Teachers Protest: ಶಿಕ್ಷಣ ಇಲಾಖೆ ವಿರುದ್ಧ ಸಮರ ಸಾರಿದ ಶಿಕ್ಷಕರು; ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ - Vistara News

ಕರ್ನಾಟಕ

Teachers Protest: ಶಿಕ್ಷಣ ಇಲಾಖೆ ವಿರುದ್ಧ ಸಮರ ಸಾರಿದ ಶಿಕ್ಷಕರು; ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ

Teachers Protest: ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಸುಮಾರು 48 ಸಾವಿರ ಶಾಲೆಗಳು ನಾಳೆ ಬಂದ್ ಆಗಲಿವೆ. ಶಾಲೆಗಳಿಗೆ ಸಾಮೂಹಿಕ ಗೈರು ಹಾಕಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಶಿಕ್ಷಕರು ನಿರ್ಧಾರ ಮಾಡಿದ್ದಾರೆ.

VISTARANEWS.COM


on

Teachers Protest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶಿಕ್ಷಣ ಇಲಾಖೆ ವಿರುದ್ಧ ಶಿಕ್ಷಕರು ಸಮರ ಸಾರಿದ್ದಾರೆ. ಜುಲೈ 12ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೃಹತ್‌ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ರಾಜ್ಯದ ವಿವಿಧೆಡೆಯಿಂದ ಸುಮಾರು 1.30 ಲಕ್ಷ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಸುಮಾರು 48 ಸಾವಿರ ಶಾಲೆಗಳು ನಾಳೆ ಬಂದ್ ಆಗಲಿವೆ. ಶಾಲೆಗಳಿಗೆ ಸಾಮೂಹಿಕ ಗೈರು ಹಾಕಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಶಿಕ್ಷಕರು ನಿರ್ಧಾರ ಮಾಡಿದ್ದಾರೆ. ಶಿಕ್ಷಕರು ಅನೇಕ ಬಾರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಲಾಖೆ ಮೊರೆ ಹೋಗಿದ್ದರು. ಸಚಿವರ ಭೇಟಿಯಿಂದಲೂ ನಿರಾಸೆ ಉಂಟಾಗಿದ್ದರಿಂದ ಬೀದಿಗಿಳಿಯಲು ನಿರ್ಧರಿಸಿದ್ದಾರೆ.

ರಾಜ್ಯದ ಮೂಲೆ ಮೂಲೆಗಳಿಂದ ಶಿಕ್ಷಕರು ಭಾಗಿಯಾಗುವ ಸಾಧ್ಯತೆ ಇದೆ. ಇತ್ತ ನಾಳೆ ಶಾಲೆ ಬಂದ್ ಮಾಡದಂತೆ ಇಲಾಖೆಯಿಂದ ಆದೇಶ ಹೊರಡಿಸಿದೆ. ಆದರೆ, ಇಲಾಖೆಯ ಆದೇಶಕ್ಕೂ ಕ್ಯಾರೆ ಎನ್ನದೇ 1.30 ಲಕ್ಷ ಶಿಕ್ಷಕರಿಂದ ಪ್ರತಿಭಟನ ನಡೆಸಲು ಮುಂದಾಗಿದ್ದಾರೆ. ಈ ಬಗ್ಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ. ನಾಗೇಶ್ ಮಾಹಿತಿ ನೀಡಿದ್ದಾರೆ.

ಸರ್ಕಾರ 2017ರ ವೃಂದ ಮತ್ತು ನೇಮಕಾತಿ ನಿಯಮಗಳು 2016ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತಃ 1 ರಿಂದ 7, 8ಕ್ಕೆ ನೇಮಕ ಹೊಂದಿದ ಶಿಕ್ಷಕರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1 ರಿಂದ 5 ಕ್ಕೆ ಹಿಂಬಡ್ತಿ ನೀಡಿದೆ. ಇದರಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯವಾಗಲಿದೆ. ಹಾಗಾಗಿ ಕೂಡಲೇ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕು. 2016ಕ್ಕಿಂತ ಮುಂಚೆ ನೇಮಕ ಹೊಂದಿದ ಶಿಕ್ಷಕರನ್ನು ಎನ್‌ಸಿಟಿ ಈ ನಿಯಮಾವಳಿ ಪ್ರಕಾರ ಪದವಿ ವಿದ್ಯಾರ್ಹತೆ ಹೊಂದಿದ ಎಲ್ಲ ಸೇವಾನಿರತ ಶಿಕ್ಷಕರನ್ನು ಜಿಪಿಟಿ ಶಿಕ್ಷಕರೆಂದು ಸೇವಾ ಜೇಷ್ಠತೆಯೊಂದಿಗೆ ಪುನರ್ ಪದನಾಮಕರಣ ಮಾಡಬೇಕು ಎಂಬುದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಯಾಗಿದೆ.

ಇದನ್ನೂ ಓದಿ | Kejriwal Bungalow Case: ಕೇಜ್ರಿವಾಲ್‌ ಬಂಗಲೆ ನವೀಕರಣ ಅಕ್ರಮ; ಮೂವರು ಇಂಜಿನಿಯರ್‌ಗಳು ಸಸ್ಪೆಂಡ್‌

