ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ಬಹು ನಿರೀಕ್ಷೆಯ ಶಿಕ್ಷಕರ ವರ್ಗಾವಣೆಯ (Teacher Transfer) ಪೂರ್ವ ಸಿದ್ಧತಾ ಚಟುವಟಿಕೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ.
ವೇಟೆಡ್ (weighted) ಅಂಕಗಳ ದೃಢೀಕರಣ ಅಕ್ಟೋಬರ್ 12ರಿಂದ ಆರಂಭವಾಗಲಿದ್ದು, ಎಲ್ಲ ವೃಂದದ ಶಿಕ್ಷಕರ weighted ಅಂಕಗಳ ಅಂತಿಮ ಪಟ್ಟಿಯನ್ನು ನವೆಂಬರ್ 3ರಂದು ಪ್ರಕಟಿಸಲಾಗುತ್ತದೆ. ನಿರ್ದಿಷ್ಟಪಡಿಸಿದ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೂರು ವರ್ಷದಿಂದ ಐದು ವರ್ಷಗಳ ಸೇವೆ ಸಲ್ಲಿಸಿರುವವರ ಪಟ್ಟಿಯನ್ನು ನವೆಂಬರ್ 2ರಂದು ಪ್ರಕಟಿಸಲಾಗುತ್ತದೆ.
ಹೆಚ್ಚುವರಿಯಾಗಿರುವ ಸೇವಾ ನಿರತ ಸಹ ಶಿಕ್ಷಕರ/ಮುಖ್ಯ ಶಿಕ್ಷರ/ ವಿಶೇಷ ಶಿಕ್ಷಕರ ಹಾಗೂ ದೈಹಿಕ ಶಿಕ್ಷಕರ ಕರಡು ಪಟ್ಟಿಯನ್ನು ಡಿಸೆಂಬರ್ 6ರಂದು ಪ್ರಕಟಿಸಲಾಗುತ್ತದೆ. ಅಂತಿಮ ಪಟ್ಟಿಯನ್ನು ಡಿಸೆಂಬರ್ 12ರಂದು ಪ್ರಕಟಿಸಲಾಗುತ್ತದೆ. ಹೆಚ್ಚುವರಿ ಶಿಕ್ಷಕರ ಮರು ಹೊಂದಾಣಿಕೆ ಪ್ರಕ್ರಿಯೆಯ ಕೌನ್ಸಿಲಿಂಗ್ ಕುರಿತಂತೆ ಮುಂದೆ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ವೇಳಾಪಟ್ಟಿ ಇಂತಿದೆ:
ಪ್ರಾಥಮಿಕ ಶಾಲಾ ಸಹ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರಿಗೆ ಬಡ್ತಿಗೆ ಅರ್ಹರಿರುವವರ ಕರಡು ಜ್ಯೇಷ್ಠತಾ ಪಟ್ಟಿಯನ್ನು ಅಕ್ಟೋಬರ್ 31ರಂದು ಪ್ರಕಟಿಸಲಾಗುತ್ತದೆ. ಅಂತಿಮ ಜ್ಯೇಷ್ಠತಾ ಪಟ್ಟಿಯನ್ನು ನವೆಂಬರ್ 21 ರಂದು ಪ್ರಕಟಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ | http://www.schooleducation.kar.nic.in
ಇದನ್ನೂ ಓದಿ | ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್ ನ್ಯೂಸ್?