪ್ಲಾಸ್ಟಿಕ್ ತ್ಯಾಜ್ಯವಿರುವ ಸಾಧ್ಯತೆ

ಸುಮಾರು 40ಕ್ಕೂ ಹೆಚ್ಚು ಯವಕರು ಶನಿವಾರ ತ್ಯಾಜ್ಯ ಸಂಗ್ರಹ ಕಾರ್ಯಕ್ಕೆ ಇಳಿದೆವು. ಸುಮಾರು 50ಕ್ಕೂ ಹೆಚ್ಚು ಚೀಲಗಳಲ್ಲಿ ತ್ಯಾಜ್ಯ ಸಂಗ್ರಹಿಸಿದ್ದು, ಇನ್ನೂ 200 ರಿಂದ 300 ಚೀಲದಷ್ಟು ಪ್ಲಾಸ್ಟಿಕ್ ತ್ಯಾಜ್ಯ ಇರುವ ಸಾಧ್ಯತೆ ಇದೆ ಎಂದು ಚಾರಣ ಬಳಗದ ಸದಸ್ಯ ಸಂತೋಷ್ ತಿಳಿಸಿದ್ದಾರೆ.

ಕುಡಿಯುವ ನೀರಿನ ಬಾಟಲ್‌ಗಳೇ ಅಧಿಕ

ಸಂಗ್ರಹಿಸಿದ ತ್ಯಾಜ್ಯದಲ್ಲಿ ಕುಡಿಯುವ ನೀರಿನ ಬಾಟಲ್‌ಗಳ ಪ್ರಮಾಣವೇ ಅಧಿಕವಾಗಿದೆ. ಜತೆಗೆ ತಂಬಾಕು ಪದಾರ್ಥಗಳ ತ್ಯಾಜ್ಯ, ತಿಂಡಿ-ತಿನಿಸುಗಳ ಪ್ಲಾಸ್ಟಿಕ್‌ ಪ್ಯಾಕೆಟ್‌ ಗಳನ್ನು ಬಳಸಿ ಎಲ್ಲೆಂದರಲ್ಲಿ ಎಸೆದು ಹೋಗಿದ್ದು, ಇದರಿಂದ ಬೆಟ್ಟದ ಸಹಜ ಸೌದರ್ಯ ನಾಶವಾಗುತ್ತದೆ ಎಂಬ ಕಾರಣಕ್ಕೆ ಗಂಗಾವತಿ, ಹೊಸಪೇಟೆ, ಕೊಪ್ಪಳ, ಕಂಪ್ಲಿ, ಕುಷ್ಟಗಿ, ಆನೆಗುಂದಿ, ಹನುಮನಹಳ್ಳಿಯಿಂದ ಬಂದಿದ್ದ ಸಮಾನ ಮನಸ್ಕ ಯುವಕರು ಸ್ವಚ್ಛತೆಗೆ ಮುಂದಾಗಿದ್ದೇವೆ ಎಂದು ಚಾರಣ ಬಳಗದ ಮತ್ತೊಬ್ಬ ಸದಸ್ಯ ತಿಳಿಸಿದರು.

ಅಂಜನಾದ್ರಿ ಬೆಟ್ಟದಲ್ಲಿ ಗಂಗಾವತಿಯ ಕಿಷ್ಕಿಂಧಾ ಯುವ ಚಾರಣ ಬಳಗದ ಸದಸ್ಯರು ಕ್ಲೀನ್‌ ಡ್ರೈವ್‌ ಕಾರ್ಯ ಕೈಗೊಂಡರು

ಇದನ್ನೂ ಓದಿ: ಎಟಿಎಸ್ ಭರ್ಜರಿ​ ಕಾರ್ಯಾಚರಣೆ; ಐಸಿಸ್​ ತರಬೇತಿಗಾಗಿ ಅಫ್ಘಾನ್​ಗೆ ಹೊರಟಿದ್ದ ಯುವತಿ, ಯುವಕರ ಬಂಧನ

ಮದ್ಯ ಬಾಟಲ್‌ಗಳು ಪತ್ತೆ

ಪ್ರಸಿದ್ಧ ಧಾರ್ಮಿಕ ತಾಣವಾದ ಅಂಜನಾದ್ರಿ ಬೆಟ್ಟದಲ್ಲಿ ಮದ್ಯ ಬಾಟಲಿಗಳು ಕೂಡ ಕಿಷ್ಕಿಂಧಾ ಯುವ ಚಾರಣ ಬಳಗ ಹಮ್ಮಿಕೊಂಡಿದ್ದ ಕ್ಲೀನ್‌ ಡ್ರೈವ್ ಸಂದರ್ಭದಲ್ಲಿ ಪತ್ತೆಯಾಗಿವೆ.

