Site icon Vistara News

School Teacher : ಸ್ವಚ್ಛತೆ ನೆಪದಲ್ಲಿ ಮಕ್ಕಳನ್ನೇ ಮಲದ ಗುಂಡಿಗೆ ಇಳಿಸಿದ ಶಿಕ್ಷಕರು!

morarji school

ಕೋಲಾರ : ಇಲ್ಲಿನ ಯಲವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸ್ವಚ್ಛತೆಯ ನೆಪದಲ್ಲಿ ಮಕ್ಕಳನ್ನೇ ಮಲದ ಗುಂಡಿಗೆ ಇಳಿಸಿದ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪೋಷಕರು ಬೇಸರ ವ್ಯಕ್ತಪಡಿಸಿ ಶಿಕ್ಷಕರ ವಿರುದ್ಧ ದೂರು ದಾಖಲಿಸಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಯಲಹೊಳ್ಳಿ ಗ್ರಾಮದಲ್ಲಿರುವ ಈ ಶಾಲೆಯ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿದ್ದ ಶಿಕ್ಷಕರು ಸ್ವಚ್ಛತಾ ಕಾರ್ಯ ಮಾಡಿಸಿದ್ದರು. ಮೂರ್ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿತ್ತು. ಈ ಕುರಿತ ಚಿತ್ರ ಎಲ್ಲೆಡೆ ಹರಿದಾಡಿ ವಿರೋಧ ವ್ಯಕ್ತಗೊಂಡಿತ್ತು. ಬಳಿಕ ಮೊರಾರ್ಜಿ ಶಾಲೆ ಪ್ರಾಂಶುಪಾಲ ಹಾಗೂ, ಶಿಕ್ಷಕರ ವಿರುದ್ಧ ಪೋಷಕರು ದೂರು ದಾಖಲಿಸಲಾಗಿದೆ.

ಪ್ರಾಂಶುಪಾಲರ ಎದುರಲ್ಲೇ ಸಿಬ್ಬಂದಿಗಳು ಮಕ್ಕಳಿಂದ ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ್ದರು. ಕಳೆದ ಹಲವು ದಿನಗಳಿಂದ ಮಕ್ಕಳಿಗೆ ಇದೇ ರೀತಿಯಲ್ಲಿ ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ. ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕ ಅಭಿಷೇಕ್ ಹಾಗೂ ವಾರ್ಡನ್ ಮಂಜುನಾಥ್ ಸೇರಿ ಕೆಲವು ಶಿಕ್ಷಕರಿಂದ ಮಕ್ಕಳಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪವಿದೆ.

ಮಕ್ಕಳಿಗೆ ಹೊಡೆಯುವುದು, ಮಕ್ಕಳನ್ನು ರಾತ್ರಿ ಹೊತ್ತಿನಲ್ಲಿ ಬ್ಯಾಗ್ ಹೊರಿಸಿ ಕೂರಿಸಿ ಹಿಂಸೆ ಕೊಡಲಾಗುತ್ತಿದೆ ಎಂದು ದೂರಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಬೇಟಿ ಪರಿಶೀಲನೆ ನಡೆಸಿದ್ದಾರೆ. ವಸತಿ ಶಾಲೆಯಲ್ಲಿ ಸುಮಾರು 250 ಜನ ಮಕ್ಕಳಿದ್ದು ಅವರಿಗೆ ಶಿಕ್ಷೆ ನೀಡುವುದನ್ನು ತಪ್ಪಿಸಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.

ಸರ್ಕಾರಿ ಶಾಲಾ- ಕಾಲೇಜುಗಳಿಗೆ ಉಚಿತ ವಿದ್ಯುತ್, ನೀರು; ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌ ಮತ್ತು ನೀರು ಪೂರೈಕೆ ಮಾಡುವುದಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಅದರಂತೆ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್, ನೀರಿನ ಸೌಲಭ್ಯ (Free Power, Water) ಒದಗಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ನೀಡಿದೆ.

ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಶೇಷಾಧಿಕಾರಿ ಮತ್ತು ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ (ಯೋಜನೆ) ಬಿ.ಎಚ್‌. ಗಿರಿಜಾ ಅವರು ಆದೇಶ ಹೊರಡಿಸಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನಕ್ಕೆ ಒಳಪಡುವ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ಆರ್ಥಿಕ ಇಲಾಖೆಯು ಸಹಮತಿ ನೀಡಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯ ಸರ್ಕಾರವು ಗೃಹ ಜ್ಯೋತಿ ಯೋಜನೆಯಡಿ ವಿದ್ಯುಚ್ಛಕ್ತಿಯನ್ನು ಉಚಿತವಾಗಿ ಒದಗಿಸುತ್ತಿರುವ ರೀತಿಯಲ್ಲಿಯೇ, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೂ ಸಹ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯ ಒದಗಿಸುವುದರಿಂದ ಸರ್ಕಾರಿ ಶಾಲೆಗಳಲ್ಲಿ ಉಳಿಕೆಯಾಗುವ ನಿರ್ವಹಣಾ ಅನುದಾನದಿಂದ ಶಾಲೆಗಳ ಗುಣಮಟ್ಟ ಅಭಿವೃದ್ಧಿಪಡಿಸಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಬಹುದು. ಹಾಗೆಯೇ ಬಾಕಿ ವಿದ್ಯುತ್ ಮತ್ತು ನೀರಿನ ಬಿಲ್ಲುಗಳನ್ನು ಪಾವತಿ ಮಾಡುವುದರಿಂದ ವಿನಾಯಿತಿ ನೀಡುವಂತೆ ಹಾಗೂ ಉಚಿತವಾಗಿ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಮನವಿ ಮಾಡಿದ್ದರು. ಹೀಗಾಗಿ ಸರ್ಕಾರ ಕ್ರಮ ಕೈಗೊಂಡಿದೆ.

ಇದನ್ನೂ ಓದಿ: Chetan Ahimsa : ಕೆಂಪೇಗೌಡರನ್ನು ಕ್ಷುಲ್ಲಕ ಮನುಷ್ಯ ಎಂದ ಚೇತನ್ ಮೇಲೆ ಕೇಸ್​​

2023-24ನೇ ಆರ್ಥಿಕ ಸಾಲಿನ ಅಂತ್ಯದವರೆಗೆ, ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಬಳಕೆ ಮಾಡಲಾದ, ಮಾಡಲಾಗುವ ವಿದ್ಯುತ್ ಮತ್ತು ನೀರಿನ ಶುಲ್ಕ ಪಾವತಿಗಾಗಿ ಅಗತ್ಯವಿರುವ ಜಿಲ್ಲಾವಾರು ಅನುದಾನದ ವಿವರವಾದ ಪ್ರಸ್ತಾವನೆಯನ್ನು ಶಾಲಾ ಶಿಕ್ಷಣ ಇಲಾಖೆ, ಆಯುಕ್ತರು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಕೂಡಲೇ ಸರ್ಕಾರಕ್ಕೆ ಸಲ್ಲಿಸಬೇಕು.

2024-25ನೇ ಸಾಲಿನಿಂದ ನಿರಂತರವಾಗಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್ ಮತ್ತು ನೀರು ಸರಬರಾಜು ಮಾಡಲು ವಾರ್ಷಿಕವಾಗಿ ಅಗತ್ಯವಿರುವ ಅನುದಾನದ ಪ್ರಸ್ತಾವನೆಯನ್ನು ಇಂಧನ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆಗಳು ನೇರವಾಗಿ ಆರ್ಥಿಕ ಇಲಾಖೆಗೆ ಸಲ್ಲಿಸಿ ಅಗತ್ಯವಿರುವ ಅನುದಾನವನ್ನು ಪಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು.

ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಉಚಿತವಾಗಿ ಒದಗಿಸಲಾಗುವ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಬಳಕೆ ಮಾಡುವಂತೆ ಹಾಗೂ ಸಾಧ್ಯವಾದಷ್ಟು ಮಿತವ್ಯಯ ಸಾಧಿಸಲು ಅಗತ್ಯ ಕ್ರಮವಹಿಸಬೇಕು ಎಂದು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ.

Exit mobile version