ಈ ಮೊದಲಿನ ಪ್ರೌಢಶಾಲಾ ಬಡ್ತಿ ನಿಯಮಾವಳಿಯಂತೆ 2016ರ ಮುಂಚೆ ನೇಮಕಾತಿ ಹೊಂದಿದ ಹಾಗೂ ಬಿ.ಇಡಿ ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಖಾಲಿಯಾಗುವವರೆಗೂ ಪ್ರೌಢಶಾಲೆಗೆ ಬಡ್ತಿ ನೀಡಬೇಕು, ತದನಂತರದಲ್ಲಿ ಹೊಸದಾಗಿ ನೇಮಕಗೊಂಡ ಜಿಪಿಟಿ ಶಿಕ್ಷಕರನ್ನು ಪರಿಗಣಿಸಬೇಕು, ಈ ಮುಂಚಿನ ನಿಯಮಾವಳಿಯಂತೆ ಮುಖ್ಯ ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆಯನ್ನು ಪರಿಗಣಿಸದೇ ಅಖಂಡ ಸೇವಾಹಿರಿತನದ ಆಧಾರದ ಮೇಲೆ ಬಡ್ತಿ ನೀಡಬೇಕು ಎಂದು ಶಿಕ್ಷಕರು ಒತ್ತಾಯಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Tungabhadra Dam: ಒಂದು ವಾರದಲ್ಲಿ ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿಯಾಗಲಿದೆ ಎಂದ ಡಿ.ಕೆ.ಶಿವಕುಮಾರ್‌

Tungabhadra Dam: ಮೊದಲು ಯಾರು ಟಿಬಿ ಡ್ಯಾಂ ಗೇಟ್ ರೆಡಿ ಮಾಡಿದ್ದರೋ ಅವರಿಗೆ ಹೇಳಿದ್ದೇವೆ. ನಾವೆಲ್ಲರೂ ಶತಪ್ರಯತ್ನ ಮಾಡಿ ನೀರು ಉಳಿಸುವ ಕೆಲಸ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

Tungabhadra Dam
Koo

ವಿಜಯನಗರ: ತುಂಗಭದ್ರಾ ಜಲಾಶಯದ 19 ನಂಬರ್​ ಕ್ರಸ್ಟ್​​ ಗೇಟ್​​ನ ಚೈನ್​ ತುಂಡಾಗಿದ್ದು ಅಪಾರ ಪ್ರಮಾಣದ ನೀರು ನದಿಪಾತ್ರಕ್ಕೆ ಹರಿದು ಹೋಗುತ್ತಿದೆ. ಹೀಗಾಗಿ ಜಲಾಶಯಕ್ಕೆ (Tungabhadra Dam) ಜಲಸಂಪನ್ಮೂಲ ಸಚಿವ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಭಾನುವಾರ ಭೇಟಿ ನೀಡಿ ಪರಿಶೀಲಿಸಿ, ಆದಷ್ಟು ಬೇಗ ಡ್ಯಾಂ ಗೇಟ್ ದುರಸ್ತಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಡಿ.ಕೆ. ಶಿವಕುಮಾರ್ ಮಾತನಾಡಿ, ಡ್ಯಾಂ ಬಗ್ಗೆ ಈಗಾಗಲೇ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಡ್ಯಾಂ ಮೇಲೆ ನಿಂತು ಸಂಪೂರ್ಣವಾಗಿ ವೀಕ್ಷಣೆ ಮಾಡಿದ್ದೇನೆ. ರಾತ್ರಿ ವೇಳೆ 10 ಗೇಟ್ ಕಾರ್ಯ ನಿರ್ವಹಣೆ ಮಾಡುತ್ತಿದ್ದವು. ಗೇಟ್ ನಂಬರ್ 19ರ ಚೈನ್ ಕಟ್ ಆಗಿ ಗೇಟ್ ಕಳಚಿ ಬಿದ್ದಿದೆ. ಹೀಗಾಗಿ ವಿಜಯನಗರ ಬಳ್ಳಾರಿಯ ಎಲ್ಲಾ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ ಎಂದು ತಿಳಿಸಿರು.

ಇದನ್ನೂ ಓದಿ | Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌; ನದಿಪಾತ್ರದಲ್ಲಿ ಪ್ರವಾಹ ಭೀತಿ

ಮೊದಲು ರೈತರನ್ನು ಬದುಕಿಸಬೇಕು, ರೈತರನ್ನು ಉದ್ಧಾರ ಮಾಡೋದಕ್ಕೆ ಅನೇಕ ಕಾರ್ಯಕ್ರಮ ಹಾಕಿಕೊಂಡಿದ್ದೇವೆ. ತುಂಗಭದ್ರಾ ಜಲಾಶಯವು 105 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ನೀರು ಹೆಚ್ಚಿಗೆ ಇದ್ದಿದ್ದರಿಂದ ನೀರನ್ನು ನದಿಗೆ ಬಿಡಲಾಗಿದೆ. ಒಂದೇ ಗೇಟ್‌ನಲ್ಲಿ ಹೆಚ್ಚು ನೀರು ಹೋದಾಗ ಸಮಸ್ಯೆ ಆಗುತ್ತೆ, ಹೀಗಾಗಿ 98 ಸಾವಿರ ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಒಂದೇ ಗೇಟ್‌ನಲ್ಲಿ 35 ಸಾವಿರ ಕ್ಯೂಸೆಕ್ ಹೋಗುತ್ತಿದೆ ಎಂದರು.

ಮಲೆನಾಡು ಭಾಗದಲ್ಲಿ ಮತ್ತೆ ಉತ್ತಮ ಮಳೆ ಆಗುವ ನಿರೀಕ್ಷೆ ಇದೆ. ಅಕ್ಟೋಬರ್ ಅಷ್ಟೋತ್ತಿಗೆ ಮತ್ತೆ 60 ಟಿಎಂಸಿ ನೀರು ಜಲಾಶಯಕ್ಕೆ ಬರುವ ಸಾಧ್ಯತೆ ಇದೆ. 5 ಟಿಎಂಸಿಯಷ್ಟು ನೀರು ಈಗಾಗಲೇ ಹರಿದು ಹೋಗಿದೆ. ಟೆಕ್ನಿಕಲ್ ಟೀಂ, ನುರಿತ ತಂತ್ರಜ್ಞ ನಾರಾಯಣ ಸೇರಿ ಜೆಎಸ್‌ಡಬ್ಲ್ಯು ಮತ್ತಿತರರ ಸಹಾಯ ಕೇಳಿದ್ದೇವೆ. ಆದಷ್ಟು ಬೇಗ ಗೇಟ್ ದುರಸ್ತಿ ಮಾಡೋದಕ್ಕೆ ಹೇಳಲಾಗಿದೆ ಎಂದು ತಿಳಿಸಿದರು.