570 ಕ್ಕೂ ಹೆಚ್ಚು ಮೆಟ್ಟಿಲುಗಳಿರುವ ಅಂಜನಾದ್ರಿ ಬೆಟ್ಟ ಏರುವಾಗ ದಣಿವಾರಿಸಿಕೊಳ್ಳಲು ಎಂದು ಹಲವರು ಕುಡಿಯುವ ನೀರಿನ ಬಾಟಲಿ, ಆಹಾರದ ಪೊಟ್ಟಣಗಳನ್ನು ತರುತ್ತಾರೆ. ಆಹಾರ ಸೇವಿಸಿದ ಬಳಿಕ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುತ್ತಿರುವುದು ತ್ಯಾಜ್ಯ ಸಂಗ್ರಹಕ್ಕೆ ಕಾರಣವಾಗಿದೆ.

ಇದನ್ನೂ ಓದಿ: WTC Final 2023: 44 ವರ್ಷಗಳ ಹಳೆಯ ದಾಖಲೆ ಪುಡಿಗಟ್ಟಿದ ರವೀಂದ್ರ ಜಡೇಜಾ

ಜನರಲ್ಲಿ ಜಾಗೃತಿ ಮೂಡಿಸಲಿ

ಭಕ್ತರು ಎಸೆದಿರುವ ಕುಡಿಯುವ ನೀರಿನ ಬಾಟಲಿಗಳ ಪ್ರಮಾಣವೇ ಸುಮಾರು ಹತ್ತು ಸಾವಿರಕ್ಕೂ ಅಧಿಕವಿದೆ. ತಾಜ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸ ದೇವಸ್ಥಾನದ ಆಡಳಿತ ಮಂಡಳಿ ಮತ್ತು ತಾಲೂಕು ಆಡಳಿತ ಮಾಡಬೇಕು ಎಂದು ಚಾರಣ ಬಳಗದ ಸದಸ್ಯರು ಆಗ್ರಹಿಸಿದ್ದಾರೆ.

Continue Reading
Advertisement
Sphoorti Salu
ಸುವಚನ1 hour ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Horoscope Today
ಪ್ರಮುಖ ಸುದ್ದಿ1 hour ago

Horoscope Today: ಈ ರಾಶಿಯವರ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಎಚ್ಚರ ಇರಲಿ!

Hindu janajagruti samiti pressmeet
ಕರ್ನಾಟಕ6 hours ago

ಜೂ.16 ರಿಂದ 22ರವರೆಗೆ ಗೋವಾದಲ್ಲಿ ‘ವೈಶ್ವಿಕ ಹಿಂದು ರಾಷ್ಟ್ರ ಮಹೋತ್ಸವʼ

Man Dies Of Heart Attack In Noida
ಕ್ರೀಡೆ6 hours ago

Heart Attack: ಬ್ಯಾಡ್ಮಿಂಟನ್‌ ಆಡುತ್ತಿದ್ದವನ ಬಾಳಲ್ಲಿ ಆಟವಾಡಿದ ವಿಧಿ; ಹೃದಯಾಘಾತದಿಂದ ವ್ಯಕ್ತಿ ಸಾವು

Digital Payment
ಪ್ರಮುಖ ಸುದ್ದಿ7 hours ago

ವಿಸ್ತಾರ ಸಂಪಾದಕೀಯ: ಡಿಜಿಟಲ್ ಪಾವತಿಯಲ್ಲಿ ಭಾರತ ನಂ.1, ಭಾರತೀಯರ ಪ್ರೌಢಿಮೆಗೆ ಇದು ಸಾಕ್ಷಿ

aamir khan to act in rajamouli movie
ಸಿನಿಮಾ7 hours ago

Aamir Khan : ದಕ್ಷಿಣ ಭಾರತ ಸಿನಿಮಾದಲ್ಲಿ ವಿಲನ್‌ ಆಗ್ತಾರಂತೆ ಬಾಲಿವುಡ್‌ನ ಮಿಸ್ಟರ್‌ ಪರ್ಫೆಕ್ಟ್‌ ಆಮೀರ್ ಖಾನ್‌!

Minister Pralhad Joshi
ಕರ್ನಾಟಕ7 hours ago

ಹುಬ್ಬಳ್ಳಿ ಏರ್‌ಪೋರ್ಟ್‌ ವಿಸ್ತರಣೆಗೆ 273 ಕೋಟಿ ರೂ.; ಕೇಂದ್ರಕ್ಕೆ ಪ್ರಲ್ಹಾದ್‌ ಜೋಶಿ ಧನ್ಯವಾದ

Viat kohli WTC Final 2023
ಕ್ರಿಕೆಟ್7 hours ago

WTC Final : ಭಾರತದ ಗೆಲುವಿಗೆ ಇನ್ನೂ ಬೇಕು 280 ರನ್​, ಕೌತುಕದಲ್ಲಿ ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್​ ಫೈನಲ್​

