ವಿಜಯಪುರ: ರಾಜ್ಯಾದ್ಯಂತ ಭಾರಿ ಸದ್ದು ಮಾಡುತ್ತಿರುವ ಶಿಕ್ಷಕರ ಅಕ್ರಮ ನೇಮಕಾತಿ ಹಗರಣದ ನಂಟು ವಿಜಯಪುರ ಜಿಲ್ಲೆಯಲ್ಲೂ ವಿಸ್ತರಿಸುತ್ತಿದೆ.
ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಜಿಲ್ಲೆಯ ಓರ್ವ ಸರ್ಕಾರಿ ಪ್ರೌಢಶಾಲಾ ಶಿಕ್ಷಕರನ್ನು ಬೆಂಗಳೂರಿನ ಸಿಓಡಿ ಪೊಲೀಸರು ಬಂಧಿಸಿದ್ದಾರೆ. ಬಸವನ ಬಾಗೇವಾಡಿ ತಾಲೂಕಿನ ಭೈರವಾಡಗಿಯ ಪ್ರೌಢ ಶಾಲೆಯಲ್ಲಿ ಶಿಕ್ಷಕರಾಗಿರುವ ಅಶೋಕ್ ಚೌಹಾಣ್ ಬಂಧಿತ.
2012-14ರ ನಡುವೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಕಳೆದ ತಿಂಗಳು ಜಿಲ್ಲೆಯ ಶಾಲೆಗಳಿಗೆ ಭೇಟಿ ನೀಡಿ, ಕಳಂಕಿತ ಶಿಕ್ಷಕರು ಕೆಲಸ ಮಾಡುತ್ತಿದ್ದ ಶಾಲೆಗಳಿಗೆ ಭೇಟಿ ನೀಡಿ ಅವರಿಂದ ಮಾಹಿತಿ ಪಡೆದಿದ್ದರು. ಆ ನಿಟ್ಟಿನಲ್ಲಿ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಭೈರವಾಡಗಿಯಲ್ಲಿ ಶಿಕ್ಷಕನಾಗಿರುವ ಅಶೋಕ ಚವ್ಹಾಣ್ ಎಂಬುವವರನ್ನು ಪಡೆದಿದ್ದಾರೆ.
ಈ ಹಿಂದೆ ಚಿತ್ರದುರ್ಗ ಜಿಲ್ಲೆಯ ಜಗಳೂರಿನಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ಯಿದ್ದ ಅವರು, ವಿಜಯಪುರಕ್ಕೆ ವರ್ಗಾವಣೆಯಾಗಿ ಬಂದಿದ್ದರು. ಇವರನ್ನು ಬಂಧಿಸುವಂತೆ ಸೂಚನೆ ಪಡೆದ ಕಲಬುರಗಿ ಸಿಓಡಿ ಅಧಿಕಾರಿಗಳು ಅಶೋಕ್ ಚವ್ಹಾಣ್ ಅವರನ್ನು ವಶಕ್ಕೆ ಪಡೆದು ಬೆಂಗಳೂರು ಸಿಓಡಿ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ ನಂತರ ಅವರು ಅಶೋಕ ಚವ್ಹಾಣ ಅವರನ್ನು ತಮ್ಮ ವಶಕ್ಕೆ ತೆಗೆದುಕೊಂಡರು.
ಈ ಮೂಲಕ ಜಿಲ್ಲೆಯಲ್ಲಿ ಶಿಕ್ಷಕರ ಅಕ್ರಮ ನೇಮಕಾತಿಗೆ ಸಂಬಂಧಿಸಿ ಬಂಧಿತರ ಸಂಖ್ಯೆ ಮೂರಕ್ಕೇರಿದೆ. ಈ ಹಿಂದೆ ಚಡಚಣ ತಾಲುಕಿನ ಹತ್ತಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಮಹೇಶ ಸೂಸಲಾದಿ, ಕಪನಿಂಬರಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಸಿದ್ರಾಮಪ್ಪ ಬಿರಾದಾರ್ ಬಂಧನವಾಗಿದೆ.
ಇದನ್ನೂ ಓದಿ | ಮತ್ತಷ್ಟು ಶಿಕ್ಷಕರು ಆಗಲಿದ್ದಾರ ಅರೆಸ್ಟ್? ಅಕ್ರಮದಿಂದ ನೇಮಕವಾದವರು 16 ಅಲ್ಲ 40 ಎಂದ ಶಿಕ್ಷಣ ಸಚಿವ