ಮೊದಲು ಯಾರು ಟಿಬಿ ಡ್ಯಾಂ ಗೇಟ್ ರೆಡಿ ಮಾಡಿದ್ದರೋ ಅವರಿಗೆ ಹೇಳಿದ್ದೇವೆ. ನಾವೆಲ್ಲರೂ ಶತಪ್ರಯತ್ನ ಮಾಡಿ ನೀರು ಉಳಿಸುವ ಕೆಲಸ ಮಾಡುತ್ತೇವೆ. ಯಾವುದೇ ರಾಜಕಾರಣ ಮಾಡದೇ ನೀರು ಉಳಿಸುವ ಕೆಲಸ ಮಾಡುತ್ತೇವೆ. ಎಲ್ಲೆಲ್ಲಿ ನೀರು ಉಳಿಸೋದಕ್ಕೆ ಸಾಧ್ಯ, ಅಲ್ಲಿ ಕೆಲಸ ಮಾಡುತ್ತೇವೆ. ಆಂಧ್ರ, ತೆಲಂಗಾಣ ರಾಜ್ಯದ ಅಧಿಕಾರಿಗಳ ಜೊತೆ ಮಾತನಾಡಿದ್ದೇವೆ. ರೈತರನ್ನ ಮೊದಲು ಉಳಿಸುವ ಪ್ರಯತ್ನವನ್ನು ಮಾಡುತ್ತೇವೆ ಎಂದರು.

ಇದನ್ನೂ ಓದಿ | Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌ ಪ್ರಕರಣ; ಪ್ರವಾಹದ ಭೀತಿ ಇಲ್ಲ ಎಂದ ಗೃಹ ಸಚಿವ ಡಾ. ಜಿ.ಪರಮೇಶ್ವರ್

8 ತಿಂಗಳಿನಿಂದ ಟಿಬಿ ಡ್ಯಾಂಗೆ ಮುಖ್ಯ ಎಂಜಿನಿಯರ್ ನೇಮಕ ಆಗಿಲ್ಲ ಅನ್ನೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ನಾನು ಯಾರ ಮೇಲೂ ದೂರುವುದಿಲ್ಲ, ಮೊದಲು ಗೇಟ್ ಸರಿಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಒಂದು ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗುತ್ತದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Continue Reading

ದಾವಣಗೆರೆ

Building Collapsed: ನಿರ್ಮಾಣ ಹಂತದ ಶಾಲಾ ಕಟ್ಟಡ ಧ್ವಂಸ ಮಾಡಿದ ಕಿಡಿಗೇಡಿಗಳು

Building Collapsed: ನಿರ್ಮಾಣ ಹಂತದ ಶಾಲಾ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಪರಾರಿ ಆಗಿದ್ದಾರೆ. ಯಾಕಾಗಿ ಈ ಕೃತ್ಯ ಎಸಗಿದ್ದಾರೆ ಎಂಬುದು ತಿಳಿದು ಬಂದಿಲ್ಲ.

VISTARANEWS.COM


on

By

building collpase
Koo

ದಾವಣಗೆರೆ: ನಿರ್ಮಾಣ ಹಂತದ ಶಾಲಾ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ (Building Collapsed) ಮಾಡಿದ್ದಾರೆ. ಶಾಲಾಭಿವೃದ್ಧಿ ಮಂಡಳಿ ನಾನಾ ಕಡೆಗಳಲ್ಲಿ ಅಲೆದಾಡಿ ಅನುದಾನ ತಂದು ಕೊಠಡಿ ಕಟ್ಟಡ ಕೆಲಸವನ್ನು ಆರಂಭಿಸಿದ್ದರು.

ಪ್ಲೆಂಚ್‌ನಿಂದ ಒಂದು ಪಿಟ್ ಮೇಲೆ ಎದ್ದಿದ್ದ ಗೋಡೆ ಕೆಡವಿ ಕುಕೃತ್ಯ ಮೆರೆದಿದ್ದಾರೆ. ದಾವಣಣೆರೆಯ ಹರಿಹರ ನಗರದ ಹಳ್ಳದಕೆರೆ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿಯನ್ನು ಕೆಡವಿದ್ದಾರೆ.

ನಿರ್ಮಾಣ ಹಂತದ ಕೊಠಡಿ ಸೇರಿದಂತೆ ಅಂತಿಮ ಹಂತಕ್ಕೆ ತಲುಪಿದ್ದ ಹೈಟೆಕ್ ಶೌಚಾಲಯ ಧ್ವಂಸ ಮಾಡಿದ್ದಾರೆ. 150ಕ್ಕೂ ಅಧಿಕ ವಿದ್ಯಾರ್ಥಿಗಳು ಕಲಿಯುತ್ತಿರುವ ಸರ್ಕಾರಿ ಶಾಲೆ ಇದಾಗಿದ್ದು, ಸಮಿತಿ ಕಷ್ಟಪಟ್ಟು ಅನುದಾನ ತಂದು ಕಟ್ಟಡ ಕಾಮಗಾರಿ ಅರಂಭಿಸಿದ್ದರು. ಕಿಡಿಗೇಡಿಗಳ ಕೃತ್ಯದಿಂದ ಶಾಲಾಭಿವೃದ್ಧಿ ಸಮಿತಿ ಮತ್ತು ವಿದ್ಯಾರ್ಥಿಗಳು ಬೇಸರಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಬಿಗಿ ಭದ್ರತೆಯಲ್ಲಿ ಶಾಲಾ ಕಟ್ಟಡ ಕಾಮಗಾರಿ ಮುಂದುವರಿಸುವ ತೀರ್ಮಾನಕ್ಕೆ ಬಂದಿದ್ದಾರೆ. ಸರ್ಕಾರಿ ಶಾಲಾ ಕೊಠಡಿ ಶೌಚಾಲಯ ಪುನರ್ ನಿರ್ಮಾಣ ಮಾಡುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Murder Case : ಮಧ್ಯರಾತ್ರಿಲಿ ವೃದ್ಧೆಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು; ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ

ಬೆಂಗಳೂರಲ್ಲಿ ನಿರ್ಮಾಣ ಹಂತ ಕಟ್ಟಡ ಕುಸಿತ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿದು (Building Collapsed) ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರಿನ ಪೀಣ್ಯದ ಎನ್‌ಟಿಎಸ್ ಸರ್ಕಲ್‌ನಲ್ಲಿ‌ ಘಟನೆ ನಡೆದಿದೆ. ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮತೋರ್ವ ಗಾಯಾಳಾನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್ ಕುಸಿತದಿಂದಾಗಿ ಈ ಘಟನೆ ನಡೆದಿದೆ. ಕಾರ್ಮಿಕರು ಏಷಿಯನ್ ಪೈಂಟ್ಸ್ ಕಟ್ಟಡ ನಿರ್ಮಾಣ ಮಾಡುತ್ತಿದ್ದರು. ಕಟ್ಟಡದ ನಾಲ್ಕನೇ ಮಹಡಿಗೆ ಕಾಂಕ್ರೀಟ್ ಹಾಕುತ್ತಿದ್ದಾಗ, ಏಕಾಏಕಿ ಸೆಂಟ್ರಿಂಗ್ ಕುಸಿದು ಬಿದ್ದಿದೆ. ಮೇಲ್ಭಾಗದಲ್ಲಿದ್ದ ಮೂವರು ಕಾರ್ಮಿಕರು ಕೆಳಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೂರನೆ ಕಾರ್ಮಿಕ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಅಗ್ನಿಶಾಮಕದಳ ಸಿಬ್ಬಂದಿ ಸದ್ಯ ಕಾಂಕ್ರೀಕ್ ತೆರವು ಮಾಡುತ್ತಿದ್ದಾರೆ.

ಉತ್ತರ ವಿಭಾಗ ಡಿಸಿಪಿ ಸೈದುಲು ಅಡಾವತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಯೋಮಾ ಎಲೈಟ್ಸ್ ಎಂಬ ಖಾಸಗಿ ಕಂಪನಿಯ ಕಟ್ಟಡವಾಗಿದೆ. ಐದನೇ ಫ್ಲೋರ್‌ನಿಂದ ಬಿದ್ದು ಇಬ್ಬರು ಮೃತ ಪಟ್ಟಿದ್ದಾರೆ. ಐದಾರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕಲಬುರಗಿ ಮೂಲದವರು ವೀರೇಶ್ ಹಾಗೂ ಯಾದಗಿರಿ ಮೂಲದ ಹಿಮಾಂಶು ಮೃತರು ಎಂದು ತಿಳಿದು ಬಂದಿದೆ. ಸೋಲದೇವಹಳ್ಳಿ ಬಳಿ ವಾಸವಿದ್ದರು. ಫ್ಲೋರಿಂಗ್ ಹಾಕುತ್ತಿದ್ದಾಗ ಈ ರೀತಿ ಅವಘಡ ಸಂಭವಿಸಿದೆ. ಮಾಲೀಕರು ಯಾರು ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದೇವೆ. ದೂರು ಪಡೆದು ತನಿಖೆಯನ್ನು ನಡೆಸುತ್ತೇವೆ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿಜಯನಗರ

Tungabhadra Dam: ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ; ಅಧಿಕಾರಿಗಳ ಜತೆ ಸಭೆ

Tungabhadra Dam: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಚೈನ್ ಲಿಂಕ್ ಕಟ್ ಆದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

VISTARANEWS.COM


on

Tungabhadra Dam
Koo

ವಿಜಯನಗರ: ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್ ಗೇಟ್ ಡ್ಯಾಮೇಜ್ ಆದ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರನ್ನು ತುಂಗಭದ್ರಾ ನದಿಗೆ ಬಿಡಲಾಗುತ್ತಿದೆ. ಇದರಿಂದ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿರುವುದರಿಂದ ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ (DK Shivakumar) ಅವರು ಭೇಟಿ ನೀಡಿ ಪರಿಶೀಲಿಸಿದ್ದು, ದುರಸ್ತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.

ಜಲಾಶಯ ವೀಕ್ಷಣೆ ವೇಳೆ ಡಿಸಿಎಂ ಡಿಕೆಶಿಗೆ ಬಳ್ಳಾರಿ, ವಿಜಯನಗರ, ಕೊಪ್ಪಳದ ಸಂಸದರು, ಶಾಸಕರು, ಟಿಬಿ ಬೋರ್ಡ್ ಅಧಿಕಾರಿಗಳು ಸಾಥ್ ನೀಡಿದ್ದಾರೆ.

ಜಲಾಶಯಕ್ಕೆ ಮಂಗಳವಾರ ಭೇಟಿ ನೀಡದ್ದಾರೆ ಸಿಎಂ

ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕಟ್ ಘಟನೆ ಕುರಿತಂತೆ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದು, ಮಂಗಳವಾರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲು ಸಿಎಂ ನಿರ್ಧರಿಸಿದ್ದಾರೆ.

ಮುಖ್ಯಮಂತ್ರಿಗಳು ಇಂದು ಬೆಳಗ್ಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಅವರೊಂದಿಗೆ ಮಾತುಕತೆ ನಡೆಸಿ ಸಂಪೂರ್ಣ ವಿವರ ಪಡೆದರು. ಯಾವುದೇ ಹಾನಿ ಸಂಭವಿಸದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು. ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರೊಂದಿಗೂ ಸಿಎಂ ಚರ್ಚಿಸಿದರು.

ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌; ನದಿಪಾತ್ರದಲ್ಲಿ ಪ್ರವಾಹ ಭೀತಿ

Tungabhadra Dam
ತುಂಗಭದ್ರಾ ಜಲಾಶಯ

ಕೊಪ್ಪಳ / ವಿಜಯನಗರ: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್‌ ಗೇಟಿನ ಚೈನ್‌ ತುಂಡಾಗಿ ಅಪಾರ ಪ್ರಮಾಣ ನೀರು ನದಿ ಪಾತ್ರದಕ್ಕೆ ಹರಿದು ಹೋಗುತ್ತಿದ್ದು, ಆತಂಕ ಸೃಷ್ಟಿಸಿದೆ. ಸ್ಥಳಕ್ಕೆ ಜನ ಪ್ರತಿನಿಧಿಗಳು, ಅಧಿಕಾರಿಗಳು ಧಾವಿಸಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.

ಒಂದೇ ಗೇಟ್‌ನಿಂದ 35 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಹರಿಯುತ್ತಿದ್ದು, ನದಿ ಪಾತ್ರದಲ್ಲಿರುವ ಜನರಲ್ಲಿ ಆತಂಕ ಮೂಡಿಸಿದೆ. ಕಳೆದ ಕೆಲವು ದಿನಗಳಿಂದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯಾಗಿರುವುಸಿಂದ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬಂದಿದೆ. ಸಂಪೂರ್ಣ ಭರ್ತಿಯಾಗಿದ್ದ ಜಲಾಶಯ ಗೇಟ್‌ಗೆ ಭಾರೀ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಹೀಗಾಗಿ ತನ್ನಿಂದ ತಾನೇ ಓಪನ್ ಆಗಿದೆ. ಜಲಾಶಯ ಇತಿಹಾಸದಲ್ಲೇ ಗೇಟ್ ಕಿತ್ತೋಗಿರುವುದು ಇದು ಮೊದಲ ಬಾರಿ.

ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು

ಶನಿವಾರ ರಾತ್ರಿ ಗೇಟ್‌ ಓಪನ್‌ ಆಗಿದ್ದು, ಕೂಡಲೇ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ವಿಜಯನಗರ ಜಿಲ್ಲಾ ಎಸ್‌ಪಿ ಶ್ರೀ ಹರಿಬಾಬು ಬಿ.ಎಲ್‌. ಆಗಮಿಸಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು. ಮಾತ್ರವಲ್ಲ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳು, ಅದಿಕಾರಿಗಳು ಅಲರ್ಟ್‌ ಆಗಿದ್ದಾರೆ. ವಿಜಯನಗರ ಶಾಸಕ ಗವಿಯಪ್ಪ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಮಧ್ಯರಾತ್ರಿಯಿಂದಲೇ ಡ್ಯಾಂ ಗೇಟ್ ಬಳಿ ಪೊಲೀಸರು ಜಮಾಯಿಸಿದ್ದು, ಪ್ರವೇಶ ನಿರಾಕರಿಸಲಾಗಿದೆ.

ಜಲಾಶಯದ 20 ಗೇಟ್‌ಗಳಿಂದ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಹರಿಬಿಡುವ ಸಾಧ್ಯತೆ ಇದೆ ಎಂದು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ತಿಳಿಸಿದರು. ʼʼಗೇಟ್ ಕಟ್ ಆಗಿರುವ ಕುರಿತು ಜಲ ಸಂಪನ್ಮೂಲ ಸಚಿವರಿಗೆ ಮಾಹಿತಿ ನೀಡಿಲಾಗಿದೆ. ಮುಖ್ಯಮಂತ್ರಿಗೂ ಮಾಹಿತಿ ನೀಡುವ ಪಯತ್ನ ನಡೆದಿದೆ. ಸುಮಾರು 60 ಟಿಎಂಸಿ ನೀರು ಜಲಾಶಯದಿಂದ ನದಿ ಮೂಲಕ ಹೊರ ಬಿಡಬೇಕಿದೆ. ಇಷ್ಟು ಪ್ರಮಾಣದ ನೀರು ಹೊರ ಹೋಗಲು ನಾಲ್ಕಕ್ಕೂ ಹೆಚ್ಚು ದಿನ ಬೇಕು. ಚೈನ್ ಲಿಂಕ್ ಕಟ್ ಆಗಿರುವ ಗೇಟ್ ಸರಿಪಡಿಸುವ ಬಗ್ಗೆ ವಿಶೇಷ ತಾಂತ್ರಿಕ ತಂಡ ಆಗಮಿಸಲಿದೆʼʼ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ | Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌ ಪ್ರಕರಣ; ಪ್ರವಾಹದ ಭೀತಿ ಇಲ್ಲ ಎಂದ ಗೃಹ ಸಚಿವ ಡಾ. ಜಿ.ಪರಮೇಶ್ವರ್

ತುಂಗಭದ್ರಾ ಜಲಾಶಯದ 19ನೇ ಗೇಟ್ ಸಂಪೂರ್ಣ ಡ್ಯಾಮೇಜ್ ಆಗಿರುವ ಸುದ್ದಿ ತಿಳಿಯುತ್ತಲೇ ವಿಜಯನಗರ ಶಾಸಕ ಗವಿಯಪ್ಪ ಅವರು ಸ್ವತಃ ಕಾರು ಚಲಾಯಿಸಿಕೊಂಡು ಡ್ಯಾಂಗೆ ಬಳಿಗೆ ಮಧ್ಯರಾತ್ರಿಯೇ ಆಗಮಿಸಿದರು. ಸ್ಥಳಕ್ಕೆ ಭೇಟಿ ನೀಡಿದ ವಿಜಯನಗರ ಎಸ್.ಪಿ ಹರಿಬಾಬು ಅವರಿಂದ ಶಾಸಕ ಗವಿಯಪ್ಪ ಮಾಹಿತಿ ಪಡೆದುಕೊಂಡರು.