Debt Under Narendra Modi Government
ದೇಶ8 hours ago

Narendra Modi: 14 ಪ್ರಧಾನಿಗಳು ಮಾಡಿದ್ದ ಸಾಲ 55 ಲಕ್ಷ ಕೋಟಿ ರೂ., ಮೋದಿ ಒಬ್ಬರೇ ಮಾಡಿದ ಸಾಲವೆಷ್ಟು?

murder case accused tippayya
ಕರ್ನಾಟಕ8 hours ago

Bellary News: ಪತ್ನಿ, ಮಕ್ಕಳು ಸೇರಿ ಐವರನ್ನು ಕೊಂದವನಿಗೆ ಮರಣ ದಂಡನೆ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ1 day ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Autodrivers oppose free bus service
ಕರ್ನಾಟಕ13 hours ago

Free Bus Service: ನನ್ ಒಂದೇ ಓಟಲ್ಲ ಸ್ವಾಮಿ, ನಮ್ ಫ್ಯಾಮಿಲಿದೆಲ್ಲ ಇದೆ ಹುಷಾರ್: ಸಿದ್ದರಾಮಯ್ಯಗೆ ಆಟೋ ಡ್ರೈವರ್‌ ವಾರ್ನಿಂಗ್‌

accident in kerala
ವೈರಲ್ ನ್ಯೂಸ್18 hours ago

Viral Video: ಬಸ್ಸು ಮತ್ತು ಲಾರಿ ಮಧ್ಯೆ ಸ್ಕೂಟರ್‌ ಅಪ್ಪಚ್ಚಿ, ಸವಾರರ ಕಣ್ ಮುಂದೆ ಯಮ ರಪ್ ಅಂತ ಪಾಸ್ ಆದ!

Cancellation of tenders for 108 ambulances and Dinesh Gundu rao
ಆರೋಗ್ಯ2 days ago

Dinesh Gundu Rao: ಬಿಜೆಪಿ ಅವಧಿಯ 108 ಆಂಬ್ಯುಲೆನ್ಸ್‌, ಡಯಾಲಿಸಿಸ್‌ ಟೆಂಡರ್‌ ರದ್ದು; ಆರೋಗ್ಯ ಇಲಾಖೆಯಲ್ಲಿ ಮೇಜರ್‌ ಸರ್ಜರಿ

Meghalaya Villagers Chase Bangladesh soldiers
ದೇಶ2 days ago

Viral Video : ಗಡಿ ದಾಟಿ ಭಾರತಕ್ಕೆ ನುಗ್ಗಿದ ಬಾಂಗ್ಲಾ ಯೋಧರು! ಅಟ್ಟಾಟಿಸಿಕೊಂಡು ಒದ್ದೋಡಿಸಿದ ಹಳ್ಳಿಗರು

snake mate in chamarajnagar 2
ಕರ್ನಾಟಕ2 days ago

Video Viral: ಚಾಮರಾಜನಗರದಲ್ಲಿ ಹಾವುಗಳ ಮಿಲನ; ಗಂಟೆಗೂ ಹೆಚ್ಚು ಸರಸ ಸಲ್ಲಾಪ! ವೈರಲ್‌ ಆಯ್ತು ವಿಡಿಯೊ

Rain in mangalore
ಉಡುಪಿ2 days ago

Rain News: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ಮಂಗಳೂರಲ್ಲಿ ಚಿಟಪಟ ಮಳೆ

Rain in koppal
ಉಡುಪಿ2 days ago

Weather Report: ಕರಾವಳಿಯಲ್ಲಿ ಗುಡುಗಲಿರುವ ಮಳೆ; ಮಲೆನಾಡು, ಒಳನಾಡಲ್ಲಿ ಹೇಗಿರಲಿದೆ ಪ್ರಭಾವಳಿ

youths rescued in Kaveri river
ಕರ್ನಾಟಕ2 days ago

Video Viral: ತಲಕಾಡಿನ ಕಾವೇರಿ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವಕರ ರಕ್ಷಣೆ!

Elephant attack in muttunga wildlife sanctuary
ಕರ್ನಾಟಕ3 days ago

Viral Video: ವನ್ಯಧಾಮದಲ್ಲಿ ಮೂತ್ರಕ್ಕೆಂದು ಕಾಡಿಗೆ ಹೋದ; ಆನೆ ದಾಳಿಗೆ ಹೆದರಿ ಪ್ಯಾಂಟ್‌ ಹಿಡಿದು ಓಡೋಡಿ ಬಂದ!

abhishek ambareesh wedding Reception
ಕರ್ನಾಟಕ3 days ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

ಟ್ರೆಂಡಿಂಗ್‌

error: Content is protected !!