Site icon Vistara News

Teachers Recruitment: 10 ಸಾವಿರ ಶಿಕ್ಷಕರ ನೇಮಕಕ್ಕೆ ಶೀಘ್ರದಲ್ಲೇ ಅಧಿಸೂಚನೆ: ಸಚಿವ ಮಧು ಬಂಗಾರಪ್ಪ

Teachers Recruitment

ಬೆಂಗಳೂರು: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. 10 ಸಾವಿರ ಶಿಕ್ಷಕರ ನೇಮಕಾತಿ (Teachers Recruitment) ಪ್ರಕ್ರಿಯೆಗೆ ಸಿದ್ಧತೆ ನಡೆದಿದ್ದು, ‌ಆರ್ಥಿಕ ‌ಇಲಾಖೆ ಒಪ್ಪಿಗೆ ನೀಡಿದ ಕೂಡಲೇ‌ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ ಮಾಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಧಾನ ಪರಿಷತ್ ಪಶ್ನೋತ್ತರ ಕಲಾಪದಲ್ಲಿ (monsoon session) ಬಿಜೆಪಿ ಸದಸ್ಯ ತಳವಾರ್ ಸಾಬಣ್ಣ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷರ ಕೊರತೆ ಇದೆ. ಶಿಕ್ಷಕರಿಲ್ಲದ ಕಾರಣ ಪ್ರತಿ ಬಾರಿ ಫಲಿತಾಂಶದಲ್ಲಿ ಕಲ್ಯಾಣ ಕರ್ನಾಟಕ ಹಿಂದೆ ಬೀಳುತ್ತಿದೆ. ಈ ಭಾಗದಲ್ಲಿ 19 ಸಾವಿರ ಶಿಕ್ಷಕರ ಕೊರತೆ ಇದ್ದು, ಶಾಲಾ ಕೊಠಡಿಗಳ ಸಮಸ್ಯೆ ಇದೆ. ಕೂಡಲೇ ಶಿಕ್ಷಕರ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಸಚಿವ ಮಧು ಬಂಗಾರಪ್ಪ ಉತ್ತರ ನೀಡಿ, ಶಿಕ್ಷಣ ಇಲಾಖೆಯಲ್ಲಿ 50 ಸಾವಿರ ಶಿಕ್ಷಕರ ಕೊರತೆ ಇದೆ. 10 ಸಾವಿರ ಶಿಕ್ಷಕರ ನೇಮಕಕ್ಕೆ ಆರ್ಥಿಕ ಇಲಾಖೆಗೆ ಪತ್ರ ಬರೆಯಲಾಗಿದೆ. ಆರ್ಥಿಕ ಇಲಾಖೆ ಅನುಮತಿ ಕೊಟ್ಟ ಬಳಿಕ 10 ಸಾವಿರ ಹುದ್ದೆ ನೇಮಕ ಪ್ರಕ್ರಿಯೆ ಶುರು ಮಾಡುತ್ತೇವೆ. 10 ಸಾವಿರ ಹುದ್ದೆಗಳ ಪೈಕಿ 6,500 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ಕೊಡಲಾಗುತ್ತದೆ. ಸದ್ಯ ಶಿಕ್ಷಕರ ಕೊರತೆ ನೀಗಿಸಲು ಅತಿಥಿ ಶಿಕ್ಷಕರ ನೇಮಕ ಮಾಡಲಾಗಿದ್ದು, ಆರ್ಥಿಕ ಇಲಾಖೆ ಅನುಮತಿ ಕೊಟ್ಟ ಬಳಿಕ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ | DK Shivakumar: `ಲೋಕಾಯುಕ್ತಕ್ಕೆ ಕೊಟ್ಟ ಮೇಲೆ ಸಿಬಿಐಗೇನು ಕೆಲಸ?’ ಅಕ್ರಮ ಆಸ್ತಿ ಕೇಸ್‌ ಬಗ್ಗೆ ಡಿಕೆ ಶಿವಕುಮಾರ್‌ ಪ್ರಶ್ನೆ

ಈ ವೇಳೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ಮಾತನಾಡಿ, ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ 6500 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಆಗಿದೆ‌. ಕಲ್ಯಾಣ ಕರ್ನಾಟಕ ಭಾಗದ ಹುದ್ದೆ ತುಂಬಲು ಆರ್ಥಿಕ ಇಲಾಖೆ ಅನುಮತಿ ಬೇಕಿಲ್ಲ ಅನ್ನೋ ನಿಯಮ ಇದೆ. ಹೀಗಾಗಿ ಶಿಕ್ಷಕರ ನೇಮಕಕ್ಕೆ ಪ್ರಕ್ರಿಯೆ ಶುರುವಾಗಿದೆ. ಆದಷ್ಟು ಬೇಗ ನೇಮಕ ಪ್ರಕ್ರಿಯೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ಎಲ್ಲ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು

ಬೆಂಗಳೂರು: ಎಲ್ಲ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಿಯೇ ಮಾಡುತ್ತೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ವಿಧಾನ ಪರಿಷತ್ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ್ ಭಂಡಾರಿ ಅವರು ಮಂಗಳೂರು ಹಾಗೂ ಉಡುಪಿಯಲ್ಲಿ ಯಾವಾಗ ಮೆಡಿಕಲ್ ಕಾಲೇಜು ಮಾಡುತ್ತೀರಾ ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ಸಚಿವರು, 22 ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಆಗಿದೆ. ಇದು ಪಾಲಿಸಿ ಮ್ಯಾಟರ್. ಹಣಕಾಸು ಇಲಾಖೆ ಹಂತ ಹಂತವಾಗಿ ಮಾಡಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | Pooja Khedkar: ಎಂಬಿಬಿಎಸ್ ಪ್ರವೇಶಕ್ಕೆ ಒಬಿಸಿ ಕೆನೆಪದರ ರಹಿತ ಪ್ರಮಾಣಪತ್ರ ಸಲ್ಲಿಸಿದ್ದ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್

ಕೇಂದ್ರ ಸರ್ಕಾರ ಪಿಪಿಪಿ‌ ಮಾದರಿಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಅನುಮತಿ ನೀಡಿದೆ. ಈ ಬಗ್ಗೆ ಸಿಎಂ ಜತೆಗೆ ಚರ್ಚೆ ಮಾಡಿ ಪರಿಶೀಲನೆ ನಡೆಸುತ್ತೇವೆ. ಇದು ಸರ್ಕಾರದ ಪಾಲಿಸಿ ಮ್ಯಾಟರ್ ಅಗಿದ್ದು, ಎಲ್ಲ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಿಯೇ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Exit mobile version