Continue Reading

ಧಾರವಾಡ

Assault Case : ಅಂಜುಮನ್ ಸಂಸ್ಥೆ ಅಧ್ಯಕ್ಷನ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ ಅಪರಿಚಿತರು

Assault Case : ಧಾರವಾಡದಲ್ಲಿ ಅಪರಿಚಿತ ಗ್ಯಾಂಗ್‌ವೊಂದು ಚಾಕು ಹಿಡಿದು ಅಂಜುಮನ್‌ ಸಂಸ್ಥೆ ಅಧ್ಯಕ್ಷನ ಮನೆಗೆ ನುಗ್ಗಿ ಬೆದರಿಕೆ ಹಾಕಿದೆ. ಕುಟುಂಬಸ್ಥರೊಂದಿಗೆ ಅಸಭ್ಯವಾಗಿ ವರ್ತಿಸಿ ಕಾಲ್ಕಿತ್ತಿದ್ದಾರೆ.

VISTARANEWS.COM


on

By

assault case
Koo

ಧಾರವಾಡ: ಧಾರವಾಡ ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಮನೆಗೆ ನುಗ್ಗಿ ಕಿಡಿಗೇಡಿಗಳು ಹಲ್ಲೆಗೆ ಯತ್ನಿಸಿದ್ದಾರೆ. 10ಕ್ಕೂ ಹೆಚ್ಚು ಅಪರಿಚಿತ ಯುವಕರು ಹಲ್ಲೆಗೆ (assault case) ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಅಪರಿಚಿತ ಗ್ಯಾಂಗ್‌ ಮೊದಲು ಅಂಜುಮನ್ ಸಂಸ್ಥೆಯ ಕಚೇರಿಗೆ ತೆರಳಿ ಹಲ್ಲೆಗೆ ಮುಂದಾಗಿದ್ದಾರೆ. ಆದರೆ ಅಲ್ಲಿ ಇಸ್ಮಾಯಿಲ್‌ ಇಲ್ಲದ ಕಾರಣ ಮನೆಗೆ ನುಗ್ಗಿದ್ದಾರೆ. ಚಾಕು ಹಿಡಿದುಕೊಂಡು ಮನೆಗೆ ನುಗ್ಗಿದ ಯುವಕರು, ಇಸ್ಮಾಯಿಲ್ ತಮಟಗಾರ್ ಮನೆಯಲ್ಲಿ ಇಲ್ಲದ ಕಾರಣ ಅವರ ಮನೆಯವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ.

ಇಸ್ಮಾಯಿಲ್ ಕೊಲ್ಲಲು ಬಂದಿದ್ದೇವೆ ಎಂದು ಕಿರುಚಾಡುತ್ತಿದ್ದರಂತೆ. ಲಂಗೋಟಿ ಜಮಾದಾರ್ ಗಲ್ಲಿ, ಅಂಜುಮನ್ ಹಾಸ್ಟೆಲ್ ಬಳಿ ಹಲ್ಲೆಗೆ ಸ್ಕೆಚ್ ಹಾಕಿದ್ದರು ಎನ್ನಲಾಗಿದೆ. ಸದ್ಯ ಇಸ್ಮಾಯಿಲ್ ಇಲ್ಲದ ಕಾರಣಕ್ಕೆ ಮನೆಯವರೊಂದಿಗೆ ಜಗಳ ತೆಗೆದಿದ್ದಾರೆ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಶಹರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪೊಲೀಸ್‌ ಕಮಿಷನರ್‌ ಭೇಟಿ

ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಾಟಗಾರ ಅವರಿಗೆ ಜೀವ ಬೆದರಿಕೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ಜಮಾದಾರ ಗಲ್ಲಿ ದರೂರ ಓಣಿಗೆ ಭೇಟಿ ನೀಡಿ ಘಟನಾ ಸ್ಥಳದಲ್ಲಿ ಸಿಸಿ ಟಿವಿ ಪರಿಶೀಲನೆ ಮಾಡಿ ಮಾಹಿತಿ ಪಡೆದುಕೊಂಡರು. ಇದೇ ವೇಳೆ ಇಸ್ಮಾಯಿಲ್ ಸಹೋದರ ಜಮಾಲ್ ತಮಾಟಗಾರ ರಿಂದ ಮಾಹಿತಿ ಪಡೆದರು.

ಮುಸ್ಲಿಂ ಹುಡುಗರಿಂದಲೇ ಮುಸ್ಲಿಂ ನಾಯಕರನ್ನು ಹೊಡೆಸುವ ಪ್ಲ್ಯಾನ್ ಇದು

ಮುಸ್ಲಿಂ ಹುಡುಗರಿಂದಲೇ ಮುಸ್ಲಿಂ ನಾಯಕರನ್ನು ಹೊಡೆಸುವ ಪ್ಲ್ಯಾನ್ ಇದು ಎಂದು ಧಾರವಾಡದಲ್ಲಿ ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಮಾಧ್ಯಮಗಳಿಗೆ ತಿಳಿಸಿದರು. ನನಗೆ ಜೀವ ಬೆದರಿಕೆ ಹಾಕಿದ್ದಾರೆ. 18-20 ವರ್ಷದ ಹುಡುಗರು ನನ್ನ ಹೊಡೆಯಲು ಪ್ಲ್ಯಾನ್ ಮಾಡಿದ್ದಾರೆ. ಮಣಕಿಲ್ಲಾ, ರಸೂಲಪುರ ಗಲ್ಲಿಯಲ್ಲಿ ಚಾಕು ಹಿಡಿದುಕೊಂಡು ನಿನ್ನೆ ಶನಿವಾರ ಓಡಾಡಿದ್ದಾರೆ. ಪೊಲೀಸರು ಮತ್ತು ಪೊಲೀಸ್ ಆಯುಕ್ತರ ಮೇಲೆ ನಂಬಿಕೆ ಇದೆ.
ಧಾರವಾಡ ವಿದ್ಯಾಕಾಶಿ ಇಲ್ಲಿ ಶಾಂತಿ ಕಾಪಾಡುವುದು ಎಲ್ಲರ ಕರ್ತವ್ಯ, ಹೀಗಾಗಿ ಪೊಲೀಸರು ಸೂಕ್ತವಾಗಿ ತನಿಖೆ ಮಾಡಬೇಕು.

