Site icon Vistara News

Teachers Transfer: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಆರಂಭ

Teachers Transfer

ಉಡುಪಿ/ಮಂಗಳೂರು: ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮುಖ್ಯ ಶಿಕ್ಷಕರನ್ನು ಒಳಗೊಂಡಂತೆ ಶಿಕ್ಷಕರು ಹಾಗೂ ತತ್ಸಮಾನ ವೃಂದದ 2023-24ನೇ ಸಾಲಿನ ಜಿಲ್ಲೆಯೊಳಗಿನ ಕೋರಿಕೆ, ಸಾಮಾನ್ಯ ಹಾಗೂ ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್‌ (Teachers Transfer) ಬುಧವಾರದಿಂದ (ಜು. 24) ಆರಂಭವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.24ರಿಂದ ಜು.27ರವರೆಗೆ ಮಂಗಳೂರು ತಾಲೂಕು ಕಚೇರಿ ಆವರಣದ ಸರ್ಕಾರಿ ನೌಕರರ ಸಂಘದಲ್ಲಿ ಕೌನ್ಸೆಲಿಂಗ್‌ ನಡೆಯಲಿದೆ. ಅರ್ಜಿ ಸಲ್ಲಿಸಿದ ಶಿಕ್ಷಕರು ನಿರ್ದಿಷ್ಟ ದಿನದಂದು ಮೂಲ ದಾಖಲೆಗಳೊಂದಿಗೆ ಹಾಜರಾಗಬೇಕು ಎಂದು ದಕ್ಷಿಣ ಕನ್ನಡ ಡಿಡಿಪಿಐ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯೊಳಗೆ ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಸಿದ ಶಿಕ್ಷಕರ ಕೌನ್ಸೆಲಿಂಗ್‌ ಜು. 24ರಂದು ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯುತ್ತಿದೆ. ಬೆಳಗ್ಗೆ 10.30ರಿಂದ ಕೌನ್ಸೆಲಿಂಗ್‌ ಪ್ರಕ್ರಿಯೆ ಆರಂಭವಾಗಿದ್ದು, ಮೊದಲ ದಿನ 200 ಮಂದಿಗೆ ಅವಕಾಶ ಸಿಗಲಿದೆ.

ಜು.25ರಂದು ಪ್ರಾಥಮಿಕ ಶಾಲಾ ಸಹ ಶಿಕ್ಷಕರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ನಡೆಯಲಿದೆ. ಜು.26ರಂದು ಪ್ರೌಢಶಾಲೆಯ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ವಿಶೇಷ ಶಿಕ್ಷಕರ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್‌ ನಡೆಯಲಿದೆ. ಜು. 29ರಂದು ಸರಕಾರಿ ಪ್ರೌಢಶಾಲಾ ಶಿಕ್ಷಕರ ಹಾಗೂ ಜು. 30ರಂದು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್‌ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಡಿಡಿಪಿಐ ಕಚೇರಿಯಲ್ಲಿ ನಡೆಯಲಿದೆ.

ಇದನ್ನೂ ಓದಿ | Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು: ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಕರ್ನಾಟಕ ಲೋಕಸೇವಾ ಆಯೋಗ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ಸೇರಿ ವಿವಿಧ ಇಲಾಖೆಗಳ ಹುದ್ದೆಗಳ ಭರ್ತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ವೇಳಾಪಟ್ಟಿಯನ್ನು (KPSC Recruitment 2024) ಬಿಡುಗಡೆ ಮಾಡಲಾಗಿದೆ.

ವಿವಿಧ ಪರೀಕ್ಷೆ ವೇಳಾಪಟ್ಟಿ

ಅಧಿಸೂಚನೆ ಸಂಖ್ಯೆ: ಪಿಎಸ್‌ಸಿ 1 ಆರ್‌ಟಿಬಿ- 1/2023 ದಿನಾಂಕ 13-03-2024 ರ ಹುದ್ದೆಗಳಿಗೆ ಪರೀಕ್ಷೆ

ಅಧಿಸೂಚನೆ ಸಂಖ್ಯೆ ಪಿಎಸ್‌ಸಿ 1 ಆರ್‌ಟಿಬಿ- 2/2023 ದಿನಾಂಕ 13-03-2024 ರಂದು ಅಧಿಸೂಚಿಸಿದ ಹುದ್ದೆಗಳಿಗೆ ಪರೀಕ್ಷೆ

ಅಧಿಸೂಚನೆ: ಇ(2) 598/ 2023-24 ಪಿಎಸ್‌ಸಿ ದಿನಾಂಕ 15-03-2024 ರಂದು ಅಧಿಸೂಚಿಸಿದ ಹುದ್ದೆಗಳಿಗೆ ಪರೀಕ್ಷೆ

ಅಧಿಸೂಚನೆ: ಇ(2) 597/ 2023-24 ಪಿಎಸ್‌ಸಿ ದಿನಾಂಕ 15-03-2024 ರಂದು ಅಧಿಸೂಚಿಸಿದ ಹುದ್ದೆಗಳಿಗೆ ಪರೀಕ್ಷೆ ವೇಳಾಪಟ್ಟಿ

Exit mobile version