Site icon Vistara News

Congress Guarantee : ತೆರಿಗೆ ಪಾವತಿಸುವವರ ಪತ್ನಿಗೆ ಗೃಹ ಲಕ್ಷ್ಮಿ ಯೋಜನೆಯ 2 ಸಾವಿರ ರೂ. ಸಿಗೋದಿಲ್ಲ!

gruha lakshmi scheme

#image_title

ಬೆಂಗಳೂರು: 5 ಪ್ರಮುಖ ಗ್ಯಾರಂಟಿಗಳಲ್ಲಿ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2000 ರೂಪಾಯಿ ನೀಡುವ ʼಗೃಹಲಕ್ಷ್ಮಿʼ ಯೋಜನೆಗೆ (Congress Guarantee) ಆಡಳಿತಾತ್ಮಕ ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯೋಜನೆ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ತೆರಿಗೆ ಪಾವತಿದಾರನ ಪತ್ನಿ ಹೊರತುಪಡಿಸಿ ಅಂತ್ಯೋದಯ, ಬಿಪಿಎಲ್‌ ಹಾಗೂ ಎಪಿಎಲ್‌ ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ.

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂಪಾಯಿ ನೀಡಲು ʼಗ್ರಹಲಕ್ಷ್ಮಿ ಯೋಜನೆʼ ಜಾರಿ ಮಾಡಲಾಗಿದೆ.

ಇದನ್ನೂ ಓದಿ | Free Electricity: ಹೊರಬಿತ್ತು ಗೃಹ ಜ್ಯೋತಿ ಮಾರ್ಗಸೂಚಿ; ಬಾಡಿಗೆದಾರನಿಗಿಲ್ಲ ಉಚಿತ ವಿದ್ಯುತ್‌?

ಮೇ 20 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆ ಸೇರಿ 5 ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಅನುಮೋದನೆ ನೀಡಲಾಗಿತ್ತು. ಇದೀಗ ಆರ್ಥಿಕ ಇಲಾಖೆ ಹಾಗೂ ಯೋಜನಾ ಇಲಾಖೆಗಳೊಂದಿಗೆ ಸಮಾಲೋಚಿಸಿ 2023-24ನೇ ಸಾಲಿನಲ್ಲಿ ಸಚಿವ ಸಂಪುಟದ ಅನುಮೋದನೆ ಪಡೆದು ಯೋಜನೆಗೆ ಅಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಗೃಹ ಲಕ್ಷ್ಮಿ ಯೋಜನೆ ಮಾರ್ಗಸೂಚಿ

  1. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
  2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ, ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸುತ್ತದೆ.
  1. ಈ ಯೋಜನೆಯ ಫಲಾನುಭವಿಗಳು 2023ರ ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬೇಕು. ನಂತರ ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ.
  2. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕವಾಗಲೀ ಅಥವಾ ಭೌತಿಕವಾಗಿಯಾಗಲೀ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
  3. ಅರ್ಜಿದಾರರು ಸಲ್ಲಿಸುವ ಪೂರ್ಣ ಪ್ರಮಾಣದ ಅರ್ಜಿಯಲ್ಲಿನ ಸ್ವಯಂ ಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡುವುದು. ಅರ್ಜಿಯಲ್ಲಿನ ಅಂಶಗಳ ಬಗ್ಗೆ, ತದನಂತರ ಪರಿಶೀಲನ ಮಾಡುವುದು. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡುವುದು ಮತ್ತು ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದು.
  4. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್‌ಗಳನ್ನು ಜೋಡಣೆ ಮಾಡುವುದು.

ಯಾರು ಅರ್ಹರಲ್ಲ?

6. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಹಾಗೂ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್‌ಟಿ ರಿಟರ್ನ್ಸ್‌ ಸಲ್ಲಿಸುತ್ತಿದ್ದರೆ ಯೋಜನೆಗೆ ಅರ್ಹರಲ್ಲ.

Exit mobile version