ಹಲ್ಲೆ ಮಾಡಲು ಬಂದ ಯುವಕರಿಗೂ ನನಗೂ ಯಾವುದೇ ವೈಯಕ್ತಿಕ ದ್ವೇಷವಿಲ್ಲ. ಆದರೆ ಇಂತಹ ‌ಹುಡುಗರಿಗೆ ಪ್ರಚೋದನೆ ಕೊಟ್ಟವರು ಯಾರು? ನಾನು ಅವರೆಲ್ಲರ ಕುಟುಂಬಗಳಿಗೆ ಕಷ್ಟ ಇದ್ದಾಗ ಸಹಾಯ ಮಾಡಿದ್ದೇನೆ. ಆ ಹುಡುಗರ ತಪ್ಪಿಲ್ಲದೇ ಇರಬಹುದು, ಆದರೆ ಹಿಂದೆ ಇರೋರು ಯಾರು ಎಂದು ಪತ್ತೆ ಮಾಡಬೇಕು. ಯಾರ್ಯಾರು ಈ ಪ್ಲ್ಯಾನ್ ಮಾಡಿದ್ದಾರೆ ಎಂಬುದು ನನಗೆ ಗೊತ್ತಿದೆ. ಕಾಲ್ ರೆಕಾರ್ಡ್ಸ್, ವಿಡಿಯೋ ಎಲ್ಲ ಇವೆ, ಅದನ್ನೆಲ್ಲ ಪೊಲೀಸರಿಗೆ ಒಪ್ಪಿಸುವೆ ಎಂದರು.

ಒಂದು ವರ್ಷದ ಹಿಂದೆ ನನ್ನ ಮುಗಿಸಲು ಪ್ಲ್ಯಾನ್ ನಡೆದಿದೆ. ಮುಸಲ್ಮಾನ ಹುಡುಗರೇ ನನ್ನನ್ನು ಹೊಡೆಯುವಂತೆ ಪ್ಲ್ಯಾನ್ ಮಾಡಿದ್ದರು. ಈ ಹಿಂದೆ ಮುಸ್ಲಿಂ ಹುಡುಗರನ್ನು 8-10 ಜನರನ್ನು ಕ್ಯಾಚ್ ಮಾಡಿದ್ದರು. ಅದೇ ಹುಡುಗರು ನಮ್ಮ ಮನೆಗೆ ಬಂದು ಹೇಳಿದ್ದಾರೆ. ಈಗ ನಾವು ಹೊಡೆಯದೇ ಇರಬಹುದು, ಮುಂದೆ ಯಾರಾದರೂ ಹೊಡೆಯಬಹುದು ಎಂದು ಎಚ್ಚರಿಕೆ ಕೊಟ್ಟಿದ್ದರು.

ನಶೆಯಲ್ಲಿರುವ ಹುಡುಗರಿಂದ ಹೊಡೆಸಿ, ಬಳಿಕ ಆ ಹುಡುಗರನ್ನು ಎನ್‌ಕೌಂಟರ್ ಮಾಡಿಸಬೇಕು ಎಂದು ಪ್ಲ್ಯಾನ್ ನಡೆದಿದೆ. ಹೀಗಾಗಿ ನನಗೇನಾದರೂ ಆದರೆ ಇಂಥವರೇ ಕಾರಣ ಎಂದು ವರ್ಷದ ಹಿಂದೆಯೇ ನಾನು ಮನೆಯಲ್ಲಿ ಹೇಳಿಟ್ಟಿದ್ದೇನೆ. ಸಂಶಯ ಇದ್ದವರ ಬಗ್ಗೆ ಪೊಲೀಸ್ ಆಯುಕ್ತರಿಗೆ ಮಾಹಿತಿ ಕೊಟ್ಟಿದ್ದೇನೆ. ಇದರಲ್ಲಿ ರಾಜಕೀಯವಾಗಿ ಮುಗಿಸುವ ಷಡ್ಯಂತ್ರ ಇದೆ. ಅಂಜುಮನ್ ಎಲೆಕ್ಷನ್, ಎಂಎಲ್ಎ ಎಲೆಕ್ಷನ್, ಪಾಲಿಕೆ ಎಲೆಕ್ಷನ್ ಯಾವುದೋ ಒಂದು ರಾಜಕೀಯವೇ ಇದೆ. ಈ ಸಂಬಂಧ ನಾನು ಆಯುಕ್ತರಿಗೆ ದೂರು ಕೊಡಲಿದ್ದೇನೆ ಎಂದರು.

ಇದನ್ನೂ ಓದಿ: Bear Attack : ರೈತನ ಮೇಲೆ ಡೆಡ್ಲಿ ಅಟ್ಯಾಕ್‌ ಮಾಡಿ ಕೊಂದು ಹಾಕಿದ ಕರಡಿ

ಕಾರು ಚಾಲಕನ ಮುಖಕ್ಕೆ‌ ಉಗಿದು, ಗೂಂಡಾಗಿರಿ ಮಾಡಿದ ಆಟೋ ಡೈವರ್‌

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ಗೂಂಡಾಗಿರಿ (Assault Case) ತೋರಿಸಿದ್ದಾನೆ. ಕಾರು ಚಾಲಕನ ಮುಖಕ್ಕೆ ಉಗಿದು ಬಳಿಕ ಕಾರಿನ ಮಿರರ್‌ ಹೊಡೆದು ಹಾಕಿದ್ದಾನೆ. ಬೆಂಗಳೂರಿನ ಮಾರತಹಳ್ಳಿಯ ಯಮಲೂರು ಸಿಗ್ನಲ್ ಬಳಿ ಆಗಸ್ಟ್ 5ರಂದು ಈ ಘಟನೆ ನಡೆದಿದೆ.

ಕ್ಷುಲ್ಲಕ ವಿಚಾರಕ್ಕೆ ಕಾರು ಚಾಲಕ ಹಾಗೂ ಆಟೋ ಚಾಲಕನ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಕಾರು ಚಾಲಕ ವಿಡಿಯೊ ರೆಕಾರ್ಡ್‌ ಮಾಡುತ್ತಿರುವುದನ್ನು ನೋಡಿದ ಆತ ಆಟೋದಿಂದ ಇಳಿದು ಬಂದವನೇ ಅವಾಚ್ಯ ಶಬ್ಧಗಳಿಂದ ನಿಂದಿಸಲು ಶುರು ಮಾಡಿದ್ದಾನೆ. ಬಳಿಕ ಕಾರು ಚಾಲಕ ಮುಖಕ್ಕೆ ಉಗಿದು, ಕಾರಿಗೆ ಹೊಡೆದು, ಮಿರರ್‌ ಕಿತ್ತು ಹಾಕಿದ್ದಾನೆ.

ಕಾರು ಚಾಲಕ ಅಲೆಕ್ಸ್ ಬೋಬಿ ವೆಂಪಲ ಎಂಬಾತ ಈ ಸಂಬಂಧ ದೂರು ನೀಡಿದ್ದರು. ಆಟೋ ಚಾಲಕನ ಅನುಚಿತ ವರ್ತನೆ ಬಗ್ಗೆ ಎಚ್ಎಲ್‌ಎಲ್ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿತ್ತು. ಕಾರು ಚಾಲಕ‌ ದೂರಿನ ಮೇಲೆ ಆಟೋ ಚಾಲಕನ ಪತ್ತೆ ಮಾಡಿ ಪೊಲೀಸರು ಬಂಧಿಸಿದ್ದಾರೆ. ಚಾಲಕನ ವಿರುದ್ಧ ಬಿ.ಎನ್.ಎಸ್ ಸೆಕ್ಷನ್ 126(2), 324(4), 351(2), 352 ಅಡಿ ಎಫ್.ಐ.ಆರ್ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kolkata Doctor Murder Case
ದೇಶ1 min ago

ಕಣ್ಣು, ಬಾಯಿಯಿಂದ ರಕ್ತಸ್ರಾವ, ಕುತ್ತಿಗೆ ಮೂಳೆ ತುಂಡು: ಹತ್ಯೆಯಾದ ಟ್ರೈನಿ ವೈದ್ಯೆಯ ಮರಣೋತ್ತರ ಪರೀಕ್ಷಾ ವರದಿಯಲ್ಲಿದೆ ಬೆಚ್ಚಿ ಬೀಳಿಸುವ ಸತ್ಯ

Duniya Vijay bheema collection 2nd day
ಸ್ಯಾಂಡಲ್ ವುಡ್1 min ago

Duniya Vijay: ಎರಡನೇ ದಿನವೂ ಅಬ್ಬರ ಮುಂದುವರಿಸಿದ ʻಭೀಮʼ: ಕಲೆಕ್ಷನ್‌ ಎಷ್ಟು?

Sarabjot Singh
ಕ್ರೀಡೆ19 mins ago

Sarabjot Singh : ಹರಿಯಾಣ ಸರ್ಕಾರದ ಉದ್ಯೋಗದ ಆಫರ್​ ತಿರಸ್ಕರಿಸಿದ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಸರಬ್ಜೋತ್​ ಸಿಂಗ್​​

Hindenburg
ದೇಶ48 mins ago

Hindenburg: ಹಿಂಡನ್‌ಬರ್ಗ್‌ ಸ್ಫೋಟಕ ವರದಿ: ಆರೋಪ ತಳ್ಳಿ ಹಾಕಿದ ಅದಾನಿ ಗ್ರೂಪ್‌

Money Guide
ಮನಿ-ಗೈಡ್49 mins ago

Money Guide: ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ತಿಳಿದಿರಲೇಬೇಕಾದ ಅಂಶಗಳಿವು

Mohammed Siraj
ಕ್ರೀಡೆ50 mins ago

Mohammed Siraj: ಕ್ರಿಕೆಟಿಗ ಸಿರಾಜ್‌, ಬಾಕ್ಸರ್​ ನಿಖತ್ ಜರೀನ್‌, ಶೂಟರ್​ ಇಶಾ ಸಿಂಗ್​ಗೆ ನಿವೇಶನ ಮಂಜೂರು ಮಾಡಿದ ತೆಲಂಗಾಣ ಸರ್ಕಾರ

Tungabhadra Dam
ಕರ್ನಾಟಕ1 hour ago

Tungabhadra Dam: ಒಂದು ವಾರದಲ್ಲಿ ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿಯಾಗಲಿದೆ ಎಂದ ಡಿ.ಕೆ.ಶಿವಕುಮಾರ್‌

Viral Video
ವೈರಲ್ ನ್ಯೂಸ್2 hours ago

Viral Video: ಹುಡುಗ ಬೇಡವೆಂದು ಗಲ್ಲ ಒರೆಸಿಕೊಳ್ಳುತ್ತಿದ್ದರೂ ಬಿಡದೆ ಚುಂಬಿಸಿದ ವಿದ್ಯಾರ್ಥಿನಿ! ತರಗತಿಯಲ್ಲೇ ಪ್ರಣಯ! ವಿಡಿಯೊ ನೋಡಿ

building collpase
ದಾವಣಗೆರೆ2 hours ago

Building Collapsed: ನಿರ್ಮಾಣ ಹಂತದ ಶಾಲಾ ಕಟ್ಟಡ ಧ್ವಂಸ ಮಾಡಿದ ಕಿಡಿಗೇಡಿಗಳು

Shakib Al Hasan
ಕ್ರೀಡೆ2 hours ago

Shakib Al Hasan: ಸೂಪರ್‌ ಓವರ್‌ ಆಡಲು ನಿರಾಕರಿಸಿದ ಶಕಿಬ್; ಟೂನಿಯಿಂದಲೇ ಹೊರಬಿದ್ದ ತಂಡ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